Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ’ಮಾನ್ಸೂನ್’ ಬಗ್ಗೆ ತಪ್ಪು ಮಾಹಿತಿ ನೀಡಿದ ಅಮಿತಾಬ್‌ ಬಚ್ಚನ್‌!

ಫ್ಯಾಕ್ಟ್‌‌ಚೆಕ್‌: ’ಮಾನ್ಸೂನ್’ ಬಗ್ಗೆ ತಪ್ಪು ಮಾಹಿತಿ ನೀಡಿದ ಅಮಿತಾಬ್‌ ಬಚ್ಚನ್‌!

ಶಬ್ದಗಳಿಂದ ಉಂಟಾಗುವ ತರಂಗಗಳಿಂದ ಕೊರೊನಾ ವೈರಸ್ ಸಾಯುತ್ತದೆ ಎಂದು ಟ್ವೀಟ್‌ ಮಾಡಿದ್ದೆರು. ನೆಟ್ಟಿಗರು ಇದರ ವಿರುದ್ಧ ಕಿಡಿಕಾರಿದಾಗ ಅವರು ಟ್ವೀಟ್ ಡಿಲೀಟ್ ಮಾಡಿದ್ದರು.

- Advertisement -
- Advertisement -

ಟ್ವಿಟ್ಟರ್‌ನಲ್ಲಿ 4.38 ಕೋಟಿ ಅನುಯಾಯಿಗಳನ್ನು ಹೊಂದಿರುವ ಬಾಲಿವುಡ್ ಚಿತ್ರನಟ ಅಮಿತಾಬ್‌ ಬಚ್ಚನ್ ಗುರುವಾರ ರಾತ್ರಿ “ಮಾನ್ಸೂನ್ 400 ಮಿಲಿಯನ್ ವರ್ಷಗಳಷ್ಟು ಹಳೆಯದು ಎಂದು ನಿಮಗೆ ತಿಳಿದಿದೆಯೇ? ಅದನ್ನು ಎಲ್ಲೋ ಓದಿದ ನೆನಪು.. ಆದರೆ ಅದನ್ನು ಹೇಗೆ ಮತ್ತು ಯಾರು ಲೆಕ್ಕ ಹಾಕಿದರು ..?” ಎಂದು ಟ್ವೇಟ್‌ ಮಾಡಿದ್ದಾರೆ.

ಅವರ ಈ ಪೋಸ್ಟ್ 2,100 ಬಾರಿ ರಿಟ್ವೀಟ್ ಮಾಡಲಾಗಿದ್ದು, 40,500 ಲೈಕ್‌‌ಗಳು ಪಡೆದಿದೆ. ಅದರ ಆರ್ಕೈವ್‌ ಇಲ್ಲಿದೆ.

ಫ್ಯಾಕ್ಟ್‌‌ಚೆಕ್

ನಮ್ಮ ಮಾನ್ಸೂನ್ ಕೇವಲ 40 ಮಿಲಿಯನ್‌ಗಳಷ್ಟು ಹಳೆಯದಾಗಿದೆ. ನಟ ಅಮಿತಾಬ್‌ ಬಚ್ಚನ್ ಪ್ರಶ್ನಿಸಿರುವಂತೆ ನಮ್ಮ ಮಾನ್ಸೂನ್ 400 ಮಿಲಿಯನ್ ವರ್ಷಗಳಷ್ಟು ಹಳೆಯದು ಎಂಬ ವಾದ ತಪ್ಪಾಗಿದೆ.

ವಿಶ್ವದ ಅತಿದೊಡ್ಡ ಹವಾಮಾನ ವ್ಯವಸ್ಥೆಗಳಲ್ಲಿ ಒಂದಾಗಿರುವ ಏಷ್ಯನ್ ಮಾನ್ಸೂನ್ 40 ಮಿಲಿಯನ್‌ ವರ್ಷಗಳಷ್ಟು ಹಳೆಯದು ಎಂದು ಅಂತರರಾಷ್ಟ್ರೀಯ ಸಂಶೋಧನಾ ತಂಡದ ಹೊಸ ಅಧ್ಯಯನವು ಕಂಡುಹಿಡಿದಿದೆ ಎಂದು ಸೈನ್ಸ್ ಡೈಲಿ ಎಂಬ ವಿಜ್ಞಾನ ವೆಬ್‌ಸೈಟ್‌ ಮಾಹಿತಿ ನೀಡುತ್ತದೆ.

