Homeಫ್ಯಾಕ್ಟ್‌ಚೆಕ್Fact Check: ರೈತ ಹೋರಾಟದ ಉದ್ದೇಶ ಮೋದಿ ವರ್ಚಸ್ಸು ಕುಂದಿಸುವುದಾ? ಮಾಧ್ಯಮ ವರದಿಗಳ ಸತ್ಯಾಸತ್ಯತೆ ಏನು?

Fact Check: ರೈತ ಹೋರಾಟದ ಉದ್ದೇಶ ಮೋದಿ ವರ್ಚಸ್ಸು ಕುಂದಿಸುವುದಾ? ಮಾಧ್ಯಮ ವರದಿಗಳ ಸತ್ಯಾಸತ್ಯತೆ ಏನು?

- Advertisement -
- Advertisement -

“ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಯ ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯ ಮಟ್ಟ ಗಗನಕ್ಕೇರಿದೆ. ಅದನ್ನು ಸಂಪೂರ್ಣವಾಗಿ ಕುಗ್ಗಿಸುವುದು ರೈತ ಹೋರಾಟ ಅಥವಾ ದೆಹಲಿ ಚಲೋ ಹೋರಾಟದ ಉದ್ದೇಶ” ಎಂದು ರೈತ ಮುಖಂಡ ಜಗಜೀತ್ ಸಿಂಗ್ ದಲ್ಲೆವಾಲ್ ಹೇಳಿಕೆ ನೀಡಿದ್ದಾರೆ ಎಂಬ ವಿಡಿಯೋವೊಂದು ವೈರಲ್ ಆಗಿದೆ.

ಬಿಜೆಪಿ ನಾಯಕರು, ಬಲಪಂಥೀಯ ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಮತ್ತು ಹಿಂದಿ, ಇಂಗ್ಲಿಷ್ ಭಾಷೆಗಳ ಮುಖ್ಯವಾಹಿನಿ ಮಾಧ್ಯಮಗಳು ಈ ವಿಡಿಯೋವನ್ನು ಹಂಚಿಕೊಂಡಿದ್ದು, ‘ರೈತರ ಚಳವಳಿಯ ಏಕೈಕ ಉದ್ದೇಶ ಮೋದಿ ಸರ್ಕಾರದ ವರ್ಚಸ್ಸನ್ನು ಕುಂದಿಸುವುದು’ ಎಂದಿದ್ದಾರೆ.

ನ್ಯೂಸ್ 18 ಹಿಂದಿ ಚಾನೆಲ್‌ನಲ್ಲಿ ದಲ್ಲೆವಾಲ್ ಅವರ ಹೇಳಿಕೆಯ ವಿಡಿಯೋವನ್ನು ಬ್ರೇಕಿಂಗ್ ನ್ಯೂಸ್ ಆಗಿ ಪ್ರಸಾರ ಮಾಡಲಾಗಿದ್ದು, “ರೈತರ ಚಳವಳಿಯ ಹಿಂದಿನ ಉದ್ದೇಶ ‘ರಾಜಕೀಯ’ ಎಂದು ಸುದ್ದಿ ನಿರೂಪಕಿ ರುಬಿಕಾ ಲಿಯಾಖತ್ ಹೇಳಿದ್ದಾರೆ.

ವೈರಲ್ ಕ್ಲಿಪ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ನ್ಯೂಸ್ 18 ಚಾನೆಲ್‌ನ ನಿರೂಪಕ ಅಮಿಶ್ ದೇವಗನ್ “ರಾಮ ಮಂದಿರದ ಉದ್ಘಾಟನೆಯ ಬಳಿಕ ಮೋದಿಯವರ ಜನಪ್ರಿಯತೆ ಗಗನಕ್ಕೇರಿದೆ. ಅದನ್ನು ಕುಗ್ಗಿಸುವುದು ರೈತ ಚಳವಳಿಯ ಹಿಂದಿನ ಉದ್ದೇಶವಾಗಿದೆ” ಎಂದು ಬರೆದುಕೊಂಡಿದ್ದಾರೆ.

‘ಇಂಡಿಯಾ ಟಿವಿ’ಯಲ್ಲಿ ವೈರಲ್ ವಿಡಿಯೋವನ್ನು ಪ್ರಸಾರ ಮಾಡುವಾಗ, ನಿರೂಪಕಿ ಮೀನಾಕ್ಷಿ ಜೋಶಿ ಅವರು “ನರೇಂದ್ರ ಮೋದಿಯವರ ಜನ ಪ್ರಿಯತೆಯನ್ನು ಕುಗ್ಗಿಸಲು ರೈತರು ಚಳವಳಿ ಪ್ರಾರಂಭಿಸಿದ್ದಾರೆ” ಎಂದು ಹೇಳಿದ್ದಾರೆ. “ಈ ವಿಡಿಯೋ ರೈತ ಚಳವಳಿ ಪ್ರಾರಂಭವಾಗುವ ಕೆಲವು ದಿನಗಳ ಹಿಂದಿನದ್ದು” ಎಂದಿದ್ದಾರೆ.

