Homeಮುಖಪುಟ‘ಟೆಕ್‌ ಫಾಗ್‌’ ಪ್ರಕರಣ: ಸುಪ್ರಿಂಕೋರ್ಟ್ ಮಧ್ಯಸ್ಥಿಕೆ ವಹಿಸುವಂತೆ ಕಾಂಗ್ರೆಸ್ ಆಗ್ರಹ

‘ಟೆಕ್‌ ಫಾಗ್‌’ ಪ್ರಕರಣ: ಸುಪ್ರಿಂಕೋರ್ಟ್ ಮಧ್ಯಸ್ಥಿಕೆ ವಹಿಸುವಂತೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ಪ್ರಮುಖ ಸಾಮಾಜಿಕ ಮಾಧ್ಯಮಗಳನ್ನು ಹೈಜಾಕ್ ಮಾಡಲು ಮತ್ತು ಎನ್‌ಕ್ರಿಪ್ಟ್ ಮಾಡಿದ ಮೆಸೇಜಿಂಗ್ ಪ್ಲಾಟ್‌ಫಾರ್ಮ್‌‌ಗಳನ್ನು ಬೈಪಾಸ್ ಮಾಡಲು ಬಿಜೆಪಿಯು “ಟೆಕ್ ಫಾಗ್” ಎಂಬ ರಹಸ್ಯವಾದ ಅಪ್ಲಿಕೇಶನ್ ಬಳಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕೇಂದ್ರ ಸರ್ಕಾರದಿಂದ ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಬರಬೇಕು. ಈ ವಿಷಯದಲ್ಲಿ ಸುಪ್ರೀಂ ಕೋರ್ಟ್‌ ಮಧ್ಯಸ್ಥಿಕೆ ವಹಿಸಬೇಕು ಎಂದು ಒತ್ತಾಯಿಸಲಾಗಿದೆ.

ಬಿಜೆಪಿಯು ಸಾಮಾಜಿಕ ಮಾಧ್ಯಮಗಳಲ್ಲಿ ತನ್ನ ಸಂದೇಶಗಳನ್ನು ಮತ್ತು ಕಾರ್ಯಸೂಚಿಯನ್ನು ಹೆಚ್ಚಿಸಿಕೊಳ್ಳಲು, ಮಹಿಳಾ ಪತ್ರಕರ್ತರು ಸೇರಿದಂತೆ ಬಲಪಂಥೀಯ ರಾಜಕಾರಣದ ವಿರುದ್ಧ ಇರುವವರನ್ನು ಟಾರ್ಗೆಟ್‌ ಮಾಡಲು ಈ ಅಪ್ಲಿಕೇಶನ್ ಬಳಸಲಾಗುತ್ತಿದೆ ಎಂದು ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರಿನಾಥೆ ಆರೋಪಿಸಿದ್ದಾರೆ.

ದಿ ವೈರ್‌ನ ಎರಡು ವರ್ಷಗಳ ತನಿಖೆಯು ರಹಸ್ಯ ಅಪ್ಲಿಕೇಶನ್‌ನ ಕಾರ್ಯನಿರ್ವಹಣೆಯನ್ನು ಬಹಿರಂಗಪಡಿಸಿದೆ. ಟ್ವಿಟರ್‌‌ನ ‘ಟ್ರೆಂಡಿಂಗ್’ ವಿಭಾಗವನ್ನು ಮತ್ತು ಫೇಸ್‌ಬುಕ್‌ನಲ್ಲಿನ ‘ಟ್ರೆಂಡ್’ ಅನ್ನು ಹೈಜಾಕ್ ಮಾಡಬಹುದು, ‘ನಿಷ್ಕ್ರಿಯ’ ವಾಟ್ಸ್‌ಅಪ್‌‌ ಖಾತೆಗಳನ್ನು ಉದ್ದೇಶಿತ ಕಿರುಕುಳಕ್ಕಾಗಿ ಬಳಸಬಹುದು ಎಂಬುದನ್ನು ತನಿಖಾ ವರದಿ ಹೊರಹಾಕಿದೆ.

“ಸರ್ಕಾರವು ನಿಸ್ಸಂಶಯವಾಗಿ ಟೆಕ್ ಫಾಗ್‌ನೊಂದಿಗೆ ಕೈಜೋಡಿಸಿದೆ. ಬಿಜೆಪಿ ವಿಶೇಷವಾಗಿ ಟೆಕ್ ಫಾಗ್‌ನೊಂದಿಗಿದೆ. ಆದರೆ ಭಾರತದ ಐಟಿ ಮತ್ತು ದೂರಸಂಪರ್ಕ ಸಚಿವರು ಏನು ಮಾಡುತ್ತಿದ್ದಾರೆ? ಸಮಸ್ಯೆ ಎಷ್ಟು ಗಂಭೀರವಾಗಿದ್ದರೂ ಸಚಿವಾಲಯ ಏಕೆ ಎಚ್ಚೆತ್ತುಕೊಂಡಿಲ್ಲ?” ಸುಪ್ರಿಯಾ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದ್ದಾರೆ.