ಈ ಹಿಂದೆ, ಟಿಬೆಟಿಯನ್ ಪ್ರಸ್ಥಭೂಮಿ ಮತ್ತು ಹಿಮಾಲಯ ಪರ್ವತಗಳು ಖಂಡಾಂತರ ಚಲನೆಯಿಂದ ಮೇಲೆದ್ದ ಪರಿಣಾಮವಾಗಿ ಮಾನ್ಸೂನ್ 22-25 ಮಿಲಿಯನ್ ವರ್ಷಗಳಷ್ಟು ಹಳೆಯದು ಎಂದು ವಿಜ್ಞಾನಿಗಳು ನಂಬಿದ್ದರು. ಆದರೆ ಹೊಸ ಅಧ್ಯಯನಗಳು ಏಷ್ಯಾದ ಮಾನ್ಸೂನ್ 40 ಮಿಲಿಯನ್ ವರ್ಷಗಳಷ್ಟು ಹಿಂದೆ ವಾತಾವರಣದಲ್ಲಿ ಇಂಗಾಲದ ಡೈಆಕ್ಸೈಡ್ ಮತ್ತು ಬೆಚ್ಚಗಿನ ತಾಪಮಾನದ ಅವಧಿಯಿಂದಲೂ ಅಸ್ತಿತ್ವದಲ್ಲಿದೆ ಎಂದು ಕಂಡುಹಿಡಿದಿದೆ.

ಅಮಿತಾಬ್ ಬಚ್ಚನ್ ಸುಳ್ಳು ವಾದಗಳನ್ನು ಮಂಡಿಸುವ ಪೋಸ್ಟ್ ಮಾಡುವುದು ಇದೇ ಮೊದಲ ಬಾರಿಯಲ್ಲ. ಈ ಹಿಂದೆ ಅವರು ಗೀತರಚನೆಕಾರ ಮತ್ತು ಕವಿ ಪ್ರಸೂನ್ ಜೋಶಿ ಬರೆದ ಕವಿತೆಯೊಂದನ್ನು ತಮ್ಮ ತಂದೆ, ಕವಿ ಹರಿವನ್ಶ್ ರಾಯ್ ಬಚ್ಚನ್ ಅವರು ಬರೆದದ್ದು ಎಂದು ಸುಳ್ಳು ಬರೆದಿದ್ದರು. ನಂತರದ ಟ್ವೀಟ್‌ನಲ್ಲಿ ಆದ ಪ್ರಮಾದವನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ್ದರು.

ಅಲ್ಲದೇ ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ನರೇಂದ್ರ ಮೋದಿಯವರು ಚಪ್ಪಾಳೆ ತಟ್ಟಲು, ತಟ್ಟೆ ಬಡಿಯಲು ಸೂಚಿಸಿದ್ದರು. ಆಗ ಅಮಿತಾಬ್ ಬಚ್ಚನ್‌ರವರು ಈ ಶಬ್ದಗಳಿಂದ ಉಂಟಾಗುವ ತರಂಗಗಳಿಂದ ಕೊರೊನಾ ವೈರಸ್ ಸಾಯುತ್ತದೆ ಎಂದು ಟ್ವೀಟ್‌ ಮಾಡಿದ್ದೆರು. ನೆಟ್ಟಿಗರು ಇದರ ವಿರುದ್ಧ ಕಿಡಿಕಾರಿದಾಗ ಅವರು ಟ್ವೀಟ್ ಡಿಲೀಟ್ ಮಾಡಿದ್ದರು.

ನಮ್ಮ ಮಾನ್ಸೂನ್ ಕೇವಲ 40 ಮಿಲಿಯನ್ ವರ್ಷಗಳಷ್ಟು ಹಳೆಯದಾಗಿದೆ. ಅಮಿತಾಬ್ ಬಚ್ಚನ್ ಅವರ ಟ್ವೀಟ್‌‌ನಲ್ಲಿನ ಮಾನ್ಸೂನ್ 400 ವರ್ಷಗಳಷ್ಟು ಹಳೆಯದು ಎಂಬ ಮಾಹಿತಿ ತಪ್ಪಾಗಿದೆ.


ಓದಿ: ಸುಶಾಂತ್ ಸಿಂಗ್ ಸೊಸೆಯ ಬಗ್ಗೆ ಆಜ್‌ತಕ್‌ ಸೇರಿದಂತೆ ಹಲವಾರು ಮಾಧ್ಯಮಗಳು ಸುದ್ದಿ ಮಾಡಿದ್ದ ಈ ವರದಿ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...