ಪ್ರಿಯಾಂಕಾ ಗಾಂಧಿ ವಾದ್ರಾ ಕೆಂಪು ಸೀರೆಯುಟ್ಟು, ದೇವಾಲಯದ ಗಂಟೆ ಬಾರಿಸುತ್ತಿರುವ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಪ್ರಿಯಾಂಕಾ ಅವರು ಬಿಹಾರ ವಿಧಾನಸಭಾ ಚುನಾವಣೆಯ ಕಾರಣಕ್ಕೆ ಇಂದಿರಾಗಾಂಧಿಯವರ ಸೀರೆ ಧರಿಸಿದ್ದಾರೆ ಎಂದು ಈ ಪೋಸ್ಟ್‌ನಲ್ಲಿ ಪ್ರತಿಪಾದಿಸಲಾಗಿದೆ.

“ಬಿಹಾರ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ, ಕಪಾಟಿನಲ್ಲಿದ್ದ ಸೀರೆ ಹೊರಗೆ ಬಂದಿದೆ” ಎಂದು ಈ ಚಿತ್ರವನ್ನು ದೇಶದಾದ್ಯಂತ ಸಾಮಾಜಿಕ ಮಾಧ್ಯಮಗಳಲ್ಲಿ ಇದೇ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತದೆ.

ಫ್ಯಾಕ್ಟ್‌ಚೆಕ್:

ಈ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಮೂಲಕ ಹುಡುಕಾಡಿದಾಗ, ಇದೇ ಪ್ರತಿಪಾದನೆ ಹೊಂದಿರುವ ಇತ್ತೀಚಿನ ಪೋಸ್ಟ್‌ಗಳು ಮಾತ್ರ ಕಂಡುಬರುತ್ತವೆ. ಆದರೆ, ಪ್ರತಿಪಾದನೆಯಲ್ಲಿ ಬಳಸಲಾದ ಕೆಲವು ಕೀವರ್ಡ್‌ಗಳ ಮೂಲಕ ನಾವು ಹುಡುಕಿದಾಗ, ಇದೇ ಫೋಟೋವನ್ನು ಹಲವು ಪೋಸ್ಟ್‌ಗಳಲ್ಲಿ ಅಕ್ಟೋಬರ್ 2018 ರಲ್ಲಿ ಹಂಚಿಕೊಳ್ಳಲಾಗಿತ್ತು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: 13 ವರ್ಷದ ಬಾಲಕಿಯನ್ನು ಮುಸ್ಲಿಂ ವ್ಯಕ್ತಿ ಅತ್ಯಾಚಾರ ಮಾಡಿ ಸುಟ್ಟಿದ್ದು ಸುಳ್ಳು!

ನಾವು ಇತರ ಕೀವರ್ಡ್‌ಗಳನ್ನು ಬಳಸಿ ಹುಡುಕಿದಾಗ ಮತ್ತು ಟೈಮ್ ಫಿಲ್ಟರ್ ಬಳಸಿದಾಗ, ಇದೇ ಫೋಟೋವನ್ನು ಫ್ಲಿಕರ್ ವೆಬ್‌ಸೈಟ್‌ನಲ್ಲಿ ‘ಪ್ರೆಸ್‌ಬ್ರೀಫ್.ಇನ್’ ಅಪ್‌ಲೋಡ್ ಮಾಡಿರುವುದು ಕಂಡುಬಂದಿದೆ. ಅಲ್ಲಿ ನೀಡಿರುವ ವಿವರಣೆಯಲ್ಲಿ, 2009 ರ ಏಪ್ರಿಲ್ 12 ರಂದು ಪ್ರಿಯಾಂಕಾ ಗಾಂಧಿ ಅವರು ತಮ್ಮ ಸಹೋದರ ರಾಹುಲ್ ಗಾಂಧಿಯವರ ಚುನಾವಣಾ ಕ್ಷೇತ್ರವಾದ ಅಮೇಥಿಯಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಈ ಫೋಟೋ ತೆಗೆಯಲಾಗಿದೆ. ಇದೇ ರೀತಿಯ ಇತರ ಫೋಟೋಗಳನ್ನು ಇಲ್ಲಿ ಕಾಣಬಹುದು.

ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ಅಲ್ಲದೆ, 2009 ರಲ್ಲಿ ಅವರು ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದ ಫೋಟೋಗಳನ್ನು ‘ಗೆಟ್ಟಿ ಇಮೇಜಸ್’ ಮತ್ತು ‘ಔಟ್‌ಲುಕ್’ ವೆಬ್‌ಸೈಟ್‌ಗಳಲ್ಲಿ ಸಹ ಕಾಣಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಕೇಂದ್ರ ಸರ್ಕಾರ ಪ್ರತಿ ಹೆಣ್ಣು ಮಕ್ಕಳಿಗೆ ಮಾಸಿಕ ತಲಾ 2000 ರೂ. ನೀಡುತ್ತಿರುವುದು…

ಪೋಸ್ಟ್ ಮಾಡಿದ ಈ ಫೋಟೋ ಹಳೆಯದಾಗಿದ್ದರೂ, ಪ್ರಿಯಾಂಕಾ ಗಾಂಧಿ ಇತ್ತೀಚೆಗೆ ದೆಹಲಿಯ ವಾಲ್ಮೀಕಿ ದೇವಸ್ಥಾನಕ್ಕೆ ಭೇಟಿ ನೀಡಿ, ಹತ್ರಾಸ್ ಸಂತ್ರಸ್ತರಿಗಾಗಿನ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡಿದ್ದರು. ಅವರ ದೇವಾಲಯದ ಭೇಟಿಗೆ ಸಂಬಂಧಿಸಿದ ಸುದ್ದಿ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ಓದಬಹುದು.

ಹಾಗಾಗಿ, ಈ ಫೋಟೊ 2019ರಲ್ಲಿ ಉತ್ತರಪ್ರದೇಶದ ಅಮೇಥಿಯಲ್ಲಿ ತೆಗೆದಿದ್ದು. ಇದಕ್ಕೂ ಮುಂಬರುವ ಬಿಹಾರ ವಿಧಾನ ಸಭಾ ಚುನಾವಣೆಗೂ ಸಂಬಂಧವಿಲ್ಲ. ಒಟ್ಟಾರೆಯಾಗಿ ಹೇಳುವುದಾದರೆ, 2009 ರ ಫೋಟೋವೊಂದನ್ನು ‘ಬಿಹಾರ ವಿಧಾನಸಭಾ ಚುನಾವಣೆಯ ಕಾರಣಕ್ಕೆ ಇಂದಿರಾ ಗಾಂಧಿಯವರ ಸೀರೆಯನ್ನು ಧರಿಸಿದ ಪ್ರಿಯಾಂಕಾ” ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

Donate

ಈ ಲೇಖನ, ಈ ವೆಬ್‌ಸೈಟ್ ನಿಮಗೆ ಇಷ್ಟವಾಯಿತೇ? ನಿಮ್ಮ ಬೆಂಬಲ ಇದಕ್ಕೆ ಅಗತ್ಯ.

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

+ posts

LEAVE A REPLY

Please enter your comment!
Please enter your name here