Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದಲ್ಲಿ ಹಿಂದೂ ಮಹಿಳೆಯರ ಮೇಲೆ ದಾಳಿ ಎಂದು ವಿದ್ಯಾರ್ಥಿ ಪ್ರತಿಭಟನೆಯ ವಿಡಿಯೋ...

FACT CHECK : ಬಾಂಗ್ಲಾದಲ್ಲಿ ಹಿಂದೂ ಮಹಿಳೆಯರ ಮೇಲೆ ದಾಳಿ ಎಂದು ವಿದ್ಯಾರ್ಥಿ ಪ್ರತಿಭಟನೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆ ಉಂಟಾಗಿ, ಅಲ್ಲಿನ ಪ್ರಧಾನಿ ಶೇಖ್ ಹಸೀನಾ ಪಲಾಯನ ಮಾಡಿದ ಬಳಿಕ ಅಲ್ಪಸಂಖ್ಯಾತ ಹಿಂದೂಗಳನ್ನು ಗುರಿಯಾಗಿಸಿ ಮುಸ್ಲಿಮರು ದಾಳಿ ನಡೆಸುತ್ತಿದ್ದಾರೆ ಎಂದು ಅನೇಕ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

“ಹಿಂದೂ ಮಹಿಳೆಯರ ಮೇಲೆ ಮುಸ್ಲಿಮರು ಅತ್ಯಾಚಾರ ಎಸಗಿದ್ದಾರೆ. ಹಿಂದೂ ಕ್ರಿಕೆಟಿಗನ ಮನೆಗೆ ಬೆಂಕಿ ಹಚ್ಚಿದ್ದಾರೆ. ಹಿಂದೂ ವೃದ್ದರೊಬ್ಬರನ್ನು ಕೊಂದು ನೇತು ಹಾಕಿದ್ದಾರೆ. ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆಸಿದ್ದಾರೆ ಇತ್ಯಾದಿ ವಿಡಿಯೋ, ಫೋಟೋಗಳು ಕಳೆದೆರಡು ದಿನಗಳಿಂದ ವ್ಯಾಪಕವಾಗಿ ವೈರಲ್ ಆಗಿವೆ.

ಇದೀಗ ಹೊಸದಾಗಿ ಯುವತಿಯೊಬ್ಬಳ ಕೈಕಾಲುಗಳನ್ನು ಕಟ್ಟಿ, ಆಕೆಯ ಬಾಯಿಗೆ ಗಮ್‌ಟೇಪ್ ಹಾಕಿರುವ ವಿಡಿಯೋ ಕಾಣಿಸಿಕೊಂಡಿದೆ.

ಬಲಪಂಥೀಯ ಸುದ್ದಿ ಸಂಸ್ಥೆ “ದಿ ಜೈಪುರ್ ಡೈಲಾಗ್ಸ್” ವೈರಲ್ ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆ! ಅವರನ್ನು ಅತ್ಯಾಚಾರವೆಸಗಲಾಗಿದೆ ಮತ್ತು ಕೊಲ್ಲಲಾಗಿದೆ. ಹಿಂದೂಗಳನ್ನು ಗುರಿಯಾಗಿಸಿ ಬಾಂಗ್ಲಾದೇಶದಲ್ಲಿ ಹತ್ಯಾಕಾಂಡ ನಡೆಯುತ್ತಿದೆ” ಎಂದು ಬರೆದುಕೊಂಡಿದೆ.

ಉತ್ತರ ಕರ್ನಾಟಕ ಲೆಜೆಂಡ್ಸ್‘ ಎಂಬ ಇನ್‌ಸ್ಟಾಗ್ರಾಂ ಪೇಜ್‌ ಒಂದರಲ್ಲೂ ವಿಡಿಯೋ ಹಂಚಿಕೊಂಡು “ಬಾಂಗ್ಲಾದೇಶದಲ್ಲಿ ಶಾಂತಿ ದೂತರಿಂದ ಹಿಂದೂ ಮಹಿಳೆಯರ ಮೇಲೆ ದಾಳಿ ಮತ್ತು ಹಿಂದೂ ದೇವಾಲಯಗಳನ್ನು ಸುಟ್ಟು ಹಾಕಿದ್ದಾರೆ. All Eyes on Rafa ಎಂದು ಹಾಕಿದವರು ಯಾರೂ ಬಾಂಗ್ಲಾದ ಹಿಂದೂಗಳ ಮೇಲಿನ ದಾಳಿಯ ಬಗ್ಗೆ ಏಕೆ ಮಾತನಾಡುತ್ತಿಲ್ಲ? “ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು ಬಾಂಗ್ಲಾದೇಶದ ಜಗನ್ನಾಥ ವಿಶ್ವವಿದ್ಯಾಲಯದ ವಿದ್ಯಾರ್ಥಿ ಪ್ರತಿಭಟನೆಯೊಂದರ ದೃಶ್ಯ ಎಂದು ಗೊತ್ತಾಗಿದೆ.

ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್ ಶಾಟ್ ಹಾಕಿ ಸರ್ಚ್ ಮಾಡಿದಾಗ ಜುಲೈ 26ರಂದು ‘Jnu Short Stories’ಫೇಸ್‌ಬುಕ್ ಪೇಜ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವುದು ಕಂಡು ಬಂದಿದೆ.

