Homeಕರ್ನಾಟಕಮಂಗಳೂರಿನ ಕುಡುಪುವಿನಲ್ಲಿ ಅಶ್ರಫ್ ಗುಂಪು ಹತ್ಯೆ: ಸತ್ಯಶೋಧನಾ ವರದಿ ಬಿಡುಗಡೆ

ಮಂಗಳೂರಿನ ಕುಡುಪುವಿನಲ್ಲಿ ಅಶ್ರಫ್ ಗುಂಪು ಹತ್ಯೆ: ಸತ್ಯಶೋಧನಾ ವರದಿ ಬಿಡುಗಡೆ

- Advertisement -
- Advertisement -

ಮಂಗಳೂರು ನಗರದ ಹೊರವಲಯ ಕುಡುಪುವಿನಲ್ಲಿ ಏಪ್ರಿಲ್ 27ರಂದು ನಡೆದ ಕೇರಳದ ಮುಸ್ಲಿಂ ಯುವಕ ಮೊಹಮ್ಮದ್ ಅಶ್ರಫ್ ಅವರ ಗುಂಪು ಹತ್ಯೆಯ ಕುರಿತ ಸತ್ಯಶೋಧನಾ ವರದಿಯನ್ನು ಶನಿವಾರ (ಜೂ.28) ಬೆಂಗಳೂರಿನ ಪ್ರೆಸ್‌ ಕ್ಷಬ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಸಾಮಾಜಿಕ ಹೋರಾಟಗಾರರ ತಂಡವು ಮಂಗಳೂರಿಗೆ ಭೇಟಿ ನೀಡಿ ಸಂಗ್ರಹಿಸಿದ ಮಾಹಿತಿಗಳ ವರದಿಯನ್ನು ‘ಮಂಗಳೂರು ಗುಂಪು ಹತ್ಯೆ ಪ್ರಕರಣ-ಸಂವಿಧಾನದ ಕಗ್ಗೊಲೆಯ ಬಗ್ಗೆ ಮೌನ ಮುರಿಯಬೇಕಿದೆ’ ಎಂಬ ಹೆಸರಿನಲ್ಲಿ ಪೀಪಲ್ಸ್ ಯೂನಿಯನ್‌ ಫಾರ್ ಸಿವಿಲ್ ಲಿಬರ್ಟೀಸ್ ಕರ್ನಾಟಕ (ಪಿಯುಸಿಎಲ್‌), ಅಸೋಸಿಯೇಷನ್ ಆಫ್ ಪ್ರೊಟೆಕ್ಷನ್‌ ಫಾರ್ ಸಿವಿಲ್ ರೈಟ್ಸ್‌ ಕರ್ನಾಟಕ (ಎಪಿಸಿಆರ್) ಮತ್ತು ಆಲ್ ಇಂಡಿಯಾ ಲಾಯರ್ಸ್‌ ಅಸೋಸಿಯೇಷನ್ ಫಾರ್ ಜಸ್ಟೀಸ್‌ ಕರ್ನಾಟಕ (ಎಐಎಲ್‌ಎಜೆ) ಜಂಟಿಯಾಗಿ ಬಿಡುಗಡೆ ಮಾಡಿದೆ.

ವರದಿ ಬಿಡುಗಡೆ ಮಾಡಿ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ “ರಾಜ್ಯದ ಆಡಳಿತವು ಶೋಷಿತ ಸಮುದಾಯಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸುವಲ್ಲಿ ವಿಫಲವಾಗಿದೆ. ಅಶ್ರಫ್ ಗುಂಪು ಹತ್ಯೆ, ಕತ್ತರಘಟ್ಟದ ದಲಿತ ಯುವಕನ ಹತ್ಯೆ ಪ್ರಕರಣದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಂತ್ರಸ್ತರ ಮನೆಗಳಿಗೆ ಭೇಟಿ ನೀಡದಿರುವುದು ಕಾನೂನು ಮತ್ತು ಆಡಳಿತದ ಮೇಲಿನ ಜನರ ನಂಬಿಕೆ ಕುಂದಿಸಿದೆ ಎಂದು ಅಭಿಪ್ರಾಯಪಟ್ಟರು.

