Homeಮುಖಪುಟಗುಜರಾತ್‌ : ಉದ್ಘಾಟನೆಗೊಂಡ ಮರುದಿನವೇ ಮುಚ್ಚಿದ ನಕಲಿ ವೈದ್ಯರ 'ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ'

ಗುಜರಾತ್‌ : ಉದ್ಘಾಟನೆಗೊಂಡ ಮರುದಿನವೇ ಮುಚ್ಚಿದ ನಕಲಿ ವೈದ್ಯರ ‘ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ’

- Advertisement -
- Advertisement -

ಗುಜರಾತ್‌ನಲ್ಲಿ ನಕಲಿ ವೈದ್ಯರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯೊಂದನ್ನು ಉದ್ಘಾಟನೆಗೊಂಡ ಮರುದಿನವೇ ಸರ್ಕಾರದ ಮುಚ್ಚಿಸಿದೆ.

ನಕಲಿ ವೈದ್ಯರ ಗುಂಪು ಸೂರತ್‌ನಲ್ಲಿ ಪೂರ್ಣ ಪ್ರಮಾಣದ ಆಸ್ಪತ್ರೆಯನ್ನು ತೆರೆದು, ಅದರ ಉದ್ಘಾಟನೆಗೆ ಹಿರಿಯ ಪೊಲೀಸ್‌ ಅಧಿಕಾರಿಗಳನ್ನೇ ಪ್ರಮುಖ ಅತಿಥಿಗಳಾಗಿ ಆಹ್ವಾನ ಪತ್ರದಲ್ಲಿ ಹೆಸರಿಸಿತ್ತು. ಆದರೆ, ನಕಲಿ ವೈದ್ಯರ ಅಸಲಿಯತ್ತು ಬೆಳಕಿಗೆ ಬರುತ್ತಿದ್ದಂತೆ, ಉದ್ಘಾಟನೆಗೊಂಡ ಒಂದೇ ದಿನದಲ್ಲಿ ಆಸ್ಪತ್ರೆಯನ್ನು ಸರ್ಕಾರ ಮುಚ್ಚಿಸಿದೆ.

ಆಸ್ಪತ್ರೆಯ ಐದು ಸಹ-ಸಂಸ್ಥಾಪಕರಲ್ಲಿ ಕನಿಷ್ಠ ಇಬ್ಬರು ನಕಲಿ ಪದವಿಗಳನ್ನು ಹೊಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಇತರ ಮೂವರು ಸಹ-ಸಂಸ್ಥಾಪಕರು ಹೊಂದಿರುವ ವೈದ್ಯಕೀಯ ಪದವಿಗಳ ಬಗ್ಗೆಯೂ ಅನುಮಾನಗಳಿದ್ದು, ಈ ಬಗ್ಗೆಯೂ ಪೊಲೀಸರು ಪರಿಶೀಲಿಸುತ್ತಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸೂರತ್‌ನ ಪಾಂಡೆಸರಾ ಪ್ರದೇಶದಲ್ಲಿ ಜನಸೇವಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು ಭಾನುವಾರ (ನ.17) ರಂದು ಉದ್ಘಾಟಿಸಲಾಗಿತ್ತು. “ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರದಲ್ಲಿರುವ ಆಯುರ್ವೇದ ವೈದ್ಯಕೀಯ ಪದವಿ ಹೊಂದಿರುವ ವೈದ್ಯ ಎಂದು ಪರಿಚಯಿಸಲಾದ ಬಿಆರ್ ಶುಕ್ಲಾನ ವಿರುದ್ಧ ಗುಜರಾತ್ ವೈದ್ಯಕೀಯ ವೈದ್ಯರ ಕಾಯ್ದೆಯಡಿ ಪ್ರಕರಣವಿದೆ. ಆತ ನಕಲಿ ವೈದ್ಯನಾಗಿದ್ದಾನೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ವಿಜಯ್ ಸಿಂಗ್ ಗುರ್ಜರ್ ಹೇಳಿದ್ದಾರೆ.

