Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ತನ್ನ ರಿಕ್ಷಾ ಕಸಿದುಕೊಂಡಿದ್ದಕ್ಕೆ ಚಾಲಕನೊಬ್ಬ ಅಳುತ್ತಿರುವ ವೀಡಿಯೋ ಭಾರತದ್ದೇ?

ಫ್ಯಾಕ್ಟ್‌ಚೆಕ್: ತನ್ನ ರಿಕ್ಷಾ ಕಸಿದುಕೊಂಡಿದ್ದಕ್ಕೆ ಚಾಲಕನೊಬ್ಬ ಅಳುತ್ತಿರುವ ವೀಡಿಯೋ ಭಾರತದ್ದೇ?

ಸಾಮಾಜಿಕ ಮಾಧ್ಯಮ ಬಳಕೆದಾರರು, “ನಮ್ಮ ದೇಶದಲ್ಲಿ ಕಾನೂನು ಬಡ ಜನರಿಗೆ ಮಾತ್ರ, ಈ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ” ಎಂದು ಬರೆದುಕೊಂಡಿದ್ದಾರೆ.

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವ್ಯಾಪಕವಾಗಿ ಹರಿದಾಡುತ್ತಿದ್ದು, ಸರ್ಕಾರಿ ಅಧಿಕಾರಿಗಳು ವ್ಯಕ್ತಿಯೊಬ್ಬನ ರಿಕ್ಷಾವನ್ನು ವಶಪಡಿಸಿಕೊಂಡಿದ್ದರಿಂದ ರಿಕ್ಷಾ ಎಳೆಯುವವನು ಅಳುತ್ತಿರುವ ವೀಡಿಯೊವನ್ನು ಹಂಚಿಕೊಂಡಿರುವ ಸಾಮಾಜಿಕ ಮಾಧ್ಯಮ ಬಳಕೆದಾರರು, “ನಮ್ಮ ದೇಶದಲ್ಲಿ ಕಾನೂನು ಬಡ ಜನರಿಗೆ ಮಾತ್ರ, ಈ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ” ಎಂದು ಬರೆದುಕೊಂಡಿದ್ದಾರೆ.

ತನ್ನ ರಿಕ್ಷಾವನ್ನು ಸರ್ಕಾರಿ ಅಧಿಕಾರಿಗಳು ವಶಪಡಿಸಿಕೊಳ್ಳುತ್ತಿರುವಾಗ ಭಾರತದ ರಿಕ್ಷಾ ಚಾಲಕನೊಬ್ಬ ಅಳುತ್ತಿರುವ ವಿಡಿಯೋ.

ರಿಕ್ಷಾ ಚಾಲಕ ಅಳುತ್ತಿರುವ ವೀಡಿಯೋ

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿಯನ್ನು ಇಲ್ಲಿ ನೋಡಬಹುದು. ಈ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಬಳಕೆದಾರರು ಈ ಮೇಲಿನ ಹೇಳಿಕೆಯನ್ನೇ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಹಕ್ಕೆ ಕಬ್ಬಿಣದ ಮುಳ್ಳುತಂತಿ ಸುತ್ತಿಕೊಂಡು ಅತ್ಯಾಚಾರದ ವಿರುದ್ಧ ಪ್ರತಿಭಟನೆ?- ವಾಸ್ತವವೇನು?

ಫ್ಯಾಕ್ಟ್‌ಚೆಕ್:

ಈ ವೀಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವೀಡಿಯೊದಲ್ಲಿ ಕಂಡುಬರುವ ಕೆಲವು ಪಠ್ಯವು ಬಂಗಾಳಿ ಭಾಷೆಯಲ್ಲಿದೆ ಎಂದು ತಿಳಿದುಬಂದಿದೆ. ಅಲ್ಲದೆ, ವೀಡಿಯೊದ 0.25 ನಿಮಿಷದ  ಅವಧಿಯಲ್ಲಿ ವ್ಯಕ್ತಿಯು ಅಳುತ್ತಿರುವಾಗ ‘ಜಮುನಾ ಟಿವಿ’ಯ ಲೋಗೋ ಇರುವ ಮೈಕ್‌ನಲ್ಲಿ ಮಾತನಾಡುತ್ತಿರುವುದು ಕಂಡುಬಂದಿದೆ. ‘ಜಮುನಾ ಟಿವಿ’ ಬಾಂಗ್ಲಾದೇಶ ಮೂಲದ ಸುದ್ದಿ ವಾಹಿನಿಯಾಗಿದೆ.

