Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

- Advertisement -
- Advertisement -

ದೇಶದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದ ಪುರೋಹಿತರೊಬ್ಬರ ಮನೆಗೆ ಆದಾಯ ತೆರಿಗೆ(ಐಟಿ) ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದಾಗ ಸಿಕ್ಕಿರುವ ಹಣ, ಚಿನ್ನದ ಒಡವೆ ಹಾಗೂ ವಜ್ರದ ದೃಶ್ಯಗಳು ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊವೊಂದು ಹರಿದಾಡುತ್ತಿದೆ. ವಿಡಿಯೊದಲ್ಲಿ, ಚಿನ್ನಾಭರಣಗಳನ್ನು ಸಾಲಾಗಿ ಜೋಡಿಸಿಟ್ಟಿರುವುದು ಮತ್ತು ಒಂದಷ್ಟು ಜನರು ಪೊಲೀಸ್‌ ಯೂನಿಫಾರ್ಮ್‌ನಲ್ಲಿ ಇರುವುದು ಕಾಣಬಹುದಾಗಿದೆ.

“ತಿರುಪತಿ ತಿಮ್ಮಪ್ಪನ ಸೇವೆ ಮಾಡುವ 16 ಪುರೋಹಿತರಲ್ಲಿ ಒಬ್ಬ ಪುರೋಹಿತರ ಮನೆಗೆ ಇನ್‌ಕಮ್‌ ಟ್ಯಾಕ್ಸ್ ವಿಭಾಗದ ಅಧಿಕಾರಿಗಳು ರೈಡ್ ಮಾಡಿದಾಗ ಸಿಕ್ಕಿರುವ ಹಣ, ಚಿನ್ನದ ಒಡವೆ ಹಾಗೂ ವಜ್ರ ಎಷ್ಟು ಗೊತ್ತಾ? 128 ಕೆಜಿ ಚಿನ್ನ , 150 ಕೋಟಿ ಕ್ಯಾಶ್, 70 ಕೋಟಿ ಬೆಲೆಯ ವಜ್ರ” ಎಂದು ವಾಟ್ಸಪ್‌ನಲ್ಲಿ ಸತತವಾಗಿ ವಿಡಿಯೊ ಹರಿದಾಡುತ್ತಿದೆ. ಈ ಬಗ್ಗೆ ಫ್ಯಾಕ್ಟ್‌ಚೆಕ್ ಮಾಡುವಂತೆ ನಾನುಗೌರಿ.ಕಾಂಗೆ ಸಂದೇಶಗಳು ಬಂದಿವೆ.

ವಿಡಿಯೊ ಸತ್ಯಾಸತ್ಯತೆಯ ಬಗ್ಗೆ ಪ್ರಶ್ನೆ ಕೇಳಿ ನಾನುಗೌರಿ.ಕಾಂ ಗೆ ಬಂದಿರುವ ಸಂದೇಶ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಶದ ಇತರ ಭಾಗಗಳು ಮೊಘಲರಿಂದ ಆಳುತ್ತಿದ್ದಾಗ ಗೋವಾ ಪೋರ್ಚುಗಲ್ ಆಳ್ವಿಕೆಗೆ ಒಳಪಟ್ಟಿತು ಎಂಬ ಮೋದಿ ಹೇಳಿಕೆ ಸುಳ್ಳು

ವಿಡಿಯೊ ಫೇಸ್‌ಬುಕ್‌‌ನಲ್ಲಿ ಕೂಡಾ ಹರಿದಾಡುತ್ತಿದ್ದು, ನೂರಾರು ಜನರು ಹಂಚಿಕೊಂಡಿದ್ದಾರೆ. ಫೇಸ್‌ಬುಕ್ ಅಲ್ಲಿ ಕೂಡಾ ವಿಡಿಯೊ ಜೊತೆಗಿನ ಸಂದೇಶವು ವಾಟ್ಸಪ್‌ನಲ್ಲಿ ಹರಿದಾಡುತ್ತಿದ್ದಂತೆ ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ ಸಿಕ್ಕ ಆಭರಣಗಳು ಎಂದು ಪ್ರತಿಪಾದಿಸುತ್ತಿದೆ.

ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳು

ಫೇಸ್‌ಬುಕ್‌ನಲ್ಲಿ ಈ ವಿಡಿಯೊವನ್ನು ಹಲವಾರು ಜನರು ಹಂಚಿಕೊಂಡಿದ್ದು ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಸುಮಾರು 37 ಸೆಕೆಂಡಿನ ಈ ವಿಡಿಯೊವನ್ನು ಅದೇ ಪ್ರತಿಪಾದನೆಯೊಂದಿಗೆ ಯೂಟ್ಯೂಬ್‌ನಲ್ಲಿಯೂ ಹಂಚಿಕೊಳ್ಳಲಾಗುತ್ತಿದೆ. ಅದನ್ನು ಇಲ್ಲಿ ನೋಡಬಹುದಾಗಿದೆ.

ಇಷ್ಟೇ ಅಲ್ಲದೆ, ಈ ವಿಡಿಯೊ ತಿರುಪತಿ ದೇವಸ್ಥಾನದ ಮಾಜಿ ಟ್ರಸ್ಟಿ ಜೆ. ಸೇಕರ್‌ ರೆಡ್ಡಿ ಅವರಿಂದ ವಶಪಡಿಸಿಕೊಂಡಿರುವ ಚಿನ್ನಾಭರಣಗಳು ಎಂದು ಪ್ರತಿಪಾದಿಸಿ ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ಅವರುಗಳ ಆರ್ಕೈವ್ ಲಿಂಕ್‌ ಅನ್ನು ಇಲ್ಲಿ ವೀಕ್ಷಿಸಿ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಯೋಗಿ ಆದಿತ್ಯನಾಥರ ಬೆಂಗಾವಲಿನ ಮೇಲೆ ದಾಳಿ ಮಾಡಿದ ಯುವಕರ ವಿಡಿಯೊ ಈಗಿನದ್ದಲ್ಲ

ಫ್ಯಾಕ್ಟ್‌‌ಚೆಕ್‌

ವಾಸ್ತವದಲ್ಲಿ ಈ ವಿಡಿಯೊಗೂ, ತಿರುಪತಿ ದೇವಸ್ಥಾನಕ್ಕೂ ಯಾವುದೇ ಸಂಬಂಧವೇ ಇಲ್ಲ. ಈ ಬಗ್ಗೆ ನಾವು ರಿವರ್ಸ್ ಸರ್ಚ್ ಮೂಲಕ ಹುಡುಕಾಡಿದಾಗ, ಇದು ಇತ್ತೀಚೆಗೆ ತಮಿಳುನಾಡಿನಲ್ಲಿ ನಡೆದ ಚಿನ್ನಾಭರಣಗಳ ಅಂಗಡಿಯಿಂದ ನಡೆದ ದರೋಡೆ ಪ್ರಕರಣದಲ್ಲಿ ಪೊಲೀಸರು ಆರೋಪಿಗಳಿಂದ ಮರುವಶಪಡಿಸಿಕೊಂಡಿರುವ ವಿಡಿಯೊವಾಗಿದೆ. ಇದನ್ನು ತಮಿಳು ಮಾಧ್ಯಮ ಜಯಾ ಪ್ಲಸ್‌ ಡಿಸೆಂಬರ್‌ 22, 2021 ರಂದು ವರದಿ ಮಾಡಿತ್ತು.

