Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ನೀರು ಕುಡಿಯುತ್ತಾ ಚಾರ್ಜಿಂಗ್‌ನಲ್ಲಿರುವ ಫೋನ್‌ ಬಳಸಿದರೇ ಫೋನ್ ಸ್ಟೋಟಗೊಳ್ಳುತ್ತದೆಯೇ?

ಫ್ಯಾಕ್ಟ್‌ಚೆಕ್: ನೀರು ಕುಡಿಯುತ್ತಾ ಚಾರ್ಜಿಂಗ್‌ನಲ್ಲಿರುವ ಫೋನ್‌ ಬಳಸಿದರೇ ಫೋನ್ ಸ್ಟೋಟಗೊಳ್ಳುತ್ತದೆಯೇ?

- Advertisement -
- Advertisement -

ವ್ಯಕ್ತಿಯೊಬ್ಬರು ತಮ್ಮ ಫೋನ್‌ ಚಾರ್ಜಿಂಗ್‌ನಲ್ಲಿಟ್ಟು ನೀರು ಕುಡಿಯುತ್ತಾ ಫೋನ್ ಕರೆಯಲ್ಲಿ ಮಾತನಾಡುತ್ತಿರುವಾಗ ಅವರ ಕಿವಿಯ ಮೇಲೆ ಫೋನ್ ಸ್ಫೋಟಗೊಂಡಿದೆ ಎಂದು ಹೇಳುವ ಸಿಸಿಟಿವಿ ದೃಶ್ಯಾವಳಿಗಳ ವಿಡಿಯೋ ವೈರಲ್ ಆಗಿದೆ. ಮರಾಠಿ ಭಾಷೆಯಲ್ಲಿರುವ ಹೇಳಿಕೆಯೊಂದಿಗೆ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.

“ಇದು ಅಪಾಯಕಾರಿ! ನೀರು ಕುಡಿಯುವ ವೇಳೆ ಚಾರ್ಜ್‌ನಲ್ಲಿರುವ ನಿಮ್ಮ ಫೋನ್ ಅನ್ನು ಬಳಸುವಾಗ ಎಲ್ಲರೂ ಕಾಳಜಿ ವಹಿಸಿ. ಇದರಿಂದ ಮೆದುಳು ಕೂಡ ಆಘಾತಕ್ಕೊಳಗಾಗುವ ಸಾಧ್ಯತೆ ಇದೆ” ಎಂದು ಫೋಸ್ಟ್‌ನಲ್ಲಿ ಹೇಳಲಾಗಿದೆ.

ಪುಣೆ ಮೂಲದ ಫೇಸ್‌ಬುಕ್ ಪೇಜ್‌ ಫನ್‌ ಮರಾಠಿಯಲ್ಲಿಯೂ ಈ ವೀಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಹಲವಾರು ಇತರ ಫೇಸ್‌ಬುಕ್‌ ಬಳಕೆದಾರರು ಸಹ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದರ ಸತ್ಯಾಸತ್ಯತೆಯನ್ನು ಈ ಲೇಖನದಲ್ಲಿ ಪರಿಶೀಲಿಸೋಣ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಈ ವಿಡಿಯೋವನ್ನು ಐಪಿಎಸ್ ಅಧಿಕಾರಿ ರೂಪಿನ್ ಶರ್ಮಾ ಕೂಡ ಪೋಸ್ಟ್ ಮಾಡಿದ್ದಾರೆ. ಬಳಿಕ ಅದನ್ನು ಅಳಿಸಿದ್ದಾರೆ.

ಈ ವಿಡಿಯೋವನ್ನು ಟ್ವಿಟರ್ ಮತ್ತು ಯೂಟ್ಯೂಬ್‌ನಲ್ಲಿಯೂ ಹಂಚಿಕೊಳ್ಳಲಾಗಿದೆ.

ನಿಜಾಂಶ:

ಇದು ನೈಜ ಘಟನೆ ಎಂದು ವೈರಲ್ ಆಗುತ್ತಿರುವ ದೃಶ್ಯಾವಳಿಯ ಸಂಪೂರ್ಣ ವೀಡಿಯೊದ ಕ್ಲಿಪ್ ಆನ್‌ಲೈನ್‌ನಲ್ಲಿ ಪ್ರಸಾರವಾಗುತ್ತಿದೆ. ಇದು ಸ್ಕ್ರಿಪ್ಟೆಂಡ್‌ ವಿಡಿಯೋ ಎಂದು ಹೇಳಲಾಗಿದೆ.

