Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಫಾಲೋ ಮಾಡುತ್ತಿರುವ ಟ್ವಿಟರ್‌ ಖಾತೆಯು ಈ ಚಿತ್ರವನ್ನು ಹಂಚಿಕೊಂಡಿದೆ

- Advertisement -
- Advertisement -

ಶರೀರ ಪೂರ್ತಿ ಮಂಜುಗಡ್ಡೆಯಲ್ಲಿ ಆವೃತ್ತವಾಗಿರುವಂತೆ ಕಾಣುತ್ತಿರುವ ಪದ್ಮಾಸನ ಹಾಕಿಕೊಂಡು ಕೂತಿರುವ ವ್ಯಕ್ತಿಯೊಬ್ಬರ ಕಪ್ಪುಬಿಳುಪಿನ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಚಿತ್ರದಲ್ಲಿ ಇರುವ ವ್ಯಕ್ತಿಯನ್ನು ‘ಹಿಮಾಲಯದಲ್ಲಿ ಇರುವ ಯೋಗಿ’ ಎಂದು ಪ್ರತಿಪಾದಿಸಲಾಗುತ್ತಿದೆ.

ಟ್ವಿಟರ್‌ನಲ್ಲಿ ಈ ಚಿತ್ರವನ್ನು ರಿನಿತಿ ಚಟರ್ಜಿ ಎನ್ನುವ ಖಾತೆಯೊಂದು, ‘ಮಂಜುಗಡ್ಡೆಯನ್ನು ಹೊದ್ದುಕೊಂಡಿರುವ ಹಿಮಾಲಯದ ಯೋಗಿ’ ಎಂದು ಹೇಳಿಕೊಂಡಿದೆ. ಈ ಖಾತೆಯು ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಫಾಲೋವರ್‌ ಅನ್ನು ಹೊಂದಿದೆ. ಈ ಚಿತ್ರವನ್ನು ನಿಖಿಲ್ ಠಾಕರ್‌‌ ಎನ್ನುವ ಬಿಜೆಪಿ ಬೆಂಬಲಿಗ ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ. ವಿಷೇಶವೇನೆಂದರೆ ನಿಖಿಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಅವರು ಫಾಲೊ ಮಾಡುತ್ತಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ತುಮಕೂರು ಜಿಲ್ಲೆಗೆ ಮನುಷ್ಯ ರೂಪದ ವಿಚಿತ್ರ ಪ್ರಾಣಿ ಬಂದಿದ್ದು ನಿಜವೇ?

ಚಿತ್ರವು ಕೇವಲ ಟ್ವಿಟರ್‌ ಮಾತ್ರವಲ್ಲದೆ ಪೇಸ್‌ಬುಕ್‌ನಲ್ಲೂ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ, “ಇಂತಹ ತಪಸ್ಸು, ಹಠಮಾರಿತನ, ಸಾಧನೆ ಇರುವುದು ಸನಾತನದಲ್ಲಿ ಮಾತ್ರ, ಇಂದ್ರಿಯಗಳನ್ನು ಗೆದ್ದುಕೊಂಡ ಸಾವಿರಾರು ಉದಾಹರಣೆಗಳಿವೆ, ಇಂತಹ ಉದಾಹರಣೆ ಬೇರೆ ಯಾವ ಸಂಸ್ಕೃತಿಯಲ್ಲಾಗಲಿ, ಧರ್ಮದಲ್ಲಾಗಲಿ ಕಾಣುವುದಿಲ್ಲ” ಎಂದು ಚಿತ್ರದಲ್ಲಿರುವ ವ್ಯಕ್ತಿ ಅತಿಮಾನುಷವಾದುದನ್ನು ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಲಾಗಿದೆ.

ಇದೇ ಪ್ರತಿಪಾದನೆಯನ್ನು ಟ್ವಿಟರ್‌ನಲ್ಲೂ ಮಾಡಲಾಗಿದೆ. ಅದನ್ನುಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ. ಈ ಚಿತ್ರವನ್ನು ವೈರಲ್ ಮಾಡಿರುವ ಸಾಮಾಜಿಕ ಜಾಲತಾಣದ ಎಲ್ಲಾ ಹ್ಯಾಂಡಲ್‌ಗಳು ಬಿಜೆಪಿ ಪರವಾಗಿ ಪ್ರೊಪಗಾಂಡ ಸೃಷ್ಟಿಸುವ ಪೇಜ್‌ಗಳಾಗಿವೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

ಫ್ಯಾಕ್ಟ್‌ಚೆಕ್

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಚಿತ್ರವನ್ನು ನಾನುಗೌರಿ.ಕಾಂ ರಿವರ್ಸ್‌ ಸರ್ಚ್ ಮೂಲಕ ಹುಡುಕಾಡಿದಾಗ ಈ ಚಿತ್ರವು ‘ಬಾಬಾ ಸರ್‌ಬಂಗಿ I’ ಎನ್ನುವ ಫೇಸ್‌ಬುಕ್‌ ಪೇಜ್‌ನಲ್ಲಿ ಪತ್ತೆಯಾಗಿದೆ. ಈ ಚಿತ್ರವನ್ನು ಮೂರು ವರ್ಷಗಳ ಹಿಂದೆ ಅಪ್‌ಲೋಡ್ ಮಾಡಲಾಗಿದೆ. ಪೇಜ್‌ನಲ್ಲಿ ಇರುವ ಈ ಚಿತ್ರವನ್ನು ಬಳಸಿಕೊಂಡು ಚಿತ್ರವನ್ನು ಕಪ್ಪುಬಿಳುಪಾಗಿ ಎಡಿಟ್‌ ಮಾಡಿ ಅದನ್ನು ವೈರಲ್ ಮಾಡಲಾಗಿದೆ.

