Homeಕರ್ನಾಟಕಪೋಲಿಯೋ ಲಸಿಕೆಯಲ್ಲಿ ಯಾವುದೇ ತೊಂದರೆಗಳಿಲ್ಲ. ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ

ಪೋಲಿಯೋ ಲಸಿಕೆಯಲ್ಲಿ ಯಾವುದೇ ತೊಂದರೆಗಳಿಲ್ಲ. ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ

- Advertisement -
- Advertisement -

ಪಲ್ಸ್ ಪೋಲಿಯೋ ಲಸಿಕೆಯನ್ನು 5 ವರ್ಷದೊಳಗಿನ ಹಾಕಿಸುವುದರಿಂದ ಒಂದು ದೊಡ್ಡ ಪಿಡುಗನ್ನು ನಾವು ತಡೆಗಟ್ಟಿದ್ದೇವೆ. ಅಷ್ಟರಮಟ್ಟಿಗೆ ಪೋಲೀಯೋ ಲಸಿಕೆ ಬಹಳಷ್ಟು ಜನರ ಬದುಕನ್ನು ಸುಧಾರಿಸಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿನ ಕೆಲವು ವಿಕೃತ ಮನಸ್ಸಿನವರು ‘ದಯಮಾಡಿ ಬೇಗ ಶೇರ್ ಮಾಡಿ ನಾಳೆ ಐದು ವರ್ಷದ ಒಳಗೆ ಇರುವ ಮಕ್ಕಳಿಗೆ ಪೋಲಿಯೋ ಹಾಕಿಸಬೇಡಿ, ಅದರಲ್ಲಿ ವೈರಸ್ ಬೆರೆಸಿರುತ್ತದೆ. ಅದಕ್ಕಾಗಿ ಪೋಲಿಯೋ ತಯಾರು ಮಾಡಿದ  ಆ ಕಂಪನಿಯ ಮಾಲೀಕರನ್ನು ಅರೆಸ್ಟ್ ಮಾಡಿದ್ದಾರೆ. ದಯಮಾಡಿ ಎಲ್ಲರಿಗೂ ತುರ್ತು ಶೇರ್ ಮಾಡಿ, ಇದು ಸತ್ಯ ಸತ್ಯ’ ಎಂಬ ಸುಳ್ಳು ಸುದ್ಧಿಯನ್ನು ಹರಡಿ ಆತಂಕ ಸೃಷ್ಟಿಸುತ್ತಿದ್ದಾರೆ.

ಆದರೆ ಅದು ಸತ್ಯಕ್ಕೆ ದೂರವಾದ ಸಂದೇಶವಾಗಿದ್ದು ಇಂತಹ ವದಂತಿಗಳಿಗೆ ಪೋಷಕರು ಕಿವಿಕೊಡಬಾರದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಮನವಿ ಮಾಡಿಕೊಂಡಿದ್ದಾರೆ. ಹಾಗೂ ಪೋಲಿಯೋ ಮಾಹಿತಿಯ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚಿಸಿ  ಅಂಗನವಾಡಿ ಫಲಾನಭವಿಗಳಿಗೆ/ಫೋಷಕರಿಗೆ ತಿಳಿಸಲು ಸೂಕ್ತ ಕ್ರಮವಹಿಸಲು ಎಲ್ಲಾ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳಿಗೆ, ಮೇಲ್ವಿಚಾರಕಿಯರಿಗೆ ಮತ್ತು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕರಿಗೆ ಸೂಚಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಕರು  ತುರ್ತು ಪತ್ರ ಬರೆದಿದ್ದಾರೆ.

ಪೋಲಿಯೋ ನಿವಾರಣೆ ಮಾಡಲೆಂದು ಇರುವ ಒಂದು ಒಳ್ಳೆಯ ಯೋಜನೆಯ ಬಗ್ಗೆ ತಪ್ಪು ಸಂದೇಶ ರವಾನಿಸುತ್ತಿರುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಪೊಲೀಸರು ಕ್ರಮ ತೆಗೆದುಕೊಳ್ಳಬೇಕಿದೆ. ಪ್ರಜ್ಞಾವಂತ ಜನರು ಎಲ್ಲರಿಗೂ ಸತ್ಯವನ್ನು ತಿಳಿಸಿ ಪೋಲಿಯೋ ಕಾರ್ಯಕ್ರಮ ಯಶಸ್ವಿಯಾಗುವಂತೆ ಮಾಡುವ ಮೂಲಕ ಮಕ್ಕಳಿಗೆ ಪೋಲಿಯೋ ತಗುಲದಂತೆ ನೋಡಿಕೊಳ್ಳಬೇಕಿದೆ.

ಸುಳ್ಳು ಸುದ್ದಿ ಹರಡುವವರಿಗೆ ಏನು ಸಿಗುತ್ತದೆ? ಯಾಕೀಗೆ ಮಾಡುತ್ತಾರೆ? ಜಾತಿ ಧರ್ಮಗಳ ವಿಷಯದಲ್ಲಿ ಸುಳ್ಳು ಸುದ್ದಿಗಳನ್ನು ಹರಡಿದ ನಂತರ ಇವರು ಮಕ್ಕಳ ಆರೋಗ್ಯದ ಮೇಲೆ ಪ್ರಭಾವ ಬೀರುವ ವಿಷಯಗಳಲ್ಲಿಯೂ ಕೂಡ ಸುಳ್ಳು ಸುದ್ದಿ ಹಬ್ಬಿಸುತ್ತಾರೆಂದರೆ ಇವರೆಂಥ ನೀಚರಿರಬೇಕು?

ಇನ್ನು ಸಾಮಾಜಿಕ ಜಾಲತಾಣಗಳ ಬಳಕೆದಾರರು ಯಾವುದು ಸತ್ಯ ಯಾವುದು ಮತ್ತು ಯಾವುದು ಸುಳ್ಳು ಯಾವುದು ಎಂಬ ವಿಷಯಗಳನ್ನು  ಮೊದಲು ತಿಳಿದು ನಂತರ ಶೇರ್ ಮಾಡುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳದೆ ಹೋದರೆ ಇಂತಹ ಬೇಜಾವಾಬ್ದಾರಿ ಘಟನೆಗಳು ನಡೆಯುತ್ತಲೇ ಇರುತ್ತವೆ. ಹಾಗಾಗಿ ಯಾವುದೇ ಸುದ್ದಿಯ ಫ್ಯಾಕ್ಟ್ ಚೆಕ್ ಮಾಡದೇ ಫಾರ್ವಾಡ್ ಮಾಡುವುದು ಸಹ ತಪ್ಪಾಗುತ್ತದೆ. ಸುಳ್ಳು ಸುದ್ದಿಗಳಿಂದ ಗುಂಪು ಹಲ್ಲೆಗಳಾಗಿ ಕೆಲವು ಸಾವುಗಳೇ ಸಂಭವಿಸಿದರೂ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳದೆ ಇರುವುದು ವಿಷಾಧನೀಯ. ಯುವಜನತೆ ದಾರಿ ತಪ್ಪದಂತೆ ಸರ್ಕಾರ ಎಚ್ಚರ ವಹಿಸಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...