‘ನೋಟು ರದ್ದತಿ ನೀತಿ’ಯನ್ನು ವಿರೋಧಿಸಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ವೇಳೆ ಒಕ್ಕೂಟ ಸರ್ಕಾರದ ಪರವಾಗಿ ವಾದ ಮಂಡಿಸಿದ ಅಟಾರ್ನಿ ಜನರಲ್ (ಎಜಿ) ಆರ್ ವೆಂಕಟರಮಣಿ ಅವರು, “ವಿಫಲವಾದ ಮಾತ್ರಕ್ಕೆ ಅವರ ಉದ್ದೇಶ ದೋಷಪೂರಿತ ಎಂದು ಹೇಳಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.
ನೋಟು ಅಮಾನ್ಯೀಕರಣ ನೀತಿಯನ್ನು ವಿರೋಧಿಸಿ ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ಎರಡನೇ ದಿನವಾದ ಶುಕ್ರವಾರ ನಡೆಸಲಾಗಿತ್ತು. ಈ ವೇಳೆ ಒಕ್ಕೂಟ ಸರ್ಕಾವು ಈ ವಾದ ಮಂಡಿಸಿದೆ. ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್, ಬಿ.ಆರ್. ಗವಾಯಿ, ಎ.ಎಸ್. ಬೋಪಣ್ಣ, ವಿ. ರಾಮಸುಬ್ರಮಣ್ಯಂ ಮತ್ತು ಬಿ.ವಿ. ನಾಗರತ್ನ ಅವರನ್ನೊಳಗೊಂಡ ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠವು ಪ್ರಕರಣವನ್ನು ವಿಚಾರಣೆ ನಡೆಸುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಸುಪ್ರಿಂಕೋರ್ಟ್‌ನಲ್ಲಿ ವಾದ ಮಂಡಿಸಿದ ಎಜಿ, “…ನೀವು ವಿಫಲವಾದ ಕಾರಣ, ನಿಮ್ಮ ಉದ್ದೇಶವೂ ದೋಷಪೂರಿತವಾಗಿದೆ ಎಂದು ಯಾವುದೇ ಸದುದ್ದೇಶವುಳ್ಳ ವ್ಯಕ್ತಿ ಹೇಳುವುದಿಲ್ಲ. ಇದು ತಾರ್ಕಿಕ ಅರ್ಥವನ್ನು ಹೊಂದಿಲ್ಲ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ನೋಟ್ ಬ್ಯಾನ್‌ಗೆ 6 ವರ್ಷ: ಮೋದಿ ನೇತೃತ್ವದ BJP ಸರ್ಕಾರ ಅಂದು ಹೇಳಿದ್ದೇನು? ಈಗ ಆಗಿದ್ದೇನು?
ಸುಪ್ರೀಂ ಕೋರ್ಟ್ ಈ ಹಿಂದೆ ಅಕ್ಟೋಬರ್ 12 ರಂದು ಪ್ರಾಥಮಿಕ ವಿಚಾರಣೆಯನ್ನು ನಡೆಸಿತ್ತು. ಗುರುವಾರದಂದು ಹಿರಿಯ ವಕೀಲ, ನಾಲ್ಕು ಬಾರಿಯ ಹಣಕಾಸು ಸಚಿವರಾಗಿದ್ದ ಪಿ. ಚಿದಂಬರಂ ಅವರು ನೋಟು ರದ್ದತಿ ನೀತಿಯು ಅಸಾಂವಿಧಾನಿಕ ಎಂದು ವಾದಿಸಿದ್ದರು ಮತ್ತು ಬ್ಯಾಂಕ್ ಆಫ್ ಇಂಡಿಯಾ (RBI) ಕಾಯಿದೆಯ ಮೀಸಲು ಸೆಕ್ಷನ್ 26 (2) ರ ವ್ಯಾಪ್ತಿಯನ್ನು ಪ್ರಶ್ನಿಸಿದ್ದರು.
ಒಕ್ಕೂಟ ಸರ್ಕಾರದ 2016 ರ ನಿರ್ಧಾರವನ್ನು ವಿರೋಧಿಸಿ ಅರ್ಜಿದಾರರೊಬ್ಬರ ಪರವಾಗಿ ವಾದ ಮಂಡಿಸಿದ ಚಿದಂಬರಂ, ಬ್ಯಾಂಕ್ ನೋಟುಗಳ ಸಮಸ್ಯೆಯನ್ನು ನಿಯಂತ್ರಿಸುವ ಹಕ್ಕನ್ನು ಸಂಪೂರ್ಣವಾಗಿ ಭಾರತೀಯ ರಿಸರ್ವ್ ಬ್ಯಾಂಕ್‌ಗೆ ಹೊಂದಿದೆ ಎಂದು ವಾದಿಸಿದ್ದರು.
ನೋಟು ಅಮಾನ್ಯೀಕರಣವು “ಉತ್ತಮವಾಗಿ ಪರಿಗಣಿಸಲ್ಪಟ್ಟ” ನಿರ್ಧಾರವಾಗಿದ್ದು, ನಕಲಿ ಹಣ, ಭಯೋತ್ಪಾದಕ ಹಣಕಾಸು, ಕಪ್ಪು ಹಣ ಮತ್ತು ತೆರಿಗೆ ವಂಚನೆಯನ್ನು ಎದುರಿಸುವ ದೊಡ್ಡ ಕಾರ್ಯತಂತ್ರದ ಭಾಗವಾಗಿದೆ ಎಂದು ಒಕ್ಕೂಟ ಸರ್ಕಾರ ಇತ್ತೀಚೆಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಇದನ್ನೂ ಓದಿ: ನೋಟ್ ಬ್ಯಾನ್ ದುರಂತಕ್ಕೆ 6 ವರ್ಷ: ದೇಶ ಮರೆಯಬಾರದ ಚಿತ್ರಗಳಿವು!
500 ಮತ್ತು 1,000 ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸುವ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಒಕ್ಕೂಟ ಸರ್ಕಾರ, ಭಾರತೀಯ ರಿಸರ್ವ್ ಬ್ಯಾಂಕ್‌ನೊಂದಿಗೆ ವ್ಯಾಪಕವಾದ ಸಮಾಲೋಚನೆಯ ನಂತರ ಮತ್ತು ನೋಟು ನಿಷೇಧವನ್ನು ಜಾರಿಗೊಳಿಸುವ ಮೊದಲು ಪೂರ್ವ ಸಿದ್ಧತೆಗಳನ್ನು ಮಾಡಿದ ನಂತರ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.



Union Government.