Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಗೋಮೂತ್ರ ಬಳಕೆಯಿಂದ ಕ್ಯಾನ್ಸರ್ ಕಡಿಮೆಯಾಗಿದೆ ಎಂದು ಆಸ್ಕರ್ ಫರ್ನಾಂಡಿಸ್ ಹೇಳಿರಲಿಲ್ಲ

ಫ್ಯಾಕ್ಟ್‌ಚೆಕ್: ಗೋಮೂತ್ರ ಬಳಕೆಯಿಂದ ಕ್ಯಾನ್ಸರ್ ಕಡಿಮೆಯಾಗಿದೆ ಎಂದು ಆಸ್ಕರ್ ಫರ್ನಾಂಡಿಸ್ ಹೇಳಿರಲಿಲ್ಲ

- Advertisement -
- Advertisement -

ಗೋಮೂತ್ರ ಉಪಯೋಗಿಸಿದ್ದರಿಂದ ಕ್ಯಾನ್ಸರ್ ಕಡಿಮೆಯಾಗಿದೆ ಎಂದು ಕಾಂಗ್ರೆಸ್ ಸಂಸದರೊಬ್ಬರು ರಾಜ್ಯಸಭೆಯಲ್ಲಿ ಮಾತನಾಡಿದ್ದಾರೆ ಎಂದಿರುವ  ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಆ ಪೋಸ್ಟ್‌ನಲ್ಲಿ ಹೇಳೀರುವುದು ಎಷ್ಟು ಸತ್ಯ ಎಂಬುದನ್ನು ಈ ಲೇಖನದಲ್ಲಿ ನೋಡೋಣ.

ಫೇಕ್ ನ್ಯೂಸ್ ವೆಬ್‌ಸೈಟ್ ಪೋಸ್ಟ್ ಕಾರ್ಡ್ ಸಂಪಾದಕ ಮಹೇಶ್ ವಿಕ್ರಮ್ ಹೆಗಡೆ ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ.

ಸೆ.13 ರಂದು ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರು ನಿಧನರಾದರು. ಅಂದು ತಮ್ಮ ವಾಲ್‌ನಲ್ಲಿ, “ಮಾಜಿ ಕೇಂದ್ರ ಸಚಿವರು, ಹಿರಿಯ ಕಾಂಗ್ರೆಸ್ ನಾಯಕರಾದ ಆಸ್ಕರ್ ಫರ್ನಾಂಡಿಸ್ ಅವರು ಇಹಲೋಕ ತ್ಯಜಿಸಿದ್ದಾರೆ. ಕಾಂಗ್ರೆಸ್ ನಾಯಕನಾಗಿದ್ದರೂ ಗೋಮೂತ್ರದಲ್ಲಿ ಕ್ಯಾನ್ಸರ್ ಗುಣಪಡಿಸುವ ಶಕ್ತಿ ಇದೆ. ದೇಸಿ ಗೋವುಗಳನ್ನು ಸಂರಕ್ಷಿಸಬೇಕೆಂದು ಸಂಸತ್ ನಲ್ಲಿ ಗಟ್ಟಿ ಧ್ವನಿಯಿಂದ ಪ್ರತಿಪಾದಿಸಿದ, ಯೋಗ, ಭಾರತೀಯ ವೈದ್ಯ ಪದ್ದತಿಗಳ ಬಗ್ಗೆ ಅಪಾರ ಗೌರವ ಹೊಂದಿದ್ದ ಹಿರಿಯ ನಾಯಕನಿಗೆ ನಮನಗಳು” ಎಂದು ವಿಡಿಯೋ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

 

ಪೋಸ್ಟ್‌ನಲ್ಲಿ ಹೇಳಲಾಗಿರುವ ವಿಷಯಗಳ ಮಾಹಿತಿಗಾಗಿ ಗೂಗಲ್‌ನಲ್ಲಿ ಹುಡುಕಾಟ ನಡೆಸಿದಾಗ, ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರು 18 ಮಾರ್ಚ್ 2020 ರಂದು ‘ಪ್ರಿಂಟ್’ ಪ್ರಕಟಿಸಿದ ಲೇಖನದಲ್ಲಿ ‘ಗೋಮೂತ್ರ’ದಿಂದ ಕ್ಯಾನ್ಸರ್‌ರನ್ನು ಜಯಿಸಿದ ವ್ಯಕ್ತಿಯ ಕಥೆಯನ್ನು ರಾಜ್ಯಸಭೆಯಲ್ಲಿ ಉಲ್ಲೇಖಿಸಿದ್ದಾರೆ’ ಎಂದು ತಿಳಿದುಬಂದಿದೆ.

