Homeಮುಖಪುಟರಾಜ್ಯಪಾಲರು ಎರಡನೇ ಬಾರಿಯೂ ಮಸೂದೆಗೆ ಅಂಕಿತ ಹಾಕದಿದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆ ವಿಫಲಗೊಂಡಿದೆ ಎಂದರ್ಥ : ತಮಿಳುನಾಡು...

ರಾಜ್ಯಪಾಲರು ಎರಡನೇ ಬಾರಿಯೂ ಮಸೂದೆಗೆ ಅಂಕಿತ ಹಾಕದಿದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆ ವಿಫಲಗೊಂಡಿದೆ ಎಂದರ್ಥ : ತಮಿಳುನಾಡು ಸರ್ಕಾರ

- Advertisement -
- Advertisement -

ಸರ್ಕಾರ ಕಳುಹಿಸಿದ ಮಸೂದೆಗೆ ರಾಜ್ಯಪಾಲ ಆರ್‌.ಎನ್‌ ರವಿ ಅವರು ಎರಡನೇ ಬಾರಿಯೂ ಸಹಿ ಹಾಕದಿರುವುದು ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ವಿಫಲಗೊಂಡಿದೆ ಎಂಬುವುದನ್ನು ತೋರಿಸುತ್ತದೆ ಎಂದು ತಮಿಳುನಾಡು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮುಂದೆ ಕಳವಳ ವ್ಯಕ್ತಪಡಿಸಿದೆ.

ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಅಂಕಿತ ಹಾಕದ ಹಿನ್ನೆಲೆ ತಮಿಳುನಾಡು ಸರ್ಕಾರ ಸಲ್ಲಿಸಿದ ಎರಡು ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಆರ್. ಮಹಾದೇವನ್ ಅವರ ಪೀಠವು ವಿಚಾರಣೆ ನಡೆಸಿದೆ.

ಪಕ್ಷಗಳ ನಡುವಿನ ವಿವಾದದಿಂದಾಗಿ ಜನರು ಮತ್ತು ರಾಜ್ಯ ತೊಂದರೆ ಅನುಭವಿಸುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ತಮಿಳುನಾಡು ರಾಜ್ಯ ಸರ್ಕಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು, “ಕಾನೂನಿನ ಪ್ರಕಾರ ರಾಜ್ಯ ಶಾಸಕಾಂಗವು ಮಸೂದೆಯನ್ನು ಅಂಗೀಕರಿಸಿದರೆ, ರಾಜ್ಯಪಾಲರು ಮರುಪರಿಶೀಲನೆಗೆ ಕೋರಬಹುದು” ಎಂದು ಹೇಳಿದ್ದಾರೆ.

“ಆದಾಗ್ಯೂ, ಅದೇ ಮಸೂದೆಯನ್ನು ಪುನಃ ಅಂಗೀಕರಿಸಿ ಎರಡನೇ ಬಾರಿಗೆ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿದರೆ, ರಾಜ್ಯಪಾಲರಿಗೆ ಒಪ್ಪಿಗೆ ನೀಡುವುದನ್ನು ಬಿಟ್ಟು ಬೇರೆ ದಾರಿಯಿಲ್ಲ. ಇದು ನಮ್ಮ ಸಾಂವಿಧಾನಿಕ ಚೌಕಟ್ಟಿನಲ್ಲಿ ನಿಗದಿಪಡಿಸಲಾದ ಕಾರ್ಯವಿಧಾನವಾಗಿದೆ. ಅವರು ಇನ್ನೂ ಒಪ್ಪಿಗೆ ನೀಡದಿದ್ದರೆ ಅಥವಾ ಒಪ್ಪಿಗೆ ನೀಡಲು ವಿಫಲವಾದರೆ, ಅದು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ವೈಫಲ್ಯ” ಎಂದು ರೋಹಟಗಿ ವಾದಿಸಿದ್ದಾರೆ.

ಎರಡನೇ ಸುತ್ತಿನಲ್ಲಿ ರಾಜ್ಯಪಾಲರು ತಮ್ಮ ಒಪ್ಪಿಗೆ ನೀಡುವುದಕ್ಕೆ ಬದ್ಧರು ಎಂಬುವುದಕ್ಕೆ ಸಾಂವಿಧಾನಿಕ ನಿಬಂಧನೆಗಳು ಬಹಳ ಸ್ಪಷ್ಟವಾಗಿವೆ ಎಂದು ರೋಹಟಗಿ ಹೇಳಿದ್ದಾರೆ.