ವರದಿಯ ಪ್ರಕಾರ, ತಮಿಳುನಾಡಿನ ವೆಲ್ಲೂರಿನಲ್ಲಿ ಇರುವ ಜೋಸ್‌ ಅಲುಕ್ಕಾಸ್‌ ಶೋರೂಂನಿಂದ ಈ ದರೋಡೆ ನಡೆದಿತ್ತು. ಅದನ್ನು ದರೋಡೆಕೋರದಿಂದ ಪೊಲೀಸರು ಮರು ವಶಪಡಿಸಿಕೊಂಡಿರುವ ವಿಡಿಯೊ ಇದಾಗಿದೆ. ಇದನ್ನು ಹಲವಾರು ತಮಿಳು ಸುದ್ದಿ ವೆಬ್‌ಸೈಟ್‌ಗಳು ತಮ್ಮ ಯೂಟ್ಯೂಬ್‌ ಚಾನೆಲ್‌ಗಳು ಪ್ರಸಾರ ಮಾಡಿವೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ದರೋಡೆಯ ಘಟನೆಯು ಡಿಸೆಂಬರ್ 14, 2021 ರ ಮಧ್ಯರಾತ್ರಿ ವೆಲ್ಲೂರಿನ ಜೋಸ್ ಅಲುಕ್ಕಾಸ್ ಶೋರೂಮ್‌ನಿಂದ 15 ಕೆಜಿ ಚಿನ್ನ ಮತ್ತು ಸುಮಾರು 500 ಗ್ರಾಂ ವಜ್ರಗಳನ್ನು ದರೋಡೆ ಮಾಡಲಾಗಿತ್ತು. ತನಿಖೆಯ ನಂತರ ವೆಲ್ಲೂರು ಪೊಲೀಸರು ವೆಲ್ಲೂರಿನ ಸ್ಮಶಾನದಲ್ಲಿ ಹೂತಿಟ್ಟಿದ್ದ ಎಲ್ಲಾ ಕದ್ದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಜೋಸ್ ಅಲುಕ್ಕಾಸ್ ಶೋರೂಂನಿಂದ ಚಿನ್ನ ಮತ್ತು ವಜ್ರಗಳನ್ನು ದರೋಡೆ ಮಾಡಿದ್ದ ಆರೋಪಿ ಡೀಕಾರಾಮನ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಹೀಗಾಗಿ ಈ ವಿಡಿಯೊಗೂ ತಿರುಪತಿ ದೇವಾಲಯಕ್ಕೂ ಯಾವುದೆ ಸಂಬಂಧವಿಲ್ಲ. ಆದರೆ 2016ರಲ್ಲಿ ತಿರುಪತಿ ದೇವಾಲಯದ ಆಡಳಿತ ಮಂಡಳಿ ಸದಸ್ಯರಾಗಿದ್ದ ಜೆ. ಶೇಕರ್ ರೆಡ್ಡಿ ಅವರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ₹100 ಕೋಟಿ ನಗದು ಹಾಗೂ 120 ಕೆಜಿ ಚಿನ್ನಾಭರಣ ವಶಪಡಿಸಿಕೊಂಡಿದ್ದರು. ಈ ಐಟಿ ದಾಳಿಗಳ ನಂತರ ಆಂಧ್ರಪ್ರದೇಶ ಸರ್ಕಾರ ಸೇಕರ್ ರೆಡ್ಡಿ ಅವರನ್ನು ಟಿಟಿಡಿ ಸದಸ್ಯತ್ವದಿಂದ ತೆಗೆದುಹಾಕಿತ್ತು.

ಆದರೆ, ಸಾಕ್ಷ್ಯಾಧಾರಗಳ ಕೊರತೆಯ ಆಧಾರದ ಮೇಲೆ 2020 ರ ಸೆಪ್ಟೆಂಬರ್‌ನಲ್ಲಿ ಶೇಕರ್ ರೆಡ್ಡಿ ವಿರುದ್ಧ ಸಿಬಿಐ ದಾಖಲಿಸಿದ ಪ್ರಕರಣವನ್ನು ವಿಶೇಷ ನ್ಯಾಯಾಲಯವು ವಜಾಗೊಳಿಸಿತ್ತು. ಪ್ರಕರಣವನ್ನು ವಜಾ ಮಾಡಿದ ನಂತರ ಶೇಕರ್ ರೆಡ್ಡಿ ಮತ್ತೇ ತಿರುಪತಿ ಆಡಳಿತ ಮಂಡಳಿಗೆ ಸೇರಿದ್ದರು. ಆದಾಗ್ಯೂ, ಆಗಸ್ಟ್ 2021 ರಲ್ಲಿ ರಚಿತವಾದ ಹೊಸ ಮಂಡಳಿಯಲ್ಲಿ ಅವರನ್ನು ಸೇರಿಸಲಾಗಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ವಿಡಿಯೊಗೂ, ತಿರುಪತಿ ದೇವಸ್ಥಾನಕ್ಕೂ ಯಾವುದೆ ಸಂಬಂಧವಿಲ್ಲ. ವೈರಲ್‌ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊ, ತಮಿಳುನಾಡಿನ ವೆಲ್ಲೂರಿನಲ್ಲಿ ಇತ್ತೀಚೆಗೆ ನಡೆದ ದರೋಡೆಗೆ ಸಂಬಂಧಪಟ್ಟದ್ದಾಗಿದೆ.

ಇದನ್ನೂ ಓದಿ:ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....