Homeಕರೋನಾ ತಲ್ಲಣಕುಂಭಮೇಳದ ನಂಬಿಕೆ ಕೊರೊನಾ ನಿಯಮಗಳಿಗಿಂತ ದೊಡ್ಡದು ಎಂದ ಬಿಜೆಪಿ ನಾಯಕ

ಕುಂಭಮೇಳದ ನಂಬಿಕೆ ಕೊರೊನಾ ನಿಯಮಗಳಿಗಿಂತ ದೊಡ್ಡದು ಎಂದ ಬಿಜೆಪಿ ನಾಯಕ

- Advertisement -
- Advertisement -

ಭಾರತದ ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ಸಿಲುಕಿ ಒದ್ದಾಡುತ್ತಿದೆ. ಆರೋಗ್ಯ ಮೂಲಸೌಕರ್ಯಗಳ ಕೊರತೆ ಕಾಣಿಸಿಕೊಳ್ಳುತ್ತಿದೆ. ಕೊರೊನಾಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತಿದ್ದರೂ ಉತ್ತರಾಖಂಡದ ಕುಂಭಮೇಳದಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಲಾಗುತ್ತಿದೆ. ಇದು ವಿಶ್ವದಾದ್ಯಂತ ಅನೇಕ ಮಂದಿಯ ಟೀಕೆಗೂ ಕಾರಣವಾಗಿದೆ.

ಆದರೂ ಕೂಡ ಬಿಜೆಪಿ ಆಡಳಿತಡ ಕೇಂದ್ರ ಸರ್ಕಾರ, ಉತ್ತರಾಖಂಡ ಸರ್ಕಾರ ಕುಂಭಮೇಳದ ಬಗ್ಗೆ ಯಾವುದೇ ಆಕ್ಷೇಪ ಎತ್ತುತ್ತಿಲ್ಲ. ಬದಲಿಗೆ ಕುಂಭಮೇಳವನ್ನು ಪ್ರೋತ್ಸಾಹಿಸುತ್ತಿದ್ದಾರೆ. ಈ ನಡುವೆ ಉತ್ತರಪ್ರದೇಶದ ಬಿಜೆಪಿ ನಾಯಕ ಸುನಿಲ್ ಭಾರಲಾ ಕುಂಭಮೇಳದ ನಂಬಿಕೆ ಕೊರೊನಾ ನಿಯಮಗಳಿಗಿಂತ ದೊಡ್ಡದು ಎಂದು ಹೇಳಿಕೆ ನೀಡಿದ್ದಾರೆ.

ಲಕ್ಷಾಂತರ ಸಂಖ್ಯೆಯಲ್ಲಿ ಸೇರುತ್ತಿರುವ ಜನಸಮೂಹ ಮತ್ತು ಬೃಹತ್ ಧಾರ್ಮಿಕ ಸಭೆಯನ್ನು ಸಮರ್ಥಿಸಿಕೊಂಡ ಯುಪಿ ಬಿಜೆಪಿ ನಾಯಕ ಸುನಿಲ್ ಭಾರಲಾ, ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ, “ಕುಂಭ ಕಿ ಆಸ್ತಾ ಕೊರೊನಾ ವೈರಸ್ ಸೇ ಬಹುತ್ ಬಡಿ ಹೈ” (ಕುಂಭಮೇಳದದ ನಂಬಿಕೆ ಕೊರೊನಾ ವೈರಸ್‌ಗಿಂತ ತುಂಬಾ ದೊಡ್ಡದು) ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕುಂಭಮೇಳದಲ್ಲಿ ಭಾಗವಹಿಸಿದ್ದ 1,701 ಜನರಿಗೆ ಕೊರೊನಾ ದೃಢ, ಆದರೂ ಮೇಳಕ್ಕೆ ಇಲ್ಲ ತೆರೆ!

