HomeUncategorizedFact Check: ಕರ್ನಾಟಕದ ಬರ ಪರಿಹಾರ ಕುರಿತು ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಸುಳ್ಳು

Fact Check: ಕರ್ನಾಟಕದ ಬರ ಪರಿಹಾರ ಕುರಿತು ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಸುಳ್ಳು

- Advertisement -
- Advertisement -

ಏಪ್ರಿಲ್ 2,2024 ರಂದು ಚುನಾವಣಾ ಪ್ರಚಾರ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ “ಕರ್ನಾಟಕ ರಾಜ್ಯ ಸರ್ಕಾರ ಬರ ಪರಿಹಾರ ಕೋರಿ ಪ್ರಸ್ತಾವನೆ ಸಲ್ಲಿಸಲು ಮೂರು ತಿಂಗಳು ವಿಳಂಬ ಮಾಡಿದೆ. ಆದರೆ, ಈಗ ಕೇಂದ್ರ ಸರ್ಕಾರ ಬರ ಪರಿಹಾರ ನೀಡಿಲ್ಲವೆಂದು ಹೇಳುತ್ತಿದೆ. ಇದು ರಾಜಕೀಯ” ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾರ್ಚ್ 24ರಂದು ಆಯೋಜಿಸಿದ್ದ ಕಾರ್ಯಕ್ರವೊಂದರಲ್ಲಿ ಮಾತನಾಡಿದ್ದ ಕೇಂದ್ರ ವಿತ್ತ ಸಚಿವೆ ನಿರ್ಮಾ ಸೀತಾರಾಮನ್ ಅವರು, “ಕೇಂದ್ರದಿಂದ ಕರ್ನಾಟಕಕ್ಕೆ ಕೊಡಬೇಕಿದ್ದ ಒಂದೊಂದು ಪೈಸೆಯನ್ನೂ ಸರಿಯಾದ ಸಮಯಕ್ಕೆ ಕೊಟ್ಟಿದ್ದೇವೆ” ಎಂದು ಹೇಳಿದ್ದರು.

ಹಾಗಿದ್ದರೆ, ಗೃಹ ಸಚಿವ ಅಮಿತ್ ಶಾ ಅವರು ಹೇಳಿದಂತೆ ರಾಜ್ಯ ಸರ್ಕಾರ ಬರ ಪರಿಹಾರ ಕೋರಿ ಪ್ರಸ್ತಾವನೆ ಸಲ್ಲಿಸಲು ಮೂರು ತಿಂಗಳು ವಿಳಂಬ ಮಾಡಿದೆಯಾ? ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದಂತೆ ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಸೇರಿದಂತೆ ಬರಬೇಕಿರುವ ಎಲ್ಲಾ ಹಣ ಬಂದಿದೆಯಾ? ಎಂದು ನೋಡೋಣಾ.

ಫ್ಯಾಕ್ಟ್‌ಚೆಕ್ : ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಏಪ್ರಿಲ್ 2ರಂದು ಮಾಧ್ಯಮ ಪ್ರಕಟನೆಯ ಮೂಲಕ ಸ್ಪಷ್ಟೀಕರಣ ಕೊಟ್ಟಿದ್ದಾರೆ.

ಸಚಿವರ ಪ್ರಕಟನೆ ಹೀಗಿದೆ.. “ಈ ವರ್ಷ ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಎದುರಾಗಿದ್ದು, ಅಂದಾಜಿನ ಪ್ರಕಾರ 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾಗೂ 2 ಲಕ್ಷ ಹೆಕ್ಟೇರ್ ನಷ್ಟು ತೋಟಗಾರಿಕೆ ಬೆಳೆ ಹಾನಿಯಾಗಿದೆ. ಹೀಗಾಗಿ ಕಳೆದ ವರ್ಷ ಆಗಸ್ಟ್ ಎರಡನೇ ವಾರದಲ್ಲೇ ಸಮೀಕ್ಷೆ ನಡೆಸಿ ಕೇಂದ್ರದ ಮಾನದಂಡದ ಪ್ರಕಾರ ಸೆಪ್ಟೆಂಬರ್ 13 ರಂದೇ ಬರ ಘೋಷಿಸಲಾಗಿತ್ತು. ಮೊದಲ ಹಂತದಲ್ಲಿ 195 ತಾಲೂಕುಗಳು ಹಾಗೂ ಎರಡನೇ ಹಂತದಲ್ಲಿ 28 ತಾಲೂಕುಗಳೂ ಸೇರಿ ಒಟ್ಟು 223 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿತ್ತು.