ಹೋಮಿಯೋಪತಿ ಮತ್ತು ಭಾರತೀಯ ವೈದ್ಯಕೀಯ ವ್ಯವಸ್ಥೆಯಲ್ಲಿ ರಾಷ್ಟ್ರೀಯ ಆಯೋಗಗಳ ಸ್ಥಾಪನೆಯ ಕುರಿತು ರಾಜ್ಯಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಆಸ್ಕರ್ ಫರ್ನಾಂಡೀಸ್ ಅವರು ತಮಗೆ ತಿಳಿದಿರುವ ವ್ಯಕ್ತಿಯೊಬ್ಬರು ‘ಗೋಮೂತ್ರ’ದ ಮೂಲಕ ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ಜಯಿಸಿದ್ದಾರೆ ಎಂದು ಲೇಖನ ವರದಿ ಮಾಡಿದೆ.

18 ಮಾರ್ಚ್ 2020 ರಂದು ರಾಜ್ಯಸಭೆಯಲ್ಲಿ ಆಸ್ಕರ್ ಫರ್ನಾಂಡೀಸ್ ಅವರು ತಮ್ಮ ಸಂಪೂರ್ಣ ಭಾಷಣವನ್ನು ಮಾಡುತ್ತಿರುವ ವೀಡಿಯೊವನ್ನು ‘ಸಂಸದ್ ಟಿವಿ’ ಸುದ್ದಿ ವಾಹಿನಿ ಪ್ರಕಟಿಸಿದೆ. ವಿಡಿಯೋದ ಸುಮಾರು 2:10 ನಿಮಿಷಗಳ ಸಮಯದಲ್ಲಿ ಆಸ್ಕರ್ ಫೆರ್ನಾಂಡಿಸ್ ಹೀಗೆ ಹೇಳಿದ್ದಾರೆ. “ನಾನು ಮೀರತ್‌ನಲ್ಲಿರುವ ಆಶ್ರಮಕ್ಕೆ ಹೋಗಿದ್ದೆ. ವಾಪಸಾಗುವುದು ತಡವಾದ ಕಾರಣ ಆಶ್ರಮ ಸ್ವಾಮೀಜಿಯವರು ತಮ್ಮ ಚಾಲಕನನ್ನು ನನ್ನ ಜೊತೆಯಲ್ಲಿ ಕಳುಹಿಸಿದರು. ಆ ಚಾಲಕನನ್ನು ಆಶ್ರಮದಲ್ಲಿ ನೀನೇಕೆ ಉಳಿದಿದ್ದಿಯಾ? ಎಂದು ಕೇಳಿದೆ, ‘ಸರ್, ನಾನು ಯಾವುದೇ ಚಿಕಿತ್ಸೆಯಿಂದ ಗುಣವಾಗದ ತೀವ್ರ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾಗ ಈ ಆಶ್ರಮಕ್ಕೆ ಸೇರಿಕೊಂಡೆ. ಈ ಆಶ್ರಮ ನೀಡಿದ ಗೋಮೂತ್ರದಿಂದ ನನ್ನ ಕ್ಯಾನ್ಸರ್ ಸಂಪೂರ್ಣವಾಗಿ ವಾಸಿಯಾಯಿತು. ಅದಕ್ಕಾಗಿಯೇ ನನಗೆ ಹೊಸ ಜೀವನವನ್ನು ನೀಡಿದ ಈ ಆಶ್ರಮದ ಸೇವೆಯನ್ನು ನನ್ನ ಜೀವನದುದ್ದಕ್ಕೂ ಮಾಡಲು ನಿರ್ಧರಿಸಿದ್ದೇನೆ, ”ಎಂದು ಚಾಲಕ ಹೇಳಿಕೊಂಡರು ಎಂದು ಹೇಳಿದ್ದಾರೆ.

ಚಾಲಕನ ಬಗ್ಗೆ ಹೇಳೀರುವ ಮಾತುಗಳನ್ನು ಅರ್ಧಕ್ಕೆ ಕಟ್ ಮಾಡಿ ಆಸ್ಕರ್ ಫೆರ್ನಾಂಡಿಸ್ ಗೋಮೂತ್ರವನ್ನು ಬಳಸಿ ತಮ್ಮ ಕ್ಯಾನ್ಸರ್ ಕಡಿಮೆಯಾಗಿದೆ ಎಂದು ಹೇಳಿಕೊಂಡಿದ್ದಾರೆ ಎಂದು ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ.