ಈ ಕೀವರ್ಡ್‌ಗಳನ್ನು ಬಳಸಿಕೊಂಡು ವೀಡಿಯೊ ಕುರಿತ ಮಾಹಿತಿಗಾಗಿ ಹುಡುಕಿದಾಗ, 06 ಅಕ್ಟೋಬರ್ 2020 ರಂದು ಜಮುನಾ ಟಿವಿ ಅಧಿಕೃತ ಯೂಟ್ಯೂಬ್ ಚಾನೆಲ್ ಪೋಸ್ಟ್ ಮಾಡಿದ ವೀಡಿಯೊದಲ್ಲಿಯೂ ಇದೇ ದೃಶ್ಯಗಳು ಕಂಡುಬಂದಿದೆ. ವೀಡಿಯೊದಲ್ಲಿ, ಇದನ್ನು ರಿಕ್ಷಾ-ಎಳೆಯುವವರ ಕಿರುಚಾಟ ಎಂದು ವಿವರಿಸಲಾಗಿದೆ. ಯೂಟ್ಯೂಬ್‌ನಲ್ಲಿ ಬಾಂಗ್ಲಾದೇಶದ ನ್ಯೂಸ್ ಪೋರ್ಟಲ್ ‘bdnews24.com’ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಇದೇ ರೀತಿಯ ದೃಶ್ಯಗಳು ಕಂಡುಬಂದಿವೆ. ಈ ವೀಡಿಯೊದ ವಿವರಣೆಯಲ್ಲಿ, ರಿಕ್ಷಾ ಚಾಲಕ ಫಜ್ಲೂರ್ ರಹಮಾನ್ ‘05 ಅಕ್ಟೋಬರ್ 2020 ರಂದು ಡಿಎಸ್‌ಸಿಸಿಯ ರಿಕ್ಷಾ ತೆರವುಗೊಳಿಸುವ ಪ್ರಕ್ರಿಯೆಯಲ್ಲಿ ವಾಹನವನ್ನು ವಶಪಡಿಸಿಕೊಂಡ ನಂತರ ಡಾಕಾದ ಜಿಗತಲಾ ಪ್ರದೇಶದಲ್ಲಿ ಅಳುತ್ತಿರುವುದು ಕಂಡುಬಂದಿದೆ ಎಂದು ಉಲ್ಲೇಖಿಸಲಾಗಿದೆ. ಈ ಘಟನೆಯ ಬಗ್ಗೆ ‘bdnews24.com’ ಸುದ್ದಿ ವೆಬ್‌ಸೈಟ್ ಪ್ರಕಟಿಸಿದ ಲೇಖನವನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ವಿಶ್ವದ ಏಳನೇ ಹೆಚ್ಚು ವಿದ್ಯಾವಂತ ನಾಯಕ ಎಂಬುದು ನಿಜವೇ?