ಎಲೆಕ್ಟ್ರೋ-ಹೋಮಿಯೋಪತಿಯಲ್ಲಿ ಪದವಿ ಪಡೆದಿರುವುದಾಗಿ ಹೇಳಿಕೊಳ್ಳುವ ಮತ್ತೊಬ್ಬ ಸಹ-ಸಂಸ್ಥಾಪಕ ಆರ್‌ಕೆ ದುಬೆ ಕೂಡಾ ವೈದ್ಯಕೀಯ ವೃತ್ತಿಗಾರರ ಕಾಯ್ದೆಯಡಿ ಪ್ರಕರಣವನ್ನು ಎದುರಿಸುತ್ತಿದ್ದಾರೆ ಎಂದು ವಿಜಯ್ ಸಿಂಗ್ ತಿಳಿಸಿದ್ದಾರೆ.

“ಇವರಿಬ್ಬರು ನಕಲಿ ಪದವಿಗಳನ್ನು ಹೊಂದಿದ್ದಾರೆ. ಮತ್ತೊಬ್ಬ ಸಹ-ಸಂಸ್ಥಾಪಕ ಜಿಪಿ ಮಿಶ್ರಾ ಅವರು ನಿಷೇಧ ಕಾಯ್ದೆಯಡಿ ಮೂರು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅವರ ಪದವಿಯನ್ನು ಇನ್ನೂ ಪರಿಶೀಲಿಸಬೇಕಾಗಿದೆ. ನಾವು ಆಹ್ವಾನದಲ್ಲಿರುವ ಇತರ ಎರಡು ಹೆಸರುಗಳ ಪದವಿಗಳನ್ನೂ ಪರಿಶೀಲಿಸುತ್ತಿದ್ದೇವೆ” ಎಂದು ವಿಜಯ್ ಸಿಂಗ್ ಗುರ್ಜರ್ ವಿವರಿಸಿದ್ದಾರೆ.

ಸೂರತ್ ಮುನ್ಸಿಪಲ್ ಕಮಿಷನರ್ ಶಾಲಿನಿ ಅಗರ್ವಾಲ್, ಪೊಲೀಸ್ ಕಮಿಷನರ್ ಅನುಪಮ್ ಸಿಂಗ್ ಗಹ್ಲೌತ್ ಮತ್ತು ಜಂಟಿ ಪೊಲೀಸ್ ಕಮಿಷನರ್ ರಾಘವೇಂದ್ರ ವತ್ಸಾ ಸೇರಿದಂತೆ ಉನ್ನತ ಅಧಿಕಾರಿಗಳ ಹೆಸರುಗಳು ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರದಲ್ಲಿದ್ದವು. ಆದರೆ, ಅಂತಹ ಯಾವುದೇ ಆಹ್ವಾನದ ಬಗ್ಗೆ ತಮಗೆ ತಿಳಿದಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಅವರು ಯಾರೂ ಕಾರ್ಯಕ್ರಮಕ್ಕೆ ಹೋಗಿಲ್ಲ.

ಪ್ರಸ್ತುತ ಆಸ್ಪತ್ರೆ ಆವರಣವನ್ನು ಸೀಲ್ ಮಾಡಲಾಗಿದೆ. ಇತರ ಸಹ-ಸಂಸ್ಥಾಪಕರ ಪದವಿಗಳನ್ನು ಪರಿಶೀಲಿಸಲಾಗುತ್ತಿದೆ. ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರ ಚುನಾವಣೆ | ಹಣ ಹಂಚುವಾಗ ಸಿಕ್ಕಿಬಿದ್ದ ಬಿಜೆಪಿ ರಾಷ್ಟ್ರೀಯ ಪ್ರ. ಕಾರ್ಯದರ್ಶಿ ವಿನೋದ್ ತಾವ್ಡೆ : ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...