Homeಅಂತರಾಷ್ಟ್ರೀಯಫ್ಯಾಕ್ಟ್‌‌ಚೆಕ್: ನ್ಯೂಜಿಲ್ಯಾಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಶ್ರೀಕೃಷ್ಟ ಹಾಗೂ ಭಗವದ್ಗೀತೆಯನ್ನು ಹೊಗಳಿದರೆ?

ಫ್ಯಾಕ್ಟ್‌‌ಚೆಕ್: ನ್ಯೂಜಿಲ್ಯಾಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಶ್ರೀಕೃಷ್ಟ ಹಾಗೂ ಭಗವದ್ಗೀತೆಯನ್ನು ಹೊಗಳಿದರೆ?

ಅವರು ತಮ್ಮ ವಿಡಿಯೋ ಸಂದೇಶದ ಜೊತೆಗೆ ಟ್ವೀಟ್‌ನಲ್ಲಿ ’ಜೈಶ್ರೀಕೃಷ್ಣ’ ಎಂದಿದ್ದು ನಿಜವೆ ?

- Advertisement -
- Advertisement -

ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ವಿದೇಶಿಯಂತೆ ಕಾಣುವ ಮಹಿಳೆಯೊಬ್ಬರು ಶ್ರೀಕೃಷ್ಣ ಮತ್ತು ಭಗವದ್ಗೀತೆಯನ್ನು ಹೊಗಳಿದ ವೈರಲ್ ವಿಡಿಯೋವೊಂದನ್ನು ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ವಿಡಿಯೋದಲ್ಲಿ ಮಹಿಳೆಯು, “… ಭಗವದ್ಗೀತೆ ಅಂದರೆ ’ದೇವರ ಹಾಡು ’. ಶ್ರೀ ಕೃಷ್ಣ ಹೇಳಿದ್ದ ಭಗವದ್ಗೀತೆಯು ಅತೀಂದ್ರಿಯ ಬುದ್ಧಿವಂತಿಕೆಯಿಂದ ತುಂಬಿದ್ದು, ಅದು 5,000 ವರ್ಷಗಳ ಹಿಂದೆ ಮಾತನಾಡುವಾಗ ಇದ್ದಂತೆಯೇ ಇಂದಿಗೂ ಪ್ರಸ್ತುತವಾಗಿದೆ” ಎಂದು ಹೇಳುತ್ತಾರೆ.

ಇದನ್ನೂ ಓದಿ: ಹಿಂದೂ ವಿರೋಧಿ ಪೋಸ್ಟ್‌ಗೆ ಉತ್ತರವಾಗಿ ಡಿಜೆ ಹಳ್ಳಿ ಗಲಭೆಯ ಆರೋಪಿ ಪಿ. ನವೀನ್ ಪ್ರವಾದಿ ನಿಂದನೆ ಪೋಸ್ಟ್ ಹಾಕಿದ್ದೆ? ಇದು ನಿಜವೆ ?

ಈ ವಿಡಿಯೋವನ್ನುಇಟ್ಟುಕೊಂಡು ಭಗವದ್ಗೀತೆಯ ಮಹತ್ವದ ಬಗ್ಗೆ ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಮಾತನಾಡುತ್ತಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಹಲವರು ಬಳಕೆದಾರರು ಹೇಳುತ್ತಾ ಹಂಚಿಕೊಳ್ಳುತ್ತಿದ್ದಾರೆ. ವಿಡಿಯೋವನ್ನು ಹಲವಾರು ಫೇಸ್‌ಬುಕ್ ಹಾಗೂ ಟ್ವಿಟ್ಟರ್‌ ಬಳಕೆದಾರರು ಒಂದೇ ರೀತಿಯ ನಿರೂಪಣೆಯೊಂದಿಗೆ ಹಂಚಿಕೊಂಡಿದ್ದಾರೆ.

ಆರ್ಕೈವ್‌ ಇಲ್ಲಿದೆ.

