Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

- Advertisement -
- Advertisement -

ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯಲ್ಲಿ ನಡೆದ ವಿಡಿಯೊ ಸಮೀಕ್ಷೆ ವೇಳೆ ಕಂಡು ಬಂದ ‘ಕಾರಂಜಿ’ಯನ್ನು ‘ಶಿವಲಿಂಗ’ ಎಂದು ಪ್ರತಿಪಾದಿಸಲಾಗಿತ್ತು. ಇದರ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಚಿತ್ರಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈ ಲೇಖನಗಳ ಮೂಲಕ ವೈರಲ್‌ ಚಿತ್ರಗಳ ವಾಸ್ತವ ಏನೆಂದು ತಿಳಿದುಕೊಳ್ಳೋಣ.

ಮೊದಲಿಗೆ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಯಾವ ಯಾವ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ ಎಂದು ಗಮನಿಸೋಣ.

1ನೇ ಚಿತ್ರ – ಮಾಜಿ ಸಚಿವ ಕೆ.ಎಸ್‌‌. ಈಶ್ವರಪ್ಪ ಅವರ ಹೆಸರಿನಲ್ಲಿ ಪೋಸ್ಟ್

ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಹೆಸರಿನ ಫೇಸ್‌ಬುಕ್‌ ಪೇಜ್‌ನಲ್ಲಿ ಪೋಸ್ಟ್‌ ಒಂದನ್ನು ಶೇರ್ ಮಾಡಿದ್ದು ಮಾಡಿದ್ದು ಅದರಲ್ಲಿ “ಜ್ಞಾನವಾಪಿ ಮಸೀದಿಯಲ್ಲಿ ತ್ರೈಲೋಕ್ಯಮಹಾದೇವ ನಂದಿ ಹಾಗೂ ಶಿವಲಿಂಗ ವಿಗ್ರಹ ಪತ್ತೆಯಾಗಿರುವುದು ಬಚ್ಚಿಟ್ಟ ಕ್ರೌರ್ಯದ ಇತಿಹಾಸವನ್ನ ತೆರೆದಿಟ್ಟಿದೆ. ದೇಶದಲ್ಲಿರುವ ಎಲ್ಲ ಪುರಾತನ ಮಸೀದಿಗಳನ್ನು ಹಿಂದೂ ದೇವಾಲಯಗಳನ್ನು ಧ್ವಂಸ ಮಾಡಿಯೇ ಕಟ್ಟಲಾಗಿದೆ ಹೊರತು ದೈವಭಕ್ತಿಯಿಂದ ಕಟ್ಟಿದ್ದಲ್ಲ. ದೋಷವಿರುವುದು ಮುಸಲ್ಮಾನರಲ್ಲಿ ಅಲ್ಲ ಮುಸಲ್ಮಾನರ ಧರ್ಮಗ್ರಂಥದಲ್ಲಿ” ಎಂಬ ಹೇಳಿಕೆಯೊಂದಿಗೆ ಹಂಚಿಕೊಂಡಿದ್ದಾರೆ.

2ನೇ ಚಿತ್ರ – 350 ವರ್ಷಗಳ ಕುತಂತ್ರದಾಟಕ್ಕೆ ತೆರೆ!

ಕಾಶಿ ಜ್ಞಾನವ್ಯಾಪಿ ಮಸೀದಿಯ ಕೊಳದಲ್ಲಿನ ನೀರನ್ನು ಖಾಲಿ ಮಾಡುತ್ತಿದ್ದಂತೆ.. ಸಾಕ್ಷಾತ್ ವಿಶ್ವನಾಥನ (ಶಿವಲಿಂಗ) ದರ್ಶನ! ಎಂದು ಮತ್ತೊಂದು ಫೋಟೋವನ್ನು ಫೇಸ್‌ಬುಕ್ ಬಳಕೆದಾರರೊಬ್ಬರು ಪೋಸ್ಟ್ ಮಾಡಿದ್ದು, 350 ವರ್ಷಗಳ ಕುತಂತ್ರದಾಟಕ್ಕೆ ತೆರೆ ಎಂದು ಬರೆದಿದ್ದಾರೆ.
ಮೂರನೇಯದ್ದು ವಿಡಿಯೊ
ಮತ್ತೊಬ್ಬ ಫೇಸ್‌ಬುಕ್ ಬಳಕೆದಾರರೊಬ್ಬರು ಫೊಸ್ಟ್‌ವೊಂದನ್ನು ಮಾಡಿದ್ದು, ‘‘ಇಂದು ಬಹಳ ಸಂತೋಷದ ಸೋಮವಾರ ಮತ್ತು ಹುಣ್ಣಿಮೆ ಕೂಡ, ಜ್ಞಾನವಾಪಿ ಸಮೀಕ್ಷೆಯ ವೇಳೆ ಬಾವಿಯೊಳಗಿಂದ ಶಿವಲಿಂಗ ಪತ್ತೆಯಾಗಿದೆ.. ಸುಮಾರು 12 ಅಡಿಗಳಿಗಿಂತ ದೊಡ್ಡದು. ಜ್ಞಾನವಾಪಿ ದೇವಸ್ಥಾನದಲ್ಲಿ ಶಿವಲಿಂಗ ಪತ್ತೆಯಾದ ಪ್ರದೇಶವನ್ನು ಸೀಲ್ ಮಾಡಲು ವಾರಣಾಸಿ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದೆ” ಎಂದು ಪೋಸ್ಟ್‌ ಮೂಲಕ ಫೋಟೋವನ್ನು ಶೇರ್ ಮಾಡಿದ್ದಾರೆ.

