HomeದಿಟನಾಗರFact Check: ಕಾಂಗ್ರೆಸ್‌ ಪ್ರಣಾಳಿಕೆ ದೇಶಕ್ಕೆ ಅಪಾಯಕಾರಿ ಎಂದು ಸುಳ್ಳು ಸುದ್ದಿ ಹಂಚಿಕೆ

Fact Check: ಕಾಂಗ್ರೆಸ್‌ ಪ್ರಣಾಳಿಕೆ ದೇಶಕ್ಕೆ ಅಪಾಯಕಾರಿ ಎಂದು ಸುಳ್ಳು ಸುದ್ದಿ ಹಂಚಿಕೆ

- Advertisement -
- Advertisement -

“ಕಾಂಗ್ರೆಸ್ ಪ್ರಣಾಳಿಕೆ ಭಯಾನಕವಾಗಿದೆ. ನನ್ನ ಜೀವನದಲ್ಲಿ ಇಂತಹ ಅಪಾಯಕಾರಿ ಪ್ರಣಾಳಿಕೆಯನ್ನು ನೋಡಿಲ್ಲ. ಇದು ಪಿಎಫ್ಐನ ವಿಷನ್-2047 ಡಾಕ್ಯುಮೆಂಟ್ ಇದ್ದಂತೆ. ತ್ರಿವಳಿ ತಲಾಖ್ ಅನ್ನು ಮರಳಿ ತರುತ್ತೇವೆ. ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ, ಲವ್ ಜಿಹಾದ್‌ ಮತ್ತು ಶಾಲೆಗಳಲ್ಲಿ ಬುರ್ಖಾಗೆ ಬೆಂಬಲ. ಬಹುಸಂಖ್ಯಾತವಾದವನ್ನು (ಹಿಂದೂ ಧರ್ಮ) ಕೊನೆಗೊಳಿಸುತ್ತೇವೆ. ಗೋಮಾಂಸವನ್ನು ಕಾನೂನು ಬದ್ದ ಮಾಡುತ್ತೇವೆ. ಮುಸ್ಲಿಮರಿಗೆ ಪ್ರತ್ಯೇಖ ಸಾಲ ಬಡ್ಡಿ ನೀಡುತ್ತೇವೆ ಎಂದು ಘೋಷಿಸಿಕೊಂಡಿದ್ದಾರೆ” ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ಸ್ಟಾರ್ ಬಾಯ್ ತರುಣ್ ಎಂಬ ಎಕ್ಸ್ ಬಳಕೆದಾರನೊಬ್ಬ ಈ ಪೋಸ್ಟ್ ಅನ್ನು ಅಪ್ಲೋಡ್ ಮಾಡಿದ್ದು, ಇನ್ನೂ ಅನೇಕ ಎಕ್ಸ್ ಬಳಕೆದಾರರು ಇದೇ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆಸ್ ಪ್ರಣಾಳಿಕೆಯ ಕುರಿತು ಹಂಚಿಕೊಳ್ಳಲಾದ ಪೋಸ್ಟ್ ಬಗ್ಗೆ ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ವೈರಲ್ ಪೋಸ್ಟ್‌ನಲ್ಲಿ ಹೇಳಿರುವ ಅಂಶಗಳು ನಿಜಾನ? ಎಂದು ತಿಳಿದುಕೊಳ್ಳಲು, ಇತ್ತೀಚೆಗೆ ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಲೋಕಸಭೆ ಚುನಾವಣೆಯ ಪ್ರಣಾಳಿಕೆಯನ್ನು ನಾವು ಪರಿಶೀಲಿಸಿದ್ದೇವೆ.

ಕಾಂಗ್ರೆಸ್‌ ಅಧಿಕೃತ ವೆಬ್‌ಸೈಟ್‌ನಲ್ಲಿರುವ ಪ್ರಣಾಳಿಕೆಯಲ್ಲಿ…

1. ಸಂವಿಧಾನದ 15, 16, 25, 26, 28, 29 ಮತ್ತು 30 ನೇ ವಿಧಿಗಳ ಅಡಿಯಲ್ಲಿ ಒಬ್ಬರ ನಂಬಿಕೆಯನ್ನು ಆಚರಿಸುವ ಮೂಲಭೂತ ಹಕ್ಕು ಮತ್ತು ಧಾರ್ಮಿಕ ಅಲ್ಪಸಂಖ್ಯಾತರಿಗೆ ಖಾತರಿಪಡಿಸಿದ ಹಕ್ಕುಗಳನ್ನು ನಾವು ಗೌರವಿಸುತ್ತೇವೆ ಮತ್ತು ಎತ್ತಿ ಹಿಡಿಯುತ್ತೇವೆ.

2. ಸಂವಿಧಾನದ 15, 16, 29 ಮತ್ತು 30 ನೇ ವಿಧಿಗಳ ಅಡಿಯಲ್ಲಿ ಖಾತರಿಪಡಿಸಿದ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ನಾವು ಗೌರವಿಸುತ್ತೇವೆ ಮತ್ತು ಎತ್ತಿ ಹಿಡಿಯುತ್ತೇವೆ.

