ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬೈಡೆನ್ ಆಯ್ಕೆಯಾಗಿದ್ದು, ಸಂಪ್ರದಾಯದಂತೆ ಜನವರಿ 20, 2021 ರಂದು ಅವರು ಪ್ರಮಾಣವಚನ ಸ್ವೀಕರಿಸುವ ನಿರೀಕ್ಷೆಯಿದೆ. ಈ ಮಧ್ಯೆ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾರತದಿಂದ ಮಾಜಿ ಪ್ರಧಾನಿ ಮನಮೋಹನ್‌ಸಿಂಗ್ ಅವರು ಭಾಗಿಯಾಗಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಬೈಡೆನ್ 2008 ರಲ್ಲಿ ಅಮೆರಿಕಾ ಸೆನೆಟ್ ವಿದೇಶ ಸಂಬಂಧಗಳ ಸಮಿತಿಯ ಅಧ್ಯಕ್ಷರಾಗಿದ್ದರು. ಆ ಸಂದರ್ಭದಲ್ಲಿ, ಯುಎಸ್-ಇಂಡಿಯಾ ನಾಗರಿಕ ಪರಮಾಣು ಒಪ್ಪಂದಕ್ಕೆ ಎರಡೂ ದೇಶಗಳ ನಡುವೆ ಸಂಪರ್ಕ ಕೊಂಡಿಯಾಗಿ ಕೆಲಸ ಮಾಡಿದ್ದರು. ಆ ವೇಳೆ ಭಾರತದಲ್ಲಿ ಡಾ. ಮನಮೋಜಹನ್ ಸಿಂಗ್ ಪ್ರಧಾನಮಂತ್ರಿಯಾಗಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ಆಹ್ವಾನಿಸಲಾಗಿದೆ ಎಂದು ಮಾಹಿತಿಯನ್ನು ಹಂಚಿಕೊಳ್ಳಲಾಗುತ್ತಿದೆ.
ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪ್ರತಿಭಟನೆಯೊಂದರಲ್ಲಿ ಭಾರತದ ಬಾವುಟವನ್ನು ಬಳಸಲಾಗಿದೆಯೇ?
ಆದರೆ, ಅಧ್ಯಕ್ಷರಾಗಿ ಚುನಾಯಿತರಾದ ಬೈಡೆನ್ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಡಾ. ಮನಮೋಹನ್ ಸೇರಿದಂತೆ ಯಾವುದೇ ಭಾರತೀಯರನ್ನು ಇದುವರೆಗೂ ಅಮೆರಿಕಾ ಆಹ್ವಾನಿಸಿರುವ ಬಗ್ಗೆ ವರದಿಯಾಗಿಲ್ಲ. ಅಲ್ಲದೆ, ಪ್ರಮಾಣವಚನ ಕಾರ್ಯಕ್ರಮದಲ್ಲಿ ಸಾಮಾನ್ಯ ಅಥಿತಿಗಳು ಮಾತ್ರ ಇರುತ್ತಾರೆ. ಮುಖ್ಯ ಅಥಿತಿಯಾಗಿ ಯಾರೂ ಇರುವುದಿಲ್ಲ. ಈ ಹಿಂದೆಯೂ ಅಮೆರಿಕಾ ಅಧ್ಯಕ್ಷರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಯಾವುದೇ ಮುಖ್ಯ ಅಥಿತಿಯಾಗಿ ಭಾಗಿಯಾಗಿರುವುದು ತಿಳಿದುಬಂದಿಲ್ಲ.
ಅಷ್ಟೇ ಅಲ್ಲದೆ ಸ್ವತಃ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಚೇರಿಯೆ ಈ ಬಗ್ಗೆ ಸ್ಪಷ್ಟಪಡಿಸಿದ್ದು, ಅವರಿಗೆ ಅಂತಹ ಯಾವುದೇ ಆಹ್ವಾನಗಳು ಬಂದಿಲ್ಲ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ನೈಜೀರಿಯಾದಲ್ಲಿ ನಟ ಸುಶಾಂತ್‌ಗೆ ನ್ಯಾಯ ಕೋರಿ ನಡೆಯಿತೆ ಪ್ರತಿಭಟನೆ?
ಅದಾಗ್ಯೂ, “ಅಮೆರಿಕಾ ಫಲಿತಾಂಶವನ್ನು ಅಧಿಕೃತವಾಗಿ ಇನ್ನೂ ಘೋಷಿಸಲಾಗಿಲ್ಲ. ಕಾನೂನು ಕ್ರಮಗಳು ಇನ್ನೂ ನಡೆಯುತ್ತಿವೆ. ಹೀಗಿರುವಾಗ ಬೈಡೆನ್ ಕಾರ್ಯಕ್ರಮಕ್ಕೆ ಅತಿಥಿಗಳನ್ನು ಆಹ್ವಾನಿಸಲು ಹೇಗೆ ಸಾಧ್ಯ” ಎಂದು ಮನಮೋಹನ್ ಸಿಂಗ್ ಹೇಳಿದ್ದಾಗಿ ವರದಿಯಾಗಿದೆ.
ಒಟ್ಟಾರೆಯಾಗಿ ಹೇಳುವುದಾದರೆ, ಜೋ ಬೈಡೆನ್ ಚುನಾವಣೆಯಲ್ಲಿ ಗೆದ್ದಿದ್ದು ನಿಜವಾಗಿದ್ದರೂ ಅದು ಇನ್ನೂ ಅಧೀಕೃತವಾಗಿ ಘೋಷಣೆಯಾಗಿಲ್ಲ. ಹಾಗಾಗಿ ಈ ಮಧ್ಯೆ, ಜೋ ಬೈಡೆನ್ ತಮ್ಮ ಪ್ರಮಾಣಚನ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಮನಮೋಹನ್‌ಸಿಂಗ್ ಅವರಿಗೆ ಆಹ್ವಾನ ನೀಡಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಆದ್ದರಿಂದ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿರುವ ಮಾಹಿತಿ ಸುಳ್ಳಿನಿಂದ ಕೂಡಿದೆ.
ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ವಿಶ್ವದ ಏಳನೇ ಹೆಚ್ಚು ವಿದ್ಯಾವಂತ ನಾಯಕ ಎಂಬುದು ನಿಜವೇ?


