Homeಫ್ಯಾಕ್ಟ್‌ಚೆಕ್FACT CHECK | ಹಿಂದೂ ಯುವತಿಯ ಕೊಲೆಗೆ ಯತ್ನಿಸಿದ ಮುಸ್ಲಿಂ ಯುವತಿ...ವೈರಲ್ ವಿಡಿಯೋದ ಅಸಲಿಯತ್ತೇನು?

FACT CHECK | ಹಿಂದೂ ಯುವತಿಯ ಕೊಲೆಗೆ ಯತ್ನಿಸಿದ ಮುಸ್ಲಿಂ ಯುವತಿ…ವೈರಲ್ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಯುವಕನೊಬ್ಬ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡು ರಸ್ತೆ ಮಧ್ಯೆ ಯುವತಿಯೊಬ್ಬರ ಕತ್ತು ಹಿಸುಕಲು ಪ್ರಯತ್ನಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ವಿಡಿಯೋದಲ್ಲಿ, ದಾಳಿ ಮಾಡಿದವನಿಂದ ಯುವತಿಯನ್ನು ರಕ್ಷಿಸಲು ಹಲವಾರು ಜನರು ಮಧ್ಯಪ್ರವೇಶಿಸುತ್ತಿರುವುದನ್ನು ಕಾಣಬಹುದು.

ಈ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ ಎಂಬ ಹೇಳಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. “ತಾನು ಕರೆದಾಗ ಬರದ ಹಿಂದೂ ಯುವತಿಯನ್ನು ಮುಸ್ಲಿಂ ವ್ಯಕ್ತಿಯೊಬ್ಬ ಕೊಲ್ಲಲು ಯತ್ನಿಸಿದ್ದಾನೆ” ಎಂದು ಆರೋಪಿಸಲಾಗಿದೆ.

ಜನವರಿ 6ರಂದು ‘ಯತಿ ನರಸಿಂಗಾನಂದ ಸರಸ್ವತಿ’ ಎಂಬ ಎಕ್ಸ್‌ ಖಾತೆಯಲ್ಲಿ ವೈರಲ್ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಈ ಘಟನೆ ಉತ್ತರ ಪ್ರದೇಶದ ಅಮ್ರೋಹದಲ್ಲಿ ನಡೆದಿದೆ. ಜಿಹಾದಿಯೊಬ್ಬ ಹಿಂದೂ ಯುವತಿ ಮೇಲೆ ದಾಳಿ ನಡೆಸಲು ಯತ್ನಿಸಿದ್ದ. ಈ ವೇಳೆ ರಕ್ಷಣೆಗೆ ಬಂದ ಹಿಂದೂ ಯುವಕರು, ಆತನ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ” ಎಂದು ಬರೆದುಕೊಂಡಿದ್ದರು.

ಫೈಟರ್ 3.0 ಎಂಬ ಮತ್ತೊಬ್ಬರು ಎಕ್ಸ್ ಬಳಕೆದಾರರು ಕೂಡ ಅದೇ ಪ್ರತಿಪಾದನೆಯೊಂದಿಗೆ ಜನವರಿ 5ರಂದು ವೈರಲ್ ವಿಡಿಯೋ ಹಂಚಿಕೊಂಡಿದ್ದರು.

ನಮ್ರತಾ ಸಿಂಗ್ ಎಂಬ ಇನ್ನೊಬ್ಬರು ಎಕ್ಸ್ ಬಳಕೆದಾರರು ಜನವರಿ 6ರಂದು ವಿಡಿಯೋ ಹಂಚಿಕೊಂಡು ಮೇಲ್ಗಡೆ ಉಲ್ಲೇಖಿಸಿದ ಖಾತೆಗಳಲ್ಲಿ ಮಾಡಿದ್ದ ಪ್ರತಿಪಾದನೆಯನ್ನೇ ಮಾಡಿದ್ದರು.

