Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಎಂಬ ಯೋಜನೆಯೆ ಇಲ್ಲ; ಮೋಸ ಹೋಗದಿರಿ!

ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಎಂಬ ಯೋಜನೆಯೆ ಇಲ್ಲ; ಮೋಸ ಹೋಗದಿರಿ!

ಈ ಯೋಜನೆ ಮೂಲಕ ಹೆಣ್ಣು ಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ಎಂದು ವಾಟ್ಸಪ್ ಮತ್ತು ಫೇಸ್‌ಬುಕ್‌ನಲ್ಲಿ ಹರಿಬಿಡಲಾಗುತ್ತಿದೆ

- Advertisement -
- Advertisement -

“ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ, ಪ್ರಧಾನಿ ಮೋದಿ ಜಾರಿಗೆ ತಂದಿರುವ ‘ಪಿಎಂ ಕನ್ಯಾ ಆಯುಷ್ ಯೋಜನೆ’ ಅಡಿಯಲ್ಲಿ, ಪತ್ರಿ ತಿಂಗಳು 2000 ರೂ. ಸಿಗುತ್ತದೆ” ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಸಂದೇಶವು ಹಲವಾರು ವರ್ಷಗಳಿಂದ ಹರಿದಾಡುತ್ತಿದ್ದು, ಯೋಜನೆಗಾಗಿ ಹಲವು ದಾಖಲಾತಿಗಳನ್ನು ‘ಸಿಎಸ್‌ಸಿ’ ಎಂಬ ಪೋರ್ಟಲ್‌ಗೆ ಸಲ್ಲಿಸಬೇಕು ಎಂದು ವೈರಲ್‌ ಸಂದೇಶ ಹೇಳುತ್ತದೆ.

ವಾಟ್ಸಪ್‌ನಲ್ಲಿ ಹರಿದಾಡುತ್ತಿರವ ಸಂದೇಶದಲ್ಲಿ, “ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ ಪ್ರತಿ ತಿಂಗಳು 2000ರೂಪಾಯಿ ನೇರವಾಗಿ ನಿಮ್ಮ ಖಾತೆಗೆ ಬರುತ್ತವೆ. ಅದು ಹೇಗೆಂದರೆ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರು ಜಾರಿಗೆ ತಂದಿರುವ ಯೋಜನೆ. ಅದು ಯಾವುದೆಂದರೆ ‘ಪಿ ಎಂ ಕನ್ಯಾ ಯೋಜನೆ’. ಪಿ ಎಂ ಕನ್ಯಾ ಯೋಜನೆಗೆ ಅಜಿ೯ ಸಲ್ಲಿಸಲು; ವಯಸ್ಸಿನ ಮಿತಿ 05 ರಿಂದ 18 ವಷ೯ದೊಳಗಿನವರು, ಆಧಾರ ಕಾರ್ಡ್, ಬ್ಯಾಂಕ್ ಪಾಸಬುಕ್, ಮಗುವಿನ 2 ಭಾವಚಿತ್ರ, ತಂದೆ ತಾಯಿಯ ವಾಷಿ೯ಕ ವರಮಾನ 2 ಲಕ್ಷ ರೂ ದಾಟಿರಬಾರದು” ಎಂದು ಹೇಳಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ಅಷ್ಟೇ ಅಲ್ಲದೆ, “ಅಜಿ೯ಯನ್ನು CSC ಗೆ ಹೋಗಿ ಅಜಿ೯ಯನ್ನು ಸಲ್ಲಿಸಬೇಕು. ಸಲ್ಲಿಸಿದ ನಂತರ ನಿಮಗೆ ಒಂದು ರಶೀದಿ ಕೊಡುತ್ತಾರೆ ಅದನ್ನು ಜೋಪಾನವಾಗಿ ಇಟ್ಟುಕೊಳ್ಳಬೇಕು. ಮತ್ಯಾಕೆ ತಡಾ ಈಗಲೇ ಹೋಗಿ ಪ್ರಧಾನಮಂತ್ರಿ ಕನ್ಯಾ ಆಯುಷ್ ಯೋಜನೆಗೆ ಅಜಿ೯ ಸಲ್ಲಿಸಿ. ನಿಮ್ಮ ಹೆಣ್ಣು ಮಕ್ಕಳ ಭವಿಷ್ಯ ರೂಪಿಸಿಕೊಳ್ಳಬಹುದು” ಎಂದು ಹುರಿದುಂಬಿಸಲಾಗಿದೆ.