ದಕ್ಷಿಣ ಕನ್ನಡದಲ್ಲಿ ದಶಕಗಳಿಂದಲೂ ಸೌಹಾರ್ದತೆ ಮತ್ತು ಮಾನವೀಯತೆ ಕುಂದುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು ಮಾವಳ್ಳಿ ಶಂಕರ್, ‘ಅಶ್ರಫ್ ಅವರ ಸಹೋದರ ಜಬ್ಬಾರ್ ಹೇಳಿದಂತೆ ಇದೇ ಕೊನೆಯ ಗುಂಪು ಹತ್ಯೆಯಾಗಬೇಕು’ ಎಂದರು.

ವರ್ಣಭೇದ ನೀತಿಗಳ ಸಮಕಾಲೀನ ಸ್ವರೂಪಗಳ ಕುರಿತ ವಿಶ್ವಸಂಸ್ಥೆಯ ವಿಶೇಷ ವರದಿಗಾರರಾಗಿರುವ ಅಶ್ವಿನಿ ಕೆ.ಪಿ ಮಾತನಾಡಿ, “ಎಲ್ಲಾ ರೀತಿಯ ಜನಾಂಗೀಯ ತಾರತಮ್ಯಗಳ ನಿರ್ಮೂಲನೆಗೆ ಸಂಬಂಧಿಸಿದ ಅಂತಾರಾಷ್ಟ್ರೀಯ ಒಪ್ಪಂದಗಳಿಗೆ ಭಾರತ ಸಹಿ ಹಾಕಿದೆ. ಆದ್ದರಿಂದ ಇಂತಹ ಹಿಂಸಾಚಾರಕ್ಕೆ ಕಾರಣವಾಗುವ ದ್ವೇಷವನ್ನು ತೊಡೆದು ಹಾಕಲು ಭಾರತ ಬದ್ಧವಾಗಿದೆ ಎಂಬುವುದನ್ನು ಒತ್ತಿ ಹೇಳಿದರು.

ಪಹಲ್ಗಾಮ್ ದಾಳಿಯ ನಂತರ ಮುಸ್ಲಿಮರನ್ನು ದುಷ್ಟರನ್ನಾಗಿ ಬಿಂಬಿಸಲಾಗಿದೆ. ಪಹಲ್ಗಾಮ್ ದಾಳಿಯನ್ನು ಕೋಮುವಾದಗೊಳಿಸುವ ನಿಟ್ಟಿನಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರವಹಿಸಿವೆ. ಅಶ್ರಫ್ ಹತ್ಯೆಯಂತಹ ಘಟನೆಗಳಿಗೆ ಮಾಧ್ಯಮಗಳೇ ಕಾರಣ. ಅವುಗಳೂ ಮತ್ತಷ್ಟೂ ಜವಾಬ್ದಾರಿಯುತವಾಗಿ ವರದಿ ಮಾಡಬೇಕು. ಕಾನೂನನ್ನು ಜಾರಿ ಮಾಡಬೇಕಾದ ಸಂಸ್ಥೆಗಳು ತಳಮಟ್ಟದ ಜನರ ಬಗ್ಗೆ ನಿರ್ಲಕ್ಷ್ಯ ಮತ್ತು ಪಕ್ಷಪಾತ ಪ್ರದರ್ಶಿಸುವುದು ಆಘಾತಕಾರಿಯಾಗಿದೆ ಎಂದರು.