‘ಝೀ ನ್ಯೂಸ್’ ನಿರೂಪಕಿ ಶಿವಾಂಗಿ ಠಾಕೂರ್ ಅವರು, “ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಹೆಚ್ಚುತ್ತಿರುವುದು ರೈತರ ದೆಹಲಿ ಚಲೋಗೆ ಪ್ರತಿಭಟನೆಗೆ ಕಾರಣವೇ? ಎಂದು ಪ್ರಶ್ನಿಸಿದ್ದಾರೆ. ನಂತರ, ಅದೇ ವರದಿಯಲ್ಲಿ, ಝೀ ನ್ಯೂಸ್ ವೀಡಿಯೊದ ಸತ್ಯಾಸತ್ಯತೆಯನ್ನು ಖಚಿತಪಡಿಸಿಲ್ಲ ಎಂದಿದ್ದಾರೆ.

‘ಟೈಮ್ಸ್ ನೌ ನವಭಾರತ್’ ಕೂಡ ವೈರಲ್ ಕ್ಲಿಪ್ ಅನ್ನು ಪ್ರಸಾರ ಮಾಡಿದ್ದು, ನಿರೂಪಕಿ ಹಿಮಾಂಶು ದೀಕ್ಷಿತ್ ಅವರು “ಪ್ರಧಾನಿ ನರೇಂದ್ರ ಮೋದಿಯವರ ಇಮೇಜ್‌ಗೆ ಹಾನಿ ಮಾಡುವುದು ಮತ್ತು ಅವರ ಜನಪ್ರಿಯತೆಯನ್ನು ತಗ್ಗಿಸುವುದು ರೈತರ ಚಳವಳಿಯ ಗುರಿಯಾಗಿದೆ” ಎಂದು ಹೇಳಿದ್ದಾರೆ.

‘ಟೈಮ್ಸ್ ನೌ ನವಭಾರತ್‌’ನ ರಾಷ್ಟ್ರೀಯ ಸಂಪಾದಕ ಅಮಿತ್ ಕುಮಾರ್, “ಪ್ರತಿಭಟನೆ ನಡೆಸುತ್ತಿರುವವರ ಅಜೆಂಡಾಕ್ಕೂ ರೈತರಿಗೂ ಯಾವುದೇ ಸಂಬಂಧವಿಲ್ಲ. ಮೋದಿ ಸರ್ಕಾರದ ಪ್ರತಿಷ್ಠೆಯನ್ನು ಹಾಳು ಮಾಡುವುದು ಮತ್ತು ಪ್ರತಿಸ್ಪರ್ಧಿ ರಾಜಕೀಯ ಪಕ್ಷಗಳಿಗೆ ಲಾಭ ಮಾಡಿಕೊಡುವುದು ಅವರ ನಿಜವಾದ ಉದ್ದೇಶವಾಗಿದೆ” ಎಂದಿದ್ದಾರೆ.

‘ಇಂಡಿಯಾ ಟುಡೇ’ ಕೂಡ ವೈರಲ್ ವಿಡಿಯೋವನ್ನು ಪ್ರಸಾರ ಮಾಡಿದ್ದು, “ರೈತ ಮುಖಂಡರ ಹೇಳಿಕೆಗಳು ರೈತರ ನೈಜ ಕಾರ್ಯಸೂಚಿಗೆ ವಿರುದ್ಧವಾಗಿವೆ” ಎಂದು ನಿರೂಪಕಿ ನಬಿಲಾ ಜಮಾಲ್ ಹೇಳಿದ್ದಾರೆ. “ಎಂಎಸ್‌ಪಿ ಕಾನೂನಿಗೆ ರೈತರು ಧ್ವನಿ ಎತ್ತುತ್ತಿರುವಾಗ ದಲ್ಲೆವಾಲ್ ಮೋದಿಯವರ ಜನಪ್ರಿಯತೆಯನ್ನು ಕುಗ್ಗಿಸುವ ಬಗ್ಗೆ ಯಾಕೆ ಮಾತನಾಡುತ್ತಿದ್ದಾರೆ” ಎಂದು ಹೇಳಿದ್ದಾರೆ. ಅಲ್ಲದೆ, ರೈತರ ನಿಜವಾದ ಅಜೆಂಡಾ ಏನು ಎಂದು ಪ್ರಶ್ನಿಸಿದ್ದಾರೆ.

