Homeಮುಖಪುಟನಕಲಿ ಅಂಕಪತ್ರ ಸಲ್ಲಿಕೆ: ಅಯೋಧ್ಯೆಯ ಬಿಜೆಪಿ ಶಾಸಕ ಅನರ್ಹ- 5 ವರ್ಷ ಜೈಲು

ನಕಲಿ ಅಂಕಪತ್ರ ಸಲ್ಲಿಕೆ: ಅಯೋಧ್ಯೆಯ ಬಿಜೆಪಿ ಶಾಸಕ ಅನರ್ಹ- 5 ವರ್ಷ ಜೈಲು

ತನಿಖಾಧಿಕಾರಿಯು ಬಿಜೆಪಿ ಶಾಸಕನ ವಿರುದ್ಧ 419 ಮತ್ತು 420 ಸೇರಿದಂತೆ ವಿವಿಧ IPC ಸೆಕ್ಷನ್‌ಗಳ ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ್ದರು.

- Advertisement -
- Advertisement -

ಅಯೋಧ್ಯೆಯ ಗೋಸಾಯಿಗಂಜ್ ಕ್ಷೇತ್ರದ ಬಿಜೆಪಿ ಶಾಸಕ ಇಂದ್ರ ಪ್ರತಾಪ್ ಅಲಿಯಾಸ್ ಖಬ್ಬು ತಿವಾರಿ ಕಾಲೇಜು ಪ್ರವೇಶ ಪಡೆಯುವಾಗ ನಕಲಿ ಅಂಕಪತ್ರ ಬಳಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯವು ಅವರನ್ನು ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಅಲ್ಲದೆ ಅವರಿಗೆ 8,000 ರೂ ದಂಡದ ಜೊತೆಗೆ 5 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

ಅಕ್ಟೋಬರ್ 18 ರಂದು ಅಯೋಧ್ಯೆ ಎಂಪಿ/ಎಂಎಲ್‌ಎ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಪೂಜಾ ಸಿಂಗ್ ಅವರ ತೀರ್ಪಿನ ಆಧಾರದಲ್ಲಿ ತಿವಾರಿ ಅವರನ್ನು ಕಸ್ಟಡಿಗೆ ತೆಗೆದುಕೊಂಡು ಜೈಲಿಗೆ ಕಳುಹಿಸಲಾಗಿದೆ.

ಇದು 28 ವರ್ಷಗಳ ಹಳೆಯ ಪ್ರಕರಣವಾಗಿದ್ದು, ತಿವಾರಿಯವರ ಐದು ವರ್ಷಗಳ ಶಾಸಕ ಸ್ಥಾನದ ಅಧಿಕಾರಾವಧಿಯು ಕೊನೆಗೊಳ್ಳುವ ಕೆಲವೇ ತಿಂಗಳುಗಳ ಮೊದಲು ಈ ಶಿಕ್ಷೆ ಸಂಭವಿಸಿದೆ. ಅಕ್ಟೋಬರ್ 18 ರಿಂದಲೇ ಅವರ ಅಧಿಕಾರವಧಿ ಕೊನೆಗೊಂಡಿದೆ ವಿಧಾನಸಭಾ ಪ್ರಿನ್ಸಿಪಲ್ ಸೆಕ್ರಟರಿ ವಿನೋದ್ ಕುಮಾರ್ ದುವೆ ನೋಟಿಸ್ ಹೊರಡಿಸಿದ್ದಾರೆ.

ಅಯೋಧ್ಯೆಯ ಸಾಕೇತ್ ಪದವಿ ಕಾಲೇಜಿನ ಪ್ರಾಂಶುಪಾಲರಾಗಿದ್ದ ಯದುವಂಶ್ ರಾಮ್ ತ್ರಿಪಾಠಿ ಅವರು 1992ರಲ್ಲಿ ದಾಖಲಾತಿ ಪಡೆಯಲು ನಕಲಿ ಅಂಕಪತ್ರ ಬಳಸಿದ್ದಾರೆ ಎಂದು ಆರೋಪಿಸಿ ತಿವಾರಿ ವಿರುದ್ಧ ರಾಮ ಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತಿವಾರಿ ಅವರು ಮೊದಲ ವರ್ಷದ ನಕಲಿ ಅಂಕಪಟ್ಟಿ ತಯಾರಿಸಿ ಬಿಎಸ್ಸಿ ಎರಡನೇ ವರ್ಷಕ್ಕೆ ಪ್ರವೇಶ ಪಡೆದಿದ್ದರು ಎಂದು ತ್ರಿಪಾಠಿ ಆರೋಪಿಸಿದ್ದರು.

ನಕಲಿ ಅಂಕಪಟ್ಟಿ ಪ್ರಕರಣದಲ್ಲಿ, ತನಿಖಾಧಿಕಾರಿಯು 419 ಮತ್ತು 420 ಸೇರಿದಂತೆ ವಿವಿಧ IPC ಸೆಕ್ಷನ್‌ಗಳ ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಕೆಳ ನ್ಯಾಯಾಲಯವು 2018 ರಲ್ಲಿ ವಿಚಾರಣೆಗಾಗಿ ಸೆಷನ್ ನ್ಯಾಯಾಲಯಕ್ಕೆ ವಿಷಯವನ್ನು ಉಲ್ಲೇಖಿಸಿತ್ತು. ಈ 28 ವರ್ಷಗಳ ಸುದೀರ್ಘ ವಿಚಾರಣೆಯಲ್ಲಿ, ಫಿರ್ಯಾದಿ ಪ್ರೊಫೆಸರ್ ಯದುವಂಶ್ ರಾಮ್ ತ್ರಿಪಾಠಿ ಕೂಡ ಸಾವನ್ನಪ್ಪಿದ್ದರು ಮತ್ತು ಇತರ ಅನೇಕ ಸಾಕ್ಷಿಗಳು ಸಹ ನಿಧನರಾದರು. ನಂತರ, ಪ್ರಾಸಿಕ್ಯೂಷನ್ ಪ್ರಕರಣದಲ್ಲಿ ಇತರ ಸಾಕ್ಷಿಗಳನ್ನು ಹಾಜರುಪಡಿಸಿತ್ತು.

ಇಂದ್ರ ಪ್ರತಾಪ್ ತಿವಾರಿ ಅಲಿಯಾಸ್ ಖಬ್ಬು ತಿವಾರಿ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿವೆ. ಅವರ ವಿರುದ್ಧ 302, 307,308, 420, 467, 471, 504, 506, 147, 148, 149, 307, 120 ಬಿ ಮುಂತಾದ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ನ್ಯಾಯಾಲಯವು ಅಪಹರಣ ಪ್ರಕರಣದಲ್ಲ ತಿವಾರಿಗೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 8,000 ರೂ ದಂಡ ವಿಧಿಸಿದೆ.


ಇದನ್ನೂ ಓದಿ: ಬಸ್ತಾರ್‌‌: ತಮ್ಮ ಕುಟುಂಬದವರ ಮೇಲಾದ ಪೊಲೀಸ್‌ ದೌರ್ಜನ್ಯ ಖಂಡಿಸಿ ಸಹಾಯಕ ಕಾನ್‌ಸ್ಟೇಬಲ್‌ಗಳ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...