ಆಲ್ ಇಂಡಿಯಾ ಅಸೋಸಿಯೇಷನ್ ಫಾರ್ ಜಸ್ಟೀಸ್‌ನ ಅಧ್ಯಕ್ಷೆ ಮೈತ್ರೇಯಿ ಕೃಷ್ಣನ್ ಅವರು ಮಾತನಾಡಿ, “ಅಶ್ರಫ್ ಅವರ ಗುಂಪು ಹತ್ಯೆಯನ್ನು 2018ರ ತಹಸೀನ್ ಪೂನಾವಾಲಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪಿನ ಹಿನ್ನೆಲೆಯಲ್ಲಿ ವಿವರಿಸಿದರು. ಇದು ಕೇವಲ ಕೊಲೆಯಲ್ಲ, ಬದಲಿಗೆ ದ್ವೇಷ ಅಪರಾಧ ಎಂದು ಒತ್ತಿ ಹೇಳಿದರು. ಇಂತಹ ದ್ವೇಷ ಅಪರಾಧಗಳು ಸಂವಿಧಾನದ ಮೌಲ್ಯಗಳ ಮೇಲಿನ ದಾಳಿಯಾಗಿದೆ ಎಂದು ವಿವರಿಸಿದರು. ಎಫ್‌ಐಆರ್ ದಾಖಲಿಸುವಲ್ಲಿ ವಿಳಂಬ ಮಾಡಿದ, ಸುಪ್ರೀಂ ಕೋರ್ಟ್‌ನ ಗುಂಪು ಹತ್ಯೆಯ ಮಾರ್ಗಸೂಚಿಗಳನ್ನು ಪಾಲಿಸದ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಪ್ರಕರಣದ ತನಿಖೆ ಮತ್ತು ದಾಖಲಾತಿಯಲ್ಲಿ ಪೊಲೀಸರು ತೋರಿದ ನಿರ್ಲಕ್ಷ್ಯದಿಂದಾಗಿ ಆರೋಪಿಗಳಿಗೆ ತಾಂತ್ರಿಕ ಕಾರಣಗಳ ಆಧಾರದ ಮೇಲೆ ಜಾಮೀನು ದೊರೆತಿವೆ ಎಂದು ವಕೀಲರಾಗಿರುವ ವಿನಯ್ ಶ್ರೀನಿವಾಸ್ ಹೇಳಿದರು. ಕಾನೂನು ಮತ್ತು ಸುವ್ಯವಸ್ಥೆಯನ್ನು ಎತ್ತಿಹಿಡಿಯಲು ವಿವಿಧ ನಾಗರಿಕ ಸಮಾಜ ಗುಂಪುಗಳೊಂದಿಗೆ ಸಭೆ ನಡೆಸುವಂತೆ ಅವರು ರಾಜ್ಯ ಸರ್ಕಾರಕ್ಕೆ ಕರೆ ನೀಡಿದರು.

ದ್ವೇಷ ಮತ್ತು ನಕಲಿ ಸುದ್ದಿಗಳ ವಿರುದ್ಧ ಹೊಸ ಕಾನೂನುಗಳನ್ನು ಪರಿಚಯಿಸುವ ಮತ್ತು ವಿಶೇಷ ಕಾರ್ಯಪಡೆಗಳನ್ನು ನೇಮಿಸುವ ಸರ್ಕಾರದ ಕ್ರಮಗಳ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಕಾರಣ, ಸರ್ಕಾರವು ಈಗಾಗಲೇ ಅಸ್ತಿತ್ವದಲ್ಲಿರುವ ಮೂಲಭೂತ ಕಾನೂನುಗಳನ್ನು ಜಾರಿಗೆ ತರಲು ವಿಫಲವಾಗಿದೆ ಎಂದು ಅವರು ವಿವರಿಸಿದರು.

ಪೊಲೀಸರ ಮತ್ತು ಸಾರ್ವಜನಿಕರ ಪ್ರತಿಕ್ರಿಯೆಯನ್ನು ಗಮನಿಸಿದರೆ, ತಮಗೆ ತೀವ್ರ ನಿರಾಶೆಯಾಗಿದೆ ಎಂದು ಎಸ್‌ಐಒ ಕರ್ನಾಟಕದ ಮೊಹಮ್ಮದ್ ಹಯ್ಯಾನ್, ಅಶ್ರಫ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವಂತೆ, ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸುವಂತೆ ಮತ್ತು ಸಂತ್ರಸ್ತರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗುಂಪು ದಾಳಿಗೆ ಬಲಿಯಾದ ಮೊಹಮ್ಮದ್ ಅಶ್ರಫ್ ಅವರ ಸಹೋದರ ಜಬ್ಬಾರ್ ಉಪಸ್ಥಿತರಿದ್ದರು.

ಸತ್ಯ ಶೋಧನೆಯ ಸಂಪೂರ್ಣ ವರದಿ ಓದಲು ಕೆಳಗಿನ ಲಿಂಕ್ ಒತ್ತಿ

ಅಶ್ರಫ್ ಗುಂಪು ಹತ್ಯೆ ಸತ್ಯ ಶೋಧನಾ ವರದಿ 

ಹೆಂಡತಿಯನ್ನು ಕೊಲೆಗೈದ ಸುಳ್ಳಾರೋಪದಲ್ಲಿ 2 ವರ್ಷ ಜೈಲು ಶಿಕ್ಷೆ: ರೂ. 5 ಕೋಟಿ ಪರಿಹಾರ ಕೋರಿ ಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...