ಮಸೀದಿಯ ವಿಡಿಯೊ ಚಿತ್ರೀಕರಣ ದಾಖಲೀಕರಣದ ಸಮಯದಲ್ಲಿ ಮಸೀದಿಯ ಕೊಳದಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಅರ್ಜಿದಾರ ವಕೀಲರೊಬ್ಬರು ನ್ಯಾಯಾಲಯದಲ್ಲಿ ಹೇಳಿದ್ದರಿಂದ, ನ್ಯಾಯಾಲಯವು ಮಸೀದಿ ಆವರಣದ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ್ ಮಾಡುವಂತೆ ಆದೇಶಿಸಿತ್ತು.

ಮಸೀದಿ ಸಮಿತಿ ಹೇಳುವಂತೆ ಅದು ಮಸೀದಿ ಕೊಳದಲ್ಲಿ ಇರುವ ಕಾರಂಜಿಯಾಗಿದೆ. ಅಲ್ಲದೆ ಅದು ಯಾವುದೆ ರೀತಿಯಲ್ಲೂ ಶಿವಲಿಂಗದ ಮಾದರಿಯಲ್ಲಿ ಇಲ್ಲ. ಕೆಳಗಿನ ವಿಡಿಯೊದಲ್ಲಿ ಅದರ ದೃಶ್ಯಗಳನ್ನು ಓದುಗರು ನೋಡಬಹುದಾಗಿದೆ.

ಹಾಗಾದರೆ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆಯೇ? ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಶಿವಲಿಂಗದ ಹಲವು ವಿಡಿಯೊ ಮತ್ತು ಫೋಟೋಗಳು ಜ್ಞಾನವಾಪಿ ಮಸೀದಿ ಆವರಣದ ಪತ್ತೆಯಾದ ಫೋಟೋಗಳೇ? ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳ ಪ್ರತಿಪಾದನೆಯನ್ನು ಪರಿಶೀಲಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಫ್ಯಾಕ್ಟ್‌ಚೆಕ್:

1ನೇ ಚಿತ್ರ

ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿರುವ ಕೆಎಸ್‌ ಈಶ್ವರಪ್ಪ ಹೆಸರಿನಲ್ಲಿ ಫೋಸ್ಟ್‌ ಮಾಡಿದ ದೊಡ್ಡ ಶಿವಲಿಂಗದ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಫೋಟೋವನ್ನು ರನ್ ಮಾಡಿದಾಗ, ಫೋಟೋ ಒಡಿಸ್ಸಾದಲ್ಲಿರುವ ಬಾಬಾ ಭುಸಂದೇಶ್ವರ ದೇವಾಲಯಕ್ಕೆ ಸಂಬಂಧಿಸಿದೆ ಎಂದು ಕಂಡುಬಂದಿದೆ. ಆ ದೇವಾಲಯದ ಇತರ ಫೋಟೋಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಹಾಗಾಗಿ, ಕೆಎಸ್‌ ಈಶ್ವರಪ್ಪ ಹೆಸರಿನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ಜ್ಞಾನವಾಪಿ ಮಸೀದಿಯಲ್ಲಿ ತ್ರೈಲೋಕ್ಯಮಹಾದೇವ ನಂದಿ ಹಾಗೂ ಶಿವಲಿಂಗ ವಿಗ್ರಹ ಪತ್ತೆಯಾಗಿದೆ ಎಂದು ಅವರು ಪ್ರತಿಪಾದಿಸಿರುವುದು ಸುಳ್ಳಾಗಿದೆ. ಅವರು ಪೋಸ್ಟ್‌ ಮಾಡಿರುವ ಚಿತ್ರಕ್ಕೂ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗುವ ಆಕೃತಿಗೂ ಯಾವುದೆ ಸಂಬಂಧವಿಲ್ಲ.

