Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌‌: ಪಂಜಾಬ್‌‌ನ ಈ ಮಹಿಳಾ ಅಧಿಕಾರಿ ಮೃತಪಟ್ಟಿದ್ದು ಅತ್ಯಾಚಾರದಿಂದಲ್ಲ, ರಸ್ತೆ ಅಫಘಾತದಿಂದ

ಫ್ಯಾಕ್ಟ್‌‌ಚೆಕ್‌‌: ಪಂಜಾಬ್‌‌ನ ಈ ಮಹಿಳಾ ಅಧಿಕಾರಿ ಮೃತಪಟ್ಟಿದ್ದು ಅತ್ಯಾಚಾರದಿಂದಲ್ಲ, ರಸ್ತೆ ಅಫಘಾತದಿಂದ

ಪಂಜಾಬ್‌ನ ಅಮೃತಸರದಲ್ಲಿ ಮಹಿಳಾ ಕಾನ್‌ಸ್ಟೇಬಲ್ ಸಾವಿನ ಬಗ್ಗೆ ಕಾಂಗ್ರೆಸ್‌ ಏಕೆ ಮಾತನಾಡುತ್ತಿಲ್ಲ’ ಎಂದು ಆರೋಪಿಸಿ ಹಲವಾರು ಪೋಸ್ಟ್‌ಗಳು ಹರಿದಾಡುತ್ತಿವೆ.

- Advertisement -
- Advertisement -

ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಮೃತ ದೇಹದ ಫೋಟೋವೊಂದು, ’ಪಂಜಾಬ್‌‌ನಲ್ಲಿ ಮಹಿಳಾ ಪೊಲೀಸ್‌ ಒಬ್ಬರನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಲಾಗಿದೆ’ ಎಂಬ ಬರಹದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಬಿಜೆಪಿ ಆಡಳಿತ ಇರುವ ಉತ್ತರ ಪ್ರದೇಶದಲ್ಲಿ ಹತ್ರಾಸ್‌ ಅತ್ಯಾಚಾರ ಘಟನೆಯನ್ನು ಪ್ರಶ್ನಿಸುತ್ತಿರುವ ಕಾಂಗ್ರೆಸ್‌ಗೆ ಪ್ರತಿಕ್ರಿಯೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಇದನ್ನು ಹರಿಯಬಿಡಲಾಗುತ್ತಿದೆ. ವೈರಲ್ ಪೋಟೋದಲ್ಲಿ, ಪಂಜಾಬ್‌ನ ಅಮೃತಸರದಲ್ಲಿ ಮಹಿಳಾ ಕಾನ್‌ಸ್ಟೇಬಲ್ ಸಾವಿನ ಬಗ್ಗೆ ಕಾಂಗ್ರೆಸ್‌ ಏಕೆ ಮಾತನಾಡುತ್ತಿಲ್ಲ’ ಎಂದು ಆರೋಪಿಸಿ ಹಲವಾರು ಪೋಸ್ಟ್‌ಗಳು ಹರಿದಾಡುತ್ತಿವೆ.

ಇದನ್ನೂ ಓದಿ: ಬಾಲಿವುಡ್ ನಟಿ ಶ್ರೀದೇವಿಯ ಸಾವು ಸಹಜವಲ್ಲವೇ?

ಆರ್ಕೈವ್ ಇಲ್ಲಿದೆ

ಅತ್ಯಾಚಾರಕ್ಕೊಳಗಾದ ನಂತರ ಕಾನ್‌ಸ್ಟೆಬಲ್ ನೋಮಿಯನ್ನು ಕೊಲೆ ಮಾಡಲಾಗಿದೆ ಎಂದು ಪ್ರತಿಪಾದಿಸುವ ಹಲವಾರು ಪೋಸ್ಟ್‌ಗಲು ಸಾಮಾಜಿಕ ಜಾಲತಾಣದಲ್ಲಿ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ. ಈ ಅತ್ಯಾಚಾರದ ಬಗ್ಗೆ ಕಾಂಗ್ರೆಸ್ ಮುಖಂಡರಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಮೌನವಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅಂತಹ ಪೋಸ್ಟ್‌ಗಳ ಆರ್ಕೈವ್‌ಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ವೀಕ್ಷಿಸಬಹುದು.

