Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌-ಇದು ತಮಿಳುನಾಡೂ ಅಲ್ಲ, ಧ್ವಜ ಬಿಜೆಪಿಯದ್ದೂ ಅಲ್ಲ; ಎಡಿಟ್‌ ಚಿತ್ರ ಹಂಚಿದ ಸಿಟಿ ರವಿ

ಫ್ಯಾಕ್ಟ್‌ಚೆಕ್‌-ಇದು ತಮಿಳುನಾಡೂ ಅಲ್ಲ, ಧ್ವಜ ಬಿಜೆಪಿಯದ್ದೂ ಅಲ್ಲ; ಎಡಿಟ್‌ ಚಿತ್ರ ಹಂಚಿದ ಸಿಟಿ ರವಿ

- Advertisement -
- Advertisement -

ಒಬ್ಬರ ಮೇಲೊಬ್ಬರು ನಿಂತು ಕಂಬಕ್ಕೆ ಬಿಜೆಪಿ ಧ್ವಜವನ್ನು ಕಟ್ಟುತ್ತಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಈ ಚಿತ್ರವನ್ನು ಉಲ್ಲೇಖಿಸಿ “ತಮಿಳುನಾಡಿನಲ್ಲಿ ಬಿಜೆಪಿ ಅರಳುತ್ತಿದೆ” ಎಂದು  ಎಂದು ಪ್ರತಿಪಾದಿಸಲಾಗುತ್ತಿದೆ.

ಮುಖ್ಯವಾಗಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ, ತಮಿಳುನಾಡು ಉಸ್ತುವಾರಿ ಸಿಟಿ ರವಿ ಅವರು ಇದನ್ನು ಟ್ವಿಟರ್‌ನನಲ್ಲಿ ಹಂಚಿಕೊಂಡಿದ್ದಾರೆ. ಸಿಟಿ ರವಿ ಅಲ್ಲದೆ ಬಿಜೆಪಿ ಇತರ ರಾಷ್ಟ್ರೀಯ ನಾಯಕರು ಮತ್ತು ಬೆಂಬಲಿಗರು ಈ ಚಿತ್ರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಇದನ್ನು ಹಂಚಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಮಾಚಲ ಪ್ರದೇಶದ ಬಿಜೆಪಿ ವಕ್ತಾರೆ ಪ್ರಜ್ವಲ್ ಬುಸ್ತಾ ಮತ್ತು ಉತ್ತರ ದೆಹಲಿಯ ಮಾಜಿ ಮೇಯರ್ ರವೀಂದರ್ ಗುಪ್ತಾ ಸೇರಿದಂತೆ ಅನೇಕ ಟ್ವಿಟರ್‌ ಖಾತೆಗಳು ಈ ಚಿತ್ರವನ್ನು ಹಂಚಿಕೊಂಡಿವೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

ಫ್ಯಾಕ್ಟ್‌ಚೆಕ್

ವೈರಲ್ ಪೋಸ್ಟ್‌ನ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಮೂಲ ಪೋಟೋದ ಮಾಹಿತಿ ಲಭ್ಯವಾಗಿದ್ದು, ಇದನ್ನು ಬಿಎಸ್‌ಪಿಯ ತೆಲಂಗಾಣ ಘಟಕದ ವಕ್ತಾರರಾದ ಶಿರಿಶಾ ಸ್ವೇರೊ ಅಕಿನಪಲ್ಲಿ ಅವರು ತಮ್ಮ ಖಾತೆಯಿಂದ ಮೇ 31 ರಂದು ಮಾಡಿದ ಟ್ವೀಟ್ ಮಾಡಿದ್ದರು.

ಬಿಜೆಪಿ ವೈರಲ್ ಮಾಡಿವುರ ಫೋಟೋದಲ್ಲಿ, ಯುವಕರು ಬಿಎಸ್ಪಿ ಧ್ವಜವನ್ನು ಹಾರಿಸುತ್ತಿರುವುದು ಕಾಣಬಹುದಾಗಿದೆ.

ಇಷ್ಟೇ ಅಲ್ಲದೆ, ಇದೇ ಚಿತ್ರವನ್ನು “ಅಂಬೇಡ್ಕರ್ ಸ್ಟೇಟಸ್‌” ಎಂಬ Pinterest ಪೇಜ್‌‌ನಲ್ಲಿ ಕೂಡಾ ಅಪ್‌ಲೋಡ್ ಮಾಡಲಾಗಿದೆ. ಅದನ್ನು ಕೆಳಗೆ ನೋಡಬಹುದಾಗಿದೆ.

ಎರಡು ಫೋಟೋಗಳನ್ನು ವಿಶ್ಲೇಷಣೆಗಾಗಿ ‘ಫೋಟೊ ಫೋರೆನ್ಸಿಕ್ಸ್‌’ನಲ್ಲಿ ಹುಡುಕಿದಾಗ ಕೂಡಾ ಬಿಜೆಪಿ ಧ್ವಜವನ್ನು ಮತ್ತೆ ಸೇರಿಸಲಾಗಿದೆ ಎಂದು ಕಂಡುಕೊಳ್ಳಲಾಗಿದೆ.

ಬಿಜೆಪಿ ಧ್ವಜ ಇರುವ ಚಿತ್ರವು ಎಡಿಟ್ ಮಾಡಲಾಗಿದೆ ಎಂದು ಇಂಡಿಯಾ ಟುಡೆ ಕೂಡಾ ಫ್ಯಾಕ್ಟ್‌ಚೆಕ್‌ ಮಾಡಿದೆ. ವೈರಲ್ ಚಿತ್ರದಲ್ಲಿ ಮೂಲ ಫೋಟೋ BSP ಧ್ವಜವನ್ನು ಹೊಂದಿದೆ ಎಂದು ಅದು ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಕಾಶ್ಮೀರದ ಈ ಎಲ್ಲಾ ಘಟನೆಗಳು ಮೋದಿ ಪ್ರಧಾನಿಯಾಗಿದ್ದಾಗಲೆ ನಡೆದಿದೆ!

ಒಟ್ಟಾರೆಯಾಗಿ ಹೇಳುವುದಾದರೆ, ಈ ಚಿತ್ರವೂ ತೆಲಂಗಾಣದ್ದಾಗಿದ್ದು, ಅದರಲ್ಲಿ ಯುವಕರು ಕಂಬವೊಂದಕ್ಕೆ BSPಯ ಧ್ವಜವನ್ನು ಒಬ್ಬರ ಮೇಲೆ ಒಬ್ಬರು ನಿಂತು ಕಟ್ಟಿದ್ದ ಧ್ವಜವನ್ನು ವಿಭಿನ್ನವಾಗಿ ಹಾರಿಸಿದ್ದರು. ಈ ಚಿತ್ರವನ್ನು ಕೆಲವು BJPಯ ಪ್ರಮುಖ ನಾಯಕರು ಸೇರಿದಂತೆ ಬೆಂಬಲಿಗರು, ತಮಿಳುನಾಡಿನಲ್ಲಿ BJP ಅರಳುತ್ತಿದೆ ಎಂದು ಪ್ರತಿಪಾದಿಸಿ, ಎಡಿಟೆಡ್‌ ಚಿತ್ರವನ್ನು ಹಂಚುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...