Homeಫ್ಯಾಕ್ಟ್‌ಚೆಕ್FACT CHECK : ಬಿಜೆಪಿ ಪ್ರತಿಭಟನೆಯಲ್ಲಿ ಯುವತಿಯ ಡ್ಯಾನ್ಸ್... ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

FACT CHECK : ಬಿಜೆಪಿ ಪ್ರತಿಭಟನೆಯಲ್ಲಿ ಯುವತಿಯ ಡ್ಯಾನ್ಸ್… ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

- Advertisement -
- Advertisement -

ಯುವತಿಯೊಬ್ಬರು ವೇದಿಕೆ ಮೇಲೆ ನೃತ್ಯ ಮಾಡಿದ ವಿಡಿಯೋವೊಂದು ಕಳೆದರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಪಶ್ಚಿಮ ಬಂಗಾಳ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಆ ಪ್ರತಿಭಟನೆಯಲ್ಲಿ ಮಹಿಳೆಯರನ್ನು ತಂದು ಕುಣಿಸಲಾಗಿದೆ ಎಂದು ಅನೇಕರು ಆರೋಪಿಸಿದ್ದರು.

ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದ ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ (@SaketGokhale)ಅವರು ಆಗಸ್ಟ್ 26ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು “ಇದು ಆರ್‌ಜಿ ಕರ್‌ ಘಟನೆ ಖಂಡಿಸಿ ಬಂಗಾಳದಲ್ಲಿ ಬಿಜೆಪಿ ಆಯೋಜಿಸಿದ ಪ್ರತಿಭಟನೆ ಎನ್ನಲಾಗುತ್ತಿದೆ. ಇದು “ಮಹಿಳೆಯರನ್ನು ಗೌರವಿಸುವ” ಬಿಜೆಪಿಯ ಕಲ್ಪನೆಯೇ? ಬಿಜೆಪಿಯ ಸ್ತ್ರೀದ್ವೇಷವಾದಿಗಳು ರಾಜಕೀಯ ಅಜೆಂಡಾಗಳಿಗಾಗಿ ಪ್ರತಿಭಟನೆಯನ್ನು ಹೈಜಾಕ್ ಮಾಡಿದರು. ಅವರಿಗೆ ಸಂತ್ರಸ್ತೆ ಅಥವಾ ಯಾವುದೇ ಮಹಿಳೆಯ ಬಗ್ಗೆ ಕಾಳಜಿಯಿಲ್ಲ” ಎಂದು ಬರೆದುಕೊಂಡಿದ್ದರು.

ಮತ್ತೊಬ್ಬರು ಭವಿಕಾ ಕಪೂರ್ (@BhavikaKapoor5) ಎಂಬ ಎಕ್ಸ್‌ ಬಳಕೆದಾರರು ಆಗಸ್ಟ್ 26ರಂದು ವಿಡಿಯೋ ಹಂಚಿಕೊಂಡು “ಬಿಜೆಪಿ ತನ್ನದೇ ಆದ ವಿಶಿಷ್ಟ ಶೈಲಿಯಲ್ಲಿ ಪ್ರತಿಭಟಿಸಬಹುದು. ಆರ್‌ಜಿ ಕರ್ ಪ್ರಕರಣದ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಹಿನ್ನೆಲೆ ಬ್ಯಾನರ್‌ಗಳು “ನಮಗೆ ನ್ಯಾಯ ಬೇಕು” ಪ್ರತಿಭಟನೆಯ ಹಿಂದುತ್ವವಾದಿ ಶೈಲಿ” ಎಂದು ಬರೆದುಕೊಂಡಿದ್ದರು.

ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾತೆ (@SupriyaShrinate)ಅವರು ಆಗಸ್ಟ್ 26ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು ” ಇದು ನಿಜವಾಗಿಯೂ ಆರ್‌ಜಿ ಕರ್‌ ಪ್ರಕರಣದಲ್ಲಿ ನ್ಯಾಯಕ್ಕೆ ಆಗ್ರಹಿಸಿ ಬಿಜೆಪಿ ನಡೆಸಿದ ಪ್ರತಿಭಟನೆಯಾ?” ಎಂದು ಬರೆದುಕೊಂಡಿದ್ದರು. ನಂತರ ಅವರು ಪೋಸ್ಟ್ ಡಿಲಿಟ್ ಮಾಡಿದ್ದಾರೆ.

ಟಿಎಂಸಿ ನಾಯಕರು ಸೇರಿದಂತೆ ಇನ್ನೂ ಅನೇಕ ಜನರು ಸಾಮಾಜಿಕ ಜಾಲತಾಣಗಳಾದ ಎಕ್ಸ್‌, ಫೇಸ್‌ಬುಕ್‌ಗಳಲ್ಲಿ ವಿಡಿಯೋ ಹಂಚಿಕೊಂಡು ಬಿಜೆಪಿ ವಿರುದ್ದ ಕಿಡಿಕಾರಿದ್ದರು.