ಸಂಪೂರ್ಣ ವಿಡಿಯೋವನ್ನು ಬ್ಯಾಡ್ಮಿಂಟನ್ ಆಟಗಾರ್ತಿ ಗುಟ್ಟಾ ಜ್ವಾಲಾ ಪೋಸ್ಟ್ ಮಾಡಿದ್ದಾರೆ. ಶೀರ್ಷಿಕೆಯು ‘ಎಚ್ಚರಿಕೆಯಿಂದಿರಿ’ ಎಂದು ಕಾಣಿಸುತ್ತದೆ ಮತ್ತು ‘ಇನ್ನಷ್ಟು ವೀಕ್ಷಿಸಿ’ ಕ್ಲಿಕ್ ಮಾಡಿದ ನಂತರ ಕೆಳಗೆ ಓದಿದಾಗ ವೈರಲ್‌ ಆಗುತ್ತಿರುವ ಹೇಳಿಕೆ ತಪ್ಪು ಎಂದು ಗೊತ್ತಾಗುತ್ತದೆ. – “ವೀಕ್ಷಿಸಿದ್ದಕ್ಕಾಗಿ ಧನ್ಯವಾದಗಳು! ಈ ಪುಟವು ಸ್ಕ್ರಿಪ್ಟ್ ಮಾಡಿದ ನಾಟಕಗಳು ಮತ್ತು ವಿಡಂಬನೆಗಳನ್ನು ಸಹ ಒಳಗೊಂಡಿದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ಕಿರುಚಿತ್ರಗಳು ಮನರಂಜನೆ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ!” ಎಂದು ಬರೆಯಾಗಿದೆ.

‘ಸ್ಫೋಟ’ದ ಹೇಳಿಕೆಯನ್ನು ಉಪಶೀರ್ಷಿಕೆಯಾಗಿ ಮಾತ್ರ ಮಾಡಲಾಗಿದೆ ಎಂಬುದನ್ನು ಓದುಗರು ಗಮನಿಸಬೇಕು. ವೀಡಿಯೋದಲ್ಲಿ ನಿಜವಾದ ಸ್ಫೋಟ ನಡೆದಿಲ್ಲ.

ಅದನ್ನು ಸಂಕ್ಷಿಪ್ತವಾಗಿ ಹೇಳುವುದಾದರೆ, ಸ್ಕ್ರಿಪ್ಟ್ ಮಾಡಿದ ವೀಡಿಯೊವನ್ನು ಕಟ್ ಮಾಡಿ ಹಂಚಿಕೊಳ್ಳಲಾಗಿದೆ. ಮೂಲ ವಿಡಿಯೋವು ಇದು ಸ್ಕ್ರಿಪ್ಟೆಂಡ್ ವಿಡಿಯೋ ಎಂಬುದನ್ನು ಸ್ಪಷ್ಟಪಡಿಸಿದೆ. ಆದರೆ, ವಿಡಿಯೋದ ರಚನೆಕಾರರು ಇದು ಚಿತ್ರೀಕರಿಸಲಾದ ವಿಡಿಯೋ ಎಂದು ತಿಳಿಸಲು ವೀಡಿಯೊಗಳಲ್ಲಿ ಸರಿಯಾದ ಮತ್ತು ಸ್ಪಷ್ಟವಾದ ಹೇಳಿಯನ್ನು ಸೇರಿಸುವಲ್ಲಿ ವಿಫಲರಾಗಿದ್ದಾರೆ.

ಚಾರ್ಜ್‌ನಲ್ಲಿಟ್ಟ ಮೊಬೈಲ್‌ ಫೋನ್‌ನಲ್ಲಿ ಮಾತನಾಡುವಾಗ ಫೋನ್‌ ಸ್ಪೋಟಗೊಂಡಿರುವ ವರದಿಗಳಾಗಿವೆ. ಆದರೆ, ಚಾರ್ಜ್‌ನಲ್ಲಿಟ್ಟ ಮೊಬೈಲ್‌ ಫೋನ್‌ನಲ್ಲಿ ಮಾತನಾಡುತ್ತಾ ನೀರು ಕುಡಿಯುವಾಗ ಸ್ಪೋಟಗೊಂಡಿರುವ ಬಗ್ಗೆ ಯಾವುದೇ ಘಟನೆಯು ವರದಿಯಾಗಿಲ್ಲ. ಆದರೂ, ಮೊಬೈಲ್‌ ಫೋನ್‌ ಜಾರ್ಜ್‌ನಲ್ಲಿದ್ದಾಗ ಫೋನ್‌ನಲ್ಲಿ ಮಾತನಾಡುವುದು ಅಪಾಯಕಾರಿ ಎಂಬುದು ನಮ್ಮ ಅರಿವಿನಲ್ಲಿರಬೇಕು.

ಕೃಪೆ: ಆಲ್ಟ್‌ನ್ಯೂಸ್‌


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...