ಕಳೆದ ವರ್ಷ ಸೆ.22ಕ್ಕೆ 18,200 ಕೋಟಿ ಪರಿಹಾರ ಕೋರಿ ಕೇಂದ್ರಕ್ಕೆ ಮೊದಲ ಮನವಿ (ಮೆಮೊರಾಂಡಂ) ಸಲ್ಲಿಸಲಾಯಿತು. ಒಂದು ವಾರದ ಅವಧಿಯಲ್ಲಿ ಬರ ಪರಿಹಾರ ಕೋರಿ ಮತ್ತೊಂದು ಮನವಿಯನ್ನೂ ಸಲ್ಲಿಸಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ

ಕಳೆದ ವರ್ಷ ದೇಶದ ಹಲವು ರಾಜ್ಯಗಳು ಬರಕ್ಕೆ ತುತ್ತಾಗಿದ್ದವು. ಕೇರಳ, ಬಿಹಾರ, ಜಾರ್ಖಂಡ್, ಮಣಿಪುರ, ಮಿಜೋರಾಂ, ತಮಿಳುನಾಡು ಸೇರಿದಂತೆ 12 ರಾಜ್ಯಗಳಲ್ಲಿ ಮುಂಗಾರು ಅವಧಿಯ ಹಾಗೂ 18 ರಾಜ್ಯಗಳಲ್ಲಿ ಹಿಂಗಾರಿನ ಬರ ಇತ್ತು. ಆದರೆ, ಈ ಯಾವ ರಾಜ್ಯಗಳೂ ‘ಬರ’ ಘೋಷಣೆ ಮಾಡುವ ಮುನ್ನವೇ ದೇಶದಲ್ಲೇ ಮೊದಲ ರಾಜ್ಯವಾಗಿ ಕರ್ನಾಟಕ ಮಾತ್ರ ಮುಂಜಾಗ್ರತಾ ಕ್ರಮವಾಗಿ ಬರ ಘೋಷಿಸಿತ್ತು.

ಕರ್ನಾಟಕದ ಬರ ಪರಿಹಾರ ಮನವಿಯ ಮೇರೆಗೆ ಕೇಂದ್ರದ ಬರ ಅಧ್ಯಯನ ತಂಡ ಕಳೆದ ವರ್ಷ ಅಕ್ಟೋಬರ್ 06 ರಂದು ರಾಜ್ಯಕ್ಕೆ ಆಗಮಿಸಿತ್ತು. ಮೂರು ತಂಡಗಳಾಗಿ ರಾಜ್ಯಾದ್ಯಂತ ಮೂರು ದಿನಗಳ ಪ್ರವಾಸ ಕೈಗೊಂಡ ತಂಡ, ಬರ ಅಧ್ಯಯನ ನಡೆಸಿತ್ತು. ಅಲ್ಲದೆ, ಬರ ಅಧ್ಯಯನದ ನಂತರ ರಾಜ್ಯ ಸರ್ಕಾರದ ಜೊತೆಗೂ ಅಕ್ಟೋಬರ್ 09 ರಂದು ಸಭೆ ನಡೆಸಿದ್ದ ಕೇಂದ್ರದ ತಂಡ ನಾವು ಮಾಡಿದ ಮನವಿ ವಸ್ತುಸ್ಥಿತಿಯಿಂದ ಕೂಡಿದೆ ಎಂದು ತಿಳಿಸಿತ್ತು. ಈ ಬಗ್ಗೆ ಅದೇ ದಿನ ಪತ್ರಿಕಾಗೋಷ್ಠಿ ನಡೆಸಿ ಮಾಧ್ಯಮ ಮಿತ್ರರಿಗೂ ಮಾಹಿತಿ ನೀಡಲಾಗಿತ್ತು.

ಅಧ್ಯಯನದ ಬೆನ್ನಿಗೆ ದೆಹಲಿಗೆ ಹಿಂತಿರುಗಿದ ಬರ ಅಧ್ಯಯನ ತಂಡ, ಕೇಂದ್ರಕ್ಕೆ ಒಂದು ವಾರದಲ್ಲೇ ವರದಿಯನ್ನೂ ಸಲ್ಲಿಸಿದೆ. ಎನ್‌ಆರ್‌ಎಫ್‌ ನಿಯಮದ ಅನ್ವಯ ಕೇಂದ್ರ ಬರ ಅಧ್ಯಯನ ತಂಡ ವರದಿ ನೀಡಿದ ತಕ್ಷಣ ಕೇಂದ್ರ ಗೃಹ ಸಚಿವರು, ಹಣಕಾಸು ಸಚಿವರು ಹಾಗೂ ಕೃಷಿ ಸಚಿವರು ಸಭೆ ನಡೆಸಿ ಬರ ಪರಿಹಾರ ಬಿಡುಗಡೆ ಮಾಡುವ ಸಂಬಂಧ ನಿರ್ಧಾರ ತೆಗೆದುಕೊಳ್ಳಬೇಕು. ಆದರೆ, ಆ ಸಭೆ ಈವರೆಗೂ ನಡೆದಿಲ್ಲ ಎಂಬುವುದೇ ವಾಸ್ತವ ಸಂಗತಿ.