ಆಗಸ್ಟ್ 26ರಂದು ಈ ಕುರಿತು ಸುದ್ದಿ ವರದಿ ಪ್ರಕಟಿಸಿದ್ದ ಇಂಡಿಯಾ ಟುಡೇ ಸುದ್ದಿ ವೆಬ್‌ಸೈಟ್‌ ” ಯುವತಿಯೊಬ್ಬಳು ಡ್ಯಾನ್ಸ್‌ ಮಾಡುತ್ತಿರುವ ವಿಡಿಯೋ ಬಿಜೆಪಿಯ ಪ್ರತಿಭಟನೆಯದ್ದು ಎಂದು ಟಿಎಂಸಿ ನಾಯಕರು ಆರೋಪಿಸಿದ್ದಾರೆ. ಬಿಜೆಪಿ ಅದನ್ನು ಅಲ್ಲಗಳೆದಿದೆ” ಎಂದಿತ್ತು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು ಬಿಜೆಪಿಯ ಪ್ರತಿಭಟನೆಯ ವಿಡಿಯೋ ಅಲ್ಲ ಎಂದು ಗೊತ್ತಾಗಿದೆ.

ವಿಡಿಯೋ ಕುರಿತು ನಾವು ಮಾಹಿತಿ ಹುಡುಕಿದಾಗ ಖ್ಯಾತ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ಆಲ್ಟ್ ನ್ಯೂಸ್ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ಪಿಜುಶ್ ಭೌಮಿಕ್’ ಎಂಬ ವ್ಯಕ್ತಿ ಫೇಸ್‌ಬುಕ್‌ನಲ್ಲಿ ವೈರಲ್ ವಿಡಿಯೋ ಹಂಚಿಕೊಂಡು, ಆ ವಿಡಿಯೋವನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದಿದ್ದರು. ಅವರು ತಮ್ಮ ಪೋಸ್ಟ್‌ನಲ್ಲಿ ‘ದೇವಸ್ತುತಿ ದೇವನಾಥ್’ ಎಂಬ ನೃತ್ಯ ಶಿಕ್ಷಕಿಯ ಮತ್ತೊಂದು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ” ಎಂದು ಹೇಳಿದೆ.

ಮುಂದುವರೆದು “ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ ವ್ಯಕ್ತಿ ಪಿಜುಶ್ ಭೌಮಿಕ್ ಅವರಿಗೆ ನಾವು ಕರೆ ಮಾಡಿದ್ದೇವೆ. ಅವರು ಆ ವಿಡಿಯೋ ಬಿಜೆಪಿ ಪ್ರತಿಭಟನೆಯದ್ದು ಎಂಬುವುದನ್ನು ಅಲ್ಲಗಳೆದಿದ್ದು, ಅದು ಗ್ರಾಮ ಹಬ್ಬದ ವಿಡಿಯೋ ಎಂಬುವುದಾಗಿ ಹೇಳಿದ್ದಾರೆ ಎಂದು” ಆಲ್ಟ್‌ ನ್ಯೂಸ್ ತಿಳಿಸಿದೆ.

“ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ನವದ್ವೀಪ್ ಪೊಲೀಸ್ ಠಾಣೆ ವ್ಯಾಪ್ತಿಯ ಚಾರ್ ಬ್ರಹ್ಮನಗರದಲ್ಲಿ ಪ್ರತಿ ವರ್ಷ ‘ಮಾ ಮಾನಸ ಪೂಜೆ’ಯ ಸಮಯದಲ್ಲಿ ಸೇವಕ ಸಮಿತಿ ಎಂಬ ಸ್ಥಳೀಯ ಕ್ಲಬ್ ಗ್ರಾಮ ಹಬ್ಬವೊಂದನ್ನು ಆಯೋಜಿಸುತ್ತದೆ. ಚಾರ್ ಬ್ರಹ್ಮನಗರ ಪ್ರದೇಶವು ನವದ್ವೀಪ್ ಬ್ಲಾಕ್‌ನ ಸಿಎಮ್‌ಸಿಬಿ ಗ್ರಾಮ ಪಂಚಾಯಿತಿಗೆ ಒಳಪಟ್ಟಿದೆ. ಈ ಪಂಚಾಯತಿಯು ಪ್ರಸ್ತುತ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಶದಲ್ಲಿದೆ”.