ಪತ್ರಕರ್ತರು ಮತ್ತು ರಾಜಕಾರಣಿಗಳು ಸೇರಿದಂತೆ ಜನರ ಮೇಲೆ ಕಣ್ಣಿಡಲು ಪೆಗಾಸಸ್ ಅನ್ನು ಬಳಸುವ ಬಗ್ಗೆ ಸರ್ಕಾರವು ಮೌನವಾಗಿದೆ. ಸುಪ್ರೀಂ ಕೋರ್ಟ್ ಪೆಗಾಸಸ್‌‌ ವಿವಾದವನ್ನು ವಿಚಾರಣೆ ಮಾಡುತ್ತಿದೆ ಎಂದಿರುವ ಅವರು, ಟೆಕ್‌ ಫಾಗ್‌ ಪ್ರಕರಣವನ್ನೂ ಹೀಗೆಯೇ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.

“ನಾನು ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸುತ್ತೇನೆ. ಸುಪ್ರಿಂ ಕೋರ್ಟ್ ಈಗಾಗಲೇ ಪೆಗಾಸಸ್ ವಿಷಯವನ್ನು ಪರಿಶೀಲಿಸುತ್ತಿದೆ. ಈ ವರದಿಯು ಭಾರತೀಯ ನಾಗರಿಕರನ್ನು ‌ಟಾರ್ಗೆಟ್‌ ಮಾಡಿದೆ. ನಮ್ಮ ಪ್ರಜಾಪ್ರಭುತ್ವದ ತಳಹದಿಯನ್ನೇ ಘಾಸಿಗೊಳಿಸುವುದರಿಂದ ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ನೋಡಬೇಕು” ಅವರು ಹೇಳಿದ್ದಾರೆ.

“ಭಾರತದ ಪ್ರಜಾಪ್ರಭುತ್ವವನ್ನು ಕಸಿದುಕೊಳ್ಳುವ ಹಕ್ಕು ಅಥವಾ ಸ್ವಾತಂತ್ರ್ಯ ಯಾರಿಗೂ ಇರಬಾರದು ಎಂಬ ಕಾರಣಕ್ಕಾಗಿ ನಾನು ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಕೈಗೆತ್ತಿಕೊಳ್ಳಬೇಕು. ಇದರ ಹಿಂದೆ ಇರುವವರನ್ನು ಶಿಕ್ಷಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಬಿಜೆಪಿ ಯುವ ಮೋರ್ಚಾದ ಕೆಲವು ಪದಾಧಿಕಾರಿಗಳು ಈ ಅಪ್ಲಿಕೇಷನ್‌‌ನ ಭಾಗವಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಬಿಜೆಪಿಯು ಈ ವಿಷಯದ ಬಗ್ಗೆ ಸ್ಪಷ್ಟವಾಗಿರಬೇಕು ಎಂದು ತಿಳಿಸಿದ್ದಾರೆ.

ದಿ ವೈರ್ ಜೊತೆ ಮಾತನಾಡಿರುವ ಯುವ ಮೊರ್ಚಾದ ನಾಯಕರೊಬ್ಬರು, ಬಿಜೆಪಿ ಆ್ಯಪ್ ಬಳಸಿರುವುದನ್ನು ನಿರಾಕರಿಸಿದ್ದಾರೆ.

ಕರೋನವೈರಸ್ ಹರಡುವುದನ್ನು ತಡೆಯಲು ಲಾಕ್‌ಡೌನ್ ವಿಧಿಸಿದ ನಂತರ ಕಾಂಗ್ರೆಸ್‌ ಪಕ್ಷವು ಕಾರ್ಮಿಕರೊಂದಿಗೆ ನಿಂತಿತು. ಆಗ ಹ್ಯಾಶ್‌ಟ್ಯಾಗ್ ಬಳಸಿ ಕಾಂಗ್ರೆಸ್ ಅನ್ನು ವ್ಯವಸ್ಥಿತವಾಗಿ ಟಾರ್ಗೆಟ್ ಮಾಡಲು ಟೆಕ್‌ ಫಾಗ್‌ ಅಪ್ಲಿಕೇಷನ್‌‌ ಬಳಸಲಾಗಿದೆ ಎಂದು ಕಾಂಗ್ರೆಸ್ ನಾಯಕಿ ಸುಪ್ರಿಯಾ ಆರೋಪಿಸಿದ್ದಾರೆ.

ತಬ್ಲೀಘಿ ಜಮಾತ್‌ನ ಮೇಲೆಯೂ ವ್ಯವಸ್ಥಿತ ದಾಳಿಯನ್ನು ಟೆಕ್ ಫಾಗ್ ಮಾಡಿದೆ. ಆದ್ದರಿಂದ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಯಾಕೆಂದರೆ ಇದು ಭಾರತದ ಪ್ರಜಾಪ್ರಭುತ್ವದ ಅಡಿಪಾಯಕ್ಕೆ ನೋವುಂಟು ಮಾಡುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಟಿಎಂಸಿ ರಾಜ್ಯಸಭಾ ಸಂಸದ ಡೆರೆಕ್ ಒ’ಬ್ರೇನ್ ಅವರು ರಹಸ್ಯ ಅಪ್ಲಿಕೇಶನ್ ಕುರಿತ ಚರ್ಚೆಗಾಗಿ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯನ್ನು ಕೇಳಿದ್ದಾರೆ. ಟೆಕ್‌ ಫಾಗ್‌ ವಿಷಯವು ಗಂಭೀರವಾಗಿದ್ದು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟು ಮಾಡುತ್ತದೆ ಎಂದು ಹೇಳಿದ್ದಾರೆ.


ಇದನ್ನೂ ಓದಿರಿ: ನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’ ಸ್ಪೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...