Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಈ ಚಿತ್ರದಲ್ಲಿ ಸೊನಿಯಾ ಗಾಂಧಿ ಅವರ ಹಿಂದೆ ಇರುವ ಪುಸ್ತಕದ ಕಪಾಟಿನಲ್ಲಿ ‘ಪವಿತ್ರ ಬೈಬಲ್’, ಯೇಸುವಿನ ಪ್ರತಿಮೆ ಮತ್ತು ‘ಭಾರತವನ್ನು ಕ್ರಿಶ್ಚಿಯನ್ ರಾಷ್ಟ್ರವಾಗಿ ಪರಿವರ್ತಿಸುವುದು ಹೇಗೆ’ ಎಂಬ ಪುಸ್ತಕ ಇದೆ ಎಂದು ತೋರಿಸಲಾಗಿದೆ.

ಈ ಚಿತ್ರವನ್ನು ಟ್ವಿಟರ್‌‌ನಲ್ಲಿ @noconversion ಎಂಬ ಬಳಕೆದಾರ ಮೊದಲಿಗೆ ಟ್ವೀಟ್ ಮಾಡಿದ್ದರು. ಇದನ್ನು ಕೆಳಗೆ ನೋಡಬಹುದು.

ಇಷ್ಟೇ ಅಲ್ಲದೆ ತಮಿಳುನಾಡು ಬಿಜೆಪಿ ಕಾರ್ಯದರ್ಶಿ ಸುಮತಿ ವೆಂಕಟೇಶ್‌, ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಹಾಗೂ ಬಿಜೆಪಿ ಬೆಂಬಲಿಗ ರೇಣುಕಾ ಜೈನ್ ಎಂಬವರು ಕೂಡಾ ಈ ಚಿತ್ರವನ್ನು ಹಂಚಿಕೊಂಡಿದ್ದರು. ಆದರೆ ಅವರು ನಂತರ ಅದನ್ನು ಡಿಲಿಟ್ ಮಾಡಿದ್ದಾರೆ. ಅಲ್ಲದೆ  ಈ ಚಿತ್ರವು ಫೇಸ್‌ಬುಕ್‌ನಲ್ಲೂ ಪ್ರಸಾರವಾಗುತ್ತಿದೆ.

ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ಫೇಸ್‌ಬುಕ್‌ ಗುಂಪುಗಳಾದ ಒಂದು ಲಕ್ಷ ಫಾಲೋವರ್‌ಗಳು ಇರುವ ‘ಸುದರ್ಶನ್ ನ್ಯೂಸ್’ ಮತ್ತು ಮೂರು ಲಕ್ಷ ಫಾಲೋವರ್‌‌ಗಳಿರುವ ‘ಪಿಎಂಒ ಇಂಡಿಯಾ ನವದೆಹಲಿ’ ಈ ಚಿತ್ರವನ್ನು ಫೇಸ್‌‌ಬುಕ್‌ನಲ್ಲಿ ಮತ್ತಷ್ಟು ಹರಿದಾಡುವಂತೆ ಮಾಡಿದೆ.

ಮಾರ್ಫ್‌ ಮಾಡಿರುವ ಚಿತ್ರ

ಬಹಳ ಎಚ್ಚರಿಕೆಯಿಂದ ಗಮನಿಸಿದರೆ, ಈ ಚಿತ್ರದ ಎಡಭಾಗದಲ್ಲಿ ಟ್ವಿಟ್ಟರ್ ಹ್ಯಾಂಡಲ್‌ ಒಂದರ ಹೆಸರು @noconversion ವಾಟರ್‌ಮಾರ್ಕ್ ಇರುವುದನ್ನು ಕಾಣಬಹುದು. ಆದ್ದರಿಂದ ಇದು ಈ ಚಿತ್ರವು ಒರಿಜಿನಲ್‌ ಚಿತ್ರವಲ್ಲ, ಮಾರ್ಫ್ ಮಾಡಲಾಗಿದೆ ಎಂದು ಸೂಚಿಸುತ್ತದೆ.