‘ರಿಪಬ್ಲಿಕ್ ಟಿವಿ’ ಕೂಡ ಈ ವಿಡಿಯೋವನ್ನು ಪ್ರಸಾರ ಮಾಡಿದ್ದು, “ರೈತರು ನಿಜವಾಗಿಯೂ ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೋ ಅಥವಾ ಅವರಿಗೆ ಬೇರೆ ಉದ್ದೇಶವಿದೆಯೇ?” ಎಂದು ಪ್ರಶ್ನಿಸಿದೆ.

ಸುದ್ದಿ ಸಂಸ್ಥೆ ಎಎನ್‌ಐ, “ರಾಮ ಮಂದಿರದ ಉದ್ಘಾಟನೆಯ ಬಳಿಕ ಮೋದಿಯವರ ಜನಪ್ರಿಯತೆ ಗಗನಕ್ಕೇರಿದೆ. ಅದನ್ನು ಕುಗ್ಗಿಸಲು ರೈತರು ಹೋರಾಟ ಮಾಡುತ್ತಿರುವುದಾಗಿ ರೈತ ಮುಖಂಡ ದಲ್ಲೇವಾಲ್ ಹೇಳಿದ್ದಾರೆ. ಇದಕ್ಕೆ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಪ್ರತಿಕ್ರಿಯೆ ನೀಡಿದ್ದು, “ಇದೊಂದು ರಾಜಕೀಯ ಹೇಳಿಕೆ. ಈ ರೀತಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡರೆ ಜನ ಪ್ರಧಾನಿ ಮೋದಿಯವರನ್ನು ಬೆಂಬಲಿಸುವುದನ್ನು ನಿಲ್ಲಿಸುತ್ತಾರಾ? ಇದು ಪ್ರತಿಭಟನೆ ನಡೆಸುವ ಸರಿಯಾದ ದಾರಿಯಲ್ಲ ಎಂದು ಜನರೆಡೆಯಲ್ಲಿ ಒಂದು ಸಂದೇಶ ಹರಿದಾಡುತ್ತಿದೆ” ಎಂದು ಹೇಳಿದ್ದಾರೆ ಎಂದು ಖಟ್ಟರ್ ಹೇಳಿಕೆಯ ವಿಡಿಯೋ ಪೋಸ್ಟ್ ಮಾಡಿದೆ.

ಮಾಧ್ಯಮಗಳು ಮಾತ್ರವಲ್ಲದೆ ಭಾರತ ಸರ್ಕಾರದ ಹಿರಿಯ ಸಲಹೆಗಾರ ಕಾಂಚನ್ ಗುಪ್ತಾ, ಬಿಜೆಪಿ ಚಂಡೀಗಢ, ಅಂಶುಲ್ ಸಕ್ಸೇನಾ, ರೋಷನ್ ಸಿನ್ಹಾ ಮತ್ತು ಪನ್ ಫ್ಯಾಕ್ಟ್ಸ್ ಇವರ ಎಕ್ಸ್ ಖಾತೆಗಳಲ್ಲೂ ವೈರಲ್ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾನುಗೌರಿ.ಕಾಂ ಮೊದಲು ರೈತ ನಾಯಕ ಜಗಜೀತ್ ಸಿಂಗ್ ದಲ್ಲೆವಾಲ್ ಅವರ ಹೇಳಿಕೆಯ ಸಂಪೂರ್ಣ ವಿಡಿಯೋವನ್ನು ಹುಡುಕಿದೆ. ಈ ವೇಳೆ ನಮಗೆ ಅನ್ ಮ್ಯೂಟ್ (Unmute) ಎಂಬ ಫೇಸ್‌ಬುಕ್ ಖಾತೆಯಲ್ಲಿ, ದಲ್ಲೇವಾಲ್ ಅವರು ಪಂಜಾಬಿ ಭಾಷೆಯಲ್ಲಿ ಮಾತನಾಡಿರುವ ವಿಡಿಯೋ ದೊರೆತಿದೆ.

ಒಟ್ಟು 26 ನಿಮಿಷದ ವಿಡಿಯೋದಲ್ಲಿ 18 ನಿಮಿಷ 40 ಸೆಕೆಂಡ್‌ಗೆ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಹೇಳಿಕೆಯನ್ನು ದಲ್ಲೇವಾಲ್ ನೀಡಿದ್ದಾರೆ. ಸಂಪೂರ್ಣ ವಿಡಿಯೋ ಪಂಜಾಬಿ ಭಾಷೆಯಲ್ಲಿ ಇರುವುದರಿಂದ ನಾವು ವಿಡಿಯೋದ ಭಾಷಾಂತರಕ್ಕಾಗಿ ಆಲ್ಟ್‌ ನ್ಯೂಸ್‌ನ ಫ್ಯಾಕ್ಟ್ ಚೆಕ್ ವರದಿಯನ್ನು ಪರಿಶೀಲಿಸಿದ್ದೇವೆ. ವರದಿಯಲ್ಲಿ ದಲ್ಲೇವಾಲ್ ಅವರ ಹೇಳಿಕೆಯ ವಿಡಿಯೋವನ್ನು ತಿರುಚಲಾಗಿದೆ ಎಂದು ಹೇಳಲಾಗಿದೆ.

