Homeಕರ್ನಾಟಕಫ್ಯಾಕ್ಟ್‌ಚೆಕ್: ಕನ್ನಡ ಖಾಸಗಿ ಚಾನೆಲ್ ಮಾಲಿಕರು ಪ್ರತಿ ಜಿಲ್ಲೆಯಲ್ಲಿ ಕೊರೊನಾ ಆಸ್ಪತ್ರೆ ಕಟ್ಟುತ್ತಿರುವುದು ನಿಜವೇ ?

ಫ್ಯಾಕ್ಟ್‌ಚೆಕ್: ಕನ್ನಡ ಖಾಸಗಿ ಚಾನೆಲ್ ಮಾಲಿಕರು ಪ್ರತಿ ಜಿಲ್ಲೆಯಲ್ಲಿ ಕೊರೊನಾ ಆಸ್ಪತ್ರೆ ಕಟ್ಟುತ್ತಿರುವುದು ನಿಜವೇ ?

ನೋಟಿಸಿನಲ್ಲಿರುವ ಸಂಪರ್ಕ ಸಂಖ್ಯೆಗೆ ಹಲವರು ಕರೆ ಮಾಡಿ ಮೂರು ಮಾಧ್ಯಮಗಳನ್ನೂ ಆಸ್ಪತ್ರೆ ನಿರ್ಮಾಣದ ಬಗ್ಗೆ ವಿಚಾರಿಸುತ್ತಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ಕನ್ನಡದ ಖಾಸಗಿ ಸುದ್ದಿ ಚಾನೆಲ್‌ಗಳಾದ ಟಿವಿ9, ಪಬ್ಲಿಕ್‌ ಟಿವಿ, ಸುರ್ವಣ ನ್ಯೂಸ್‌ ಚಾನೆಲ್‌ಗಳ ಮಾಲಿಕರು ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ 100 ಹಾಸಿಗೆಗಳ ಕೊರೊನಾ ಆಸ್ಪತ್ರೆಗಳನ್ನು ತೆರೆಯಲಿದ್ದಾರೆ ಎಂಬ ಸಂದೇಶವಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸಂದೇಶದಲ್ಲಿ, ಕೊರೊನಾ ರೋಗಿಗಳನ್ನು ಅವರೇ ಮನೆ ಬಾಗಿಲಿಗೆ ಬಂದು ಕರೆದೊಯ್ಯುತ್ತಾರೆ ಎಂದು ಮಾಹಿತಿ ಕೂಡಾ ಇದ್ದು ಇದನ್ನು ಸತ್ಯವೆಂದು ನಂಬಿದ ಹಲವಾರು ಜನರು ಅದನ್ನು ತಮ್ಮ ಖಾತೆಗಳಲ್ಲಿ ಹಂಚುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಕೊರೊನಾ ವಿಚಾರದಲ್ಲಿ ಮಾಧ್ಯಮಗಳ ಕಿರುಚಾಟ ತಾಳಲಾರದ ಯಾವುದೋ ಟ್ರೋಲ್‌ ತಂಡ ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ದೇಶದಲ್ಲಿ ಕೊರೊನಾ ವೈರಸ್‌ ಹರಡುವಿಕೆ ಆರಂಭವಾದಾಗಿನಿಂದ ಕೊರೊನಾವನ್ನು ನಿಭಾಯಿಸುವಲ್ಲಿ ವಿಫಲವಾದ ಸರ್ಕಾರದ ವಿರುದ್ದ ಪ್ರಶ್ನೆ ಕೇಳುವುದನ್ನು ಬಿಟ್ಟು,  ’ಕೊರೊನಾ ವಿರುದ್ದ ರಣಕಲಿ’, ’ಮೋದಿ ಮಂತ್ರ’, ’ಮೋದಿ ರಣತಂತ್ರ’, ’ಮೋದಿ ಅಬ್ಬರಕ್ಕೆ ಕೊರೊನಾ ಸೈಲೆಂಟ್‌’ ಎಂದೆಲ್ಲಾ ಕವರ್ ಸ್ಟೋರಿಗಳನ್ನು ಮಾಡಿದರ ವಿರುದ್ದ ಈ ಟ್ರೋಲ್ ಮಾಡಲಾಗಿದೆ ಎಂದು ನೆಟ್ಟಿಗರು ಹೇಳಿದ್ದಾರೆ.

ಸಾರ್ವಜನಿಕರಿಗೆ ಸೂಚನೆ ಎಂಬ ಶಿರ್ಷಿಕೆ ಇರುವ ನೋಟಿಸಿನಲ್ಲಿ, “ಟಿವಿ9, ಪಬ್ಲಿಕ್‌ ಟಿವಿ, ಸುವರ್ಣ ನ್ಯೂಸ್‌ ಚಾನೆಲ್‌ಗಳ ಮಾಲಿಕರು ಕರ್ನಾಟಕದ ಪ್ರತಿ ಜಿಲ್ಲಾ ಮಟ್ಟದಲ್ಲಿಯೂ 100 ಹಾಸಿಗೆಗಳ ಕೊರೊನಾ ಆಸ್ಪತ್ರೆಗಳನ್ನು ತೆರೆಯುತ್ತಿದ್ದು, ಕೊರೊನಾ ರೋಗಿಗಳನ್ನು ಅವರೇ ಮನೆ ಬಾಗಿಲಿಗೆ ಬಂದು ಕರೆದೊಯ್ಯುತ್ತಾರೆ” ಎಂದು ಮಾಹಿತಿಯಿರುವ ಪತ್ರಿಕಾ ಪ್ರಕಟಣೆಯ ರೀತಿ ಬರೆಯಲಾಗಿದೆ. ಸಧ್ಯಕ್ಕೆ ಇದು ವೈರಲಾಗಿದ್ದು ಕೆಲವರಿಗೆ ಅದರ ವ್ಯಂಗ್ಯ ಅರ್ಥವಾದರೆ ಹಲವರು ಅದನ್ನು ನಿಜವೆಂದೇ ನಂಬಿದ್ದಾರೆ.ಅದರಲ್ಲಿರುವ ಸಂಪರ್ಕ ಸಂಖ್ಯೆಗೆ ಹಲವರು ಕರೆ ಮಾಡಿ ಮೂರು ಮಾಧ್ಯಮಗಳನ್ನೂ ಆಸ್ಪತ್ರೆ ನಿರ್ಮಾಣದ ಬಗ್ಗೆ ವಿಚಾರಿಸಲಾರಂಭಿಸಿದ್ದಾರೆ. ಇದು ಸದ್ಯ ಮಾಧ್ಯಮಗಳಿಗೆ ತಲೆ ನೋವಾಗಿ ಪರಿಣಮಿಸಿದೆ ಎನ್ನಲಾಗಿದೆ.

ಆದರೆ, ಕರ್ನಾಕಟದ ಯಾವ ಮಾಧ್ಯಮವೂ ಕೊರೊನಾ ಆಸ್ಪತ್ರೆಗಳನ್ನು ತೆರೆಯುತ್ತಿಲ್ಲ ಎಂಬುದಷ್ಟೇ ವಾಸ್ತವದ ಸಂಗತಿ.


ಓದಿ: ಲಾಭದ ಗುಲಾಮಗಿರಿಗೆ ಬಿದ್ದಿರುವ ಮಾಧ್ಯಮ!; ಬಹುಜನ ಭಾರತ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...