Homeಫ್ಯಾಕ್ಟ್‌ಚೆಕ್FACT CHECK : ಆಂಧ್ರಪ್ರದೇಶದಲ್ಲಿ ಶಾಲಾ ಮಕ್ಕಳು ಅಸಹಜವಾಗಿ ವರ್ತಿಸಿರುವ ವಿಡಿಯೋದ ಅಸಲಿಯತ್ತೇನು?

FACT CHECK : ಆಂಧ್ರಪ್ರದೇಶದಲ್ಲಿ ಶಾಲಾ ಮಕ್ಕಳು ಅಸಹಜವಾಗಿ ವರ್ತಿಸಿರುವ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಆಂಧ್ರಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂಬ ಹೇಳಿಕೆಯೊಂದಿಗೆ ಶಾಲಾ ವಿದ್ಯಾರ್ಥಿಗಳ ಅಸಹಜ ವರ್ತನೆಯನ್ನು ಪ್ರದರ್ಶಿಸುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಅಸಹಜವಾಗಿ ವರ್ತಿಸುತ್ತಿರುವ ವಿದ್ಯಾರ್ಥಿಗಳನ್ನು ಕಂಡ ಶಾಲಾ ಸಿಬ್ಬಂದಿ ಮತ್ತು ಇತರ ವಿದ್ಯಾರ್ಥಿಗಳು ಭಯಭೀತರಾಗಿದ್ದು, ನೆಲದಲ್ಲಿ ಬಿದ್ದು ಒದ್ದಾಡುತ್ತಾ, ಕೂಗುತ್ತಾ ಅಸಹಜವಾಗಿ ವರ್ತಿಸುವುದನ್ನು ವಿಡಿಯೋದಲ್ಲಿ ನೋಡಬಹುದು. ಒಂದು ಕಾಲದಲ್ಲಿ ಈ ಶಾಲೆಯನ್ನು ಕೋವಿಡ್-19 ಶವಗಳ ಶೇಖರಣಾ ಸ್ಥಳವಾಗಿ ಬಳಸಲಾಗುತ್ತಿತ್ತು ಮತ್ತು ಶಾಲೆಯ ಸಮೀಪದಲ್ಲಿ ಸ್ಮಶಾನವಿದೆ ಎಂದು ಹೇಳಲಾಗುತ್ತಿದೆ.

ಆಂಧ್ರಪ್ರದೇಶದ ಶಾಲೆಯೊಂದರಲ್ಲಿ  ಶಾಲಾ ಮಕ್ಕಳು ಅಸಹಜವಾಗಿ ವರ್ತಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. COVID-19 ರ ಸಂದರ್ಭದಲ್ಲಿ ಕೋವಿಡ್‌ನಿಂದ ಸಾವನಪ್ಪಿದ ಶವಗಳನ್ನು ಇರಿಸಲು ಈ ಶಾಲೆಯನ್ನು ಬಳಸಲಾಗುತ್ತಿದ್ದು ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಅದರ ಕೆಲವು ಕೀಫ್ರೇಮ್‌ಗಳನ್ನು ತೆಗೆದು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಜೂನ್ 2024 ರಂದು ಫೇಸ್‌ಬುಕ್‌ನಲ್ಲಿ ಹಂಚಿಕೊಂಡ ವಿಡಿಯೋಗಳು ಲಭ್ಯವಾಗಿದ್ದು,  ವೈರಲ್  ದೃಶ್ಯಗಲೊಂದಿಗೆ ಹೋಲಿಕೆಯಾಗಿದೆ. (ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು)  ಈ ಪೋಸ್ಟ್‌ಗಳ ಪ್ರಕಾರ, ಬೈತಾಡಿಯ ಸಿಗಾಸ್‌ನಲ್ಲಿರುವ ಭುವನೇಶ್ವರಿ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ಮಾಹಿತಿ ಲಭ್ಯವಾಗಿದೆ.

ಮೇಲಿನ ಸುಳಿವನ್ನು ಆಧಾರವಾಗಿಟ್ಟುಕೊಂಡು ಕೀವರ್ಡ್ ವರ್ಡ್ ಸರ್ಚ್ ಮಾಡಿದಾಗ,  ವೈರಲ್ ವಿಡಿಯೋದಲ್ಲಿರುವ ದೃಶ್ಯಗಳನ್ನು ಒಳಗೊಂಡ ಸುದ್ದಿ ವರದಿಗಳು ಲಭ್ಯವಾಗಿದೆ.

