Homeಕರ್ನಾಟಕಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

ಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

- Advertisement -
- Advertisement -

ರಾಜ್ಯದಲ್ಲಿ ರಸ್ತೆ ವಿಸ್ತರಣೆಯ ಕಾಮಗಾರಿ ಭಾಗವಾಗಿ ಮಸೀದಿಯನ್ನು ಕೆಡವಲಾಗಿದ್ದು, ಅದರ ಕೆಳಗಡೆ ಶಿವನ ದೇವಾಲಯವೊಂದು ಕಾಣಿಸುತ್ತಿದೆ ಎಂದು ಹೇಳುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ. ಟಿಪ್ಪು ಸುಲ್ತಾನ್ ಆಳ್ವಿಕೆಯಲ್ಲಿ ಶಿವ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಯಿತು. ಮುಸ್ಲಿಮರು ನಮಾಜ್ ಮಾಡುವ ಮಸೀದಿಯ ಕೆಳಗೆ ದೇವಸ್ಥಾನ ಇರುತ್ತದೆ ಎಂದು ಒಂದು ಪೋಸ್ಟ್ ಹೇಳುತ್ತದೆ. ಆ ಪೋಸ್ಟ್ ಎಷ್ಟು ನಿಜ ಎಂಬುದನ್ನು ಪರಿಶೀಲಿಸೋಣ.

ಪೋಸ್ಟ್‌ನಲ್ಲಿ ಮಾಡಿದ ಕ್ಲೈಮ್‌ನ ವಿವರಗಳಿಗಾಗಿ Googleನಲ್ಲಿ ಹುಡುಕಾಡಿದಾಗ ಈ ಫೋಟೋವನ್ನು 2016 ರಿಂದ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಆ ಹಳೆಯ ಪೋಸ್ಟ್‌ಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು. ಒಬ್ಬ ಬಳಕೆದಾರರು ಫೋಟೋ ಜೊತೆಗೆ “ರಾಯಚೂರಿನ ಏಕ್ ಮಿನಾರ್ ಮಸೀದಿಯನ್ನು ಕೆಡವಲಾಗುತ್ತಿದೆ, 500 ವರ್ಷ ಪುರಾತನವಾದದ್ದು, ಹಿಂದೂ ಬ್ರಾಹ್ಮಣರು ಭವ್ಯವಾದ ಶಿಲ್ಪಗಳನ್ನು ಕೆತ್ತಿದ್ದಾರೆ ನೋಡಿ” ಎಂದಿದ್ದಾರೆ.

