Homeಕರ್ನಾಟಕನಕಲಿ ಜಾತಿ ಸರ್ಟಿಫಿಕೇಟ್‌: ಬಿಜೆಪಿ ಶಾಸಕ ರೇಣುಕಾಚಾರ್ಯ ಸಹೋದರನ ವಿರುದ್ಧ ಎಫ್‌ಐಆ‌‌ರ್‌

ನಕಲಿ ಜಾತಿ ಸರ್ಟಿಫಿಕೇಟ್‌: ಬಿಜೆಪಿ ಶಾಸಕ ರೇಣುಕಾಚಾರ್ಯ ಸಹೋದರನ ವಿರುದ್ಧ ಎಫ್‌ಐಆ‌‌ರ್‌

- Advertisement -
- Advertisement -

ತನ್ನ ಮಗಳಿಗೆ ಬೇಡ ಜಂಗಮ ಹೆಸರಿನಲ್ಲಿ ಪರಿಶಿಷ್ಟ ಜಾತಿಯ ಪ್ರಮಾಣಪತ್ರವನ್ನು ಪಡೆದುಕೊಂಡ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರ ದ್ವಾರಕೇಶ್ವರಯ್ಯ ಸೇರಿದಂತೆ ಒಟ್ಟು 11 ಜನರ ವಿರುದ್ಧ ದಾವಣಗೆರೆಯ ಕೆಟಿಜೆ ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ ಎಂದು ವರದಿಯಾಗಿದೆ.

ಮಾಜಿ ಸಚಿವ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ಪುತ್ರಿ ಎಂ.ಆರ್‌.ಚೇತನ ಅವರು ಬೇಡ ಜಂಗಮ ಹೆಸರಿನಲ್ಲಿ ಪರಿಶಿಷ್ಟ ಜಾತಿಯ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದಾರೆ ಎಂದು ಹಲವು ದಿನಗಳಿಂದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಅವರ ದಾಖಲೆಗಳು ಸಾಮಾಜಿಕ ಜಾಲತಾಣದಗಳಲ್ಲಿ ಹರಿದಾಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಎಂ.ಪಿ.ರೇಣುಕಾಚಾರ್ಯ ಲಿಂಗಾಯತರಾಗಿದ್ದು, ದಾವಣಗೆರೆ ಜಿಲ್ಲೆ ಹೊನ್ನಾಳಿಯ ಕುಂದೂರು ಶಾಲೆಯಲ್ಲಿ ಅವರು ಓದುತ್ತಿದ್ದಾಗ ಪಡೆದಿರುವ ಶಾಲಾ ದಾಖಲೆಗಳಲ್ಲೂ ಜಾತಿ ಕಲಂನಲ್ಲಿ ‘ಲಿಂಗಾಯತ’ ಎಂದು ಸ್ಪಷ್ಟವಾಗಿ ಉಲ್ಲೇಖವಾಗಿದೆ. ಆದರೆ ಅವರ ಪುತ್ರಿ ಎಂ.ಆರ್‌.ಚೇತನ ಬೇಡ ಜಂಗಮ ಜಾತಿ ಎಂದು ಪರಿಶಿಷ್ಟ ಜಾತಿಯ ಪ್ರಮಾಣಪತ್ರವನ್ನು 2012ರ ನ.17ರಂದು ಬೆಂಗಳೂರಿನ ಉತ್ತರ ತಾಲ್ಲೂಕು ತಹಸೀಲ್ದಾರ್‌ ಅವರಿಂದ ಪಡೆದಿದ್ದಾರೆ. ಅದನ್ನು ಜಿಲ್ಲಾ ಅಧಿಕಾರಿಗಳು ಸರಿ ಇದೆಯೇ ಎಂದು ಪರಿಶೀಲನೆಯನ್ನೂ ನಡೆಸಿಲ್ಲ ಎಂದು ‘ವಿಜಯ ಕರ್ನಾಟಕ’ ವರದಿ ಮಾಡಿತ್ತು.

ಇದನ್ನೂ ಓದಿ: ಪರಿಶಿಷ್ಟರ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಶಿಕ್ಷೆ ಏನು?

ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರೇಣುಕಾಚಾರ್ಯ ಅವರು, ಮಗಳು ಪರಿಶಿಷ್ಟ ಜಾತಿಯ ಸರ್ಟಿಫಿಕೇ‌ಟ್‌ ಪಡೆದಿದ್ದು ನಿಜವೇ ಆಗಿದೆ ಎಂದು ಒಪ್ಪಿಕೊಂಡಿದ್ದರು. ಆದರೆ ತನ್ನ ಮಗಳು ಯಾವುದೆ ಸವಲತ್ತುಗಳನ್ನು ಪಡೆದುಕೊಂಡಿಲ್ಲ ಎಂದು ಹೇಳಿದ್ದರು. ಅಲ್ಲದೆ ಈ ಪ್ರಮಾಣ ಪತ್ರವನ್ನು ತನ್ನ ಸಹೋದರ ಮಾಡಿಕೊಟ್ಟಿದ್ದಾಗಿ ಕೂಡಾ ಹೇಳಿಕೊಂಡಿದ್ದರು.

ಈ ಬಗ್ಗೆ ದಲಿತ ಸಂಘಟನೆಯ ಮುಖಂಡರಾದ ಹೆಗ್ಗರೆ ರಂಗಪ್ಪ ದೂರು ನೀಡಿದ್ದರು. ಅದರಂತೆ ದ್ವಾರಕೇಶ್ವರಯ್ಯ ಸೇರಿದಂತೆ 11 ಜನರ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗಿದೆ.

ನಕಲಿ ಜಾತಿ ಪ್ರಮಾಣ ಪತ್ರ ಪಡೆಯುದರ ಬಗ್ಗೆ ಕಾನೂನು ತಜ್ಞರು ಏನು ಹೇಳುತ್ತಾರೆ?

ನಕಲಿ ಜಾತಿ ಪ್ರಮಾಣ ಪತ್ರ ಪಡೆಯುವವರ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪರ್ಯಾಯ ಕಾನೂನು ವೇದಿಕೆಯ ಸಲಹೆಗಾರರಾದ ಶಿವಮಣಿ, “ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಬಹುದು. ನಕಲಿ ಪ್ರಮಾಣ ಪತ್ರ ಬರೆದು ಮೀಸಲಾಯಿಯನ್ನು ಪಡೆದರೆ ನಿಜವಾದ ಫಲಾನುಭವಿಗೆ ತೊಂದರೆ ನೀಡಿದಂತಾಗುತ್ತದೆ. ಮೀಸಲಾತಿಯ ಅವಕಾಶ ಪಡೆದು ಸರ್ಕಾರಿ ಸೇವೆಯಲ್ಲಿದ್ದರೆ ಕೆಲಸದಿಂದ ವಜಾಗೊಳಿಸಬಹುದು. ಜನಪ್ರತಿನಿಧಿಯಾಗಿದ್ದರೆ ಸ್ಥಾನವನ್ನು ಅಸಿಂಧುಗೊಳಿಸಬಹುದು” ಎಂದು ಹೇಳಿದ್ದಾರೆ

ಇದನ್ನೂ ಓದಿ: ಮಾಧ್ಯಮಗಳ ಜಾತಿ ಅಜೆಂಡಾ ವಿರುದ್ದ ಆಕ್ರೊಶ: ಟಿವಿ ಚರ್ಚೆಗಳನ್ನು ಬಹಿಷ್ಕರಿಸಿದ ಬಿಎಸ್‌ಪಿ

