Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಮೋದಿ ಹೇಳಿದ್ದು ಸುಳ್ಳು, 2002ರ ಮೊದಲೇ ಅಹಮದಾಬಾದ್‌ ಜಿಲ್ಲೆಯಲ್ಲಿ ಮೂರು ವಿವಿಗಳಿದ್ದವು!

ಫ್ಯಾಕ್ಟ್‌ಚೆಕ್‌: ಮೋದಿ ಹೇಳಿದ್ದು ಸುಳ್ಳು, 2002ರ ಮೊದಲೇ ಅಹಮದಾಬಾದ್‌ ಜಿಲ್ಲೆಯಲ್ಲಿ ಮೂರು ವಿವಿಗಳಿದ್ದವು!

ಪ್ರಧಾನಿ ಮೋದಿಯವರು ಹೇಳಿದ ಸುಳ್ಳನ್ನು ಆಧಾರ ಸಹಿತ ‘ಸ್ಕ್ರಾಲ್‌.ಇನ್‌’ ಬಯಲಿಗೆಳೆದಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 24ರಂದು ಅಹಮದಾಬಾದ್‌ನ ಬಾವ್ಲಾದಲ್ಲಿ ಬಿಜೆಪಿ ಪರವಾಗಿ ಚುನಾವಣಾ ಪ್ರಚಾರ ಮಾಡುತ್ತಾ, “20 ವರ್ಷಗಳ ಹಿಂದೆ ಅಹಮದಾಬಾದ್ ಜಿಲ್ಲೆಯಲ್ಲಿ ಒಂದೇ ಒಂದು ವಿಶ್ವವಿದ್ಯಾಲಯವಿತ್ತು. ಜಿಲ್ಲೆಯಲ್ಲಿ ಈಗ 23 ವಿಶ್ವವಿದ್ಯಾಲಯಗಳಿವೆ” ಎಂದಿದ್ದರು. ಇದನ್ನು ಬಿಜೆಪಿಯ ಅಧಿಕೃತ ಟ್ವಿಟರ್ ಖಾತೆಯಲ್ಲಿಯೂ ಉಲ್ಲೇಖಿಸಲಾಗಿದೆ.

ಆದಾಗ್ಯೂ, ಕೇಂದ್ರ ಶಿಕ್ಷಣ ಸಚಿವಾಲಯದ ದಾಖಲೆಗಳು ಮೋದಿಯವರ ಹೇಳಿಕೆಗೆ ತದ್ವಿರುದ್ಧವಾಗಿವೆ ಎಂದು ‘ಸ್ಕ್ರಾಲ್‌.ಇನ್‌’ ಜಾಲತಾಣ ‘ಫ್ಯಾಕ್ಟ್‌ಚೆಕ್’ ಮಾಡಿದೆ.

“ಅಹಮದಾಬಾದ್ ಜಿಲ್ಲೆಯಲ್ಲಿ 2002ರ ಮೊದಲು ಒಂದೇ ಒಂದು ವಿಶ್ವವಿದ್ಯಾಲಯವಿತ್ತು” ಎಂದು ಮೋದಿ ಸುಳ್ಳು ಹೇಳಿರುವುದನ್ನು ಬಯಲಿಗೆಳೆದಿರುವ ವರದಿಯು, ಕೇಂದ್ರ ಸರ್ಕಾರದ ದಾಖಲೆಗಳನ್ನು ಉಲ್ಲೇಖಿಸಿದೆ.

“ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ ದಾಖಲೆಗಳ ಪ್ರಕಾರ ಜಿಲ್ಲೆಯಲ್ಲಿ ಎರಡು ದಶಕಗಳ ಹಿಂದೆಯೇ ‘ಗುಜರಾತ್ ವಿಶ್ವವಿದ್ಯಾಲಯ, ಗುಜರಾತ್ ವಿದ್ಯಾಪೀಠ ಮತ್ತು ಡಾ ಬಾಬಾಸಾಹೇಬ್ ಅಂಬೇಡ್ಕರ್ ಮುಕ್ತ ವಿಶ್ವವಿದ್ಯಾಲಯ’ ಇದ್ದವು. ಅಂದರೆ ಮೂರು ವಿಶ್ವವಿದ್ಯಾಲಯಗಳು ಮೊದಲೇ ಸ್ಥಾಪಿತವಾಗಿದ್ದವು. ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು (ಯುಜಿಸಿ) ಶಿಕ್ಷಣ ಸಚಿವಾಲಯದ ಅಡಿಯಲ್ಲಿ 1956ರಲ್ಲಿ ಸ್ಥಾಪನೆಯಾದ ಶಾಸನಬದ್ಧ ಸಂಸ್ಥೆ ಎಂಬುದನ್ನು ಗಮನಿಸಬೇಕು. ಈ ಸಂಸ್ಥೆ ವಿಶ್ವವಿದ್ಯಾಲಯಗಳಿಗೆ ಕೇಂದ್ರ ಸರ್ಕಾರದ ಅನುದಾನ ಮತ್ತು ಹಣವನ್ನು ವಿತರಣೆ ಮಾಡುತ್ತದೆ.

ಗುಜರಾತ್ ವಿಶ್ವವಿದ್ಯಾನಿಲಯವನ್ನು 1949ರಲ್ಲಿ ಗುಜರಾತ್ ವಿಶ್ವವಿದ್ಯಾನಿಲಯ ಕಾಯಿದೆಯಡಿಯಲ್ಲಿ ಸ್ಥಾಪಿಸಲಾಯಿತು. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮುಕ್ತ ವಿಶ್ವವಿದ್ಯಾಲಯವನ್ನು 1994ರಲ್ಲಿ ಸ್ಥಾಪಿಸಲಾಯಿತು. ಇವೆರಡೂ ರಾಜ್ಯ ವಿಶ್ವವಿದ್ಯಾಲಯಗಳಾಗಿವೆ. ಅಕ್ಟೋಬರ್ 1920ರಲ್ಲಿ ಮಹಾತ್ಮ ಗಾಂಧಿಯವರು ಸ್ಥಾಪಿಸಿದ ಗುಜರಾತ್ ವಿದ್ಯಾಪೀಠವನ್ನು 1963ರಲ್ಲಿ ವಿಶ್ವವಿದ್ಯಾನಿಲಯವೆಂದು ಪರಿಗಣಿಸಲಾಯಿತು.

ಅಹಮದಾಬಾದ್ ಜಿಲ್ಲೆಯಲ್ಲಿ 2002ರ ಮೊದಲೇ ಎರಡು ರಾಷ್ಟ್ರೀಯ ಮಟ್ಟದ ಶಿಕ್ಷಣ ಸಂಸ್ಥೆಗಳು ಸ್ಥಾಪನೆಯಾಗಿದ್ದವು. ಅವುಗಳೆಂದರೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್. ಈ ಎರಡನ್ನೂ 1961ರಲ್ಲಿ ಸ್ಥಾಪಿಸಲಾಗಿದೆ.

‘27 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದೆ’

ಭಾರತೀಯ ಚುನಾವಣಾ ಆಯೋಗದ ದಾಖಲೆಗಳ ಪ್ರಕಾರ ಕಳೆದ 27 ವರ್ಷಗಳಿಂದ (1995-2022) ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ. 2001ರ ಅಕ್ಟೋಬರ್‌ನಲ್ಲಿ ನರೇಂದ್ರ ಮೋದಿಯವರು ಮುಖ್ಯಮಂತ್ರಿಯಾಗುವ ಮೊದಲು ಕೇಶುಭಾಯಿ ಪಟೇಲ್, ಸುರೇಶ್ಚಂದ್ರ ಮೆಹ್ತಾ, ಶಂಕರಸಿನ್ಹ ವಘೇಲಾ ಮತ್ತು ದಿಲೀಪ್ ಪಾರಿಖ್ ಅವರು ಗುಜರಾತ್‌ನಲ್ಲಿ ಬಿಜೆಪಿಯಿಂದ ಮುಖ್ಯಮಂತ್ರಿಗಳಾಗಿದ್ದರು. ಇಪ್ಪತ್ತು ವರ್ಷಗಳ ಹಿಂದೆ ಮೋದಿ ಅವರು ಮುಖ್ಯಮಂತ್ರಿಯಾಗಿ ಎರಡನೇ ವರ್ಷದಲ್ಲಿ ಸೇವೆ ಸಲ್ಲಿಸುತ್ತಿದ್ದರು. 2014ರ ಮೇವರೆಗೂ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿದರು. ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು ಗುಜರಾತ್‌ನಲ್ಲಿ 1990-94ರವರೆಗೆ ಜನತಾ ದಳ ನೇತೃತ್ವದ ಸರ್ಕಾರವಿತ್ತು. 1990ರ ಮೊದಲು, ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಸತತವಾಗಿ ಆಡಳಿತ ನಡೆಸಿತ್ತು.