18 ಮಾರ್ಚ್ 2020 ರಂದು ರಾಜ್ಯಸಭೆಯಲ್ಲಿ ಆಸ್ಕರ್ ಫರ್ನಾಂಡಿಸ್ ಮಾಡಿದ ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಇದರಲ್ಲಿ ಆಸ್ಕರ್ ಫರ್ನಾಂಡಿಸ್ ರಾಜ್ಯಸಭೆಯಲ್ಲಿ ಚಾಲಕ ತನ್ನೊಂದಿಗೆ ಹಂಚಿಕೊಂಡ ಅನುಭವವನ್ನು ಸರಳವಾಗಿ ವಿವರಿಸಿದ್ದಾರೆ.

ಆಸ್ಕರ್ ಫರ್ನಾಂಡೀಸ್ ಅವರು ತಮಗೆ ರೋಗವಿದೆ ಅಥವಾ ಗೋಮೂತ್ರ ಉಪಯೋಗದಿಂದ ಕ್ಯಾನ್ಸರ್ ಕಡಿಮೆಯಾಗುತ್ತದೆ ಎಂದು ಎಲ್ಲಿಯೂ ಉಲ್ಲೇಖಿಸಿಲ್ಲ. ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವಿಡಿಯೊವನ್ನು ಕಟ್ ಮಾಡಿ ಹಂಚಿಕೊಳ್ಳಲಾಗುತ್ತಿದೆ ಎಂದು ಖಚಿತವಾಗಿ ಹೇಳಬಹುದು.

ಒಟ್ಟಾರೆ ಕಾಂಗ್ರೆಸ್ ಸಂಸದ ದಿವಂಗತ ಆಸ್ಕರ್ ಫರ್ನಾಂಡೀಸ್ ಅವರು ಗೋಮೂತ್ರ ಬಳಸಿ ಕ್ಯಾನ್ಸರ್‌ನಿಂದ ಗುಣವಾಗಿರುವುದನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿಲ್ಲ.

ಪ್ರತಿಪಾದನೆ: ಗೋಮೂತ್ರ ಉಪಯೋಗದಿಂದ ಕ್ಯಾನ್ಸರ್ ಸಂಪೂರ್ಣವಾಗಿ ಕಡಿಮೆಯಾಗಿದೆ ಎಂದು ಕಾಂಗ್ರೆಸ್ ಸಂಸದರೊಬ್ಬರು ರಾಜ್ಯಸಭೆಯಲ್ಲಿ ಮಾತನಾಡುತ್ತಿರುವ ದೃಶ್ಯಗಳು.

ನಿಜಾಂಶ: ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೊವನ್ನು ಎಡಿಟ್ ಮಾಡಲಾಗಿದೆ. ಇತ್ತೀಚೆಗೆ ನಿಧನರಾದ ಕಾಂಗ್ರೆಸ್ ರಾಜ್ಯಸಭಾ ಸಂಸದ ಆಸ್ಕರ್ ಫರ್ನಾಂಡೀಸ್ ಅವರು 2020 ರಲ್ಲಿ ರಾಜ್ಯಸಭೆಯಲ್ಲಿ ಮಾತನಾಡುತ್ತಾ, ಕ್ಯಾನ್ಸರ್ ಅನ್ನು ಜಯಿಸಿದ ವ್ಯಕ್ತಿಯೊಂದಿಗೆ ಹಂಚಿಕೊಂಡ ಅನುಭವವನ್ನು ವಿವರಿಸಿದ್ದರು. ಮೀರತ್‌ನ ಆಶ್ರಮವೊಂದರಲ್ಲಿ ಕೆಲಸ ಮಾಡುತ್ತಿರುವ ಚಾಲಕರೊಬ್ಬರು ಗೋಮೂತ್ರ ಉಪಯೋಗಿಸಿದ್ದರಿಂದ ಕ್ಯಾನ್ಸರ್ ಅನ್ನು ಜಯಿಸಿದ್ದಾರೆ ಎಂದು ಆಸ್ಕರ್ ಫರ್ನಾಂಡೀಸ್ ಹೇಳಿದ್ದರು. ಆದರೆ, ಆಸ್ಕರ್ ಫರ್ನಾಂಡೀಸ್ ಅವರಿಗೆ ಕ್ಯಾನ್ಸರ್ ಇದೆ ಅಥವಾ ಗೋಮೂತ್ರದಿಂದ ಕ್ಯಾನ್ಸರ್ ಕಡಿಮೆಯಾಗುತ್ತದೆ ಎಂದು ಎಲ್ಲಿಯೂ ಉಲ್ಲೇಖಿಸಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿರುವ ಪ್ರತಿಪಾದನೆ ತಪ್ಪುದಾರಿಗೆಳೆಯುವಂತಿದೆ.


ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...