Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಬಿಹಾರದಲ್ಲಿ ಅಮಿತ್‌ ಶಾ ಬೆಂಗಾವಲು ವಾಹನದ ಮೇಲೆ ದಾಳಿ?

ಫ್ಯಾಕ್ಟ್‌ಚೆಕ್‌: ಬಿಹಾರದಲ್ಲಿ ಅಮಿತ್‌ ಶಾ ಬೆಂಗಾವಲು ವಾಹನದ ಮೇಲೆ ದಾಳಿ?

- Advertisement -
- Advertisement -

ಇತ್ತೀಚೆಗೆ ಬಿಹಾರದಲ್ಲಿ ವರ್ಚುವಲ್ ಚುನಾವಣಾ ರ್‍ಯಾಲಿ ನಡೆಸಲು ಗೃಹಸಚಿವ ಅಮಿತ್‌ ಶಾರವರು ಬಿಹಾರಕ್ಕೆ ತೆರಳಿದ್ದರು. ಆಗ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು, ಇಟ್ಟಿಗೆಗಳನ್ನು ಎಸೆದು ದಾಳಿ ಮಾಡಲಾಗಿದೆ ಎಂಬ ವಿಡಿಯೋವನ್ನು ಎಲ್ಲಾ ಕಡೆ ಹಂಚಿಕೊಳ್ಳಲಾಗುತ್ತಿದೆ.

ಬಿಹಾರದಲ್ಲಿ ಬಿಜೆಪಿ Rally ಯ ವಿರುದ್ಧ ಜನಾಕ್ರೋಶ.ಇಂತ ಪರಿಸ್ಥಿತಿ ಯಾವ ಪಕ್ಷಕ್ಕೂ ಬಂದಿಲ್ಲ

Posted by Chandru Chandru on Monday, June 22, 2020

ಬಿಹಾರದಲ್ಲಿ ಬಿಜೆಪಿ Rally ಯ ವಿರುದ್ಧ ಜನಾಕ್ರೋಶ.ಇಂತ ಪರಿಸ್ಥಿತಿ ಯಾವ ಪಕ್ಷಕ್ಕೂ ಬಂದಿಲ್ಲ ಎಂದು ಚಂದ್ರು ಎಂಬುವವರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಎರಡು ನಿಮಿಷಗಳ ವೀಡಿಯೊದಲ್ಲಿ ಬೆಂಗಾವಲು ವಾಹನ ಹೋಗುತ್ತಿದ್ದಂತೆಯೇ ಪ್ರೇಕ್ಷಕರು ಇಟ್ಟಿಗೆಗಳನ್ನು ಎಸೆಯುವುದನ್ನು ಕಾಣಬಹುದು. ಇದರಿಂದ ಪೊಲೀಸ್ ವಾಹನವು ಕಂದಕಕ್ಕೆ ಜಾರುವುದನ್ನು ಕಾಣಬಹುದು. ಕಾರಿನಿಂದ ಹೊರಬಂದ ಒಬ್ಬ ಪೋಲೀಸ್ ಸಹ ಗಾಯಗೊಂಡಂತೆ ಕಂಡುಬರುತ್ತದೆ. ಇದರ ನಂತರ ಅವ್ಯವಸ್ಥೆ ಉಂಟಾಗುತ್ತದೆ ಮತ್ತು ದಾಳಿ ಮಾಡಿದ ಜನರನ್ನು ಪೊಲೀಸರು ಲಾಠಿ ಹಿಡಿದು ಪೊಲೀಸರು ಅಟ್ಟಿಸಿಕೊಂಡು ಹೋಗುತ್ತಾರೆ.

ಅದೇ ಮಂಡನೆಯೊಂದಿಗೆ ಆ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ಬಹಳಷ್ಟು ಜನರು ಹಂಚಿಕೊಂಡಿದ್ದಾರೆ.

ವಾಸ್ತವವೇನು?

ವೀಡಿಯೊವನ್ನು ಕೂಲಂಕುಷವಾಗಿ ನೋಡಿದಾಗ, ಕಂದಕಕ್ಕೆ ಬೀಳುವ ವಾಹನವು ‘ಬಿಆರ್ 11 ಟಿ’ ಎಂದು ಬರೆದಿರುವ ನಂಬರ್‌ಪ್ಲೇಟ್ ಅನ್ನು ಹೊಂದಿದೆ. ಈ ನೋಂದಣಿ ಸಂಖ್ಯೆ ಬಿಹಾರದ ಪೂರ್ಣಿಯಾಕ್ಕೆ ಸೇರಿದೆ. ಅದರ ಜಾಡು ಹಿಡಿದು ಹುಡುಕಾಡಿದಾಗ ಹಲವು ಸುದ್ದಿವಾಹಿನಿಗಳ ವಿಡಿಯೋಗಳು, ಸುದ್ದಿಗಳು ಸಿಗುತ್ತವೆ. ಅವುಗಳ ಪ್ರಕಾರ ಈ ವಿಡಿಯೋ ಮೊದಲು ಅಪ್‌ಲೋಡ್ ಆಗಿರುವುದು 12 ಜನವರಿ 2018 ಆಗಿದೆ. ಅಂದರೆ ಎರಡು ವರ್ಷಗಳಷ್ಟು ಹಳೆಯ ವಿಡಿಯೋ ಇದಾಗಿದೆ. ಅಲ್ಲದೇ ಇದು ಅಮಿತ್‌ ಶಾ ಬೆಂಗಾವಲು ವಾಹನದ ಮೇಲಿನ ದಾಳಿಯಾಗಿರದೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನ ಮೇಲಿನ ಕಲ್ಲು ತೂರಾಟವಾಗಿದೆ.