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಫಜ್ಲೂರ್ ರೆಹಮಾನ್ ತನ್ನ ಕೆಲಸವನ್ನು ಕಳೆದುಕೊಂಡಿದ್ದು, ಆತ ಬಾಂಗ್ಲಾದೇಶದಲ್ಲಿ ತನ್ನ ಜೀವನೋಪಾಯಕ್ಕಾಗಿ 80,000 ರೂಗಳ ಟಕಾ ಸಾಲವನ್ನು ತೆಗೆದುಕೊಂಡು ಬ್ಯಾಟರಿ ಚಾಲಿತ ರಿಕ್ಷಾವನ್ನು ಖರೀದಿಸಿದ್ದನು. ಇತ್ತೀಚೆಗೆ, ಡಾಕಾ ಸೌತ್ ಸಿಟಿ ಕಾರ್ಪೊರೇಷನ್ (ಡಿಎಸ್‌ಸಿಸಿ) ಯಾಂತ್ರಿಕೃತ, ಎಂಜಿನ್ ಚಾಲಿತ ಮತ್ತು ಬ್ಯಾಟರಿ ಚಾಲಿತ ರಿಕ್ಷಾ ಮತ್ತು ವ್ಯಾನ್‌ಗಳ ಚಲನೆಯನ್ನು ನಿಷೇಧಿಸಿತು. ‘05 ಅಕ್ಟೋಬರ್ 2020 ’ರಂದು ಡಿಎಸ್‌ಸಿಸಿ ನಡೆಸಿದ ತೆರವುಗೊಳಿಸುವ ಪ್ರಕ್ರಿಯೆಯಲ್ಲಿ ಫಜ್ಲೂರ್ ರೆಹಮಾನ್‌ರ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಘಟನೆಯನ್ನು ವರದಿ ಮಾಡುವ ಹೆಚ್ಚಿನ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ಫಜ್ಲೂರ್ ರಹಮಾನ್ ಅಳುವ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದಾಗ, ಕೆಲವು ದಾನಿಗಳು ಫಜ್ಲೂರ್ ರಹಮಾನ್‌ರನ್ನು ಬೆಂಬಲಿಸುವುದಾಗಿ ಮುಂದೆ ಬಂದರು. ‘ಡಾಕಾ ಟ್ರಿಬ್ಯೂನ್’ ಪ್ರಕಟಿಸಿದ ಲೇಖನದ ಪ್ರಕಾರ, ಬಾಂಗ್ಲಾದೇಶ ಮೂಲದ ಇ-ಕಾಮರ್ಸ್ ಕಂಪನಿ ಶ್ವಾಪ್ನೋ ಎರಡು ರಿಕ್ಷಾಗಳನ್ನು ಫಜ್ಲೂರ್ ರಹಮಾನ್‌ಗೆ ದಾನ ಮಾಡಿದರು ಎಂದು ತಿಳಿದುಬಂದಿದೆ. ಅಪರಿಚಿತರೊಬ್ಬರು, ಫಜ್ಲೂರ್ ರಹಮಾನ್ ಜೊತೆಗೆ ಇತರ ಇಬ್ಬರು ರಿಕ್ಷಾ ಚಾಲಕರಿಗೆ 2 ರಿಕ್ಷಾಗಳನ್ನು ದಾನ ಮಾಡಿದ್ದಾರೆ ಎಂದು ‘ಟೈಮ್ಸ್ ನೌ’ ಸುದ್ದಿ ಲೇಖನದಲ್ಲಿ ವರದಿಯಾಗಿದೆ.

ಒಟ್ಟಾರೆ ಹೇಳುವುದಾದರೆ, ವೀಡಿಯೊದಲ್ಲಿ ಅಳುತ್ತಿರುವ ವ್ಯಕ್ತಿ ಬಾಂಗ್ಲಾದೇಶದ ಡಾಕಾದಲ್ಲಿ ರಿಕ್ಷಾ ಎಳೆಯುವ ಫಜ್ಲೂರ್ ರಹಮಾನ್. ‘05 ಅಕ್ಟೋಬರ್ 2020 ’ರಂದು ಡಾಕಾ ಮುನ್ಸಿಪಲ್ ಕಾರ್ಪೊರೇಷನ್ ಆತನ ರಿಕ್ಷಾವನ್ನು ವಶಪಡಿಸಿಕೊಳ್ಳುತ್ತಿದ್ದಂತೆ ಫಜ್ಲೂರ್ ರಹಮಾನ್ ಅಳತೊಡಗಿದ್ದಾನೆ. ಹಾಗಾಗಿ ಈ ಘಟನೆ ಭಾರತಕ್ಕೆ ಸಂಬಂಧಿಸಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ಸ್ಪಷ್ಟವಾಗಿ ಸುಳ್ಳಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...