Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್: ಸೋನಿಯಾ ಗಾಂಧಿ ಕಾಲಿಗೆ ಬಿದ್ದ ಮನಮೋಹನ್‌ ಸಿಂಗ್?‌ ಈ ಘಟನೆ ನಿಜವಲ್ಲ

ಫ್ಯಾಕ್ಟ್‌ಚೆಕ್: ಸೋನಿಯಾ ಗಾಂಧಿ ಕಾಲಿಗೆ ಬಿದ್ದ ಮನಮೋಹನ್‌ ಸಿಂಗ್?‌ ಈ ಘಟನೆ ನಿಜವಲ್ಲ

- Advertisement -
- Advertisement -

“ರಾಹುಲ್‌ ಗಾಂಧಿ ಎದುರಿಗೆ ಸೋನಿಯಾ ಗಾಂಧಿಯವರ ಕಾಲಿಗೆ ಮನಮೋಹನ್‌ ಸಿಂಗ್‌ ಬಿದ್ದು ಆರ್ಶೀವಾದ ಪಡೆದುಕೊಂಡಿದ್ದಾರೆ. 71 ವ‍ರ್ಷದ ಸೋನಿಯಾ ಕಾಳಿಗೆ 85 ವರ್ಷದ ಮನಮೋಹನ್‌ ಸಿಂಗ್‌ ಏಕೆ ಬೀಳಬೇಕು” ಎಂದು ಫೋಟೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಹಂಚಿಕೊಂಡಿದ್ದಾರೆ.

ವೈರಲ್‌ ಫೋಟೊದಲ್ಲಿ ಸೋನಿಯಾ ಗಾಂಧಿಯವರ ಕಾಲಿಗೆ ವ್ಯಕ್ತಿಯೋರ್ವ ನಮಸ್ಕರಿಸುತ್ತಿರುವುದು ಕಾಣುತ್ತದೆ. ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಇದ್ದಾರೆ.

“ಅವಳ ಗುಲಾಮರು ಅವಳನ್ನು ದೇವರು, ತಾಯಿ ಎಂದು ಕರೆಯುತ್ತಾರೆ. ಆದರೆ ಆಕೆಗೆ ಕನಿಷ್ಟ ಸಾಮಾನ್ಯ ಜ್ಞಾನಿವಲ್ಲ” ಎಂದು ಹಲವರು ಆರೋಪಿಸಿದ್ದಾರೆ. ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿ ಇಲ್ಲಿದೆ. ಚಿತ್ರವನ್ನು ಫೇಸ್‌ಬುಕ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಅದರ ಸ್ಕ್ರೀನ್‌ಶಾಟ್ ಕೆಳಗೆ ಇದೆ.

ಕಳೆದ ವರ್ಷವೂ ಸಹ ಇದೇ ಆರೋಪ ಮಾಡಲಾಗಿತ್ತು. ರಾಹುಲ್‌ ಗಾಂಧಿಗಾದರೂ ಬುದ್ಧಿ ಬೇಡವೇ? ಅದನ್ನು ನಗುತ್ತಾ ನೋಡುತ್ತಿದ್ದಾರೆ ಎಂದು ಸಹ ಆರೋಪಿಸಲಾಗಿತ್ತು.

संसद में आँख मारने वाला चाहिए…, या चीन से आँख मिलाने वाला .., या पाकिस्तान को आँख दिखाने वाला ..??तय कर लो….!!