 ಈ ಟ್ವೀಟ್‌ಗಳಲ್ಲಿ ಹಂಚಿಕೊಂಡಿರುವ ಮಸೀದಿಯ ಫೋಟೋವನ್ನು ‘ಟ್ರಿಪ್ ಅಡ್ವೈಸರ್’ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಟ್ರಿಪ್ ಅಡ್ವೈಸರ್ ವೆಬ್‌ಸೈಟ್ ಪ್ರಕಾರ ಈ ಫೋಟೋ ರಾಯಚೂರಿನ ಏಕ್ ಮಿನಾರ್ ಮಸೀದಿಯಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಈ ವಿವರಗಳನ್ನು ಆಧರಿಸಿ, ಪೋಸ್ಟ್‌ನಲ್ಲಿ ಹಂಚಿಕೊಂಡ ಫೋಟೋದ ಕುರಿತು ಹೆಚ್ಚಿನ ಮಾಹಿತಿಯ ಹುಡುಕಾಡಿದಾಗ, ಈ ಘಟನೆಗೆ ಸಂಬಂಧಿಸಿದಂತೆ ‘ಡೆಕ್ಕನ್ ಕ್ರಾನಿಕಲ್’ ಸುದ್ದಿ ಸಂಸ್ಥೆ 15 ಏಪ್ರಿಲ್ 2016 ರಂದು ಲೇಖನವನ್ನು ಪ್ರಕಟಿಸಿರುವುದು ಕಂಡುಬಂದಿದೆ. ರಾಯಚೂರಿನ ಏಕ್ ಮಿನಾರ್ ಮಸೀದಿಯ ಭಾಗವನ್ನು 2016 ರಲ್ಲಿ ರಸ್ತೆ ವಿಸ್ತರಣೆಯ ಭಾಗವಾಗಿ ಕೆಡವಲಾಯಿತು ಎಂದು ಈ ಲೇಖನ ವರದಿ ಮಾಡಿದೆ. ಏಕ್ ಮಿನಾರ್ ಮಸೀದಿ ಧ್ವಂಸದ ನಂತರ ಹೊರಹೊಮ್ಮಿದ ಕಂಬಗಳು ಅಲ್ಲಿನ ಹಿಂದೂ ಸಮುದಾಯಗಳ ಪ್ರಕಾರ ಹಿಂದೂ ದೇವಾಲಯಗಳಲ್ಲಿ ನಿರ್ಮಿಸಲಾದ ಭವ್ಯವಾದ ಶಿಲ್ಪಕಲಾ ಸ್ತಂಭಗಳನ್ನು ಹೋಲುತ್ತವೆ ಎಂದು ಹೇಳಲಾಗುತ್ತದೆ. ಏಕ್ ಮಿನಾರ್ ಮಸೀದಿಯ ಇತಿಹಾಸವನ್ನು ತಕ್ಷಣವೇ ತನಿಖೆ ಮಾಡಿ ಮತ್ತು ಈ ಹಿಂದೆ ಸ್ಥಳದಲ್ಲಿ ದೇವಾಲಯವನ್ನು ನಿರ್ಮಿಸಲಾಗಿದೆಯೇ ಎಂದು ಸ್ಪಷ್ಟಪಡಿಸಬೇಕೆಂದು ರಾಯಚೂರು ಹಿಂದೂ ಸಮುದಾಯವು ಸರ್ಕಾರವನ್ನು ಒತ್ತಾಯಿಸಿದೆ ಎಂದು ಲೇಖನ ವರದಿ ಮಾಡಿದೆ.

ಆದರೆ, ಈ ಲೇಖನದಲ್ಲಿ ಎಲ್ಲಿಯೂ ಏಕ್ ಮಿನಾರ್ ಮಸೀದಿಯ ಕಂಬಗಳು ಹಿಂದೂ ದೇವಾಲಯಕ್ಕೆ ಸೇರಿವೆ ಎಂದು ದೃಢಪಡಿಸಲಾಗಿಲ್ಲ. ‘ದಿ ಹಿಂದೂ’ ಸುದ್ದಿ ಸಂಸ್ಥೆ ರಾಯಚೂರು ರಸ್ತೆ ಅಗಲೀಕರಣ ಕೆಡವುವ ಕುರಿತು 2016ರ ಏಪ್ರಿಲ್ 10ರಂದು ಲೇಖನ ಪ್ರಕಟಿಸಿತ್ತು.

ಏಕ್ ಮಿನಾರ್ ಮಸೀದಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳ ಬಗ್ಗೆ ಸ್ಪಷ್ಟನೆಗಾಗಿ ‘ಆಲ್ಟ್ ನ್ಯೂಸ್’ ಸತ್ಯ ತಪಾಸಣೆ ಸಂಸ್ಥೆ ಅಂದಿನ ರಾಯಚೂರು ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿತ್ತು. ಆಲ್ಟ್ ನ್ಯೂಸ್‌ಗೆ ಪ್ರತಿಕ್ರಿಯಿಸಿದ್ದ ರಾಯಚೂರು ಜಿಲ್ಲಾಧಿಕಾರಿಗಳು, ” ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು. ರಾಯಚೂರು ರಸ್ತೆ ವಿಸ್ತರಣೆಯ ಭಾಗವಾಗಿ ಪ್ರಾಚೀನ ಏಕ್ ಮಿನಾರ್ ಮಸೀದಿ ಹಾಗೂ ಕೆಲವು ಧಾರ್ಮಿಕ ಕಟ್ಟಡಗಳನ್ನು ಕೆಡವಲಾಯಿತು. ಪ್ರಾಚೀನ ಸ್ಮಾರಕಗಳಲ್ಲಿ ಹಲವು ವಿಧಗಳಿವೆ. ಸರಳವಾಗಿ ಹೇಳುವುದಾದರೆ, ಕಂಬವನ್ನು ಹಿಂದೂ ದೇವಾಲಯ ಎಂದು ಹೇಳಲಾಗುವುದಿಲ್ಲ. ಕೆಲವು ಗುಂಪುಗಳು ಈ ಆರೋಪ ಮಾಡಲು ಯತ್ನಿಸಿದ್ದವು. ಆದರೆ ಅವರ ಆರೋಪಗಳ ಬಗ್ಗೆ ಮತ್ತೆ ಅವರನ್ನೇ ಕೇಳಿದಾಗ ಅವರು ಆರೋಪಗಳನ್ನು ಮುಂದುವರಿಸಲಿಲ್ಲ” ಎಂದು ಹೇಳಿದ್ದಾರೆ.