ಇದನ್ನೂ ಓದಿ: ಇಂದೋರ್‌ನಲ್ಲಿನ ಈ ಕೊರೊನಾ ಆರೈಕೆ ಕೇಂದ್ರ RSS ನಿರ್ಮಿಸಿದ್ದಲ್ಲ!

ವೈರಲ್‌ ಚಿತ್ರವನ್ನು ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ಆಲ್ಟ್‌ನ್ಯೂಸ್‌ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಾಡಿದೆ. ಆಗ 2020 ರ ಅಕ್ಟೋಬರ್‌ನಲ್ಲಿ ಕಾಂಗ್ರೆಸ್ ಪೋಸ್ಟ್ ಮಾಡಿದ ವೀಡಿಯೊವೊಂದು ಸಿಕ್ಕಿದೆ. ವಿಡಿಯೊದಲ್ಲಿ ಸೋನಿಯಾ ಗಾಂಧಿ ಅವರು ರೈತರ ಆಂದೋಲನ ಮತ್ತು ಇಂಧನ ಬೆಲೆಗಳ ಏರಿಕೆ ಕುರಿತು ಕೇಂದ್ರವನ್ನು ಪ್ರಶ್ನಿಸಿದ್ದರು. ಈ ವಿಡಿಯೋವನ್ನು ರಾಹುಲ್ ಗಾಂಧಿ ಕೂಡ ಟ್ವೀಟ್ ಮಾಡಿದ್ದಾರೆ. ವಾಸ್ತವವಾಗಿ, ಆ ಪುಸ್ತಕದ ಕಪಾಟಿನ ಮುಂದೆ ಸೋನಿಯಾ ಗಾಂಧಿ ಮಾತನಾಡುತ್ತಿರುವ ಅನೇಕ ವೀಡಿಯೊಗಳನ್ನು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಆಲ್ಟ್ ನ್ಯೂಸ್ ವೆಬ್‌ಸೈಟ್‌‌ ವೀಡಿಯೊದಲ್ಲಿನ ಸ್ಕ್ರೀನ್‌ಶಾಟ್ ಅನ್ನು ವೈರಲ್ ಚಿತ್ರದೊಂದಿಗೆ ಹೋಲಿಸಿದೆ. ವೀಡಿಯೊದಲ್ಲಿ ಪುಸ್ತಕದ ಕಪಾಟಿನಲ್ಲಿ ‘ಭಾರತವನ್ನು ಕ್ರಿಶ್ಚಿಯನ್ ರಾಷ್ಟ್ರವಾಗಿ ಪರಿವರ್ತಿಸುವುದು ಹೇಗೆ’ ಮತ್ತು ‘ಹೋಲಿ ಬೈಬಲ್’ ಮತ್ತು ಯೇಸುವಿನ ಪ್ರತಿಮೆ ಇಲ್ಲದಿರುವುದನ್ನು ನಾವು ಗಮನಿಸಬಹುದಾಗಿದೆ. ಹಾಗಾಗಿ, ವೈರಲ್ ಚಿತ್ರವು ಮಾರ್ಫಿಂಗ್ ಮಾಡಿರುವ ಚಿತ್ರವಾಗಿದೆ.

ಕೃಪೆ: ಆಲ್ಟ್‌ನ್ಯೂಸ್

ಇದನ್ನೂ ಓದಿ: ಗುಜರಾತ್ ನಕಲಿ ರೆಮ್ಡೆಸಿವಿರ್ ದಂಧೆ: ಬಂಧಿತರಲ್ಲಿ ಇಬ್ಬರು ಮುಸ್ಲಿಮರಷ್ಟೇ ಅಲ್ಲ, 5 ಹಿಂದೂಗಳೂ ಇದ್ದಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಫ್ಯಾಸಿಸಂ ಸತ್ಯವನ್ನು ಭಯಪಡುತ್ತದೆ. ಸುಳ್ಳು ಅದರ ಬುನಾದಿ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...