ನೇಪಾಳದ ಈ ಸುದ್ದಿ ವರದಿಗಳ ಪ್ರಕಾರ, ಈ ಘಟನೆಯು ನೇಪಾಳದ ಬೈತಾಡಿ, ಸಿಗಾಸ್ ಗ್ರಾಮೀಣ ಪುರಸಭೆ -5 ರ ಭುವನೇಶ್ವರಿ ಶಾಲೆಯಲ್ಲಿ ನಡೆದಿದೆ. ಈ ಘಟನೆ ಸಂಭವಿಸಿದಾಗ ವಿದ್ಯಾರ್ಥಿಗಳು ಸಾಮೂಹಿಕ ಹಿಸ್ಟೀರಿಯಾ ಅಥವಾ ಅಸ್ವಸ್ಥತೆಯನ್ನು ಅನುಭವಿಸುತ್ತಿದ್ದರು ಎಂದು ವರದಿಯಾಗಿದೆ.

ಮಾಸ್‌ ಹಿಸ್ಟೀರಿಯಾ (ಇಲ್ಲಿ ಮತ್ತು ಇಲ್ಲಿ) ಒಂದು ಮಾನಸಿಕ ಸಾಮಾಜಿಕ ಆರೋಗ್ಯ ಸಮಸ್ಯೆಯಾಗಿದ್ದು, ಇದರಲ್ಲಿ ಜನರ ಗುಂಪು ‘ಅಸಹಜ ಮತ್ತು ಅಸಾಧಾರಣ ನಡವಳಿಕೆಗಳು, ಆಲೋಚನೆಗಳು ಮತ್ತು ಭಾವನೆಗಳು ಅಥವಾ ಆರೋಗ್ಯ ಲಕ್ಷಣಗಳ’  ಅನುಭವವನ್ನು ಹೊಂದಿದೆ.

ಭುವನೇಶ್ವರಿ ಶಾಲೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಇಂತಹ ಸಮಸ್ಯೆ ಹೆಣ್ಣುಮಕ್ಕಳಲ್ಲಿ ಬಹಳ ದಿನಗಳಿಂದ (ಇದನ್ನು ಓದಿ) ಕಂಡುಬಬರುತ್ತಿದ್ದು, ಅವರ ಓದಿನ ಮೇಲೆ ಪರಿಣಾಮ ಬೀರಿದೆ. ಕೆಲವು ಹುಡುಗಿಯರು ಹಠಾತ್ತಾಗಿ ನೆಲದ ಮೇಲೆ ಬಿದ್ದು ಹೊರಳಾಡುವುದು, ಕಿರುಚಾಡುವುದು, ಇತ್ಯಾದಿ ಲಕ್ಷಣಗಳನ್ನು ತೋರಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಹದಿಹರೆಯದ ಹುಡುಗಿಯರಲ್ಲಿ ಇಂತಹ ವರ್ತನೆಗಳು ಕಂಡುಬರುತ್ತಿರುವುದರಿಂದ ಶಾಲೆಯ ಪರಿಸರದ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ.

ಆಶಾ ವ್ಯಾಪ್ತಿಯಲ್ಲಿ ಸ್ಮಶಾನ ಅಥವಾ ಕೋವಿಡ್‌ನಿಂದ ಸಾವನಪ್ಪಿದ ಶವಗಳನ್ನು ಇರಿಸಲು ಈ ಶಾಲೆಯನ್ನು ಬಳಸಲಾಗುತ್ತಿ ಎಂಬುದನ್ನು ಯಾವ ಮಾಧ್ಯಮಗಳು ವರದಿ ಮಾಡಿಲ್ಲ ಅಥವಾ ಉಲ್ಲೇಖಿಸಿಲ್ಲ. ಗೂಗಲ್ ಮ್ಯಾಪ್‌ನಲ್ಲಿ ಶಾಲೆಯ ಸ್ಥಳವನ್ನು ಸರ್ಚ್ ಮಾಡಿದಾಗ, ಶಾಲೆಯ ಮೇಲ್ಛಾವಣಿಯ ಬಣ್ಣಗಳು ವೈರಲ್ ವೀಡಿಯೊದಲ್ಲಿ ಕಂಡುಬರುವ ಬಣ್ಣಕ್ಕೆ ಹೊಂದಿಕೆಯಾಗಿರುವುದನ್ನು ಕಂಡುಕೊಂಡಿದ್ದೇವೆ. ವೈರಲ್ ವಿಡಿಯೋವನ್ನು ನೇಪಾಳದ ಬೈತಾಡಿಯ ಸಿಗಾಸ್‌ನ ಭುವನೇಶ್ವರಿ ಶಾಲೆಯಲ್ಲಿ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟವಾಗುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ, ನೇಪಾಳದ ವಿಡಿಯೋವನ್ನು ಆಂಧ್ರಪ್ರದೇಶದ ಶಾಲಾ ಮಕ್ಕಳು ಅಸಹಜ ನಡವಳಿಕೆಯನ್ನು ಪ್ರದರ್ಶಿಸುವ ದೃಶ್ಯಗಳು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಕೋಲ್ಕತ್ತಾದ ಪ್ರತಿಭಟನೆಯದ್ದು ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...