ಫ್ಯಾಕ್ಟ್‌‌‌ಚೆಕ್

ವೀಡಿಯೊದಲ್ಲಿ ಇರುವುದು ವಿದೇಶಿ ಮಹಿಳೆ ಎಂಬುವುದು ನಿಜವಾಗಿದೆ. ಅದರಂತೆ ಈ ವಿಡಿಯೋ ಎಡಿಟ್ ಮಾಡಿದ ವಿಡಿಯೋ ಕೂಡಾ ಅಲ್ಲ. ಆದರೆ ವಿಡಿಯೋದಲ್ಲಿ ಇರುವ ಮಹಿಳೆಯು ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅಲ್ಲ, ಬದಲಾಗಿ ಅಮೆರಿಕಾದ ಜನಪ್ರತಿನಿಧಿ ತುಳಸಿ ಗಬ್ಬಾರ್ಡ್ ಎಂಬವರಾಗಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಆಗಸ್ಟ್ 11 ರಂದು ಕೃಷ್ಟ ಜನ್ಮಾಷ್ಟಮಿ ಸಂದರ್ಭದಲ್ಲಿ ತುಳಸಿ ಗಬ್ಬಾರ್ಡ್ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಹ್ಯಾಂಡಲ್‌ಗಳಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿದ್ದರು.

ಅಷ್ಟೇ ಅಲ್ಲದೆ ತಮ್ಮ ಟ್ವಿಟ್ಟರ್‌ನಲ್ಲಿ “ಪ್ರಪಂಚದಾದ್ಯಂತ ಜನ್ಮಾಷ್ಟಮಿ ಆಚರಿಸುವ ಎಲ್ಲರಿಗೂ ಶುಭಾಶಯಗಳನ್ನು ಕೋರುತ್ತೇನೆ! ನಾವು ಯಾವಾಗಲೂ ಶ್ರೀ ಕೃಷ್ಣನ ಸ್ಮರಣೆ, ​​ಅವನ ಬೇಷರತ್ತಾದ ಪ್ರೀತಿ ಮತ್ತು ಅವನ ಅತೀಂದ್ರಿಯ ದೃಷ್ಟಿಯ ಆಶೀರ್ವದ ಪಡೆಯೋಣ. ಜೈ ಶ್ರೀ ಕೃಷ್ಣ! ” ಎಂದು ಬರೆದು ತಮ್ಮ ಈ ವಿಡಿಯೋವನ್ನು ಹಂಚಿದ್ದಾರೆ.

ತುಳಸಿ ಗಬ್ಬಾರ್ಡ್ ಡೆಮೋಕ್ರಾಟಿಕ್ ಪಕ್ಷದ ಅಮೇರಿಕನ್ ರಾಜಕಾರಣಿ, 2013 ರಿಂದ ಹವಾಯಿಯ 2 ನೇ ಕಾಂಗ್ರೆಸ್ ಜಿಲ್ಲೆಯ ಅಮೆರಿಕಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹವಾಯಿಯ ಒಂದು ಕ್ಷೇತ್ರವನ್ನು ಪ್ರತಿನಿಧಿಸುವ ಗಬ್ಬಾರ್ಡ್ ಭಾರತೀಯ ಮೂಲದವರಲ್ಲ ಮತ್ತು ಅವರ ಪೋಷಕರು ಇಬ್ಬರೂ ಹಿಂದೂಗಳಲ್ಲ, ಆದರೆ ಅವರು ಹಿಂದೂ ಧರ್ಮವನ್ನು ಆಚರಣೆ ಮಾಡುತ್ತಾರೆ.

ಇದನ್ನೂ ಓದಿ: ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ನ್ಯೂಜಿಲೆಂಡ್ ಪ್ರಧಾನಿ ಮತ್ತು ಅಮೆರಿಕಾ ಪ್ರತಿನಿಧಿಯ ಮುಖದ ವ್ಯತ್ಯಾಸವನ್ನು ಕೆಳಗಿನ ಚಿತ್ರದಲ್ಲಿ ನೋಡಬಹುದಾಗಿದೆ.

PC: The Quint

ಆದರೆ ನ್ಯೂಜಿಲೆಂಡ್ ಪ್ರಧಾನಿ ಆಗಸ್ಟ್ 6 ರಂದು ಆಕ್ಲೆಂಡ್‌ನ ರಾಧಾ ಕೃಷ್ಣ ದೇವಸ್ಥಾನಕ್ಕೆ ಒಂದು ಸಣ್ಣ ಭೇಟಿ ನೀಡಿದ್ದರು.

ಅಮೆರಿಕಾದ ರಾಜಕಾರಣಿ ತುಳಸಿ ಗಬ್ಬಾರ್ಡ್ ಬಿಡುಗಡೆ ಮಾಡಿರುವ ವಿಡಿಯೋವನ್ನು ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರದ್ದೆಂದು ತಪ್ಪಾಗಿ ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡುತ್ತಿದ್ದಾರೆ.


ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...