2ನೇ ಚಿತ್ರ

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಮತ್ತು ನಂದಿ ಫೋಟೋ ಎಂದು  ಹೇಳಿಕೊಂಡು ಹಂಚಿಕೊಳ್ಳಲಾಗಿರುವ ಫೋಟೋವನ್ನು ಗೂಗಲ್‌ನಲ್ಲಿ ಸರ್ಚ್ ಮಾಡಿದಾಗ ಅದು ಸುಮಾರು ಎರಡು ವರ್ಷದಿಂದ ಇಂಟರ್‌ನೆಟ್‌‌ನಲ್ಲಿ (ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್, ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ) ಲಭ್ಯವಿರುವುದಾಗಿ ಕಂಡು ಬಂದಿದೆ.

ಶಿವಲಿಂಗ ಮತ್ತು ನಂದಿ ಚಿತ್ರವು ಡಿಜಿಟಲ್ ಆರ್ಟ್ ಮೂಲಕ ಚಿತ್ರಿಸಲಾಗಿದೆ ಎಂದು ತಿಳಿದು ಬಂದಿದೆ. ಹಾಗಾಗಿ ಫೇಸ್‌ಬುಕ್‌ ಫೋಸ್ಟ್‌ನಲ್ಲಿ ಜ್ಞಾನವಾಪಿ ಮಸೀದಿಯ ಶಿವಲಿಂಗ ಎಂದು ಪ್ರತಿಪಾದಿಸಿದ ಫೋಸ್ಟ್ ಸುಳ್ಳಾಗಿದೆ.

 

View this post on Instagram

 

A post shared by mahadev bhakt 🙏 (@s_h_i_vsha_k_ti)

ಸುಮಾರು 2020ರಿಂದಲೂ ನಂದಿ ಮತ್ತು ಶಿವಲಿಂಗ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಹಾಗಾಗಿ ಈ ಚಿತ್ರವು  ಜ್ಞಾನವಾಪಿ ಮಸೀದಿಗೆ ಸಂಬಂಧಿಸಿಲ್ಲ ಎಂದು ಹೇಳಬಹುದು.

ಸಂಕ್ಷಿಪ್ತವಾಗಿ ಹೇಳುವುದಾದರೆ, ಜ್ಞಾನವಾಪಿ ಮಸೀದಿಯಲ್ಲಿ ಕಂಡುಬರುವ ‘ಶಿವಲಿಂಗ’ದ ದೃಶ್ಯಗಳೆಂದು ಸಂಬಂಧವಿಲ್ಲದ ಚಿತ್ರಗಳನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.

ವಿಡಿಯೊ

ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದೆ ಎಂದು ಮತ್ತೊಂದು ವಿಡಿಯೊವನ್ನು ಶೇರ್ ಮಾಡಲಾಗುತ್ತಿದೆ. ಆದರೆ ಇದೂ ಕೂಡ ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿದೆ ಎಂದು ಹೇಳುವ ಯಾವ ಪುರಾವೆಗಳು ಇಲ್ಲ. ವೀಡಿಯೊದ ನಿಖರವಾದ ಸ್ಥಳವನ್ನು ನಾವು ಕಂಡುಹಿಡಿಯಲಾಗದಿದ್ದರೂ, ವೀಡಿಯೊ ಕನಿಷ್ಠ ಒಂದು ವರ್ಷ ಹಳೆಯದು ಎಂದು ಕಂಡುಬಂದಿದೆ. ಹಾಗಾಗಿ ಇತ್ತೀಚೆಗಷ್ಟೇ ಜ್ಞಾನವಾಪಿ ಮಸೀದಿಯಲ್ಲಿ ಸಮೀಕ್ಷೆ ನಡೆದಿರುವ ಹಿನ್ನೆಲೆಯಲ್ಲಿ ಹಳೆಯ ವಿಡಿಯೋ ಮತ್ತು ಫೋಟೋ ಶೇರ್ ಆಗುತ್ತಿವೆ.

ಒಟ್ಟಾರೆಯಾಗಿ ಹೇಳುವುದಾದರೆ ಜ್ಞಾನವಾಪಿಯಲ್ಲಿ ಶಿವಲಿಂಗ ಮತ್ತು ನಂದಿ ವಿಗ್ರಹ ಪತ್ತೆಯಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಪೋಸ್ಟ್‌ಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಫೋಟೋಗಳು ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾದ ಫೋಟೋಗಳಲ್ಲ ಎಂದು ನಮ್ಮ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸದ್ಯ ಜ್ಞಾನವಾಪಿ ಮಸೀದಿಯ ವಿಚಾರಣೆಯು ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು ತೀರ್ಪು ಬಂದ ನಂತರವೇ ವಾಸ್ತವ ಏನೆಂದು ತಿಳಿಯುತ್ತದೆ. ಅಲ್ಲಿಯವರಗೆ ಸುಳ್ಳು ಸುದ್ದಿಯನ್ನು ಹರಡದಂತೆ ಎಚ್ಚರವಹಿಸಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...