Homeಮುಖಪುಟಫ್ಯಾಕ್ಟ್‌ಚೆಕ್: ರೈತರು ಮೋದಿಗೆ ಕೃತಜ್ಞತೆ ಹೇಳುತ್ತಿದ್ದಾರೆ ಎಂದು ಹಳೆಯ ಫೋಟೋ ಹಂಚಿಕೊಂಡ ಬಿಜೆಪಿ ನಾಯಕ!

ಫ್ಯಾಕ್ಟ್‌ಚೆಕ್: ರೈತರು ಮೋದಿಗೆ ಕೃತಜ್ಞತೆ ಹೇಳುತ್ತಿದ್ದಾರೆ ಎಂದು ಹಳೆಯ ಫೋಟೋ ಹಂಚಿಕೊಂಡ ಬಿಜೆಪಿ ನಾಯಕ!

ವಾಸ್ತವದಲ್ಲಿ ಈ ಚಿತ್ರ ಇತ್ತೀಚಿನದಲ್ಲ ಅಥವಾ ಪಶ್ಚಿಮ ಬಂಗಾಳದ್ದಲ್ಲ. ಇದನ್ನು ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ತೆಗೆದ ಚಿತ್ರವಾಗಿದೆ.

- Advertisement -
- Advertisement -

ವಿವಾದಿತ ಕೃಷಿ ಮಸೂದೆಗಳನ್ನು ವಾಪಾಸ್ ಪಡೆಯಲು ಆಗ್ರಹಿಸಿ ದೇಶಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ನಡುವೆ ಆಡಳಿತ ಪಕ್ಷ ಬಿಜೆಪಿ ರೈತರಿಗೆ ವಿರೋಧ ಪಕ್ಷಗಳು ಕಾಯಿದೆ ವಿರುದ್ಧ ತಪ್ಪು ಮಾಹಿತಿ ನೀಡುತ್ತಿವೆ ಎಂದು ಆರೋಪಿಸಿ, ರೈತರಲ್ಲಿ ಜಾಗೃತಿ ಮೂಡಿಸುತ್ತೇವೆ ಎಂದು ಮನೆ ಮನೆಗೆ ತೆರಳಲು ಹೊರಟಿದೆ.

ಈ ನಡುವೆ ಪಶ್ಚಿಮ ಬಂಗಾಳ ಬಿಜೆಪಿ ಮುಖಂಡ ದಿಲೀಪ್ ಘೋಷ್ ಅಕ್ಟೋಬರ್‌ 6 ರಂದು ಒಂದು ಚಿತ್ರವನ್ನು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಶೇರ್‌ ಮಾಡಿದ್ದು, “ಪಶ್ಚಿಮ ಬಂಗಾಳದ ರೈತರು  ಪ್ರಧಾನಿ ಮೋದಿಯವರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದಾರೆ” ಎಂದು ಪ್ರತಿಪಾದಿಸಿದ್ದಾರೆ.

PC:Twitter@Dilip Ghosh

ವಾಸ್ತವದಲ್ಲಿ ಈ ಚಿತ್ರ ಇತ್ತೀಚಿನದಲ್ಲ ಅಥವಾ ಪಶ್ಚಿಮ ಬಂಗಾಳದ್ದಲ್ಲ. ಇದನ್ನು ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ತೆಗೆದ ಚಿತ್ರವಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಯುವತಿಯ ಅಪಹರಣದ ವೀಡಿಯೋ ವೈರಲ್; ಇದು ಉತ್ತರಪ್ರದೇಶದ್ದೇ?

ಈ ಚಿತ್ರವು ಪಶ್ಚಿಮ ಬಂಗಾಳದ ದಕ್ಷಿಣ ದಿನಾಜ್‌ಪುರದ ಪಂತೋರ್ ಗ್ರಾಮದಿಂದ ಬಂದಿದೆ ಎಂದು ಘೋಷ್ ಹೇಳಿದ್ದಾರೆ. “ಕುಮಾರ್ಗಂಜ್ ಅಸೆಂಬ್ಲಿಯ (ದಕ್ಷಿಣ ದಿನಾಜ್‌ಪುರ) ಪಂತೋರ್‌ ಗ್ರಾಮದಲ್ಲಿ ತೆಗೆದ ಚಿತ್ರ. ಬಂಗಾಳದ ರೈತರು, ಗೌರವಾನ್ವಿತ ಪ್ರಧಾನ ಮಂತ್ರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಚಿತ್ರವನ್ನು ಹಲವು ಮಂದಿ ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಚಿತ್ರ ಹಂಚಿಕೊಂಡಿರುವ ಬಿಜೆಪಿ ಮುಖಂಡ ದಿಲೀಪ್ ಘೋಷ್‌ ಅವರ ಟ್ವೀಟ್‌ ಅನ್ನು 355 ಮಂದಿ ರಿಟ್ವೀಟ್ ಮಾಡಿದ್ದಾರೆ.

ಈ ಚಿತ್ರವನ್ನು ಗೂಗಲ್‌ನಲ್ಲಿ ರಿವರ್ಸ್ ಇಮೇಜ್ ಹುಡುಕಾಟ ಮಾಡಿದಾಗ ಔಟ್‌ಲುಕ್ ಫೋಟೋ ಗ್ಯಾಲರಿಯಲ್ಲಿ ಈ ಚಿತ್ರ ಬಿಹಾರದಲ್ಲಿ ಜುಲೈ 12 ರಂದು ತೆಗೆದ ಚಿತ್ರವಾಗಿದೆ ಎಂಬುದನ್ನು ತೋರಿಸಿದೆ.

PC: Outlook/screenshot

“ಕೃಷಿ ಕಾರ್ಮಿಕರು ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಬಿಹಾರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ” “ಬಿಜೆಪಿ ಮೋದಿ” ಎಂದು ಭತ್ತದ ಸಸಿಗಳಲ್ಲಿ ಬರೆದಿದ್ದಾರೆ ಎಂದು ಶೀರ್ಷಿಕೆ ನೀಡಿದೆ.

ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (ಪಿಟಿಐ) ಯ ಫೋಟೋ ಆರ್ಕೈವ್‌ನಲ್ಲಿ ‘ಕೈಮೂರ್’ ಕೀವರ್ಡ್ ಆಗಿ ಹುಡುಕಾಡಿದಾಗ ಅದೇ ಚಿತ್ರವನ್ನು ಜುಲೈ 12 ರಂದು ಪೋಸ್ಟ್ ಮಾಡಿರುವುದು ಕಂಡು ಬಂದಿದೆ.

ಈ ಎಲ್ಲಾ ವಿವರಗಳು ಸ್ಪಷ್ಟವಾಗಿ ಹೇಳುವುದು ಬಿಜೆಪಿ ನಾಯಕ ಬಿಹಾರದ ಹಳೆಯ ಚಿತ್ರವನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಅದು ಪಶ್ಚಿಮ ಬಂಗಾಳ ರಾಜ್ಯದ ರೈತರದ್ದು, ಅವರು ಮೋದಿಯನ್ನು ಬೆಂಬಲಿಸಿದ್ದಾರೆ ಎಂದು ಸುಳ್ಳು ಹೇಳಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...