“ಕರ್ನಾಟಕದಲ್ಲಿ ಸಿವಿಲ್ ರೈಟ್ಸ್‌ ಎನ್‌ಫೋರ್ಸ್‌ಮೆಂಟ್ ಏಜೆನ್ಸಿ ಎಂಬುವುದು ಇದೆ. ಯಾರ್‍ಯಾರು ಸರ್ಕಾರಿ ಅಧಿಕಾರಿಗಳು ನಕಲಿ ಜಾತಿ ಪ್ರಮಾಣಪತ್ರ ಪಡೆದಿದ್ದಾರೆ ಎಂಬುದನ್ನು ಪರಿಶೀಲಿಸುವುದೇ ಅದರ ಕೆಲಸ. ಬಿಜೆಪಿ ಸಚಿವರಾಗಿರುವ ಪ್ರಭು ಚೌವ್ಹಾಣ್ ಅವರು ನಕಲಿ ಪ್ರಮಾಣ ಪತ್ರ ಪಡೆದಿದ್ದಾರೆಂದು ಸದರಿ ಸಂಸ್ಥೆ ಹೇಳಿತ್ತು. ಆದರೆ ಜಿ‌ಲ್ಲಾಧಿಕಾರಿಯವರು ಜಾತಿ ಪ್ರಮಾಣ ಪತ್ರವನ್ನು ರದ್ದು ಮಾಡಿಲ್ಲ. ಚೌವ್ಹಾಣ್ ಸಚಿವರಾಗಿ ಮುಂದುವರಿಯುತ್ತಲೇ ಇದ್ದಾರೆ” ಎಂದು ಶಿವಮಣಿ ವಿಷಾದಿಸಿದ್ದಾರೆ.

“ಚೌವ್ಹಾಣ್‌ ಅವರು ಎಸ್‌ಸಿ ಪ್ರಮಾಣಪತ್ರ ಬರೆದು ಎರಡು ಸಲ ಗೆದ್ದಿದ್ದಾರೆ. ಇವರ ವಿರುದ್ಧ ಪ್ರಕರಣ ನಡೆಯುತ್ತಿದೆ. ಅಂತಾರಾಜ್ಯ ಜಾತಿ ಪ್ರಮಾಣ ಪತ್ರ ಪಡೆದಿರುವುದು ಶಿಕ್ಷಾರ್ಹ ಅಪರಾಧ” ಎಂದು ತಿಳಿಸಿದ್ದಾರೆ.

“ಇತ್ತೀಚಿನ ದಿನಗಳಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕಾಗಿ ಗಂಭೀರವಾಗಿ ತನಿಖೆಗಳೂ ನಡೆಯಬೇಕಿದೆ. ಬೆಂಗಳೂರಿನ ಡಿಆರ್‌ಡಿಒನಲ್ಲಿ ಏಳುನೂರು ಜನರು ನಕಲಿ ಜಾತಿ ಪ್ರಮಾಣಪತ್ರ ಬರೆದಿದ್ದಾರೆಂಬ ವರದಿಯಾಗಿದೆ” ಎಂದು ಶಿವಮಣಿ ಆತಂಕ ವ್ಯಕ್ತಪಡಿಸಿದ್ದಾರೆ.

ವಲಸಮ್ಮ ವರ್ಸಸ್ ಸ್ಟೇಟ್ ಆಫ್ ಕೇರಳ ಪ್ರಕರಣವನ್ನು ಉಲ್ಲೇಖಿಸಿದ ಶಿವಮಣಿ, “ಗಂಡ ಪರಿಶಿಷ್ಟ ಜಾತಿಯಾಗಿದ್ದಾರೆಂದು ಹೆಂಡತಿ ಪರಿಶಿಷ್ಟ ಜಾತಿಯ ಪ್ರಮಾಣಪತ್ರ ಪಡೆದು ಕೆಲಸ ಪಡೆದಿರುತ್ತಾರೆ. ಆದರೆ ಹೆಂಡತಿ ಸವರ್ಣೀಯ ಜಾತಿಗೆ ಸೇರಿರುತ್ತಾರೆ. ಸುಪ್ರೀಂ ಈ ಕುರಿತು ವಿಚಾರಣೆ ನಡೆಸಿ, ಜಾತಿ ಎಂಬುದು ಹುಟ್ಟಿನಿಂದ ಬರುತ್ತದೆ. ಮದುವೆಯಾಗುವುದರಿಂದ ಬದಲಾಗುವುದಿಲ್ಲ ಎಂದಿದೆ” ಎಂದು ಶಿವಮಣಿ ವಿವರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ರಾಜಸ್ಥಾನದಲ್ಲಿ ಜಾತಿ ದೌರ್ಜನ್ಯದ ವಿರುದ್ದ ’ಆಪರೇಷನ್ ಸಮಾನತಾ’: ದಲಿತರ ಮದುವೆಯಲ್ಲಿ ಕುದುರೆ ಸವಾರಿಗೆ ಆಡಳಿತದ ಸಾಥ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...