ರಾಜ್ಯದ ರೈತರು ಬರದಿಂದ ತತ್ತರಿಸುತ್ತಿದ್ದಾರೆ. ಹೀಗಾಗಿ, ಶೀಘ್ರ ಬರ ಪರಿಹಾರ ವಿತರಿಸಿ ಎಂದು ಮನವಿ ಮಾಡುವ ಸಂಬಂಧ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಭೇಟಿಗೆ ಮನವಿ ಮಾಡಲಾಗಿತ್ತು. ಆದರೆ, ಅವರು ಭೇಟಿಗೆ ಅವಕಾಶ ನೀಡದ ಕಾರಣ ಕಳೆದ ವರ್ಷ ಅಕ್ಟೋಬರ್ 25ರಂದು ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನೊಳಗೊಂಡ ನಿಯೋಗದೊಂದಿಗೆ ಕೇಂದ್ರ ಕೃಷಿ ಕಾರ್ಯದರ್ಶಿ ಮನೋಜ್ ಕುಮಾರ್ ಅಹುಜಾ ಮತ್ತು ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಶೀಘ್ರ ಬರ ಪರಿಹಾರಕ್ಕೆ ಮನವಿ ಮಾಡಲಾಗಿತ್ತು.

ಸುದ್ದಿ ಲಿಂಕ್ ಇಲ್ಲಿದೆ

ಈ ನಡುವೆ ಇದೇ ಅವಧಿಯಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ಮೋದಿ ಅವರ ಭೇಟಿಗೆ ಅವಕಾಶ ಕೋರಿ ಎರಡು ಪತ್ರ ಬರೆದಿದ್ದರು. ಆದರೆ, ಅವರ ಭೇಟಿಗೆ ಅವಕಾಶ ನೀಡಲಾಗಿರಲಿಲ್ಲ.

ಕಳೆದ ವರ್ಷ ನವೆಂಬರ್ 24ರಂದು ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ ಅವರೊಂದಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ರಾಜ್ಯದ ಬರ ಪರಿಸ್ಥಿತಿ ಕುರಿತು ಚರ್ಚಿಸಲಾಗಿತ್ತು. ಅಲ್ಲದೆ, ಶೀಘ್ರ ಬರ ಪರಿಹಾರ ಬಿಡುಗಡೆಗೆ ಮನವಿ ಮಾಡಲಾಗಿತ್ತು. ಸಚಿವರು ಚರ್ಚೆ ವೇಳೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರಾದರೂ, ಇದರಿಂದ ರಾಜ್ಯಕ್ಕೆ ಯಾವುದೇ ಉಪಯೋಗವಾಗಿರಲಿಲ್ಲ.

ಕಳೆದ ವರ್ಷ ಡಿಸೆಂಬರ್ 19 ರಂದು ಕೊನೆಗೂ ಸ್ವತಃ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿತ್ತು. ಈ ವೇಳೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಜೊತೆಗೆ ನಾನೂ ಸಹ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದೆ. ಸಭೆಯಲ್ಲಿ ಕರ್ನಾಟಕದ ಬರ ಪರಿಸ್ಥಿತಿಯ ಕುರಿತು ಪ್ರಧಾನಿಗೆ ವಿವರಿಸಲಾಗಿತ್ತು. ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆಗೂ ಮನವಿ ಮಾಡಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಈವರೆಗೆ ಹಣ ಬಿಡುಗಡೆ ಮಾಡಿಲ್ಲ.

 ಸುದ್ದಿ ಲಿಂಕ್ 

ಹೀಗಾಗಿ ಕರ್ನಾಟಕ ಸರ್ಕಾರ ಬೇರೆ ದಾರಿ ಕಾಣದೆ ಬರ ಪರಿಹಾರ ಹಣ ಬಿಡುಗಡೆ ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಕೇಂದ್ರದಿಂದ ಬರ ಪರಿಹಾರವನ್ನು ಪಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಿಂದ ಈ ಕ್ಷಣದ ವರೆಗೆ ಸಾಂವಿಧಾನಿಕ ಮಾದರಿಯಲ್ಲಿ ಹೋರಾಟ ನಡೆಸುತ್ತಿದೆಯೇ ವಿನಃ ಈ ವಿಚಾರದಲ್ಲಿ ರಾಜಕೀಯ ಮಾಡಿರಲಿಲ್ಲ. ಇಂತಹ ಸೂಕ್ಷ್ಮ ವಿಚಾರದಲ್ಲಿ ರಾಜಕೀಯ ಮೇಲಾಟ ಸರಿಯಲ್ಲ ಎಂಬುದು ನಮ್ಮ ಅಭಿಪ್ರಾಯ. ರೈತರಿಗೆ ನೆರವು ನೀಡುವ ವಿಚಾರದಲ್ಲಿ ರಾಜಕೀಯ ಸರಿಯಲ್ಲ…!

