Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಅಂಬೇಡ್ಕರ್‌‌ ಸ್ವಾಮಿಜಿಯ ಆಶಿರ್ವಾದ ಪಡೆದಿಲ್ಲ; ಚಿತ್ರದಲ್ಲಿ ಇರುವುದು ಬಾಬಾ ಸಾಹೇಬ್ ಅಲ್ಲ

ಫ್ಯಾಕ್ಟ್‌‌ಚೆಕ್‌: ಅಂಬೇಡ್ಕರ್‌‌ ಸ್ವಾಮಿಜಿಯ ಆಶಿರ್ವಾದ ಪಡೆದಿಲ್ಲ; ಚಿತ್ರದಲ್ಲಿ ಇರುವುದು ಬಾಬಾ ಸಾಹೇಬ್ ಅಲ್ಲ

- Advertisement -
- Advertisement -

ಏಪ್ರಿಲ್ 14ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131ನೇ ಜಯಂತಿಯನ್ನು ದೇಶಾದ್ಯಂತ ಸಂಭ್ರಮದಿಂದ ಆಚರಣೆ ಮಾಡಲಾಗಿದೆ. ಅವರ ಸಮಾನತೆ ಬಗೆಗಿನ, ವೈಚಾರಿಕತೆ ಕುರಿತ ನಿಲುವುಗಳನ್ನು ಸ್ಮರಿಸಲಾಗಿತ್ತು. ಇದೇ ಸಂದರ್ಭದಲ್ಲಿ, ಅಂಬೇಡ್ಕರ್ ಅವರು ಶ್ರೀ ಶ್ರೀಧರ ಸ್ವಾಮೀಜಿಯವರಿಂದ ಆಶೀರ್ವಾದ ಪಡೆಯುತ್ತಿರುವ ಅಪರೂಪದ ಫೋಟೋ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟರ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಈ ಪೋಸ್ಟರ್‌ ಅನ್ನು ಹಂಚುವ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಕೂಡ ಸ್ವಾಮೀಜಿಗಳಿಂದ ಆಶಿರ್ವಾದ ಪಡೆದರು ಎಂಬ ಸಂದೇಶ ಹರಡಲು ಯತ್ನಿಸಲಾಗುತ್ತಿದೆ. ಅಂಬೇಡ್ಕರ್ ಅವರು ನಿಜಕ್ಕೂ ಶ್ರೀಧರ ಸ್ವಾಮೀಜಿ ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡಿದಿದ್ದಾರೆಯೆ ಎಂದು  ಪರಿಶೀಲಿಸೋಣ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ರೀತಿಯ ಚಿತ್ರಗಳನ್ನು ಬಿಜೆಪಿ ಬೆಂಬಲಿಗರೇ ಹೆಚ್ಚಾಗಿ ಹಂಚುತ್ತಿದ್ದಾರೆ. ಅವರುಗಳನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು.

ಫ್ಯಾಕ್ಟ್‌ ಚೆಕ್

ಆರ್ಯವಾರ್ತಾ ಎಂಬ  ಫೇಸ್‌ಬುಕ್ ಪೇಜ್‌ನಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ವರದಹಳ್ಳಿಯಲ್ಲಿರುವ ಆಶ್ರಮಕ್ಕೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭೇಟಿ ನೀಡಿ ಶ್ರೀ ಶ್ರೀಧರ ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದಾರೆ ಎಂದು ಪೋಸ್ಟ್ ಮಾಡಲಾಗಿದೆ. ಅಲ್ಲಿರುವ ಫೋಟೊದಲ್ಲಿ ಕನ್ನಡಕ ಧರಿಸಿರುವ ವ್ಯಕ್ತಿಯೊಬ್ಬರಿಗೆ ಶ್ರೀಧರ ಸ್ವಾಮಿಗಳು ಆಶೀರ್ವಾದ ನೀಡುತ್ತಿದ್ದು, ಜೊತೆಯಲ್ಲಿ ಮತ್ತೊಬ್ಬರು ಕುಳಿತಿರುವುದನ್ನು ಕಾಣಬಹುದು.

