Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪತ್ರಕರ್ತರೊಬ್ಬರು ಪ್ರಧಾನಿ ಮೋದಿಯವರನ್ನು ಹೊಗಳಿದ್ದಾರೆಯೇ?

ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪತ್ರಕರ್ತರೊಬ್ಬರು ಪ್ರಧಾನಿ ಮೋದಿಯವರನ್ನು ಹೊಗಳಿದ್ದಾರೆಯೇ?

"ಪಾಕಿಸ್ತಾನದ ಪತ್ರಕರ್ತ ಮೋದಿಯವರನ್ನು ವರ್ಣಿಸಿದ ರೀತಿ" ಎಂದು ವ್ಯಕ್ತಿಯೊಬ್ಬರು ಮೋದಿಯವರನ್ನು ಹೊಗಳುತ್ತಿರುವ ವೀಡಿಯೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

- Advertisement -
- Advertisement -

ಪಾಕಿಸ್ತಾನದ ಪತ್ರಕರ್ತರೊಬ್ಬರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ್ದಾರೆ ಎಂಬ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

“ಪಾಕಿಸ್ತಾನದ ಪತ್ರಕರ್ತ ಮೋದಿಯವರನ್ನು ವರ್ಣಿಸಿದ ರೀತಿ” ಎಂದು ವ್ಯಕ್ತಿಯೊಬ್ಬರು ಮೋದಿಯವರನ್ನು ಹೊಗಳುತ್ತಿರುವ ವೀಡಿಯೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಪೋಸ್ಟ್‌ನ ಆರ್ಕೈವ್‌ ಮಾಡಲಾದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ: ಬಲಪಂಥೀಯ ಮಹಿಳೆ ಮೇಲೆ ಕ್ರಮಕ್ಕೆ ಮುಂದಾದ ಕೋಲ್ಕತ್ತ ಪೊಲೀಸ್!

ಫ್ಯಾಕ್ಟ್‌ಚೆಕ್:

ಈ ವಿಡಿಯೋದ ಸೋಷಿಯಲ್ ಮೀಡಿಯಾ ಸಂಪರ್ಕದ ವಾಟರ್‌ ಮಾರ್ಕ್‌ನಲ್ಲಿ  ಹರ್ಷವರ್ಧನ್ ಜೈನ್ ಎಂದು ಬರೆಯಲಾಗಿದೆ. ಅಲ್ಲಿಂದ ಕ್ಯೂ ಪಡೆದು ವಿಡಿಯೋದ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಇದೇ ವಿಡಿಯೋದ ಪೂರ್ತಿ ವಿಡಿಯೋ ಆಗಸ್ಟ್ 14, 2020ರಲ್ಲಿಹರ್ಷವರ್ಧನ್ ಜೈನ್’ ಎಂಬುವವರ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಆಗಿದೆ. ಆ ಯೂಟ್ಯೂಬ್ ಚಾನೆಲ್‌ನ ‘ಪರಿಚಯ’ ವಿಭಾಗದಲ್ಲಿ ಹರ್ಷವರ್ಧನ್ ಜೈನ್ ಭಾರತೀಯ ಮೂಲದ ಪ್ರೇರಣ ನೀಡುವ ಭಾಷಣಕಾರರಾಗಿದ್ದು ತರಬೇತಿ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾರೆ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ಅಲ್ಲದೇ ಅವರ ಖಾಸಗಿ ವೆಬ್‌ಸೈಟ್ ಮತ್ತು ಅವರ ಸಾಮಾಜಿಕ ಜಾಲತಾಣ ಖಾತೆಗಳಲ್ಲಿಯೂ ಇದೇ ರೀತಿಯ ಹಲವು ಭಾಷಣಗಳನ್ನು ಕಾಣಬಹುದು. ಅಲ್ಲಿಯು ಅವರು ಭಾರತೀಯರೆಂದು ಪರಿಚಯಿಸಿಕೊಂಡಿದ್ದಾರೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇಂಡಿಯಾ ಟುಡೇ ಫ್ಯಾಕ್ಟ್‌ಚೆಕ್ ವಿಭಾಗವು ಹರ್ಷವರ್ಧನ್ ಜೈನ್‌ರವರ ಕಚೇರಿಯನ್ನು ಸಂಪರ್ಕಿಸಿದೆ. ಜೈನ್‌ರವರು ಪಾಕಿಸ್ತಾನದ ಪತ್ರಕರ್ತರಲ್ಲ, ಅವರು ಭಾರತದವರು ಎಂದಿದ್ದು, ಮತ್ತು ಈ ಭಾಷಣವನ್ನು ಭಾರತದ ಕಾರ್ಪೊರೇಟ್ ಕಂಪನಿಯೊಂದರಲ್ಲಿ ಮಾಡಿದ್ದಾರೆ ಎಂದು ಜೈನ್ ಕಚೇರಿಯು ಸಿಬ್ಬಂದಿ ತ್ರಿಲೋಕ್ ಶರ್ಮಾ ಎಂಬುವವರು ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪ್ರತಿಭಟನೆಯೊಂದರಲ್ಲಿ ಭಾರತದ ಬಾವುಟವನ್ನು ಬಳಸಲಾಗಿದೆಯೇ?

ಹರ್ಷವರ್ಧನ್ ಜೈನ್‌ರವರು ರಾಜಸ್ಥಾನದ ಜೈಪುರ ಜಿಲ್ಲೆಯವರು. ಇವರಿಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧವಿಲ್ಲ. ಕಾರ್ಪೊರೇಟ್ ಕಂಪನಿಗಳ ಉದ್ಯೋಗಿಗಳಿಗೆ ನಾಯಕತ್ವ ಬಲವರ್ಧನೆ ಕುರಿತು ಪ್ರೇರಣೆಯ ಭಾಷಣ ಮತ್ತು ತರಬೇತಿ ನೀಡುತ್ತಾರೆ. ಕಾರ್ಪೊರೇಟ್ ಕಂಪನಿಯೊಂದರ ಮಾರುಕಟ್ಟೆ ವಿಭಾಗದ ಉದ್ಯೋಗಿಗಳಿಗೆ ಕೆಲದಿನಗಳ ಹಿಂದೆ ಅವರು ತರಬೇತಿ ನೀಡಿದ ವಿಡಿಯೋ ಇದು ಎಂದು ಶರ್ಮಾ ತಿಳಿಸಿದ್ದಾರೆ.

ಒಟ್ಟಿನಲ್ಲಿ ವಿಡಿಯೋದಲ್ಲಿ ಪ್ರಧಾನಿ ಮೋದಿಯವರನ್ನು ಹೊಗಳುತ್ತಿರುವ ವ್ಯಕ್ತಿ ಪಾಕಿಸ್ತಾನದ ಪತ್ರಕರ್ತರಲ್ಲ. ಅವರು ಭಾರತದ ಪ್ರೇರಣೆಯ ಭಾಷಣಕಾರರಾಗಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ತನಿಷ್ಕ್ ಜಾಹೀರಾತಿನ ವಿರುದ್ಧ ದೆಹಲಿಯ ಜಾಮಾ ಮಸೀದಿ ಫತ್ವಾ ಹೊರಡಿಸಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...