ಫೇಸ್‌ಬುಕ್ ಪೋಸ್ಟ್‌ನಲ್ಲಿ “ವಿಡಿಯೋದಲ್ಲಿರುವುದು ಜಗನ್ನಾಥ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿನಿಯಾಗಿದ್ದು, ಆಕೆ ಆವಂತಿಕ ಎಂಬ ಮತ್ತೋರ್ವ ವಿದ್ಯಾರ್ಥಿನಿಯ ಆತ್ಮಹತ್ಯೆ ಖಂಡಿಸಿ ವಿಶಿಷ್ಟವಾಗಿ ಪ್ರತಿಭಟಿಸಿದ ದೃಶ್ಯ ಇದಾಗಿದೆ. ಈಗ ದೇಶದಲ್ಲಿ ವಿದ್ಯಾರ್ಥಿ ಪ್ರತಿಭಟನೆ ನಡೆಯುತ್ತಿರುವುದರಿಂದ, ಈಕೆ ಛಾತ್ರಾ ಲೀಗ್ ನಾಯಕಿ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ”

“ಸುಳ್ಳು ಸುದ್ದಿಯಿಂದ ಆಕೆಗೆ ಬಹಳಷ್ಟು ನೋವಾಗಿದೆ. ಇದು ಆಕೆಗೆ ಆಘಾತಕ್ಕೆ ಕಾರಣವಾಗಬಹುದು. ಈ ಪೋಸ್ಟ್ ಆವಂತಿಕಾಳ ಆತ್ಮಹತ್ಯೆ ಮತ್ತು ಅದರ ಸಂಬಂಧ ವಿದ್ಯಾರ್ಥಿನಿ ನಡೆಸಿದ ಪ್ರತಿಭಟನೆಯ ಬಗ್ಗೆ ಗಮನ ಸೆಳೆಯುತ್ತದೆ. ವದಂತಿಗಳನ್ನು ಹರಡುವುದನ್ನು ನಿಲ್ಲಿಸಲು ಜನರಲ್ಲಿ ಕೋರುತ್ತೇವೆ” ಎಂದು ವಿವರಿಸಲಾಗಿದೆ.

ಈ ಪೋಸ್ಟ್‌ ಆಧರಿಸಿ ನಾವು ಆವಂತಿಕಾ ಎಂಬ ವಿದ್ಯಾರ್ಥಿನಿಯ ಆತ್ಮಹತ್ಯೆ ಮತ್ತು ಪ್ರತಿಭಟನೆಯ ಬಗ್ಗೆ ಮಾಹಿತಿ ಹುಡುಕಿದ್ದೇವೆ. ಈ ವೇಳೆ ಬೆಂಗಾಳಿ ಸುದ್ದಿ ವೆಬ್‌ಸೈಟ್ ಡೈಲಿ ಇತ್ತೆಫಾಕ್ ಮಾರ್ಚ್ 17ರಂದು ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ.

ಆ ವರದಿಯಲ್ಲಿ ” ವಿದ್ಯಾರ್ಥಿನಿ ಫೈರೂಝ್ ಸದಾಫ್ ಆವಂತಿಕಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಒದಗಿಸಲು ಆಗ್ರಹಿಸಿ ಜಗನ್ನಾಥ ವಿವಿಯ ವಿದ್ಯಾರ್ಥಿಗಳು ಪಂಜಿನ ಮೆರವಣಿಗೆ ನಡೆಸಿದರು. ಮೊಂಬತ್ತಿ ಹೊತ್ತಿಸಿ, ಬೀದಿ ನಾಟಕ ಮಾಡಿ ಪ್ರತಿಭಟಿಸಿದರು” ಎಂದು ಹೇಳಲಾಗಿದೆ.

ಒಟ್ಟಿನಲ್ಲಿ, ವೈರಲ್ ವಿಡಿಯೋ ಬಾಂಗ್ಲಾದೇಶದ ಜಗನ್ನಾಥ ವಿವಿಯ ವಿದ್ಯಾರ್ಥಿನಿಯ ಪ್ರತಿಭಟನೆಯದ್ದೇ ಹೊರತು, ಹಿಂದೂ ಮಹಿಳೆಯರ ಮೇಲಿನ ದಾಳಿಯದ್ದಲ್ಲ. ಜಗನ್ನಾಥ ವಿವಿಯ ಆವಂತಿಕ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಆಕೆಯ ಸಾವಿಗೆ ನ್ಯಾಯ ದೊರಕಿಸುವಂತೆ ಆಗ್ರಹಿಸಿ ವಿದ್ಯಾರ್ಥಿನಿಯೊಬ್ಬಳು ಕೈ ಕಾಲಿಗೆ ಹಗ್ಗಕಟ್ಟಿ, ಬಾಯಿಗೆ ಗಮ್‌ಟೇಪ್ ಹಾಕಿ ವಿಶಿಷ್ಟವಾಗಿ ಪ್ರತಿಭಟಿಸಿದ್ದಾಳೆ. ಅದನ್ನು ಹಿಂದೂ ಮಹಿಳೆಯರ ಮೇಲೆ ದಾಳಿ ಎಂಬ ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ವಾಸ್ತವವಾಗಿ, ಈ ವಿಡಿಯೋ ಬಾಂಗ್ಲಾದ ಇತ್ತೀಚಿನ ಸರ್ಕಾರದ ವಿರುದ್ದದ ಪ್ರತಿಭಟನೆಗೆ ಸಂಬಂಧಿಸಿದ್ದಲ್ಲ.

ಇದನ್ನೂ ಓದಿ : FACT CHECK : ಬಾಂಗ್ಲಾದಲ್ಲಿ ಮುಸ್ಲಿಮರು ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಿ ನೇತು ಹಾಕಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...