Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ವ್ಯಕ್ತಿ ಹಿಂದೂಗಳನ್ನು ನಿಂದಿಸಿದ್ದಾರೆ ಎನ್ನಲಾದ ವಿಡಿಯೋ ನಕಲಿ

FACT CHECK : ಮುಸ್ಲಿಂ ವ್ಯಕ್ತಿ ಹಿಂದೂಗಳನ್ನು ನಿಂದಿಸಿದ್ದಾರೆ ಎನ್ನಲಾದ ವಿಡಿಯೋ ನಕಲಿ

- Advertisement -
- Advertisement -

ಲೋಕಸಭೆ ಚುನಾವಣೆ 2024ರ ಫಲಿತಾಂಶ ನಿನ್ನೆ( ಜೂನ್ 4) ಪ್ರಕಟಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಒಟ್ಟು 543 ಸಂಸದೀಯ ಸ್ಥಾನಗಳಲ್ಲಿ 293 ಸ್ಥಾನಗಳನ್ನು ಗೆದ್ದಿದೆ. ಆದರೆ, ಬಿಜೆಪಿಗೆ ಹಿನ್ನಡೆಯಾಗಿದೆ. ಬಿಜೆಪಿ ಕೇವಲ 243 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಗಳಿಸಲು ವಿಫಲವಾಗಿದೆ.

ಈ ನಡುವೆ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದ್ದರೂ ಮೋದಿಗೆ ಅಥವಾ ಬಿಜೆಪಿಗೆ ಮತ ಹಾಕದ ಹಿಂದೂಗಳನ್ನು ಮುಸ್ಲಿಂ ವ್ಯಕ್ತಿಯೊಬ್ಬ ನಿಂದಿಸಿದ್ದಾರೆ ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ವಿಡಿಯೋದ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಜೂನ್‌ 4ರಂದು ‘dhirendra_raghav_79’ಎಂಬ ಹೆಸರಿನ ವೆರಿಫೈಡ್ ಇನ್‌ಸ್ಟಾಗ್ರಾಂ ಖಾತೆಯಲ್ಲಿ ವೈರಲ್ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ವಿಡಿಯೋದ ಜೊತೆಗೆ “ಮಂದಿರದ ಬದಲಿಗೆ ಮಸೀದಿ ನಿರ್ಮಿಸಲಾಗುವುದು” ಎಂದು ಬರೆಯಲಾಗಿದೆ. ಅಲ್ಲದೆ #dhokha #hindutemple #bjp ಎಂಬ ಹ್ಯಾಷ್‌ ಟ್ಯಾಗ್‌ಗಳನ್ನು ಕೊಡಲಾಗಿದೆ.

ವಿಡಿಯೋ ಅಪ್ಲೋಡ್ ಮಾಡಿರುವ ಇನ್‌ಸ್ಟಾಗ್ರಾಂ ಖಾತೆಯ ಬಯೋ ಪರಿಶೀಲಿಸಿದಾಗ, ಅಲ್ಲಿ ‘ಧೀರೇಂದ್ರ ರಾಘವ್’ಕಲಾವಿದ ಎಂದು ಬರೆದಿರುವುದು ಕಂಡು ಬಂದಿದೆ. ಖಾತೆಯಲ್ಲಿ ಧೀರೇಂದ್ರ ರಾಘವ್ ಸಂದರ್ಭಕ್ಕೆ ತಕ್ಕಂತೆ ವೇಷ ತೊಟ್ಟು ಮಾಡಿರುವ ಹಲವು ವಿಡಿಯೋಗಳು ಇವೆ. ಮುಸ್ಲಿಂ ವ್ಯಕ್ತಿಯಂತೆ ವೇಷ ತೊಟ್ಟು ಮಾಡಿರುವ ವಿಡಿಯೋಗಳೂ ಇವೆ.