ಯುಜಿಸಿ ದಾಖಲೆಗಳ ಪ್ರಕಾರ ನವೆಂಬರ್ 25ರ ಹೊತ್ತಿಗೆ (ಅಂದರೆ ಪ್ರಧಾನಿಯವರ ಭಾಷಣದ ವೇಳೆಗೆ) ಅಹಮದಾಬಾದ್ ಜಿಲ್ಲೆಯಲ್ಲಿ 22 ವಿಶ್ವವಿದ್ಯಾನಿಲಯಗಳಿವೆ.

ಫೆಬ್ರವರಿ 2 ರಂದು ರಾಜ್ಯಸಭೆಯಲ್ಲಿ ಶಿಕ್ಷಣ ಸಚಿವಾಲಯ ನೀಡಿದ ಪ್ರತಿಕ್ರಿಯೆಯ ಪ್ರಕಾರ, ಗುಜರಾತ್ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಮಂಜೂರಾದ 162 ಬೋಧಕ ಹುದ್ದೆಗಳಲ್ಲಿ 68 (41%) ಖಾಲಿ ಇವೆ. ಇದಲ್ಲದೆ, “2020ರ ಏಪ್ರಿಲ್‌ನಲ್ಲಿ ಗುಜರಾತ್‌ನ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 72 ಖಾಲಿ ಹುದ್ದೆಗಳಿದ್ದವು. ಇದು ಏಪ್ರಿಲ್ 2021ರಲ್ಲಿ 65ಕ್ಕೆ ಇಳಿದಿದೆ. ಆದರೆ ಏಪ್ರಿಲ್ 2022ರಲ್ಲಿಯೂ 64 ಹುದ್ದೆಗಳು ಖಾಲಿ ಇದ್ದವು” ಎಂದು ಫ್ಯಾಕ್ಟ್‌ಚೆಕ್ ವರದಿ ಹೇಳುತ್ತದೆ.

ಮೋದಿಯವರು ಮಾಡಿರುವ ಪ್ರತಿಪಾದನೆಯು ವಾಸ್ತವದಿಂದ ಕೂಡಿದೆಯೇ ಎಂದು ತಿಳಿಯಲು ‘ಸ್ಕ್ರಾಲ್‌.ಇನ್‌’ ಜಾಲತಾಣ ಪ್ರಧಾನ ಮಂತ್ರಿಗಳ ಕಚೇರಿಯನ್ನು ಸಂಪರ್ಕಿಸಿದೆ. “ಗುಜರಾತ್‌ನಾದ್ಯಂತ ಇರುವ ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಕುರಿತು ಅಪ್‌ಡೇಟ್‌ಗಾಗಿ ನಾವು ಗುಜರಾತ್ ಸರ್ಕಾರದ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್‌ಜೆ ಹೈದರ್ ಅವರನ್ನು ಫೋನ್ ಮತ್ತು ಇಮೇಲ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದ್ದೇವೆ. ಆದರೆ ಈವರೆಗೆ ಪ್ರತಿಕ್ರಿಯೆ ನೀಡಿಲ್ಲ” ಎಂದು ವರದಿ ತಿಳಿಸಿದೆ.

ವರದಿ ಕೃಪೆ: ಸ್ಕ್ರಾಲ್‌.ಇನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...