Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಅಮೆರಿಕ ಅಧ್ಯಕ್ಷೀಯ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮನಮೋಹನ್ ಸಿಂಗ್‌‌ಗೆ ಆಹ್ವಾನವಿದೆಯೆ?

ಫ್ಯಾಕ್ಟ್‌‌ಚೆಕ್: ಅಮೆರಿಕ ಅಧ್ಯಕ್ಷೀಯ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮನಮೋಹನ್ ಸಿಂಗ್‌‌ಗೆ ಆಹ್ವಾನವಿದೆಯೆ?

- Advertisement -
- Advertisement -

ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬೈಡೆನ್ ಆಯ್ಕೆಯಾಗಿದ್ದು, ಸಂಪ್ರದಾಯದಂತೆ ಜನವರಿ 20, 2021 ರಂದು ಅವರು ಪ್ರಮಾಣವಚನ ಸ್ವೀಕರಿಸುವ ನಿರೀಕ್ಷೆಯಿದೆ. ಈ ಮಧ್ಯೆ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾರತದಿಂದ ಮಾಜಿ ಪ್ರಧಾನಿ ಮನಮೋಹನ್‌ಸಿಂಗ್‌ ಅವರು ಭಾಗಿಯಾಗಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಇದರ ಆರ್ಕೈವ್‌ ಇಲ್ಲಿದೆ .

ಬೈಡೆನ್ 2008 ರಲ್ಲಿ ಅಮೆರಿಕಾ ಸೆನೆಟ್ ವಿದೇಶ ಸಂಬಂಧಗಳ ಸಮಿತಿಯ ಅಧ್ಯಕ್ಷರಾಗಿದ್ದರು. ಆ ಸಂದರ್ಭದಲ್ಲಿ, ಯುಎಸ್-ಇಂಡಿಯಾ ನಾಗರಿಕ ಪರಮಾಣು ಒಪ್ಪಂದಕ್ಕೆ ಎರಡೂ ದೇಶಗಳ ನಡುವೆ ಸಂಪರ್ಕ ಕೊಂಡಿಯಾಗಿ ಕೆಲಸ ಮಾಡಿದ್ದರು. ಆ ವೇಳೆ ಭಾರತದಲ್ಲಿ ಡಾ. ಮನಮೋಜಹನ್ ಸಿಂಗ್‌ ಪ್ರಧಾನಮಂತ್ರಿಯಾಗಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ಆಹ್ವಾನಿಸಲಾಗಿದೆ ಎಂದು ಮಾಹಿತಿಯನ್ನು ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪ್ರತಿಭಟನೆಯೊಂದರಲ್ಲಿ ಭಾರತದ ಬಾವುಟವನ್ನು ಬಳಸಲಾಗಿದೆಯೇ?

ಆದರೆ, ಅಧ್ಯಕ್ಷರಾಗಿ ಚುನಾಯಿತರಾದ ಬೈಡೆನ್ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಡಾ. ಮನಮೋಹನ್ ಸೇರಿದಂತೆ ಯಾವುದೇ ಭಾರತೀಯರನ್ನು ಇದುವರೆಗೂ ಅಮೆರಿಕಾ ಆಹ್ವಾನಿಸಿರುವ ಬಗ್ಗೆ ವರದಿಯಾಗಿಲ್ಲ. ಅಲ್ಲದೆ, ಪ್ರಮಾಣವಚನ ಕಾರ್ಯಕ್ರಮದಲ್ಲಿ ಸಾಮಾನ್ಯ ಅಥಿತಿಗಳು ಮಾತ್ರ ಇರುತ್ತಾರೆ. ಮುಖ್ಯ ಅಥಿತಿಯಾಗಿ ಯಾರೂ ಇರುವುದಿಲ್ಲ. ಈ ಹಿಂದೆಯೂ ಅಮೆರಿಕಾ ಅಧ್ಯಕ್ಷರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಯಾವುದೇ ಮುಖ್ಯ ಅಥಿತಿಯಾಗಿ ಭಾಗಿಯಾಗಿರುವುದು ತಿಳಿದುಬಂದಿಲ್ಲ.

ಅಷ್ಟೇ ಅಲ್ಲದೆ ಸ್ವತಃ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಚೇರಿಯೆ ಈ ಬಗ್ಗೆ ಸ್ಪಷ್ಟಪಡಿಸಿದ್ದು, ಅವರಿಗೆ ಅಂತಹ ಯಾವುದೇ ಆಹ್ವಾನಗಳು ಬಂದಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ನೈಜೀರಿಯಾದಲ್ಲಿ ನಟ ಸುಶಾಂತ್‌ಗೆ ನ್ಯಾಯ ಕೋರಿ ನಡೆಯಿತೆ ಪ್ರತಿಭಟನೆ?

ಅದಾಗ್ಯೂ, “ಅಮೆರಿಕಾ ಫಲಿತಾಂಶವನ್ನು ಅಧಿಕೃತವಾಗಿ ಇನ್ನೂ ಘೋಷಿಸಲಾಗಿಲ್ಲ. ಕಾನೂನು ಕ್ರಮಗಳು ಇನ್ನೂ ನಡೆಯುತ್ತಿವೆ. ಹೀಗಿರುವಾಗ ಬೈಡೆನ್‌ ಕಾರ್ಯಕ್ರಮಕ್ಕೆ ಅತಿಥಿಗಳನ್ನು ಆಹ್ವಾನಿಸಲು ಹೇಗೆ ಸಾಧ್ಯ” ಎಂದು ಮನಮೋಹನ್‌ ಸಿಂಗ್‌ ಹೇಳಿದ್ದಾಗಿ ವರದಿಯಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಜೋ ಬೈಡೆನ್‌ ಚುನಾವಣೆಯಲ್ಲಿ ಗೆದ್ದಿದ್ದು ನಿಜವಾಗಿದ್ದರೂ ಅದು ಇನ್ನೂ ಅಧೀಕೃತವಾಗಿ ಘೋಷಣೆಯಾಗಿಲ್ಲ. ಹಾಗಾಗಿ ಈ ಮಧ್ಯೆ, ಜೋ ಬೈಡೆನ್‌ ತಮ್ಮ ಪ್ರಮಾಣಚನ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಮನಮೋಹನ್‌ಸಿಂಗ್‌ ಅವರಿಗೆ ಆಹ್ವಾನ ನೀಡಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಆದ್ದರಿಂದ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿರುವ ಮಾಹಿತಿ ಸುಳ್ಳಿನಿಂದ ಕೂಡಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ವಿಶ್ವದ ಏಳನೇ ಹೆಚ್ಚು ವಿದ್ಯಾವಂತ ನಾಯಕ ಎಂಬುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...