Posted by पंडित राम शर्मा – भट्ट ब्राह्मण on Sunday, April 28, 2019

 

ಫ್ಯಾಕ್ಟ್ ಚೆಕ್

ಗೂಗಲ್‌ ರಿವರ್ಸ್‌ ಇಮೇಜ್‌ ಸರ್ಚ್‌ ಮೂಲಕ ಹುಡುಕಿದಾಗ ಈ ಚಿತ್ರವು 2011ರ ನವೆಂಬರ್‌ನಲ್ಲಿ ನಡೆದ ಭಾರತೀಯ ಯುವ ಕಾಂಗ್ರೆಸ್ ಸಮಾವೇಶದಲ್ಲಿ ತೆಗೆಯಲಾದ ಫೋಟೊ ಇದಾಗಿದೆ. ಚಿತ್ರಕ್ಕೆ “ನವದೆಹಲಿ, ಭಾರತ – ನವೆಂಬರ್ 29: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ನೋಡುವಾಗ ಪ್ರತಿನಿಧಿಯೊಬ್ಬರು ಸೋನಿಯಾ ಗಾಂಧಿಯವರ ಪಾದಗಳನ್ನು ಮುಟ್ಟುತ್ತಾರೆ. ಮಂಗಳವಾರ ನವದೆಹಲಿಯಲ್ಲಿ ಚುನಾಯಿತ ಪದಾಧಿಕಾರಿಗಳ ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಮಟ್ಟದ ಸಮಾವೇಶ. (ಶೇಖರ್ ಯಾದವ್ / ಗೆಟ್ಟಿ ಇಮೇಜಸ್ ಮೂಲಕ ಇಂಡಿಯಾ ಟುಡೆ ಚಿತ್ರ)” ಎಂದು ಶೀರ್ಷಿಕೆ ನೀಡಲಾಗಿದೆ. ಅಲ್ಲಿಗೆ ಅದು ಬೇರೆಯೇ ಪ್ರತಿನಿಧಿ ಹೊರತು ಮನಮೋಹನ್‌ ಸಿಂಗ್‌ ಅಲ್ಲ ಎನ್ನುವುದು ಸ್ಪಷ್ಟವಾಗಿದೆ.

ಜೊತೆಗೆ ಗೆಟ್ಟಿ ಇಮೇಜಸ್‌ನಲ್ಲಿ ಅದೇ ದಿನದಿಂದ ಮನಮೋಹನ್‌ ಸಿಂಗ್‌ರವರ ಚಿತ್ರ ಹುಡುಕಿದಾಗ ಇದರಲ್ಲಿ ಡಾ. ಮನಮೋಹನ್ ಸಿಂಗ್ ನೀಲಿ ಪೇಟ ಧರಿಸಿರುವುದನ್ನು ಕಾಣಬಹುದು. ಹಾಗಾಗಿ ಮನಮೋಹನ್ ಸಿಂಗ್ ಸೋನಿಯಾ ಗಾಂಧಿಯವರ ಕಾಲಿಗೆ ಬಿದ್ದಿದ್ದಾರೆ ಎಂಬ ಆರೋಪವು ಸಂಪೂರ್ಣ ತಪ್ಪಾಗಿದೆ.

NEW DELHI, INDIA – NOVEMBER 29: Congress Chief Sonia Gandhi, Prime Minister Manmohan Singh and General Secretary Rahul Gandhi with other leaders during the Indian Youth Congress’s national level convention of Elected Office Bearers in New Delhi on Tuesday. (Photo by Shekhar Yadav/The India Today Group via Getty Images)

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇತ್ತೀಚಿನ ಭಾರತ-ಚೀನಾ ಸೈನಿಕರ ಘರ್ಷಣೆಯ ವಿಡಿಯೋ ಬಹಿರಂಗ? ವಾಸ್ತವವೇನು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

ಇಂದೋರ್-ಭೋಪಾಲ್ ಹೆದ್ದಾರಿಯಲ್ಲಿರುವ ಸೆಹೋರ್ ಜಿಲ್ಲೆಯ ವಿಐಟಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಪ್ರತಿಭಟನೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ತಿರುಗಿದ್ದು, ಕೋಪಗೊಂಡ ವಿದ್ಯಾರ್ಥಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿ ಕ್ಯಾಂಪಸ್ ಆಸ್ತಿಗೆ ಹಾನಿ ಮಾಡಿದ್ದಾರೆ...