ಈ ವಿವರಗಳನ್ನು ಆಧರಿಸಿ, 2016 ರಲ್ಲಿ ರಾಯಚೂರಿನ ಏಕ್ ಮಿನಾರ್ ಮಸೀದಿಯನ್ನು ಕೆಡವಿದಾಗ ಶಿವನ ದೇವಾಲಯವನ್ನು ಕಂಡುಬಂದಿದೆ ಎಂಬ ಹೇಳಿಕೆಯು ಸಂಪೂರ್ಣವಾಗಿ ಆಧಾರರಹಿತವಾಗಿದೆ. ಒಟ್ಟಾರೆ ರಾಜ್ಯದ ರಾಯಚೂರಿನಲ್ಲಿ ರಸ್ತೆ ಅಗಲೀಕರಣದ ಭಾಗವಾಗಿ ಕೆಡವಲ್ಪಟ್ಟ ಮಸೀದಿಯ ಕೆಳಗೆ ಹಿಂದೂ ದೇಗುಲ ಸಿಕ್ಕಿಲ್ಲ.

ಪ್ರತಿಪಾದನೆ: ಕರ್ನಾಟಕದಲ್ಲಿ ರಸ್ತೆ ವಿಸ್ತರಣೆಯ ಕಾಮಗಾರಿ ಭಾಗವಾಗಿ ಮಸೀದಿಯನ್ನು ಕೆಡವಲಾಗಿದ್ದು ಅದರ ಶಿವ ದೇವಾಲಯ ಕಂಡು ಬಂದಿದೆ.

ನಿಜಾಂಶ: 2016ರಲ್ಲಿ ರಾಯಚೂರು ಜಿಲ್ಲೆಯ ಅಧಿಕಾರಿಗಳು ರಸ್ತೆ ವಿಸ್ತರಣೆಯ ಭಾಗವಾಗಿ ರಾಯಚೂರಿನ ಏಕ್ ಮಿನಾರ್ ಮಸೀದಿಯ ಭಾಗವನ್ನು ಕೆಡವಿದ್ದರು. ಏಕ್ ಮಿನಾರ್ ಮಸೀದಿ ಧ್ವಂಸದ ನಂತರ ಹೊರಹೊಮ್ಮಿದ ಕಂಬಗಳು ಹಿಂದೂ ದೇವಾಲಯಗಳಲ್ಲಿ ನಿರ್ಮಿಸಲಾದ ಕಂಬಗಳನ್ನು ಹೋಲುತ್ತವೆ ಎಂದು ಅಲ್ಲಿನ ಹಿಂದೂ ಸಮುದಾಯವು ಆರೋಪಿಸಿದೆ. ಆದರೆ, ಏಕ್ ಮಿನಾರ್ ಮಸೀದಿ ವಿರುದ್ಧ ಮಾಡಿರುವ ಆರೋಪಗಳು ಸಂಪೂರ್ಣ ನಿರಾಧಾರ ಎಂದು ಅಂದಿನ ರಾಯಚೂರು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ, ಪೋಸ್ಟ್ ಮೂಲಕ ಹೇಳಿರುವುದು ತಪ್ಪುದಾರಿಗೆಳೆಯುವಂತಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಷ್ಟ್ರೀಯ ಹೆದ್ದಾರಿಗಳು, ವಾಹನಗಳ ಮೇಲೆ ಮುಸ್ಲಿಮರು ನಮಾಜ್ ಮಾಡಿದ್ದು ನಿಜವೇ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...