ಅವುಗಳ ಲಿಂಕ್ ಇಲ್ಲಿದೆ, ಇಲ್ಲಿದೆ 

ಧೀರೇಂದ್ರ ರಾಘವ್ ಕುರಿತು ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ, ಆತನ ಫೇಸ್‌ಬುಕ್ ಖಾತೆಯೂ ಕಂಡು ಬಂದಿದೆ. ಅದರಲ್ಲಿ ಆತ ಉತ್ತರ ಪ್ರದೇಶದ ಆಗ್ರಾದವರು ಎಂದು ಬರೆಯಲಾಗಿದೆ. ಮುಸ್ಲಿಂ ವ್ಯಕ್ತಿಯಂತೆ ವೇಷ ತೊಟ್ಟು ಹಿಂದೂಗಳಿಗೆ ಬೈದಿರುವ ವೈರಲ್ ವಿಡಿಯೋ ಕೂಡ ಆತನ ಫೇಸ್‌ಬುಕ್‌ ಖಾತೆಯಲ್ಲಿ ಕಂಡು ಬಂದಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ ತಿಳಿದು ಬಂದ ವಿಷಯವೇನೆಂದರೆ, ” ರಾಮ ಮಂದಿರ ನಿರ್ಮಾಣದ ಬಳಿಕವೂ ಮೋದಿಗೆ ಮತ ಹಾಕದ ಹಿಂದೂಗಳಿಗೆ ಮುಸ್ಲಿಂ ವ್ಯಕ್ತಿ ಬೈದಿದ್ದಾರೆ ಎಂದು ವೈರಲ್ ಮಾಡಲಾಗಿರುವ ವಿಡಿಯೋದಲ್ಲಿರುವುದು ಮುಸ್ಲಿಂ ವ್ಯಕ್ತಿಯಲ್ಲ. ಅಲ್ಲಿರುವುದು ಇದೇ ಕಲಾವಿದ ಧೀರೇಂದ್ರ ರಾಘವ್. ಈತ ಬಿಜೆಪಿ ಮತ್ತು ಹಿಂದುತ್ವದ ಪರವಾಗಿ ಆಗಾಗ ವಿಡಿಯೋ ಮಾಡುತ್ತಿರುತ್ತಾನೆ.

ಈ ಬಾರಿ ಬಿಜೆಪಿ ಬಹುಮತ ಪಡೆಯದಿರಲು ಮತ್ತು ಅಯೋಧ್ಯೆಯಲ್ಲೇ ಬಿಜೆಪಿ ಅಭ್ಯರ್ಥಿ ಸೋಲಲು ಹಿಂದೂಗಳು ಮತ ಹಾಕದಿರುವುದೇ ಕಾರಣ. ಹೀಗೆ ಆದರೆ, ಕಾಂಗ್ರೆಸ್ ಸರ್ಕಾರ ಬರಲಿದೆ. ಮಂದಿರದ ಜಾಗದಲ್ಲಿ ಮುಸ್ಲಿಮರು ಮಸೀದಿ ನಿರ್ಮಿಸಲಿದ್ದಾರೆ ಎಂದು ಮುಸ್ಲಿಂ ವ್ಯಕ್ತಿಯ ವೇಷ ತೊಟ್ಟು ಧೀರೇಂದ್ರ ರಾಘವ್ ಹೇಳಿದ್ದಾರೆ.

ಆಲ್ಟ್‌ ನ್ಯೂಸ್‌ನ ಸಹ ಸಂಸ್ಥಾಪಕ ಮೊಹಮ್ಮದ್ ಝಬೈರ್ ವೈರಲ್ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಈ ವಿಡಿಯೋ ಧೀರೇಂದ್ರ ರಾಘವ್ ಅವರದ್ದು, ಈತ ಮುಸ್ಲಿಂ ವ್ಯಕ್ತಿಯ ವೇಷ ತೊಟ್ಟು ಹಿಂದೂ-ಮುಸ್ಲಿಂ ನಡುವೆ ದ್ವೇಷ ಹರಡುವ ಕೆಲಸ ಮಾಡುತ್ತಿದ್ದಾನೆ ಎಂದಿದ್ದು, ಉತ್ತರ ಪ್ರದೇಶ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

ಹೇಟ್ ಡಿಟೆಕ್ಟರ್ (Hate Detector) ಎಕ್ಸ್ ಖಾತೆಯಲ್ಲೂ ವೈರಲ್ ವಿಡಿಯೋ ಪೋಸ್ಟ್ ಮಾಡಲಾಗಿದ್ದು, “ಧೀರೇಂದ್ರ ರಾಘವ್ ಟೋಪಿ ಧರಿಸಿ ಮುಸ್ಲಿಂ ವ್ಯಕ್ತಿಯಂತೆ ನಟಿಸಿ ಹಿಂದೂಗಳನ್ನು ನಿಂದಿಸುವ ವಿಡಿಯೋವನ್ನು ಮುಸ್ಲಿಮರ ವಿರುದ್ಧ ಹಿಂದೂಗಳನ್ನು ಪ್ರಚೋದಿಸುವ ಕೋಮುವಾದಿ ಹೇಳಿಕೆಯೊಂದಿಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ” ಎಂದು ಬರೆದುಕೊಂಡಿದೆ.

ಇದನ್ನೂ ಓದಿ : FACT CHECK : ಕಾಂಗ್ರೆಸ್, ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡುತ್ತಿದೆ ಎಂಬ ಕಾರ್ಟೂನ್ ಮಾರ್ಫ್ ಮಾಡಲಾಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...