ಪೋಟೋದಲ್ಲಿರುವ ವ್ಯಕ್ತಿ ಅಂಬೇಡ್ಕರ್ ಅಲ್ಲ

ಅಂಬೇಡ್ಕರ್ ಅವರ ಕರ್ನಾಟಕಕ್ಕೆ ಭೇಟಿ ನೀಡಿರುವ ಸ್ಥಳಗಳ ಬಗ್ಗೆ ಪರಿಶೀಲಿಸಿದಾಗ ಫೋಸ್ಟ್‌ನಲ್ಲಿ ಉಲ್ಲೇಖಿಸಿರುವ ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀ ಶ್ರೀಧರಸ್ವಾಮಿ ಆಶ್ರಮಕ್ಕೆ ಭೇಟಿ ನೀಡಿರುವ ಯಾವ ಉಲ್ಲೇಖ ಕಂಡುಬಂದಿಲ್ಲ.

ನಾನುಗೌರಿ.ಕಾಂ ವರದಪುರ ಭಗವಾನ್ ಶ್ರೀ ಶ್ರೀಧರಸ್ವಾಮಿ ಆಶ್ರಮಕ್ಕೆ ಕರೆ ಮಾಡಿ ಈ ಕುರಿತು ವಿಚಾರಿಸಿದಾಗ ಆಶ್ರಮದ ಟ್ರಸ್ಟಿಯೊಬ್ಬರು ಮಾತನಾಡಿ, “ಅಂಬೇಡ್ಕರ್ ಅವರು ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ ಎಂಬುದು ಸುಳ್ಳು. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿರುವ ಫೋಟೋದಲ್ಲಿ ಇರುವುದು ಅಂಬೇಡ್ಕರ್ ಅಲ್ಲ. ಈ ಹಿಂದೆಯೂ ಇದೇ ರೀತಿ ಸುಳ್ಳು ಸುದ್ದಿ ಹರಡಲಾಗಿತ್ತು” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯರೊಂದಿಗೆ ರಷ್ಯಾ ಅಧ್ಯಕ್ಷ ಸಂವಾದ ನಡೆಸಿಲ್ಲ!

ಹಾಗಿದ್ದರೆ ಫೋಟೋದಲ್ಲಿ ಕಾಣುವ ವ್ಯಕ್ತಿ ಯಾರು?

ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಆಗುತ್ತಿರುವ ಫೋಟೋದಲ್ಲಿ ಇರುವ ವ್ಯಕ್ತಿ ಅಂಬೇಡ್ಕರ್ ಅಲ್ಲ. ಅಂಬೇಡ್ಕರ್ ರೀತಿ ಕಾಣುವ ಮಹಾರಾಷ್ಟ್ರದ ಸುಪ್ರಸಿದ್ಧ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು. ಆತ್ರೆಯವರ ಮತ್ತು ಭಗವಾನ್ ಶ್ರೀಧರರ ಭೇಟಿಯ ಪೋಟೋ ಮತ್ತು ಲೇಖನ ಸದ್ಗುರು ಭಗವಾನ್ ಶ್ರೀ ಶ್ರೀಧರ ಚರಿತ್ರೆಯಲ್ಲಿ ಪ್ರಕಟವಾಗಿದೆ. ಅದನ್ನು ಇಲ್ಲಿ ನೋಡಬಹುದು.

