Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಭಾರತ್‌ ಜೋಡೋ ಯಾತ್ರೆಯಲ್ಲಿ ‘ಅಮೂಲ್ಯ ಲಿಯೋನ್‌‌’ ರಾಹುಲ್ ಗಾಂಧಿಯನ್ನು ಭೇಟಿಯಾದರೆ?

ಫ್ಯಾಕ್ಟ್‌ಚೆಕ್‌: ಭಾರತ್‌ ಜೋಡೋ ಯಾತ್ರೆಯಲ್ಲಿ ‘ಅಮೂಲ್ಯ ಲಿಯೋನ್‌‌’ ರಾಹುಲ್ ಗಾಂಧಿಯನ್ನು ಭೇಟಿಯಾದರೆ?

- Advertisement -
- Advertisement -

ಭಾರತ್‌ ಜೋಡೋ ಯಾತ್ರೆಯ ಸಮಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಎ ವಿರೋಧಿ ಹೋರಾಟಗಾರ್ತಿ ‘ಅಮೂಲ್ಯ ಲಿಯೋನ್‌‌’ ಅವರನ್ನು ಭೇಟಿಯಾಗಿದ್ದಾರೆ ಎಂದು ಪ್ರತಿಪಾದಿಸಿ ಯಾತ್ರೆಯಲ್ಲಿ ಯುವತಿಯೊಬ್ಬರೊಂದಿಗೆ ಇರುವ ವಿಡಿಯೊ ಮತ್ತು ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿ ಬಿಡಲಾಗಿದೆ.

ಈ ವಿಡಿಯೊ ಮತ್ತು ಚಿತ್ರಗಳನ್ನು ಬಿಜೆಪಿ ಬೆಂಬಲಿಗರು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುತ್ತಿದ್ದಾರೆ. ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಅವರು ಈ ವಿಡಿಯೊವನ್ನು ಟ್ವಿಟರ್‌‌ನಲ್ಲಿ ಹಂಚಿಕೊಂಡಿದ್ದು, “ಗಮನವಿಟ್ಟು ನೋಡಿ, ಇದು ಭಾರತ ಜೋಡಿಸುವುದು ಅಲ್ಲ, ಭಾರತ ಒಡೆಯುವುದು” ಎಂದು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರೀತಿ ಗಾಂಧಿ ಅವರು ಹಂಚಿಕೊಂಡಿರುವ ವಿಡಿಯೊದ ಅರ್ಧ ಭಾಗದಲ್ಲಿ ಬಾಬ್‌ಕಟ್‌‌ ಹೇರ್‌ಸ್ಟೈಲ್‌ ಮಾಡಿಕೊಂಡಿರುವ ಯುವತಿಯು ರಾಹುಲ್ ಗಾಂಧಿಯ ಜೊತೆಗೆ ನಡೆಯುತ್ತಿರುವ ದೃಶ್ಯವಿದ್ದರೆ, ಮತ್ತೊಂದು ಅರ್ಧದಲ್ಲಿ ಸಿಎಎ ವಿರೋಧಿ ಹೋರಾಟದ ಸಮಯದಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯ ದೃಶ್ಯಗಳಿವೆ.

ಸಿಎಎ ವಿರೋಧಿ ಹೋರಾಟದ ಸಮಯ ಸಂಸದ ಅಸಾದುದ್ದೀನ್ ಒವೈಸಿ ಅವರು ಭಾಗವಹಿಸಿದ್ದ ವೇದಿಕೆಯೊಂದರಲ್ಲಿ ಸಿಎಎ ವಿರೋಧಿ ಹೋರಾಟಗಾರ್ತಿ ಅಮೂಲ್ಯ ಲಿಯೋನ್‌‌ ಅವರು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ್ದರು. ಈ ಘೋಷಣೆ ಕೂಗುತ್ತಿದ್ದಂತೆ ಅವರ ಮೈಕ್ ಅನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆದಿತ್ತು. ಅದರ ನಂತರ ಅವರು ‘ಹಿಂದೂಸ್ತಾನ್ ಝಿಂದಾಬಾದ್’ ಹೇಳಿಕೆ ನೀಡಿ ‘ವ್ಯತ್ಯಾಸ ಗಮನಿಸಿ…’ ಎಂದು ಹೇಳುತ್ತಿದ್ದಂತೆ ಅವರಿಂದ ಮೈಕ್‌‌ ಕಿತ್ತು, ಅವರು ಮುಂದಕ್ಕೆ ಮಾತನಾಡದಂತೆ ತಡೆಯಲಾಗಿತ್ತು. ಇದರ ನಂತರ ಅವರ ಬಂಧನ ಕೂಡಾ ನಡೆದಿತ್ತು.

