Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಈ ಫೋಟೊಗಳು ರಾಹುಲ್ ಗಾಂಧಿ ಪ್ರತಿನಿಧಿಸುವ ವಯನಾಡ್‌ನವಲ್ಲ.. ಬದಲಿಗೆ ಬಿಹಾರದವು‌‌

ಫ್ಯಾಕ್ಟ್‌‌ಚೆಕ್‌: ಈ ಫೋಟೊಗಳು ರಾಹುಲ್ ಗಾಂಧಿ ಪ್ರತಿನಿಧಿಸುವ ವಯನಾಡ್‌ನವಲ್ಲ.. ಬದಲಿಗೆ ಬಿಹಾರದವು‌‌

ರಾಹುಲ್ ಗಾಂಧಿಯವರ ಕ್ಷೇತ್ರವಾದ ವಯನಾಡ್ ದೇಶದ ಮೊದಲ ಸ್ಮಾರ್ಟ್ ಸಿಟಿಯಾಗಿದ್ದು, ಪ್ರತಿ ಮನೆಯ ಹೊರಗೆ ವಿಭಿನ್ನ ಈಜುಕೊಳಗಳನ್ನು ನಿರ್ಮಿಸಿದ ಮೊದಲ ನಗರವಾಗಿದೆ ಎಂದು ಚಿತ್ರವೂ ವೈರಲಾಗಿದೆ.

- Advertisement -
- Advertisement -

ರಸ್ತೆಯಲ್ಲಿ ನೂರಾರು ಗುಂಡಿಗಳಿರುವ, ಮಳೆ ನೀರು ತುಂಬಿರುವ ರಸ್ತೆಯ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದು ಕಾಂಗ್ರೆಸ್ ಮುಂಖಡ ರಾಹುಲ್ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡ್‌ಗೆ ಸೇರಿದೆ ಎಂದು ಪ್ರಚಾರ ಮಾಡಲಾಗುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಚಿತ್ರಕ್ಕೆ “ರಾಹುಲ್ ಗಾಂಧಿಯ ಕ್ಷೇತ್ರವಾದ ವಯನಾಡ್ ದೇಶದ ಮೊದಲ ಸ್ಮಾರ್ಟ್ ಸಿಟಿಯಾಗಿದ್ದು, ಪ್ರತಿ ಮನೆಯ ಹೊರಗೆ ವಿಭಿನ್ನ ಈಜುಕೊಳಗಳನ್ನು ನಿರ್ಮಿಸಿದ ಮೊದಲ ನಗರವಾಗಿದೆ.” ಎಂಬ ಶೀರ್ಷಿಕೆ ನೀಡಿ ವ್ಯಂಗ್ಯವಾಡಲಾಗಿದೆ.

ಫೇಸ್‌ಬುಕ್ ಬಳಕೆದಾರ ಅಂಕಿತ್ ಅಗ್ರವಾಲ್ ಎಂಬವರು ಪೋಸ್ಟ್ ಮಾಡಿದ ಈ ಚಿತ್ರವು 2,500 ಕ್ಕೂ ಹೆಚ್ಚು ಬಾರಿ ಷೇರ್ ಮಾಡಲಾಗಿದೆ.

ಅದೇ ರೀತಿಯ ನಿರೂಪಣೆಯೊಂದಿಗೆ ಈ ಚಿತ್ರವನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಬೃಹತ್ ಪ್ರಮಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಫ್ಯಾಕ್ಟ್‌‌ಚೆಕ್‌‌‌:

ಈ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಾಡಿದಾಗ ಇದೇ ಚಿತ್ರವನ್ನು 2017 ರಲ್ಲಿ ಟೈಮ್ಸ್ ಆಫ್ ಇಂಡಿಯಾ ಪ್ರಕಟಿಸಿದ ಲೇಖನವೊಂದನ್ನು ಕಾಣಬಹುದಾಗಿದೆ. ಅದರಲ್ಲಿ “ಭಾಗಲ್ಪುರ್ ಎನ್ಎಚ್ -80 ಕೆಟ್ಟ ಸ್ಥಿತಿಯಲ್ಲಿದೆ” ಎಂದು ವರದಿಯಾಗಿದೆ. ಅಂದರೆ ಅದು ಬಿಹಾರ ರಾಜ್ಯಕ್ಕೆ ಸೇರಿದ ಎಂಬುದು ದೃಢಪಟ್ಟಿದೆ.

ಬಿಹಾರದ ರಸ್ತೆಯ ಈ ಹಳೆಯ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ಕೇರಳದ ವಯನಾಡ್‌ಗೆ ಸೇರಿದ್ದು ವರದಿ ಪ್ರಕಟಿಸಿದ್ದಾರೆ.

ಇದಲ್ಲದೆ ಇದು ಭಾಗಲ್ಪುರದ ರಸ್ತೆಯ ಹಳೆಯ ಚಿತ್ರ ಎಂದು ಅಲ್ಲಿನ ಸ್ಥಳೀಯ ವರದಿಗಾರ ರಂಜನ್ ದೃಡೀಕರಿಸಿದ್ದಾರೆ. “ಇದು ಹಳೆಯ ಚಿತ್ರವಾಗಿದ್ದು, ಪ್ರಸ್ತುತ ಈಗ ಈ ರಸ್ತೆಯು ಉತ್ತಮವಾಗಿದೆ” ಎಂದು ಅವರು ಹೇಳಿದ್ದಾರೆ.

ಇದು ಮಾತ್ರವಲ್ಲದೆ, 2017ರ ಜುಲೈಯಲ್ಲಿ ಬಿಹಾರದ ಮಾಜಿ ಉಪಮುಖ್ಯಮಂತ್ರಿಯಾಗಿದ್ದ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ರಸ್ತೆಯ ಎರಡೂ ಚಿತ್ರಗಳನ್ನು ಟ್ವೀಟ್ ಮಾಡಿ, ಅದರ ಬಗ್ಗೆ ಸುಳ್ಳು ಹರಡಬೇಡಿ ಎಂದು ಮನವಿ ಮಾಡಿದ್ದರು.

 

ಒಟ್ಟಿನಲ್ಲಿ ಬಿಹಾರದ  ಹಳೆಯ ಚಿತ್ರವೊಂದುನ್ನ ಕೇರಳದ ವಯನಾಡ್ ಚಿತ್ರ ಎಂದು ತಪ್ಪಾಗಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಓದಿ: ಮೋದಿಯ ಶಿಫಾರಸ್ಸಿನಂತೆ ಈ ಯುವ ವಿಜ್ಞಾನಿಯನ್ನು ಡಿಆರ್‌‌ಡಿಒಗೆ ಸೇರಿಸಲಾಗಿದೆಯೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...