Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌‌: ಭಾರತ-ಚೀನಾ ಗಡಿ ವಿವಾದ-ವಿಶ್ವದ ಬಲಶಾಲಿ ದೇಶಗಳು ಭಾರತದ ಪರ ನಿಂತಿವೆಯೇ?

ಫ್ಯಾಕ್ಟ್‌ಚೆಕ್‌‌: ಭಾರತ-ಚೀನಾ ಗಡಿ ವಿವಾದ-ವಿಶ್ವದ ಬಲಶಾಲಿ ದೇಶಗಳು ಭಾರತದ ಪರ ನಿಂತಿವೆಯೇ?

- Advertisement -
- Advertisement -

ಕಳೆದ ಮೂರು ವಾರಗಳಿಂದ ಲಡಾಖ್‌ನ ಪೂರ್ವ ಭಾಗದಲ್ಲಿ ಭಾರತ-ಚೀನಾ ಗಡಿ ವಿವಾದ ತಾರಕ್ಕಕ್ಕೇರಿದೆ. ಇದರ ಹಿನ್ನೆಲೆಯಲ್ಲಿ ಇಸ್ರೇಲ್, ರಷ್ಯಾ, ಅಮೆರಿಕ ಮತ್ತು ಜಪಾನ್ ದೇಶಗಳ ಮುಖ್ಯಸ್ಥರು ಭಾರತದ ಪರವಾಗಿ ನಿಂತಿದ್ದಾರೆ ಎಂದು ಮಹೇಶ್ ವಿಕ್ರಮ್ ಹೆಗ್ಡೆ ಅವರ ಪೋಸ್ಟ್‌ಕಾರ್ಡ್ ನ್ಯೂಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್‌ ಒಂದನ್ನು ಹರಿಯಬಿಟ್ಟಿದ್ದಾರೆ.(ಆರ್ಕೈವ್).

ಈ ಪೋಸ್ಟರನ್ನು ಈ ವರೆಗೆ 850 ಕ್ಕಿಂತಲೂ ಹೆಚ್ಚು ಜನರು ಹಂಚಿಕೊಂಡಿದ್ದಾರೆ. ಪೋಸ್ಟರ್‌ನಲ್ಲಿ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಅಮೆರಿಕ  ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಜಪಾನ್ ಪ್ರಧಾನಿ ಶಿಂಜೊ ಅಬೆ ಮುಂತಾದವರು, ಒಂದು ವೇಳೆ ಚೀನಾ ಭಾರತದ ಮೇಲೆ ಎರಗಿದರೆ ಚೀನಾದ ಕತೆ ಮುಗಿದಂತೆಯೆ, ನಾವು ಭಾರತದ ಜೊತೆ ಇದ್ದೇವೆ ಎಂದು ಹೇಳಿದ್ದಾರೆ ಎಂದು ಸೂಚಿಸಲಾಗಿತ್ತು.

ಫ್ಯಾಕ್ಟ್-ಚೆಕ್
ವಾಸ್ತವವಾಗಿ, ಅಮೇರಿಕಾ ಮತ್ತು ರಷ್ಯಾದೇಶಗಳು ಭಾರತ ಮತ್ತು ಚೀನಾ ನಡುವಿನ ನಿಲುವಿನ ಬಗ್ಗೆ ಅಧಿಕೃತ ಹೇಳಿಕೆಗಳನ್ನು ನೀಡಿವೆ. ಆದರೆ ಪೋಸ್ಟರಿನಲ್ಲಿ ಉಲ್ಲೇಖಿಸಿದ ರೀತಿಯಲ್ಲಿ ಯಾವ ನಾಯಕನೂ ಭಾರತದ ಪರವಾಗಿ ಹೇಳಿಲ್ಲ.

ಮೇ 27 ರಂದು ಅಮೆರಿಕಾ ಅಧ್ಯಕ್ಷ ಟ್ರಂಪ್ ಭಾರತ ಹಾಗೂ ಚೀನಾದ ನಡುವಿನ ವಿವಾದವನ್ನು ತಣಿಸಲು ಮಧ್ಯಸ್ಥಿಕೆ ವಹಿಸುತ್ತೇನೆ ಎಂದು ಹೇಳಿದ್ದರು.

ಇದಲ್ಲದೆ ಮರುದಿನವೂ ಟ್ರಂಪ್ “ಭಾರತ-ಚೀನಾ ವಿವಾದದ ವಿಚಾರವಾಗಿ ಪ್ರಧಾನಿ ಮೋದಿ ಜೊತೆ ತಾನು ಮಾತನಾಡಿದ್ದೇನೆ, ಅವರು ’ಉತ್ತಮ ಮನಸ್ಥಿತಿಯಲ್ಲಿಲ್ಲ’ ” ಎಂದು ಹೇಳಿದ್ದರು.

ಆದರೆ ಭಾರತ ಸರ್ಕಾರ ಇದನ್ನು ತಳ್ಳಿ ಹಾಕಿ, ಈ ರೀತಿಯ ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದ್ದರು.

ಜೂನ್ 1 ರಂದು ರಷ್ಯಾದ ರಾಯಭಾರಿ ರೋಮನ್ ಬಾಬುಷ್ಕಿ ಇಂಡಿಯಾ ಟುಡೆ ಜೊತೆ ಮಾತನಾಡುವಾಗ ಗಡಿ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಅವರು, ಭಾರತ-ಚೀನಾಗಗಳು ವಿವಾದಗಳನ್ನು ತಣ್ಣಗಾಗಿಸಲು ಅವರ ನಡುವೆಯೇ  ಕಾರ್ಯವಿಧಾನಗಳಿವೆ. ಈ ನಿಟ್ಟಿನಲ್ಲಿ ನಾವು ಅವರ ಪ್ರತಿ ಪ್ರಯತ್ನವನ್ನೂ ಪ್ರೋತ್ಸಾಹಿಸುತ್ತೇವೆ ಎಂದು ಹೇಳಿದ್ದರು.

ಇನ್ನು ಜಪಾನ್ ಮತ್ತು ಇಸ್ರೇಲ್ ಈ ವಿವಾದದ ಬಗ್ಗೆ ಯಾವುದೇ ಸಾರ್ವಜನಿಕ ಪ್ರತಿಕ್ರಿಯೆಗಳನ್ನು ನೀಡಿಲ್ಲ. ಅಷ್ಟೇ ಅಲ್ಲದೆ ಕಳೆದ ಕೆಲವು ವರ್ಷಗಳಿಂದ ಚೀನಾ ಹಾಗೂ ಇಸ್ರೇಲ್ ಜೊತೆಗಿನ ಸಂಬಂಧಗಳು ತುಂಬಾ ಚೆನ್ನಾಗಿದ್ದು,  2004 ರಿಂದ ನಿರಂತರವಾಗಿ ವ್ಯಾಪಾರವನ್ನು ಹೆಚ್ಚಿಸಿದೆ.

ಒಟ್ಟಿನಲ್ಲಿ ಭಾರತ-ಚೀನಾ ಗಡಿ ವಿವಾದದ ವಿಚಾರವಾಗಿ ಯಾವುದೇ ದೇಶಗಳು ಭಾರತವನ್ನು ಬೆಂಬಲಿಸಿಲ್ಲ.


ಓದಿ: ಭಾರತ-ಚೀನಾ ಗಡಿವಿವಾದ ಮಧ್ಯಸ್ಥಿಕೆ ವಹಿಸಲು ಸಿದ್ದ: ಡೊನಾಲ್ಡ್‌ ಟ್ರಂಪ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...