ಸುದ್ದಿ ಲಿಂಕ್ ಇಲ್ಲಿದೆ

ಆದರೆ, ತೆರಿಗೆ ಹಂಚಿಕೆ, ವಿಶೇಷ ಅನುದಾನ ಬಿಡುಗಡೆ ಸೇರಿದಂತೆ ಹಲವು ವಿಚಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕದ ವಿರುದ್ಧ ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರವೇ. ಆದರೆ, ರೈತರಿಗೆ ಬರ ಪರಿಹಾರ ನೀಡುವ ವಿಚಾರವನ್ನೂ ಕೇಂದ್ರ ಸರ್ಕಾರ ರಾಜಕೀಯಗೊಳಿಸಿ ಕರ್ನಾಟಕವನ್ನು ಶೋಷಣೆಗೆ ಈಡು ಮಾಡುತ್ತದೆ ಎಂದು ನಾವು ಭಾವಿಸಿರಲಿಲ್ಲ. ಇನ್ನೂ ಜನರ ಮತಗಳನ್ನು ಗಳಿಸುವ ನಿಟ್ಟಿನಲ್ಲಿ ಇದೇ ವಿಚಾರವನ್ನು ಮುಂದಿಟ್ಟು ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರು ಹಸಿ ಹಸಿ ಸುಳ್ಳು ಹೇಳುತ್ತಾರೆ ಎಂದು ನಾವು ಖಂಡಿತ ಭಾಸಿರಲಿಲ್ಲ. ಅವರ ಈ ವರ್ತನೆಗೆ ನಾನು ವಿಷಾದಿಸುತ್ತೇವೆ.

ಇವಿಷ್ಟು ಅಮಿತ್ ಶಾ ಹೇಳಿಕೆಗೆ ಸಂಬಂಧಿಸಿದಂತೆ ಸಚಿವ ಕೃಷ್ಣಬೈರೇಗೌಡರು ನೀಡಿರುವ ಮಾಹಿತಿ. ಕಳೆದ ತಿಂಗಳು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರೋಪ ಮಾಡಿದ್ದಾಗಲೂ ಕೃಷ್ಣಬೈರೇಗೌಡರು ಸುದ್ದಿಗೋಷ್ಠಿ ನಡೆಸಿ ದಾಖಲೆಗಳನ್ನು ಮುಂದಿಟ್ಟಿದ್ದರು.

ಸಚಿವರು ನೀಡಿರುವ ಮಾಹಿತಿ ಕುರಿತು ನಾನುಗೌರಿ.ಕಾಂ ಪ್ರಕಟಿಸಿದ ವಿಸ್ಕೃತ ವರದಿಗಳ ಲಿಂಕ್ ಕೆಳಗೆ ಇದೆ.

Fact Check: ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದಂತೆ ಕೇಂದ್ರದಿಂದ ಕರ್ನಾಟಕಕ್ಕೆ ಬರ ಬೇಕಿರುವ ಎಲ್ಲಾ ಹಣ ಬಂದಿದೆಯಾ?

ಗ್ಯಾರಂಟಿಗೆ ಕೇಂದ್ರ ಸರ್ಕಾರದ ನಯಾಪೈಸೆಯೂ ಬೇಕಾಗಿಲ್ಲ: ನಿರ್ಮಲಾ ಸೀತಾರಾಮನ್‌ಗೆ ದಾಖಲೆ ಸಹಿತ ಪ್ರತಿಕ್ರಿಯಿಸಿದ ಸಚಿವ ಕೃಷ್ಣ ಬೈರೇಗೌಡ

ಸಚಿವರು ನೀಡಿರುವ ಸ್ಪಷ್ಟೀಕರಣಕ್ಕೆ ಪುಷ್ಠಿ ನೀಡುವ ಮಾಧ್ಯಮ ವರದಿಗಳನ್ನು ನಾವು ಈ ವರದಿಯ ಪ್ಯಾರಾಗ್ರಾಫ್‌ಗಳ ನಡುವೆ ಲಗತ್ತಿಸಿದ್ದೇವೆ. ಕಂದಾಯ ಸಚಿವರ ವಿವರಣೆ ಪ್ರಕಾರ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಹೇಳಿಕೆ ಸುಳ್ಳು ಎಂದು ಹೇಳಬಹುದು.

ಇದನ್ನೂ ಓದಿ : Fact Check: ಚುನಾವಣಾ ಬಾಂಡ್‌ ಕುರಿತು ಪ್ರಧಾನಿ ಮೋದಿ ನೀಡಿರುವ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...