“‘ಮಾ ಮಾನಸ’ ಹಾವುಗಳ ಹಿಂದೂ ಜಾನಪದ ದೇವತೆ. ಆಕೆಯನ್ನು ಶ್ರಾವಣ ಮಾಸದಲ್ಲಿ ಮುಖ್ಯವಾಗಿ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶದಲ್ಲಿ ಮಹಿಳೆಯರು ಪೂಜಿಸುತ್ತಾರೆ. ಆಗಸ್ಟ್ ತಿಂಗಳಲ್ಲಿ ಮಾನಸ ಪೂಜೆಯ ಸಮಯದಲ್ಲಿ ಬಂಗಾಳದ ಹಲವಾರು ಭಾಗಗಳಲ್ಲಿ ಗ್ರಾಮೀಣ ಹಬ್ಬಗಳನ್ನು ಆಯೋಜಿಸಲಾಗುತ್ತದೆ” ಎಂದು ಆಲ್ಟ್‌ ನ್ಯೂಸ್ ಹೇಳಿದೆ.

“ನಾವು ದೂರವಾಣಿ ಮೂಲಕ ಮಾತನಾಡಿದ ಪಿಜುಶ್ ಭೌಮಿಕ್ ಅವರು ಚಾರ್ ಬ್ರಹ್ಮನಗರದ ಹಬ್ಬ ಆಯೋಜಕರಲ್ಲಿ ಒಬ್ಬರು. ಅವರು ನೀಡಿರುವ ಮಾಹಿತಿಯಂತೆ ಈ ವರ್ಷದ ಆಗಸ್ಟ್ 17ರಂದು ಮಾ ಮಾನಸ ಪೂಜೆ ಇತ್ತು. ಈ ಪ್ರಯುಕ್ತ ಆಗಸ್ಟ್ 17ರಿಂದ 22ರವರೆಗೆ ಹಬ್ಬ ಆಯೋಜಿಸಿದ್ದೆವು. ಕಾರ್ಯಕ್ರಮದ ವೇದಿಕೆಯಲ್ಲಿ ಆರ್‌ಜಿ ಕರ್ ಆಸ್ಪತ್ರೆಯ ಘಟನೆ ಖಂಡಿಸಿ ಪೋಸ್ಟರ್‌ಗಳನ್ನು ಹಾಕಿದ್ದೆವು. ಅದೇ ವೇದಿಕೆಯಲ್ಲಿ ಆಗಸ್ಟ್ 19ರಂದು ಯುವತಿಯೊಬ್ಬರು ನೃತ್ಯ ಮಾಡಿದ್ದರು. ಅದರ ವಿಡಿಯೋ ವೈರಲ್ ಆಗಿದೆ” ಆಲ್ಟ್ ನ್ಯೂಸ್ ವಿವರಿಸಿದೆ.

ಒಟ್ಟಿನಲ್ಲಿ ಗ್ರಾಮ ಹಬ್ಬದ ವಿಡಿಯೋವನ್ನು ಬಿಜೆಪಿಯ ಪ್ರತಿಭಟನೆಯ ವಿಡಿಯೋ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಆರ್‌ಜಿ ಕರ್‌ ಆಸ್ಪತ್ರೆಯ ಅತ್ಯಾಚಾರ, ಕೊಲೆ ಘಟನೆ ಖಂಡಿಸಿದ ಪೋಸ್ಟರ್‌ಗಳು ವೇದಿಕೆ ಮೇಲೆ ಇರುವುದರಿಂದ ಹಲವರು ತಪ್ಪು ತಿಳಿದುಕೊಂಡಿರಬಹುದು.

PC : altnews.in

ಆದರೆ, ವೈರಲ್ ವಿಡಿಯೋದಲ್ಲಿರುವ ವೇದಿಕೆಯಲ್ಲಿ “ಜೈ ಮಾ ಮಾನಸ. ಗಂಗಾನದಿಯ ದಡದಲ್ಲಿ ಮಾ ಮಾನಸ ಮತ್ತು ಬೆಹುಲಾ-ಲಖಿಂದರ್ ಮೇಳ. ದಿನಾಂಕ : 31 ಶ್ರಾವಣದಿಂದ ಐದು ದಿನಗಳು. ಸ್ಥಳ: ಚಾರ್ ಬ್ರಹ್ಮನಗರ ಸೇವಕ ಸಮಿತಿ ಮೈದಾನ ಮತ್ತು ಗಂಗಾ ನದಿ ದಂಡೆ. ಸೇವಕ ಸಮಿತಿಯಿಂದ ಆಯೋಜಿಸಲಾಗಿದೆ” ಎಂದು ಬ್ಯಾನರ್‌ ಹಾಕಿರುವುದು ನೋಡಬಹುದು. ಆ ಬ್ಯಾನರ್‌ನಲ್ಲಿ ಹಿಂದೂ ದೇವಿಯ ಫೋಟೋ ಕೂಡ ಇದೆ.

ಇದನ್ನೂ ಓದಿ : FACT CHECK : KPSC ಪರೀಕ್ಷೆ ಕುರಿತು ಸುಳ್ಳು ಸುದ್ದಿ ಹಂಚಿಕೊಂಡ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...