ಫ್ಯಾಕ್ಟ್‌‌ಚೆಕ್

ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಈ ಪೋಟೋದಲ್ಲಿರುವ ಮಹಿಳಾ ಕಾನ್‌ಸ್ಟೆಬಲ್‌ ವಾಸ್ತವದಲ್ಲಿ ರಸ್ತೆ ಅಫಘಾತದಿಂದಾಗಿ ಸಾವಿಗೀಡಾಗಿದ್ದಾರೆ, ಇದು ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಅಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ರಿವರ್ಸ್ ಇಮೇಜ್ ಮೂಲಕ ಈ ವೈರಲ್ ಚಿತ್ರವನ್ನು ಹುಡುಕಾಡಿದರೆ ಹಿಂದಿ ದಿನಪತ್ರಿಕೆ ದೈನಿಕ್ ಸವೆರಾ ಟೈಮ್ಸ್‌‌ನ ವರದಿಯೊಂದನ್ನು ನೋಡಬಹುದಾಗಿದೆ. ಅದರ ವರದಿಯಲ್ಲಿ, ”ಅಮೃತಸರದಲ್ಲಿ ಮಹಿಳಾ ಕಾನ್‌ಸ್ಟೆಬಲ್‌ನ ಶವ ಪತ್ತೆಯಾಗಿದೆ ಎಂದು ತಿಳಿಸಲಾಗಿದೆ. ಈ ಕುರಿತು ಹಲವಾರು ವರದಿಗಳನ್ನು ನೋಡಬಹುದಾಗಿದೆ.

ಇದನ್ನೂ ಓದಿ: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ಟ್ರಿಬ್ಯೂನ್ ಇಂಡಿಯಾದ ಅಮೃತಸರದಿಂದ ಅಕ್ಟೋಬರ್‌ 1 ರಂದು ಮಾಡಿದ ವರದಿಯ ಪ್ರಕಾರ, “ನೋಮಿ ಎಂಬ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್‌‌ ಅವರ ಸ್ಕೂಟರ್‌‌ಗೆ ವೇಗದಿಂದ ಬಂದ ಕಾರೊಂದು ಸಂಗತ್ಪುರ ಗ್ರಾಮದ ಬಳಿ ಡಿಕ್ಕಿ ಹೊಡೆದ ಕಾರಣ ಅವರು ಮೃತಪಟ್ಟಿದ್ದಾರೆ” ಎಂದು ಹೇಳುತ್ತದೆ.

ಪೊಲೀಸ್ ಉಪ ಆಯುಕ್ತ ಮುಖ್ವಿಂದರ್ ಸಿಂಗ್ ಭುಲ್ಲರ್ ಅವರು ಮಹಿಳಾ ಕಾನ್‌ಸ್ಟೆಬಲ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ದೃಪಡಿಸಿದ್ದಾರೆಂದು ದಿ ಕ್ವಿಂಟ್ ವರದಿ ಮಾಡಿದೆ. ಅಪಘಾತದ ಕುರಿತು ಹೆಚ್ಚಿನ ತನಿಖೆ ನಡೆಸಲು ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವಂತೆ ಮಹಿಳಾ ಅಧಿಕಾರಿಯ ಮೇಲೆ ಅತ್ಯಾಚಾರ ನಡೆದಿಲ್ಲ. ಅವರು ರಸ್ತೆ ಅಪಘಾತದಿಂದಾಗಿ ಮೃತಪಟ್ಟಿದ್ದಾರೆ ಎಂದು ಈ ಮೂಲಕ ಸ್ಪಷ್ಟವಾಗುತ್ತದೆ.

ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...