Homeಮುಖಪುಟನಕಲಿ ಔಷಧ ಮಾಫಿಯಾ: 5 ರಾಜ್ಯಗಳಿಗೆ ಹರಡಿದ ಜಾಲ, ತೀವ್ರ ಶೋಧ

ನಕಲಿ ಔಷಧ ಮಾಫಿಯಾ: 5 ರಾಜ್ಯಗಳಿಗೆ ಹರಡಿದ ಜಾಲ, ತೀವ್ರ ಶೋಧ

- Advertisement -
- Advertisement -

ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ನಕಲಿ ಔಷಧ ತಯಾರಿಕೆ ಹಾಗೂ ವಿತರಣೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಸುಳಿವುಗಳು ಲಭ್ಯವಾಗಿದ್ದು, ಈ ಅಕ್ರಮ ಜಾಲವು ಕರ್ನಾಟಕ ಮಾತ್ರವಲ್ಲದೆ ದೇಶದ ಇತರ ಐದು ರಾಜ್ಯಗಳಿಗೂ ಹರಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ತನಿಖೆಯನ್ನು ಮತ್ತಷ್ಟು ವಿಸ್ತರಿಸಲಾಗಿದ್ದು, ಹಿಮಾಚಲ ಪ್ರದೇಶ, ತೆಲಂಗಾಣ, ದೆಹಲಿ, ಚೆನ್ನೈ ಹಾಗೂ ಆಂಧ್ರಪ್ರದೇಶಗಳಲ್ಲಿ ಸಕ್ರಿಯವಾಗಿರುವ ಔಷಧ ಕಂಪನಿಗಳು ಹಾಗೂ ವಿತರಣಾ ಜಾಲದ ಕುರಿತು ತನಿಖಾಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದಾರೆ.

ಅಂತರರಾಜ್ಯ ಮಟ್ಟದಲ್ಲಿ ವ್ಯಾಪಿಸಿರುವ ಈ ಜಾಲವನ್ನು ಭೇದಿಸಲು ಡ್ರಗ್‌ ಕಂಟ್ರೋಲ್‌ ಇಲಾಖೆಯಿಂದ ಐದು ಪ್ರತ್ಯೇಕ ತನಿಖಾ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಸಂಬಂಧಪಟ್ಟ ರಾಜ್ಯಗಳಿಗೆ ತೆರಳಿ ಅಲ್ಲಿನ ಔಷಧ ಉತ್ಪಾದನಾ ಕಂಪನಿಗಳು, ಪ್ಯಾಕಿಂಗ್ ಘಟಕಗಳು ಹಾಗೂ ಪೂರೈಕೆ ವ್ಯವಸ್ಥೆಯ ಕುರಿತು ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ದಾಖಲೆಗಳು ಮತ್ತು ಔಷಧ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲಿಸಲಿವೆ.

ತನಿಖೆಯ ವೇಳೆ ಜಪ್ತಿ ಮಾಡಲಾದ ನಕಲಿ ಔಷಧಗಳ ಮೇಲೆ ಪ್ರಸಿದ್ಧ ಕಂಪನಿಗಳ ಹೆಸರಿನ ಲೇಬಲ್‌ಗಳು ಇರುವುದು ಕಂಡುಬಂದಿದೆ. ಈ ಲೇಬಲ್‌ಗಳನ್ನು ಕಂಪನಿಗಳ ಅಧಿಕೃತ ಅನುಮತಿ ಪಡೆದು ಬಳಸಲಾಗಿದೆಯೇ ಅಥವಾ ಅಕ್ರಮವಾಗಿ ನಕಲು (ಡುಪ್ಲಿಕೇಟ್) ಮಾಡಲಾಗಿದೆಯೇ ಎಂಬುದನ್ನು ತಿಳಿಯಲು ಇಲಾಖೆ ಮುಂದಾಗಿದೆ. ಈ ಐದೂ ರಾಜ್ಯಗಳಲ್ಲಿರುವ ಸಂಬಂಧಿತ ಔಷಧ ಕಂಪನಿಗಳಿಗೆ ನೋಟಿಸ್ ನೀಡಿ, ಕಂಪನಿಗಳ ಅಧಿಕೃತ ಲೆಟರ್‌ಹೆಡ್ ಹಾಗೂ ದಾಖಲೆಗಳ ಮೂಲಕ ಸ್ಪಷ್ಟನೆ ಪಡೆಯಲು ಸಿದ್ಧತೆ ನಡೆಸಲಾಗಿದೆ.