ಫ್ಯಾಕ್ಟ್‌ಚೆಕ್

ವೈರಲ್ ವಿಡಿಯೋ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ನಾವು ಅದಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಹುಡುಕಿದ್ದೇವೆ. ಈ ವೇಳೆ ಜನವರಿ 6, 2025ರಂದು ಅಮರ್ ಉಜಾಲ ವೆಬ್‌ಸೈಟ್‌ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ.

ವರದಿಯ ಪ್ರಕಾರ, ಈ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಗಜ್ರೌಲಾದಲ್ಲಿ ಸಂಭವಿಸಿದೆ. ಹಾಡಹಗಲೇ ಯುವಕನೊಬ್ಬ ಮಫ್ಲರ್ ಹಾಕಿಕೊಂಡು ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಕತ್ತು ಹಿಸುಕಲು ಯತ್ನಿಸಿದ್ದಾನೆ. ಅದು ವಿಫಲವಾದಾಗ ಆತ ಸ್ಥಳದಿಂದ ಪರಾರಿಯಾಗಿ ಮೊರಾದಾಬಾದ್‌ನಲ್ಲಿರುವ ತನ್ನ ಸಹೋದರಿಯ ಮನೆಯಲ್ಲಿ ಆಶ್ರಯ ಪಡೆದಿದ್ದ. ಪೊಲೀಸರು ಆತನನ್ನು ಪತ್ತೆಹಚ್ಚಿ, ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನಂತರ ಆತನನ್ನು ಜೈಲಿಗೆ ಕಳುಹಿಸಲಾಗಿದೆ. ಆರೋಪಿಯನ್ನು ಅಮ್ರೋಹಾ ಜಿಲ್ಲೆಯ ಹಳ್ಳಿಯೊಂದರ ನಿವಾಸಿ ರಾಹುಲ್ ಎಂದು ಗುರುತಿಸಲಾಗಿದೆ.

ಅಮ್ರೋಹಾ ಪೊಲೀಸರ ಎಕ್ಸ್ ಹ್ಯಾಂಡಲ್ ಅನ್ನೂ ನಾವು ಪರಿಶೀಲಿಸಿದ್ದೇವೆ. ಅದರಲ್ಲಿ ಪೊಲೀಸರು ಘಟನೆ ಕುರಿತು ಸ್ಪಷ್ಟೀಕರಣ ನೀಡಿರುವುದು ಕಂಡು ಬಂದಿದೆ.

“ಪ್ರಕರಣ ಸಂಬಂಧ ಆರೋಪಿಯನ್ನು ಈಗಾಗಲೇ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಸಂತ್ರಸ್ತೆ ಮತ್ತು ಆರೋಪಿ ಇಬ್ಬರೂ ಒಂದೇ ಜಾತಿಯವರು ಮತ್ತು ಪರಸ್ಪರ ಪರಿಚಿತರು. ಹಾಗಾಗಿ, ದಯವಿಟ್ಟು ದಾರಿ ತಪ್ಪಿಸುವ ಸುದ್ದಿಗಳನ್ನು ಹರಡಬೇಡಿ” ಎಂದು ಪೊಲೀಸರು ತಿಳಿಸಿದ್ದಾರೆ.

ಮಾಧ್ಯಮ ವರದಿ ಮತ್ತು ಪೊಲೀಸರ ಸೃಷ್ಟೀಕರಣದಿಂದ ವೈರಲ್ ವಿಡಿಯೋ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಗಜ್ರೌಲಾದಲ್ಲಿ ನಡೆದ ಘಟನೆಯದ್ದು, ಅದರ ಹಿಂದೆ ಯಾವುದೇ ಕೋಮು ಆಯಾಮಗಳಿಲ್ಲ. ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳಲ್ಲಿ ಮಾಡಿರುವ ಪ್ರತಿಪಾದನೆ ಸುಳ್ಳು ಎಂದು ಗೊತ್ತಾಗಿದೆ.

FACT CHECK | ಶೀಘ್ರದಲ್ಲೇ ಆರ್‌ಬಿಐನಿಂದ 5 ಸಾವಿರ ರೂಪಾಯಿಯ ಹೊಸ ನೋಟು ಬಿಡುಗಡೆ?..ಈ ಸ್ಟೋರಿ ಓದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...