Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಈ ಕೋಮು ಹಿಂಸಾಚಾರ ಯುಪಿಯದ್ದಲ್ಲ; ಅಲ್ಲಿ ದುರ್ಗಾ ಪೂಜೆಯ ಮೇಲೆ ಮುಸ್ಲಿಮರು ದಾಳಿ ನಡೆಸಿಲ್ಲ

ಫ್ಯಾಕ್ಟ್‌ಚೆಕ್: ಈ ಕೋಮು ಹಿಂಸಾಚಾರ ಯುಪಿಯದ್ದಲ್ಲ; ಅಲ್ಲಿ ದುರ್ಗಾ ಪೂಜೆಯ ಮೇಲೆ ಮುಸ್ಲಿಮರು ದಾಳಿ ನಡೆಸಿಲ್ಲ

- Advertisement -
- Advertisement -

‘ಉತ್ತರ ಪ್ರದೇಶದ ದುರ್ಗಾಪೂಜಾ ಪೆಂಡಾಲ್ ಮೇಲೆ ದಾಳಿ ಮಾಡಿದ ಮುಸ್ಲಿಮರ ವಿರುದ್ದ ಪ್ರತೀಕಾರ ತೀರಿಸಿಕೊಳ್ಳುವ ಹಿಂದೂಗಳು’ ಎಂದು ಪ್ರತಿಪಾದಿಸಿ ಗಲಭೆ ನಡೆಸುತ್ತಿರುವ ವೀಡಿಯೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಪ್ರತಾಪ್‌ಗಢ್ ಜಿಲ್ಲೆಯ ಲಾಲ್‌ಗಂಜ್ ಪಟ್ಟಣದ ಸಮೀಪವಿರುವ ದುರ್ಗಾ ಮಂಟಪದ ಮೇಲೆ ಮುಸ್ಲಿಂ ಗುಂಪು ಇತ್ತೀಚೆಗೆ ದಾಳಿ ಮಾಡಿದೆ ಎಂದು ಈ ವಿಡಿಯೊ ಜೊತೆಗಿನ ಪೋಸ್ಟ್ ಪ್ರತಿಪಾದಿಸುತ್ತದೆ.

ಮುಸ್ಲಿಮರ ದಾಳಿಗೆ ಪ್ರತೀಕಾರವಾಗಿ ಹಿಂದೂಗಳು ಮುಸ್ಲಿಮರ ವಾಹನಗಳನ್ನು ಧ್ವಂಸ ಮಾಡುತ್ತಿರುವುದು ಕಂಡುಬಂದಿದೆ ಎಂದು ಕೂಡಾ ಈ ಪೋಸ್ಟ್‌ನಲ್ಲಿ ಹೇಳಲಾಗಿದೆ. ಪೋಸ್ಟ್‌ನ ಆರ್ಕೈವ್‌ ಇಲ್ಲಿ ನೋಡಬಹುದು.

ಇದನ್ನೂ ಓದಿ: ಸಾವರ್ಕರ್ ಕ್ಷಮಾದಾನ ಅರ್ಜಿ- ಗಾಂಧಿ ಸಲಹೆ ನೀಡಿದ್ದರೇ ?

ವೀಡಿಯೋವನ್ನು ಕೂಲಂಕುಷವಾಗಿ ಗಮನಿಸಿದಾಗ, ಛತ್ತೀಸ್‌ಗಢ ವಾಹನದ ನೋಂದಣಿ ಸಂಖ್ಯೆಯನ್ನು ಜನಸಮೂಹವು ಧ್ವಂಸಗೊಳಿಸುತ್ತಿರುವ ವಾಹನಗಳಲ್ಲಿ ಕಾಣಬಹುದಾಗಿದೆ. ಸಂಬಂಧಿತ ಕೀವರ್ಡ್‌ಗಳನ್ನು ಬಳಸಿಕೊಂಡು ವೀಡಿಯೊಗಳನ್ನು ಹುಡುಕಿದಾಗ, ಛತ್ತೀಸ್‌ಗಢದ ಕವರ್ಧಾ ಪಟ್ಟಣದಲ್ಲಿ ಇತ್ತೀಚಿನ ಕೋಮು ಹಿಂಸಾಚಾರದ ದೃಶ್ಯಗಳು ಎಂದು ವಿವರಿಸುವ ಹಲವಾರು ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳನ್ನು ನೋಡಬಹುದಾಗಿದೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ವೀಡಿಯೊಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಹುಡುಕಾಡಿದಾಗ, ‘ದೈನಿಕ್ ಭಾಸ್ಕರ್’ ಪ್ರಕಟಿಸಿದ ಸುದ್ದಿಯೊಂದು ಲಭಿಸಿದ್ದು, ಅದರಲ್ಲಿ ಧ್ವಂಸಗೊಳಿಸಿದ ವಾಹನಗಳ ದೃಶ್ಯಗಳನ್ನು ನೋಡಬಹುದು. ಈ ವರದಿಯು, 05 ಅಕ್ಟೋಬರ್ 2021 ರಂದು ಛತ್ತೀಸ್‌ಗಢದ ಕಭಿರ್‌ಧಾಮ್ ಜಿಲ್ಲೆಯ ಕವರ್ಧಾ ಪಟ್ಟಣದಲ್ಲಿ ದೊಣ್ಣೆಗಳೊಂದಿಗೆ ಬಂದಿದ್ದ ದೊಡ್ಡ ಗುಂಪು ರಸ್ತೆಯಲ್ಲಿದ್ದ ವಾಹನಗಳನ್ನು ಧ್ವಂಸಗೊಳಿಸಿದೆ ಎಂದು ವರದಿ ಮಾಡಿದೆ.