ವಾಟ್ಸಪ್ ಮಾತ್ರವಲ್ಲದೆ, ಫೇಸ್‌ಬುಕ್‌ನಲ್ಲಿ ಕೂಡಾ ಈ ಸಂದೇಶದ ಹರಿದಾಡುತ್ತಿದೆ. ಅದನ್ನು ಇಲ್ಲಿ, ಇಲ್ಲಿ, ಇಲ್ಲಿ ಕೂಡಾ ನೋಡಬಹುದಾಗಿದೆ.

ಇದನ್ನೂ ಓದಿ: ಲಸಿಕೆ ಪಡೆದ ಎಲ್ಲರೂ 2 ವರ್ಷಗಳಲ್ಲಿ ಸಾಯುತ್ತಾರೆ: ಈ ವ್ಯಾಟ್ಸಾಪ್ ವದಂತಿ ನಂಬಬೇಡಿ 

ಫ್ಯಾಕ್ಟ್‌ಚೆಕ್‌

‘ಪಿಎಂ ಕನ್ಯಾ ಆಯುಷ್ ಯೋಜನೆ’ ಎಂಬ ಹೆಸರಿನ ಯಾವುದೆ ಯೋಜನೆಯನ್ನು ಒಕ್ಕೂಟ ಸರ್ಕಾರ ಇದುವರೆಗೂ ರೂಪಿಸಿಲ್ಲ. ಈ ರೀತಿಯ ಯಾವುದೆ ಯೋಜನೆಯನ್ನು ಜಾರಿಗೆ ತಂದಿಲ್ಲ ಎಂದು ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೆಸ್‌ ಇನ್ಫಾರ್ಮೇಶನ್‌ ಬ್ಯೂರೋ(PIB) ಸ್ಪಷ್ಟಪಡಿಸಿದೆ.

ಈ ಸಂದೇಶವು ಕಳೆದ ಕೆಲವು ವರ್ಷಗಳಿಂದ ವೈರಲ್ ಆಗುತ್ತಿದೆ. ಇದೀಗ ಕನ್ನಡದಲ್ಲಿ ಭಾಷಾಂತರಗೊಂಡು ಹರಿದಾಡುತ್ತಿದೆ.

ಈ ಬಗ್ಗೆ PIB ಫ್ಯಾಕ್ಟ್‌ಚೆಕ್ ಕೂಡಾ ಮಾಡಿದ್ದು, “ಈ ಪ್ರತಿಪಾದನೆಗಳು ನಕಲಿಯಾಗಿದ್ದು, ಒಕ್ಕೂಟ ಸರ್ಕಾರದ ಅಡಿಯಲ್ಲಿ ಅಂತಹ ಯಾವುದೇ ಯೋಜನೆ ಇಲ್ಲ. ದಯವಿಟ್ಟು ಅಂತಹ ನಕಲಿ ಯೋಜನೆಗಳ ಬಗ್ಗೆ ಎಚ್ಚರದಿಂದಿರಿ” ಎಂದು ಅದು ಎಚ್ಚರಿಸಿದೆ.

ಒಟ್ಟಿನಲ್ಲಿ, ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವ ‘ಪಿಎಂ ಕನ್ಯಾ ಆಯುಷ್ ಯೋಜನೆ’ ಎಂಬ ಯೋಜನೆ ನಕಲಿಯಾಗಿದೆ. ಹೆಣ್ಣು ಮಕ್ಕಳಿಗೆ ಪ್ರತಿ ತಿಂಗಳು 2000 ರೂ. ಸಿಗುವ ಯಾವುದೆ ಯೋಜನೆಯನ್ನು ಒಕ್ಕೂಟ ಸರ್ಕಾರ ರೂಪಿಸಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಅನುಕಂಪಕ್ಕಾಗಿ ಗಾಝಾ ನಾಟಕವಾಡುತ್ತಿದೆ’ ಎಂದು ಎಡಿಟೆಡ್‌‌ ವಿಡಿಯೊ ಶೇರ್‌ ಮಾಡುತ್ತಿರುವ ಬಲಪಂಥೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...