ಅಲ್ಲದೆ ಈ ವೇದಿಕೆ ಏರುವುದಕ್ಕಿಂತ ಮುಂಚೆ ಅವರು ತಮ್ಮ ಫೇಸ್‌ಬುಕ್‌‌ನಲ್ಲಿ ಎಲ್ಲಾ ದೇಶಗಳಿಗೂ ‘ಜಿಂದಾಬಾದ್’ ಎಂದು ಬರೆದಿರುವ ಪೋಸ್ಟ್‌ ಒಂದನ್ನು ಕೂಡಾ ಹಂಚಿಕೊಂಡಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ ನಿಜವೆ?

ಸಿಎಎ ವಿರೋಧಿ ಹೋರಾಟದಲ್ಲಿ ಭಾಗವಹಿಸಿ ಬಂಧನಕ್ಕೆ ಒಳಗಾಗಿದ್ದ ಅಮೂಲ್ಯ ಲಿಯೋನ್‌‌ ಅವರನ್ನೆ ರಾಹುಲ್ ಗಾಂಧಿ ಅವರು ಕೇರಳದಲ್ಲಿ ಇರುವ ‘ಭಾರತ್‌ ಜೋಡೋ’ ಯಾತ್ರೆಯ ವೇಳೆ ಭೇಟಿಯಾಗಿದ್ದರು ಎಂದು ಪ್ರತಿಪಾದಿಸುತ್ತಿದ್ದಾರೆ.

ಫ್ಯಾಕ್ಟ್‌ಚೆಕ್

ರಾಹುಲ್ ಗಾಂಧಿ ಅವರ ‘ಭಾರತ್‌ ಜೋಡೋ’ ಯಾತ್ರೆಯು ಪ್ರಸ್ತುತ ಕೇರಳದ ತ್ರಿಶೂರ್‌ನಲ್ಲಿ ಇದೆ. ಅಮೂಲ್ಯ ಲಿಯೋನ್‌‌ ಅವರು ಕರ್ನಾಟಕದ ಚಿಕ್ಕಮಗಳೂರಿನವರಾಗಿದ್ದಾರೆ. ಸಿಎಎ ವಿರೋಧಿ ಹೋರಾಟದ ನಂತರ ಅವರು ಸಾರ್ವಜನಿಕ ಹೋರಾಟಗಳಲ್ಲಿ ಕಾಣಿಸಿಕೊಂಡಿಲ್ಲ. ಈ ವರೆಗಿನ ವರದಿಯಂತೆ ಅವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ಕೂಡಾ ಅಲ್ಲ.

ವಾಸ್ತವದಲ್ಲಿ, ಬಿಜೆಪಿ ಬೆಂಬಲಿಗರು ವೈರಲ್ ಮಾಡುತ್ತಿರುವ ಚಿತ್ರದಲ್ಲಿ ಇರುವ ಯುವತಿಯು ಅಮೂಲ್ಯ ಲಿಯೋನ್‌‌ ಅಲ್ಲ. ರಾಹುಲ್ ಗಾಂಧಿ ಅವರ ಜೊತೆಗೆ ಇರುವ ಯುವತಿಯು ‘ಮಿವಾ ಆಂಡ್ರೆಲಿಯೊ’ ಎಂಬ ಹೆಸರಿನಲ್ಲಿ ಇನ್ಸ್‌ಟಾಗ್ರಾಂನಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಕೇರಳದವರಾಗಿದ್ದು, ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆಯಾದ ‘ಕೆಎಸ್‌ಯು’ ನಾಯಕಿಯಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌-ಇದು ತಮಿಳುನಾಡೂ ಅಲ್ಲ, ಧ್ವಜ ಬಿಜೆಪಿಯದ್ದೂ ಅಲ್ಲ; ಎಡಿಟ್‌ ಚಿತ್ರ ಹಂಚಿದ ಸಿಟಿ ರವಿ