ಸರ್ಕಾರದ ಪರ ವಾದ ಮಂಡಿಸಿದ ಮತ್ತೊಬ್ಬರು ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, “ಮಸೂದೆಗಳನ್ನು ರಾಷ್ಟ್ರಪತಿಗಳಿಗೆ ಉಲ್ಲೇಖಿಸುವ ಆಯ್ಕೆಯನ್ನು ಮೊದಲ ಹಂತದಲ್ಲಿಯೇ ಮಾಡಬೇಕಾಗಿತ್ತು. ಮರು ಪರಿಶೀಲನೆಗೆ ಕಳುಹಿಸಿದ ಬಳಿಕ ಅದನ್ನು ಮಾಡಲು ಸಾಧ್ಯವಿಲ್ಲ” ಎಂದಿದ್ದಾರೆ.

ಮಸೂದೆಯನ್ನು ಮರು ಮಂಡಿಸಿದ ಅನುಮೋದನೆ ಪಡೆದ ಬಳಿ ರಾಜ್ಯಪಾಲರಿಗೆ ಕಳುಹಿಸಿದರೆ, ಅದಕ್ಕೆ ಒಪ್ಪಿಗೆ ನೀಡುವುದನ್ನು ಬಿಟ್ಟು ರಾಜ್ಯಪಾಲರಿಗೆ ಬೇರೆ ದಾರಿ ಇಲ್ಲ. ಎರಡನೇ ಸುತ್ತಿನಲ್ಲಿ ರಾಷ್ಟ್ರಪತಿಗಳ ಪರಿಗಣನೆಗೆ ಮಸೂದೆಯನ್ನು ಕಳುಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ವಾದ ಆಲಿಸಿದ ನ್ಯಾಯಾಲಯ ಫೆಬ್ರವರಿ 6ರಕ್ಕೆ ವಿಚಾರಣೆಯನ್ನು ಮುಂದೂಡಿದೆ. ತಮಿಳುನಾಡು ಸರ್ಕಾರದ ಪರ ವಕೀಲರು ಮತ್ತು ನಂತರ ರಾಜ್ಯಪಾಲರನ್ನು ಪ್ರತಿನಿಧಿಸುವ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರ ವಾದವನ್ನು ಆಲಿಸುವುದಾಗಿ ಹೇಳಿದೆ.

ರಾಜ್ಯಪಾಲ ರವಿ ಅವರು ಮಸೂದೆಗಳಿಗೆ ಒಪ್ಪಿಗೆ ನೀಡುವಲ್ಲಿ ವಿಳಂಬ ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯ ಸರ್ಕಾರ 2023ರಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ರಾಜ್ಯ ವಿಧಾನಸಭೆಯು ರಾಜ್ಯಪಾಲ ರವಿ ಅವರು ಹಿಂದಿರುಗಿಸಿದ 10 ಮಸೂದೆಗಳನ್ನು ಮರು ಅಂಗೀಕರಿಸಿದ ಬಳಿಕ ರಾಜ್ಯಪಾಲ ಮತ್ತು ಸರ್ಕಾರದ ನಡುವೆ ತಿಕ್ಕಾಟ ಶುರುವಾಗಿದೆ.

ಡಿಸೆಂಬರ್ 13, 2023ರಂದು, ಆಡಳಿತದ ವ್ಯವಹಾರಗಳು ಮುಂದುವರಿಯಬೇಕು ಎಂದು ಹೇಳಿದ್ದ ಸುಪ್ರೀಂ ಕೋರ್ಟ್, ತಮಿಳುನಾಡು ವಿಧಾನಸಭೆ ಮರು ಅನುಮೋದಿಸಿರುವ ಮತ್ತು ರಾಜ್ಯಪಾಲ ರವಿ ಅವರ ಒಪ್ಪಿಗೆಗೆ ಕಳುಹಿಸಿರುವ ಮಸೂದೆಗಳಿಗೆ ರಾಷ್ಟ್ರಪತಿ ಸಹಿ ಹಾಕುವುದನ್ನು ತಡೆಯಲು ಬಯಸುವುದಿಲ್ಲ ಎಂದಿತ್ತು.

ಕುಂಭ ಮೇಳ ಕಾಲ್ತುಳಿತದಲ್ಲಿ 2,000 ಜನರು ಸಾವನ್ನಪ್ಪಿದ್ದಾರೆ : ಸಂಸದ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...