Homeಮುಖಪುಟನಕಲಿ ಪದವಿ ಪ್ರಮಾಣಪತ್ರ: ಯುಪಿ ಡಿಸಿಎಂ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೋರಿದ್ಧ ಅರ್ಜಿ ವಜಾ

ನಕಲಿ ಪದವಿ ಪ್ರಮಾಣಪತ್ರ: ಯುಪಿ ಡಿಸಿಎಂ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೋರಿದ್ಧ ಅರ್ಜಿ ವಜಾ

- Advertisement -
- Advertisement -

ಚುನಾವಣೆಗೆ ಸ್ಪರ್ಧಿಸುವಾಗ ಮತ್ತು ಪೆಟ್ರೋಲ್ ಪಂಪ್ ಡೀಲರ್‌ಶಿಪ್ ಪಡೆಯುವಾಗ ನಕಲಿ ಪದವಿ ಪ್ರಮಾಣಪತ್ರಗಳನ್ನು ಸಲ್ಲಿಸಿದ ಆರೋಪದ ಮೇಲೆ ಹಿರಿಯ ಬಿಜೆಪಿ ನಾಯಕ ಮತ್ತು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೋರಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಸೋಮವಾರ (ಜು.7) ವಜಾಗೊಳಿಸಿದೆ.

ಪ್ರಯಾಗ್‌ರಾಜ್‌ನ ಬಿಜೆಪಿ ನಾಯಕ ಮತ್ತು ಸಾಮಾಜಿಕ ಕಾರ್ಯಕರ್ತ ದಿವಾಕರ್ ನಾಥ್ ತ್ರಿಪಾಠಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಂಜಯ್ ಕುಮಾರ್ ಸಿಂಗ್ ಅವರ ಪೀಠ ತಿರಸ್ಕರಿಸಿದೆ.
ಈ ವಿಷಯದ ಬಗ್ಗೆ ಪೊಲೀಸ್ ತನಿಖೆ ಕೋರಿ ಸಿಆರ್‌ಪಿಸಿ ಸೆಕ್ಷನ್ 156(3) ಅಡಿಯಲ್ಲಿ ತ್ರಿಪಾಠಿ ಸಲ್ಲಿಸಿದ್ದ ಅರ್ಜಿಯನ್ನು 2021ರಲ್ಲಿ ಪ್ರಯಾಗ್‌ರಾಜ್‌ನ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಎಸಿಜೆಎಂ) ವಜಾಗೊಳಿಸಿತ್ತು.

ಮೌರ್ಯ ವಿರುದ್ಧ ಯಾವುದೇ ಗುರುತಿಸಬಹುದಾದ ಅಪರಾಧ ಕಂಡು ಬಂದಿಲ್ಲ ಎಂದಿದ್ದ ಎಸಿಜೆಎಂ ನಮ್ರತಾ ಸಿಂಗ್, ತ್ರಿಪಾಠಿ ಅವರ ಅರ್ಜಿಯನ್ನು ವಜಾಗೊಳಿಸಿದ್ದರು.

ನಂತರ ತ್ರಿಪಾಠಿ ಅವರು ಎಸಿಜೆಎಂ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಆದರೆ, ಅರ್ಜಿ ಸಲ್ಲಿಕೆಯ ವಿಳಂಬದ ಕಾರಣ ಕೊಟ್ಟು ಫೆಬ್ರವರಿ 2024ರಲ್ಲಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ವಿಚಾರಣಾ ನ್ಯಾಯಾಲಯದ ಆದೇಶದ 300 ದಿನಗಳಿಗಿಂತಲೂ ಹೆಚ್ಚು ಸಮಯದ ನಂತರ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಹೇಳಿತ್ತು.

ಈ ವರ್ಷದ ಜನವರಿಯಲ್ಲಿ, ಸುಪ್ರೀಂ ಕೋರ್ಟ್ ಅರ್ಜಿ ಸಲ್ಲಿಕೆ ವಿಳಂಬವನ್ನು ಮನ್ನಿಸಿತ್ತು ಮತ್ತು ಅರ್ಹತೆಯ ಆಧಾರದ ಮೇಲೆ ವಿಷಯವನ್ನು ಪರಿಗಣಿಸಲು ಹೈಕೋರ್ಟ್‌ಗೆ ನಿರ್ದೇಶನ ನೀಡಿತ್ತು.

ಸುಪ್ರೀಂ ಕೋರ್ಟ್‌ನ ನಿರ್ದೇಶನಗಳ ಪ್ರಕಾರ, ತ್ರಿಪಾಠಿ ಮತ್ತೆ ಅದೇ ಆರೋಪಗಳು ಮತ್ತು ಆಧಾರಗಳನ್ನು ತೆಗೆದುಕೊಂಡು ಹೊಸ ಅರ್ಜಿಯೊಂದಿಗೆ ಹೈಕೋರ್ಟ್‌ ಮೊರೆ ಹೋಗಿದ್ದರು. ಏಪ್ರಿಲ್ 2025ರಲ್ಲಿ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಂಡ ಹೈಕೋರ್ಟ್, ಮೇ ತಿಂಗಳಲ್ಲಿ ತೀರ್ಪನ್ನು ಕಾಯ್ದಿರಿಸಿತ್ತು. ಇಂದು (ಜು.7) ವಜಾಗೊಳಿಸಿದೆ.

ಬಂಗಾಳದಲ್ಲಿ ಟಿಎಂಸಿ ಕಿತ್ತೊಗೆಯಲು ‘ಮಹಾಮೈತ್ರಿ’ಗೆ ಕರೆಕೊಟ್ಟ ಬಿಜೆಪಿ ನಾಯಕ: ತಿರಸ್ಕರಿಸಿದ ಕಾಂಗ್ರೆಸ್, ಸಿಪಿಐ(ಎಂ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...