ಆಲ್ಟ್‌ ನ್ಯೂಸ್ ತಿಳಿಸಿದಂತೆ, ಮೋದಿಯವರ ಜನಪ್ರಿಯತೆ ರಾಮ ಮಂದಿರ ಉದ್ಘಾಟನೆಯ ಬಳಿಕ ಹೆಚ್ಚಾಗಿದೆ. ಅದನ್ನು ಕುಗ್ಗಿಸಬೇಕು ಎಂದು ದಲ್ಲೇವಾಲ್ ಹೇಳಿರುವುದು ನಿಜ. ಆದರೆ, ಅವರು ಅಷ್ಟನ್ನು ಮಾತ್ರ ಹೇಳಿಲ್ಲ. ದಲ್ಲೇವಾಲ್ ಹೇಳಿರುವುದು “ಯಾವುದೇ ರಾಜಕಾರಣಿ ನಮ್ಮ ಸಮಸ್ಯೆಗಳನ್ನು ಆಲಿಸಬೇಕಿದ್ದರೆ ಅವರ ಜನಪ್ರಿಯತೆಗೆ ಕುತ್ತು ಬರಬೇಕು. ಜನಪ್ರಿಯತೆ ಕುಂದುವಾಗ ಅವರು ಜನರ ಬಳಿಗೆ ಬರುತ್ತಾರೆ. ಅದೇ ರೀತಿ ಮೋದಿಯವರು ಈಗ ಭಾರೀ ಜನಪ್ರಿಯತೆಯಲ್ಲಿದ್ದಾರೆ. ಅದನ್ನು ನಾವು ಕುಗ್ಗಿಸಬೇಕು. ಆಗ ಅವರು ನಮ್ಮ ಬೇಡಿಕೆಗಳನ್ನು ಆಲಿಸಲು ಬರುತ್ತಾರೆ” ಎಂದಾಗಿದೆ. ಅಲ್ಲದೆ, ನಮ್ಮ ಹೋರಾಟದ ಉದ್ದೇಶ ಮೋದಿಯವರ ಜನಪ್ರಿಯತೆ ಕುಗ್ಗಿಸುವುದು ಮಾತ್ರ ಎಂದು ಅವರು ಹೇಳಿಲ್ಲ.

ಇಲ್ಲಿ ದಲ್ಲೇವಾಲ್ ಅವರ ಹೇಳಿಕೆಯ ಸಂಪೂರ್ಣ ವಿಡಿಯೋವನ್ನು ಎಡಿಟ್ ಮಾಡಿ, ಅವರು ಮೋದಿಯವರ ಬಗ್ಗೆ ಮಾತನಾಡಿರುವ ಭಾಗವನ್ನು ಮಾತ್ರ ಮಾಧ್ಯಮಗಳು ಪ್ರಸಾರ ಮಾಡಿವೆ. ಅದನ್ನೇ ಸಾಮಾಜಿಕ ಜಾಲತಾಣಗಳಲ್ಲೂ ಹಂಚಿಕೊಳ್ಳಲಾಗಿದೆ. ಈ ಮೂಲಕ ರೈತ ನಾಯಕನ ಹೇಳಿಕೆಗೆ ಬೇರೆಯದ್ದೇ ಬಣ್ಣ ಹಚ್ಚಲಾಗಿದೆ. ರೈತ ಹೋರಾಟದ ಕುರಿತು ಜನರಲ್ಲಿ ತಪ್ಪು ಭಾವನೆ ಮೂಡಿಸುವ ಪ್ರಯತ್ನ ಮಾಡಲಾಗಿದೆ ಎಂದು ಆಲ್ಟ್‌ ನ್ಯೂಸ್‌ ಹೇಳಿದೆ.

ಇದನ್ನೂ ಓದಿ : FACT CHECK| ನಾಸೀರ್‌ ಹುಸೇನ್‌ ಬೆಂಬಲಿಗರು ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರಾ? ಕನ್ನಡ ಮಾದ್ಯಮಗಳ ಸುದ್ದಿಯ ವಾಸ್ತವಾಂಶವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...