“ನಾನು ಏಪ್ರಿಲ್ 13 ರಂದು ಕುಂಭಮೇಳಕ್ಕೆ ಹಾಜರಾಗಿದ್ದೇನೆ ಮತ್ತು ಕೊರೊನಾ ಸೋಂಕಿಗೆ ಒಳಗಾಗಿದ್ದೇನೆ ನಂಬಿಕೆ ಮತ್ತು ಧಾರ್ಮಿಕ ನಂಬಿಕೆಗಳು ಎಲ್ಲ ಕೊರೊನಾ ಮಾನದಂಡಗಳು ಮತ್ತು ಮಾರ್ಗಸೂಚಿಗಳಿಗಿಂತ ದೊಡ್ಡದು” ಎಂದು ಬಿಜೆಪಿ ನಾಯಕ ಹೇಳಿದ್ದಾರೆ.

ಕುಂಭಮೇಳದ ಬೃಹತ್ ಆಚರಣೆ ಕೊರೊನಾವನ್ನು ನಿವಾರಿಸುವುದಕ್ಕೆ ನಡೆಯುತ್ತಿದೆ. ಜೊತೆಗೆ ಗಂಗಾ ಮಾತೆ ವೈರಸ್ ವಿರುದ್ಧ ಹೋರಾಡುತ್ತಾಳೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಭೆ-ಸಮಾರಂಭಗಳಲ್ಲಿ 200 ಜನಕ್ಕಷ್ಟೇ ಅವಕಾಶ: ಕುಂಭಮೇಳಕ್ಕೆ ವಿನಾಯಿತಿ ನೀಡಿದ ಉತ್ತರಾಖಂಡ ಸರ್ಕಾರ

ಹರಿದ್ವಾರದಲ್ಲಿ ಎಲ್ಲಾ ಕೊರೊನಾ ನಿಯಮಗಳನ್ನು ಅನುಸರಿಸುತ್ತಿರುವ ಕಾರಣ ಮಹಾ ಕುಂಭಮೇಳವನ್ನು ಮರ್ಕಾಜ್ ಹೋಲಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.

ಇನ್ನು ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದರು ನಡೆಯುತ್ತಿರುವ ಕುಂಭಮೇಳ ಏಪ್ರಿಲ್ 30ರ ವರೆಗೆ ಯಾವುದೇ ಅಡೆತಡೆ ಇಲ್ಲದೆ ನಡೆಯುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೂ ಕೇವಲ 5 ದಿನಗಳ ಅವಧಿಯಲ್ಲಿ ಕುಂಭಮೇಳ ಪ್ರದೇಶದ 2,167 ಜನರು ಕೊರೊನಾ ಸೋಂಕಿಗೆ ಒಳಪಟ್ಟಿದ್ದಾರೆ.

ಆದರೆ ಉತ್ತರಖಂಡ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್ ಕೊರೊನಾ ಏರಿಕೆಯ ನಡುವೆಯೂ ಕುಂಭಮೇಳ ನಡೆಸುವುದನ್ನು ಸಮರ್ಥಿಸಿಕೊಂಡಿದ್ದಾರೆ. ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿದೆ, ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಾಪಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಕೊರೊನಾ ಸೋಂಕು ಹರಡುವುದನ್ನು ತಡೆಯಲು ಬೇರೆ ರಾಜ್ಯಗಳು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಪ್ರಕಟಿಸುತ್ತಿದ್ದರೆ, ಇತ್ತ ಲಕ್ಷಾಂತರ ಜನರು ಹರಿದ್ವಾರದ ಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ಈಗಾಗಲೇ ಎರಡು ಸಾವಿರಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ.


ಇದನ್ನೂ ಓದಿ: ಕೊರೊನಾ ರೋಗಿಗಳ ಅಂತ್ಯಸಂಸ್ಕಾರ ಕಾಣಿಸದಂತೆ ಸ್ಮಶಾನಕ್ಕೆ ಶೀಟ್ ಗೋಡೆ ಹಾಕಿಸಿದ ಉತ್ತರ ಪ್ರದೇಶ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...