ಈ ಘಟನೆಯ ಸಂಪೂರ್ಣ ವಿವರಗಳ ಹಲವಾರು ವರದಿಗಳು, ವಿಡಿಯೊ ವರದಿಗಳು ಪ್ರಕಟವಾಗಿವೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ವರದಿಗಳು, “ಲೋಹರಾ ಚೌಕ್ ಪ್ರದೇಶದಿಂದ ಧಾರ್ಮಿಕ ಧ್ವಜಗಳನ್ನು ತೆಗೆದುಹಾಕುವ ಬಗ್ಗೆ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಸಂಘರ್ಷ ಏರ್ಪಟ್ಟಿದ್ದವು. ಈ ಸಂಘರ್ಷದ ನಂತರ 03 ಅಕ್ಟೋಬರ್ 2021 ರಂದು ಕವರ್ಧಾದಲ್ಲಿ ಕೋಮುಗಲಭೆ ಪ್ರಾರಂಭವಾಯಿತು”. ನಂತರ 05 ಅಕ್ಟೋಬರ್ 2021 ರಂದು ವಿಶ್ವ ಹಿಂದೂ ಪರಿಷತ್ ಘೋಷಿಸಿದ ಬಂದ್‌ ವೇಳೆ, ಆ ಗುಂಪು ಮುಸ್ಲಿಮರು ಇರುವ ಪ್ರದೇಶಗಳಿಗೆ ಪ್ರವೇಶಿಸಿ ರಸ್ತೆಯಲ್ಲಿ ನಿಲ್ಲಿಸಿದ ವಾಹನಗಳನ್ನು ಧ್ವಂಸಗೊಳಿಸಿತು” ಎಂದು ಹೇಳುತ್ತವೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್‌: ‘ಊದುಪಾವೈ’ ಔಷಧೀಯ ಸಸ್ಯದ ಕಥೆ ಓದಿ ನಕ್ಕುಬಿಡಿ!

ವೈರಲ್‌ ವಿಡಿಯೊ ಉತ್ತರ ಪ್ರದೇಶದ ಪ್ರತಾಪ್‌ಘರ್ ಜಿಲ್ಲೆಯಲ್ಲಿ ನಡೆದ ಕೋಮುಗಲಭೆಯ ದೃಶ್ಯಗಳೆಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದಾಗ, ಉತ್ತರ ಪ್ರದೇಶ ಪೊಲೀಸ್ ಫ್ಯಾಕ್ಟ್-ಚೆಕ್ ತಂಡವು 13 ಅಕ್ಟೋಬರ್ 2021 ರಂದು ಟ್ವೀಟ್ ಮೂಲಕ ಸ್ಪಷ್ಟೀಕರಣವನ್ನು ನೀಡಿದೆ.

ವಿಡಿಯೋದಲ್ಲಿರುವ ಘಟನೆ ನಡೆದಿರುವುದು ಛತ್ತೀಸ್‌ಗಢದ ಕವರ್ಧಾ ಪಟ್ಟಣದಲ್ಲಿ ಹೊರತು ಉತ್ತರ ಪ್ರದೇಶದ ಪ್ರತಾಪ್‌ಗಢ ಜಿಲ್ಲೆಯಲ್ಲಲ್ಲ ಎಂದು ಉತ್ತರ ಪ್ರದೇಶ ಪೊಲೀಸರು ಸ್ಪಷ್ಟಪಡಿಸಿದ್ದಾರೆ. “ಪ್ರತಾಪ್‌ಗಢದ ಲಾಲ್‌ಗಂಜ್ ಪ್ರದೇಶದ ಬಳಿ ದುರ್ಗಾಪೂಜಾ ಪೆಂಡಾಲ್‌ ಮೇಲೆ ಮುಸ್ಲಿಂ ಗುಂಪು ಯಾವುದೆ ದಾಳಿ ನಡೆಸಿಲ್ಲ” ಎಂದು ಪ್ರತಾಪ್‌ಗಢ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಛತ್ತೀಸ್‌ಗಢದ ಕವರ್ಧಾ ಕೋಮು ಹಿಂಸಾಚಾರದ ವೀಡಿಯೊವನ್ನು ಉತ್ತರ ಪ್ರದೇಶದ ದುರ್ಗಾ ಪೆಂಡಾಲ್‌ ಮೇಲೆ ದಾಳಿ ಮಾಡಿದ ಮುಸ್ಲಿಂಮರ ವಿರುದ್ದ ಪ್ರತೀಕಾರ ತೀರಿಸಿಕೊಳ್ಳುತ್ತಿರುವ ಹಿಂದೂಗಳ ಗುಂಪಿನ ದೃಶ್ಯ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...