Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಮುಖೇಶ್ ಅಂಬಾನಿ ಕಿತ್ತೆಸೆದರೆ?

ಫ್ಯಾಕ್ಟ್‌ಚೆಕ್: ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಮುಖೇಶ್ ಅಂಬಾನಿ ಕಿತ್ತೆಸೆದರೆ?

ಈ ಟ್ವಿಟ್ಟರ್‌ ಹ್ಯಾಂಡಲ್ ಹಂಚಿಕೊಂಡಿರುವ ಟ್ವೀಟ್ 10,000 ಕ್ಕೂ ಹೆಚ್ಚು ರಿಟ್ವೀಟ್‌ಗಳನ್ನು ಮತ್ತು 50,000 ಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ.

- Advertisement -
- Advertisement -

ಒಂದು ತಿಂಗಳೊಳಗೆ 12,000 ಕ್ಕೂ ಹೆಚ್ಚು ಅನುಯಾಯಿಗಳನ್ನು ಗಳಿಸಿರುವ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಹೆಸರು ಇರುವ ಟ್ವಿಟರ್ ಖಾತೆ ಜೂನ್ 20 ರಂದು ಟ್ವೀಟ್ ಮಾಡಿ, ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಜಿಯೋ ಜಾಹೀರಾತಿನಿಂದ ತೆಗೆದುಹಾಕಲು ನಿರ್ಧರಿಸಿದ್ದಾರೆ ಎಂದು ಬರೆದಿದೆ.

ಈ ಟ್ವಿಟ್ಟರ್‌ ಹ್ಯಾಂಡಲ್ ಹಂಚಿಕೊಂಡಿರುವ ಟ್ವೀಟ್ 10,000 ಕ್ಕೂ ಹೆಚ್ಚು ರಿಟ್ವೀಟ್‌ಗಳನ್ನು ಮತ್ತು 50,000 ಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ.

ಕೇವಲ ಅದೊಂದೆ ಅಲ್ಲದೆ ಮುಕೇಶ್ ಅಂಬಾನಿ ಹೆಸರಿನ ಹಲವಾರು ಟ್ವಿಟ್ಟರ್‌ ಅಕೌಂಟ್‌ಗಳು ”ನಾನು ಜಿಯೊ ಸಿಮ್‌ ಕಾರ್ಡ್‌ನಿಂದ ಶಾರುಖ್ ಖಾನ್‌ನನ್ನು ತೆಗೆದು ಹಾಕುತ್ತಿದ್ದೇನೆ, ನಿಮ್ಮ ಅಭಿಪ್ರಾಯವೇನು?” ಎಂದು ಅದೇ ಪೋಸ್ಟನ್ನು ಬರೆದಿದೆ.

ಫ್ಯಾಕ್ಟ್ ಚೆಕ್

ಮೊದಲನೆಯದಾಗಿ ಮುಖೇಶ್ ಅಂಬಾನಿ ಅವರ ಹಸರಿರುವ ಈ ಖಾತೆಯನ್ನು ಟ್ವಿಟ್ಟರ್‌ ಪರಿಶೀಲಿಸಿಲ್ಲ. ಯಾಕೆಂದರೆ ಈ ಹ್ಯಾಂಡಲ್‌ನಲ್ಲಿ ‘ಬ್ಲೂ ಟಿಕ್’ ಇಲ್ಲ.

ಎರಡನೆಯದಾಗಿ, ಹ್ಯಾಂಡಲ್ ತನ್ನನ್ನು ‘ರಿಯಲ್‌ಮುಕೇಶಂಬನ್’ (Realmukeshamban) ಎಂದು ಉಲ್ಲೇಖಿಸಿದೆ, ಇದರಲ್ಲಿ ‘ಅಂಬಾನಿ’ ಎಂಬೂದನ್ನು ತಪ್ಪಾಗಿ ಬರೆಯಲಾಗಿದೆ.

ಇದಲ್ಲದೆ, ಈ ಖಾತೆಯ ಟ್ವೀಟ್‌ಗಳನ್ನು ಗಾಯಕ ಸೋನು ನಿಗಮ್ ಮತ್ತು ನಟಿ ಕಂಗನಾ ರಾಣಾವತ್ ಅವರ ಹೆಸರಿರುವ ನಕಲಿ ಖಾತೆಗಳು ರಿಟ್ವೀಟ್ ಮಾಡುತ್ತಿರುವುದನ್ನು ಗಮನಿಸಬಹುದಾಗಿದೆ

ಕಂಗನಾ ರನೌತ್ ಅವರ ನಕಲಿ ಖಾತೆ ಅಂಬಾನಿಯನ್ನು ಜಿಯೋ ಜಾಹೀರಾತಿನಿಂದ ಶಾರುಖ್ ಖಾನ್ ಅವರನ್ನು ತೆಗೆದುಹಾಕುವಂತೆ ಕೇಳಿಕೊಂಡಿತ್ತು.

ಈ ಎರಡೂ ಖಾತೆಗಳು ಶಾರುಖ್ ಖಾನ್ ಅವರನ್ನು ಜಿಯೋ ಜಾಹೀರಾತಿನಿಂದ ತೆಗೆದುಹಾಕುವಂತೆ ಅಂಬಾನಿಯನ್ನು ಒತ್ತಾಯಿಸಿದ್ದವು.

ಅಲ್ಲದೆ ಶಾರುಖ್ ಖಾನ್ ಅವರನ್ನು ತೆಗೆದು ಹಾಕಲಾಗಿದೆ ಎಂದು ಬರೆದಿರುವ ಖಾತೆಯ ಬಯೋದಲ್ಲಿ “ಈ ಖಾತೆಯು ಮುಖೇಶ್ ಅಂಬಾನಿ ಅವರ ಮೀಡಿಯಾ ಪ್ಯಾನೆಲ್ ತಂಡ ನಿರ್ವಹಿಸುತ್ತಿದೆ.” ಎಂದು ಬರೆದಿದೆ.

ಖಾತೆಯ ಸ್ಥಳ ನವದೆಹಲಿ ಎಂದು ಉಲ್ಲೇಖಿಸಿದೆ ಆದರೆ ಅಂಬಾನಿ ಮುಂಬೈನಲ್ಲಿ ವಾಸಿಸುತ್ತಿದ್ದಾರೆ.

ಒಟ್ಟಿನಲ್ಲಿ ತಿಳಿದು ಬರುವುದೇನೆಂದರೆ ಪ್ರಸ್ತುತ ಟ್ವಿಟ್ಟರ್ ಖಾತೆ ಹಾಗೂ ಟ್ವೀಟ್ ನಕಲಿಯಾಗಿದ್ದು, ಅಂಬಾನಿ ಅಥವಾ ಅವರ ಕುಟುಂಬದ ಸದಸ್ಯರು ಅಧಿಕೃತ ಟ್ವಿಟರ್ ಖಾತೆಗಳನ್ನು ಹೊಂದಿಲ್ಲ ಎಂದು ”ದಿ ಕ್ವಿಂಟ್ಗೆ” ವರದಿ ಮಾಡಿದೆ.


ಓದಿ: ವಿಶ್ವದ 9ನೇ ಶ್ರೀಮಂತ ವ್ಯಕ್ತಿಯಾಗಿ ಮುಖೇಶ್ ಅಂಬಾನಿ; ಅವರು ಈ ಸ್ಥಾನಕ್ಕೆ ಬಂದಿದ್ದು ಹೇಗೆ ಗೊತ್ತೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...