ಸದ್ಗುರು ಭಗವಾನರು ಅತ್ರೆಯವರಿಗೆ ಆಶೀರ್ವಾದ ನೀಡುತ್ತಿರುವುದು
ಸದ್ಗುರು ಭಗವಾನರು ಅತ್ರೆಯವರಿಗೆ ಆಶೀರ್ವಾದ ನೀಡುತ್ತಿರುವುದು

ಅಂಬೇಡ್ಕರ್‌ರವರ ಕರ್ನಾಟಕ ಭೇಟಿ

ಕರ್ನಾಟಕಕ್ಕೆ ಅಂಬೇಡ್ಕರ್ ಮೊದಲ ಬಾರಿಗೆ ಭೇಟಿ ನೀಡಿದ್ದು 1925 ನವೆಂಬರ್ 11 ಮತ್ತು 12 ರಂದು. ಬೆಳಗಾವಿಯಲ್ಲಿ ನಡೆದ ಬಹಿಷ್ಕ್ರತ ಹಿತಕಾರಿಣಿ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ನಂತರ ಅವರು ಕರ್ನಾಟಕಕ್ಕೆ ಸುಮಾರು 7 ಬಾರಿ ಭೇಟಿ ನೀಡಿದ್ದಾರೆ (ಭೇಟಿ ನೀಡಿದ್ದ ವಿವರವನ್ನು ಈ ಲೇಖನದಲ್ಲಿ ನೋಡಬಹುದು) ಆದರೆ ಈ ಭೇಟಿಗಳಲ್ಲಿ ಎಲ್ಲಯೂ ಶಿವಮೊಗ್ಗದ ಸಾಗರಕ್ಕೆ ಬಂದಿದ್ದರ ಉಲ್ಲೇಖವಿಲ್ಲ.

ಸದ್ಗುರು ಭಗವಾನ್ ಶ್ರೀ ಶ್ರೀಧರಸ್ವಾಮಿ ಅವರೊಂದಿಗೆ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು
ಸದ್ಗುರು ಭಗವಾನ್ ಶ್ರೀ ಶ್ರೀಧರಸ್ವಾಮಿ ಅವರೊಂದಿಗೆ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

ಹಿಂದೂವಾಗಿ ಹುಟ್ಟಿರುವೆ ಹಿಂದೂವಾಗಿ ಮಾತ್ರ ಸಾಯಲಾರೆ ಎಂದಿದ್ದ ಅಂಬೇಡ್ಕರ್

ಅಂಬೇಡ್ಕರ್‌ರವರು ತಮ್ಮ ಜೀವಮಾನ ಪೂರ್ತಿ ಹಿಂದೂ ಧರ್ಮದ ಜಾತೀಯತೆ, ಅಸಮಾನತೆ, ಕಪಟ ಆಚಾರಗಳನ್ನು ವಿರೋಧಿಸಿದ್ದರು. ಹಿಂದೂವಾಗಿ ಹುಟ್ಟಿರುವೆ ಹಿಂದೂವಾಗಿ ಮಾತ್ರ ಸಾಯಲಾರೆ ಎಂದು ಘೋಷಿಸಿದ್ದರು. ಅದರಂತೆಯೇ ಅವರು ಬೌದ್ಧ ಧರ್ಮದ ಕಡೆ ಆಕರ್ಷಿತರಾಗಿ 1956 ರಲ್ಲಿ ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮ ಸೇರಿದ್ದರು. ಹಾಗಾಗಿ ಅವರು ಯಾವ ಹಿಂದೂ ಸ್ವಾಮೀಜಿಯಿಂದಲೂ ಆರ್ಶಿವಾದ ಪಡೆದಿರಲಿಲ್ಲ.

ಹಾಗಾಗಿ ಈ ಎಲ್ಲಾ ಆಧಾರದಲ್ಲಿ ಫೋಟೋದಲ್ಲಿ ಭಗವಾನ್ ಶ್ರೀ ಶ್ರೀಧರಸ್ವಾಮಿಗಳೊಂದಿಗೆ ಆಶೀರ್ವಾದ ಪಡೆಯುತ್ತಿರುವ ವ್ಯಕ್ತಿಯು ಅಂಬೇಡ್ಕರ್ ಅಲ್ಲ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು ಎಂದು ಖಚಿತವಾಗಿ ಹೇಳಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...