ಮಿವಾ ಆಂಡ್ರೆಲಿಯೊ ಅವರು ತನ್ನ ಇನ್ಸ್‌ಟಾಗ್ರಾಮ್ ಅಕೌಂಟ್‌ನಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವ ಚಿತ್ರಗಳನ್ನು ಮೂರು ದಿನಗಳ ಹಿಂದೆಯೆ ಪೋಸ್ಟ್‌ ಮಾಡಿದ್ದು, ‘‘ನನ್ನ ಜೀವನದ ಅತ್ಯಂತ ಸಂತೋಷದ ಕ್ಷಣ. ನನ್ನ ಸ್ವಂತ ರಾಹುಲ್ ಗಾಂಧಿ’’ ಎಂದು ಬರೆದುಕೊಂಡಿದ್ದಾರೆ.

ಇಷ್ಟೆ ಅಲ್ಲದೆ ಯೂತ್ ಕಾಂಗ್ರೆಸ್‌ ಕಾರ್ಯಕರ್ತ ಮೊಯಿದಿನ್ ಕುರೇಶಿ ಅವರು ಕೂಡಾ ರಾಹುಲ್ ಗಾಂಧಿ ಅವರು ‘ಮಿವಾ ಆಂಡ್ರೆಲಿಯೊ’ ಅವರೊಂದಿಗೆ ನಡೆಯುವ ವಿಡಿಯೊವನ್ನು ಅವರಿಗೆ ಟ್ಯಾಗ್ ಮಾಡಿ ಇನ್ಸ್‌ಟಾಗ್ರಾಮ್‌‌ನಲ್ಲ ಪೋಸ್ಟ್‌ ಮಾಡಿದ್ದಾರೆ.

 

View this post on Instagram

 

A post shared by Moideen Qurayshy (@moidheen.qurayshy)

ಅಲ್ಲದೆ ಅವರ ಚಿತ್ರವನ್ನು ‘ಭಾರತ್ ಜೋಡೋ’ ಅಧೀಕೃತ ಟ್ವಿಟರ್‌ ಹ್ಯಾಂಡಲ್‌ ಕೂಡಾ ಒಂದು ದಿನದ ಹಿಂದೆ ಪೋಸ್ಟ್‌ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌‌: ‘ಶಿವಲಿಂಗ ಪತ್ತೆ ಸುದ್ದಿ ಕೇಳಿ ಕಾಶಿಯ ಸಂಭ್ರಮ’ ಎಂಬ ಪ್ರತಿಪಾದನೆಯ ಈ ವಿಡಿಯೊ ಕನಿಷ್ಠ ಮೂರು ವರ್ಷ ಹಳೆಯದು

ಒಟ್ಟಿನಲ್ಲಿ ಹೇಳಬಹುದಾದರೆ, ಭಾರತ್‌ ಜೋಡೋ ಯಾತ್ರೆಯಲ್ಲಿ ರಾಹುಲ್‌ ಗಾಂಧಿ ಅವರು ಸಿಎಎ ವಿರೋಧಿ ಹೋರಾಟಗಾರ್ತಿ ಅಮೂಲ್ಯ ಲಿಯೋನ್‌‌ ಅವರನ್ನು ಭೇಟಿ ಮಾಡಿದ್ದಾರೆ ಎಂದು ಬಿಜೆಪಿ ಬೆಂಬಲಿಗರು ಹರಡುತ್ತಿರುವುದು ಸುಳ್ಳು ಸುದ್ದಿಯಾಗಿದೆ. ವೈರಲ್ ಚಿತ್ರ ಮತ್ತು ವಿಡಿಯೊದಲ್ಲಿ ಇರುವ ಯುವತಿಯು ಇನ್ಸ್‌ಟಾಗ್ರಾಮ್‌ನಲ್ಲಿ ‘ಮಿವಾ ಆಂಡ್ರೆಲಿಯೊ’ ಎಂದು ಗುರುತಿಸಿಕೊಂಡಿದ್ದು, ಕೇರಳದ ವಿದ್ಯಾರ್ಥಿ ಸಂಘಟನೆಯಾದ ಕೆಎಸ್‌ಯು ನಾಯಕಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...