ಸಂಸ್ಥೆಗಳ ಹೆಸರುಗಳನ್ನು ದುರ್ಬಳಕೆ ಮಾಡಿಕೊಂಡು ಅನಧಿಕೃತವಾಗಿ ನಕಲಿ ಮಾತ್ರೆ ಹಾಗೂ ಔಷಧಗಳನ್ನು ಪ್ಯಾಕ್ ಮಾಡಿ ಮಾರುಕಟ್ಟೆಗೆ ಬಿಡುಗಡೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಅಕ್ರಮ ಪ್ಯಾಕಿಂಗ್ ಹಾಗೂ ಲೇಬಲಿಂಗ್ ದಂಧೆಯ ಆಳ-ಅಗಲವನ್ನು ಭೇದಿಸುವುದು ತನಿಖೆಯ ಮುಖ್ಯ ಉದ್ದೇಶವಾಗಿದೆ. ತನಿಖಾ ತಂಡಗಳು ಕಾರ್ಯಾಚರಣೆ ನಡೆಸುತ್ತಿರುವುದರಿಂದ ಈ ದಂಧೆಯ ಹಿಂದಿರುವ ಮುಖ್ಯ ರೂವಾರಿಗಳು ಹಾಗೂ ಕಪ್ಪುಮಾರುಕಟ್ಟೆಯ ಜಾಲ ಶೀಘ್ರದಲ್ಲೇ ಬಯಲಾಗುವ ಸಾಧ್ಯತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ SIR : 43.80 ಲಕ್ಷ ಜನರಿಗೆ ಬರಲಿದೆ ಚುನಾವಣಾ ಆಯೋಗದ ನೋಟಿಸ್!

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಭಾಗವಾಗಿ ಮತದಾರರು ತುಂಬಿ ಕೊಟ್ಟಿರುವ 4,46,35,899 ಎನ್ಯುಮರೇಷನ್ ಫಾರಂಗಳು (ಗಣತಿ ನಮೂನೆ) ಡಿಜಿಟಲೀಕರಣಗೊಂಡಿವೆ. ಈ ಪೈಕಿ 43,80,740 ಮತದಾರರಿಗೆ ದಾಖಲೆ ಕೇಳಿ...

ರಾಜಸ್ಥಾನ: ವರದಿಗಾರಿಕೆಯಲ್ಲಿ ನಿರತರಾಗಿದ್ದ ದಲಿತ ಪತ್ರಕರ್ತನ ಮೇಲೆ ಜಾತಿ ಆಧಾರಿತ ದಾಳಿ, ಭೀಕರ ಹಲ್ಲೆ, ಜಾತಿ ನಿಂದನೆ 

ಉದಯಪುರ: ರಾಜಸ್ಥಾನದ ಉದಯಪುರ ಜಿಲ್ಲೆಯ ಗೋಗುಂಡದಲ್ಲಿ ಕರ್ತವ್ಯನಿರತ ದಲಿತ ಪತ್ರಕರ್ತರೊಬ್ಬರ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಜಾತ್ಯಾತೀತ ಸಮಾಜ ತಲೆತಗ್ಗಿಸುವಂತೆ ಜಾತಿ ಆಧಾರಿತವಾಗಿ ನಿಂದಿಸಿರುವ ಘಟನೆ ವರದಿಯಾಗಿದೆ. ಸಾರ್ವಜನಿಕ ಕುಂದುಕೊರತೆ ಆಲಿಕೆ ಕಾರ್ಯಕ್ರಮದ...

ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಿ, ನೇರ ವೇತನ ಪಾವತಿ ಜಾರಿಗೊಳಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಆಗ್ರಹಿಸಿ ಎಐಸಿಸಿಟಿಯು ಪ್ರತಿಭಟನೆ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಹಾಗೂ ತಾತ್ಕಾಲಿಕ ಕಾರ್ಮಿಕರ ಶೋಷಣೆ ತಡೆಗಟ್ಟಿ, ಅವರಿಗೆ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ...

ಯುಜಿಸಿ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟುವ ಕುರಿತಾದ 2026 ರ ವಿಶ್ವವಿದ್ಯಾಲಯ ಅನುದಾನ ಆಯೋಗದ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಜನವರಿ 29 ರಂದು, ಸುಪ್ರೀಂ...

ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ

ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು...

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕೇರಳದ ಟ್ರಾನ್ಸ್ ಜೆಂಡರ್ ಮೇಕಪ್ ಕಲಾವಿದೆ ಜಾನ್ಮೋನಿ ದಾಸ್ ಬಂಧನ

ಕೋಝಿಕ್ಕೋಡ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾರ್ವಜನಿಕವಾಗಿ ಅವಮಾನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇರಳದ ಪ್ರಸಿದ್ಧ ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಬಿಗ್ ಬಾಸ್ ಮಾಜಿ...

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...