3. ಶಿಕ್ಷಣ, ಉದ್ಯೋಗ, ವ್ಯವಹಾರ, ಸೇವೆಗಳು, ಕ್ರೀಡೆ, ಕಲೆ ಮತ್ತು ಇತರ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಅವಕಾಶಗಳ ಸಂಪೂರ್ಣ ಲಾಭವನ್ನು ಪಡೆಯಲು ಅಲ್ಪಸಂಖ್ಯಾತರಿಗೆ ಸೇರಿದ ವಿದ್ಯಾರ್ಥಿಗಳು ಮತ್ತು ಯುವಕರನ್ನು ನಾವು ಪ್ರೋತ್ಸಾಹಿಸುತ್ತೇವೆ ಮತ್ತು ಸಹಾಯ ಮಾಡುತ್ತೇವೆ.

4. ನಾವು ವಿದೇಶದಲ್ಲಿ ಅಧ್ಯಯನಕ್ಕಾಗಿ ಮೌಲಾನಾ ಆಜಾದ್ ವಿದ್ಯಾರ್ಥಿವೇತನವನ್ನು ಪುನಃ ಸ್ಥಾಪಿಸುತ್ತೇವೆ ಮತ್ತು ವಿದ್ಯಾರ್ಥಿವೇತನದ ಸಂಖ್ಯೆಯನ್ನು ಹೆಚ್ಚಿಸುತ್ತೇವೆ.

5. ಅಲ್ಪಸಂಖ್ಯಾತರ ಆರ್ಥಿಕ ಸಬಲೀಕರಣವು ಭಾರತವು ತನ್ನ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಅಗತ್ಯವಾದ ಹೆಜ್ಜೆಯಾಗಿದೆ. ಬ್ಯಾಂಕ್‌ಗಳು ಅಲ್ಪಸಂಖ್ಯಾತರಿಗೆ ಯಾವುದೇ ತಾರತಮ್ಯವಿಲ್ಲದೆ ಸಾಂಸ್ಥಿಕ ಸಾಲವನ್ನು ಒದಗಿಸುತ್ತವೆ ಎಂದು ನಾವು ಖಚಿತಪಡಿಸುತ್ತೇವೆ.

6. ಅಲ್ಪಸಂಖ್ಯಾತರು ಶಿಕ್ಷಣ, ಆರೋಗ್ಯ, ಸಾರ್ವಜನಿಕ ಉದ್ಯೋಗ, ಲೋಕೋಪಯೋಗಿ ಒಪ್ಪಂದಗಳು, ಕೌಶಲ್ಯ ಅಭಿವೃದ್ಧಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಾರತಮ್ಯವಿಲ್ಲದೆ ತಮ್ಮ ನ್ಯಾಯಯುತ ಪಾಲನ್ನು ಪಡೆಯುವುದನ್ನು ನಾವು ಖಚಿತಪಡಿಸುತ್ತೇವೆ.

7. ಪ್ರತಿಯೊಬ್ಬ ನಾಗರಿಕನಂತೆ, ಅಲ್ಪಸಂಖ್ಯಾತರಿಗೂ ಉಡುಗೆ, ಆಹಾರ, ಭಾಷೆ ಮತ್ತು ವೈಯಕ್ತಿಕ ಕಾನೂನುಗಳ ಆಯ್ಕೆಯ ಸ್ವಾತಂತ್ರ್ಯವಿದೆ ಎಂದು ಕಾಂಗ್ರೆಸ್ ಖಚಿತಪಡಿಸುತ್ತದೆ.

8. ನಾವು ವೈಯಕ್ತಿಕ ಕಾನೂನುಗಳ ಸುಧಾರಣೆಯನ್ನು ಪ್ರೋತ್ಸಾಹಿಸುತ್ತೇವೆ. ಅಂತಹ ಸುಧಾರಣೆಯನ್ನು ಸಂಬಂಧಪಟ್ಟ ಸಮುದಾಯಗಳ ಭಾಗವಹಿಸುವಿಕೆ ಮತ್ತು ಒಪ್ಪಿಗೆಯೊಂದಿಗೆ ಕೈಗೊಳ್ಳಬೇಕು.

9. ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಹೆಚ್ಚಿನ ಭಾಷೆಗಳನ್ನು ಸೇರಿಸುವ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.

ಇವಿಷ್ಟು ಕಾಂಗ್ರೆಸ್ ಈ ಬಾರಿಯ ಲೋಕಸಭೆ ಚುನಾವಣೆಗೆ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳಾಗಿವೆ. ವೈರಲ್ ಪೋಸ್ಟ್‌ನಲ್ಲಿ ಹೇಳಿದಂತೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತ್ರಿವಳಿ ತಲಾಖ್ ಮರಳಿ ತರುತ್ತೇವೆ, ಲವ್ ಜಿಹಾದ್ ಬೆಂಬಲಿಸುತ್ತೇವೆ, ಬಹು ಸಂಖ್ಯಾತವಾದವನ್ನು ಕೊನೆಗೊಳಿಸುತ್ತೇವೆ ಎಂದಿಲ್ಲ. ಆದರಿಂದ ಸಾಮಾಜಿಕ ಮಾಧ್ಯಗಳಲ್ಲಿ ಹರಿದಾಡುತ್ತಿರುವುದು ಸುಳ್ಳು ಸುದ್ದಿಯಾಗಿದೆ.

ಇದನ್ನೂ ಓದಿ : Fact Check: ಹಿಂದೂ ಧರ್ಮ ಬೋಧಿಸದಂತೆ ಕಾಂಗ್ರೆಸ್ ತಡೆ ಹಿಡಿದಿದೆ ಎಂಬುವುದು ಸುಳ್ಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...