ಈ ಘಟನೆ ಬಕ್ಸರ್‌ನ ನಂದನ್‌ನಲ್ಲಿ ನಡೆದಿದ್ದು, ಸಿಎಂಗೆ ಯಾವುದೇ ಗಾಯವಾಗದಿದ್ದರೂ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಎಎನ್‌ಐ ಅಪ್‌ಲೋಡ್ ಮಾಡಿರುವ ವಿಡಿಯೋ ವಿವರಣೆಯಲ್ಲಿ ತಿಳಿಸಲಾಗಿದೆ.

ಜನವರಿ 2018 ರಲ್ಲಿ ನಿತೀಶ್‌ ಕುಮಾರ್‌ರವರ “ವಿಕಾಸ್ ಸಮೀಕ್ಷಾ ಯಾತ್ರೆ” ಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾದ ಹಲವಾರು ಸುದ್ದಿ ವರದಿಗಳನ್ನು ನಾವು ಲಭ್ಯವಿವೆ. ಅವರು ಆ ಸಮಯದಲ್ಲಿ ಸರ್ಕಾರದ ಅಭಿವೃದ್ಧಿ ಯೋಜನೆಗಳ ಸ್ಥಿತಿಯನ್ನು ತಿಳಯಲು ರಾಜ್ಯವ್ಯಾಪಿ ಪ್ರವಾಸದಲ್ಲಿದ್ದರು ಎಂದು ವರದಿಗಳು ಉಲ್ಲೇಖಿಸಿವೆ.

ಎನ್‌ಡಿಟಿವಿ ವರದಿಯ ಪ್ರಕಾರ, ಆ ಗ್ರಾಮದ ಜನರು ಮುಖ್ಯಮಂತ್ರಿಗಳು ದಲಿತ ಕಾಲೋನಿಗೆ ಭೇಟಿ ನೀಡಬೇಕೆಂದು ಬಯಸಿದ್ದರು. ಆದರೆ ಅವರು ಬಾರದಿದ್ದಾಗ ಭಿನ್ನಾಭಿಪ್ರಾಯಕ್ಕೆ ಕಾರಣವಾಯಿತು ಮತ್ತು ನಂತರ ಕಲ್ಲು ತೂರಾಟ ನಡೆಯಿತು.

ನಿತೀಶ್‌ ಕುಮಾರ್‌ ಅವರ ಕಾರು ದಲಿತ ಕಾಲೋನಿಯಲ್ಲಿ ನಿಲ್ಲದಿದ್ದಾಗ ಅವರ ಬೆಂಗಾವಲು ವಾಹನಕ್ಕೆ ಕಲ್ಲು ಮತ್ತು ಇಟ್ಟಿಗೆಗಳನ್ನು ಜನರು ತೂರಿದರು ಎಂದು ಹಿಂದೂ ವರದಿ ಮಾಡಿದೆ. ಅಲ್ಲದೇ ನ್ಯೂಸ್‌ 18 ಸುದ್ದಿವಾಹಿನಿಯು ವಿಡಿಯೋ ಮಾಡಿ ಸಂಪೂರ್ಣ ಸುದ್ದಿ ಬಿತ್ತರಿಸಿದೆ. ಅದನ್ನು ನೀವು ಕೆಳಗೆ ನೋಡಬಹುದು.

Bihar CM Nitish Kumar's Convoy Attacked.

WATCH: While Bihar CM Nitish Kumar was on his way to a village in Buxar, some villagers started pelting stones on the CM's convoy.

Posted by News18 on Saturday, January 13, 2018

ಅಲ್ಲಿಗೆ ಈ ವಿಡಿಯೋ ಇತ್ತೀಚೆಗೆ ನಡೆದ ಬಿಜೆಪಿ ರ್‍ಯಾಲಿಯಲ್ಲಿ ಅಮಿತ್‌ ಶಾ ಬೆಂಗಾವಲು ವಾಹನದ ಮೇಲೆ ದಾಳಿ ಎಂಬುದು ಸುಳ್ಳಾಗಿದೆ. ಇದು ಎರಡು ವರ್ಷಗಳ ಹಿಂದಿನ ನಿತೀಶ್‌ ಕುಮಾರ್‌ರವರಿಗೆ ಸಂಬಂಧಿಸಿದ ಘಟನೆಯಾಗಿದೆ.


ಇದನ್ನೂ ಓದಿ: ಕೊರೋನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...