ಫೇಸ್‌ಬುಕ್ ಪೇಜ್‌ನಲ್ಲಿ ಈ ವ್ಯಕ್ತಿಯನ್ನು ‘ಬಾಬಾ ಭಲೇ ಗಿರಿ ಜಿ ಮಹಾರಾಜ್’ ಎಂದು ಹೇಳಿಕೊಂಡಿದೆ. ಪೇಜ್‌ನಲ್ಲಿ ಇರುವ ಫೇಸ್‌ಬುಕ್‌‌ ಚಿತ್ರದಲ್ಲಿ ಕಂದು ಬಣ್ಣದ ‘ಬೂದಿ’ ಅವರ ಮೈಮೇಲೆ ಇರುವಂತೆ ಸ್ಪಷ್ಟವಾಗಿ ಕಾಣುತ್ತದೆ. ಜೊತೆಗೆ ಹಿನ್ನಲೆಯಲ್ಲಿ ‘ಬೆರಣಿ’ ಜೋಡಿಸಿರುವುದು ಕೂಡಾ ಕಾಣುತ್ತದೆ.

ಈ ಮಾಹಿತಿಯ ಎಳೆಯನ್ನು ಹುಡುಕಿಕೊಂಡು ನಾವು ಮತ್ತಷ್ಟು ಹುಡುಕಿದ್ದೇವೆ. ಈ ವ್ಯಕ್ತಿಯನ್ನು ಜನರು ‘‘ಶ್ರೀಶ್ರೀ 1008 ಮಹಂತ್‌ ಬಾಬಾ ಭಲೇ ಗಿರಿ ಜಿ ಮಹಾರಾಜ್‌” ಎಂದು ಕರೆಯುತ್ತಾರೆ. ಇದು ಹರಿಯಾಣ ರಾಜ್ಯದ ರಿಂಧಾನದಲ್ಲಿರುವ ‘ಪರಾಶರ್‌ ತೀರ್ಥ’ದಲ್ಲಿ ಮಾಡಲಾಗಿರುವ ಧಾರ್ಮಿಕ ಆಚರಣೆಯೊಂದರ ಚಿತ್ರವಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

ಈ ಆಚರಣೆಯಲ್ಲಿ ಬೆರಣಿಯನ್ನು ಹಲವು ದೊಡ್ಡ ದೊಡ್ಡ ಗುಂಪಾಗಿ ಜೋಡಿಸಿ ಅದರ ನಡುವೆ ಅವರು ಕುಳಿತುಕೊಳ್ಳುತ್ತಾರೆ. ಈ ವೇಳೆ ಅವರ ಮೈಮೇಲೆ ಬೆರಣಿಯ ಬೂದಿ ಅಂಟಿಕೊಂಡಿದ್ದಾಗಿರಬಹುದಾಗಿದೆ.

ಪ್ರಸ್ತುತ ವೈರಲ್ ಆಗಿರುವ ಚಿತ್ರವು ಮೂರು ವರ್ಷಗಳಷ್ಟು ಹಳೆಯದಾದರೂ, ‘ಬಾಬಾ ಸರ್‌ಬಂಗಿ I‘ ಫೇಸ್‌ಬುಕ್ ಪೇಜ್‌ನಲ್ಲಿ ಈ ಆಚರಣೆಯ ಹಳೆಯ ಚಿತ್ರಗಳು ಮತ್ತು ಇತ್ತೀಚೆಗೆ ಕ್ಲಿಕ್ ಮಾಡಿರುವ ಚಿತ್ರಗಳು ಎಂಬಂತೆ ತೋರುವ ಹಲವಾರು ಚಿತ್ರಗಳು ಇವೆ.

ಒಟ್ಟಿನಲ್ಲಿ ಹೇಳಬಹುದಾದರೆ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಚಿತ್ರವು ಯಾವುದೆ ಹಿಮಾಲಯದ ಯೋಗಿಯದ್ದಲ್ಲ ಮತ್ತು ಅವರ ಮೈಮೇಲೆ ಇರುವುದು ಹಿಮವೂ ಅಲ್ಲ. ಅವರು ಹರಿಯಾಣ ರಾಜ್ಯದವರಾಗಿದ್ದು, ಅವರ ಮೈಮೇಲೆ ಇರುವುದು ಬೂದಿಯಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಯೋಗಿ ಆದಿತ್ಯನಾಥರ ಬೆಂಗಾವಲಿನ ಮೇಲೆ ದಾಳಿ ಮಾಡಿದ ಯುವಕರ ವಿಡಿಯೊ ಈಗಿನದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...