Homeಮುಖಪುಟಸುಳ್ಳು ಸುದ್ದಿ ಪ್ರಸಾರ: ಎರಡು ನ್ಯೂಸ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

ಸುಳ್ಳು ಸುದ್ದಿ ಪ್ರಸಾರ: ಎರಡು ನ್ಯೂಸ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷದ ವೇಳೆ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದ ಮೇಲೆ ಝೀ ನ್ಯೂಸ್ ಮತ್ತು ನ್ಯೂಸ್ 18 ಇಂಡಿಯಾ ವಿರುದ್ದ ಎಫ್‌ಐಆರ್ ದಾಖಲಿಸುವಂತೆ ಕಾಶ್ಮೀರದ ಪೂಂಚ್ ನ್ಯಾಯಾಲಯ ಶನಿವಾರ (ಜೂ.28) ನಿರ್ದೇಶಿಸಿದೆ.

ಮೇ 7ರಂದು ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ ಸ್ಥಳೀಯ ಶಿಕ್ಷಕ ಖಾರಿ ಮೊಹಮ್ಮದ್ ಇಕ್ಬಾಲ್ ಅವರನ್ನು ಎರಡೂ ರಾಷ್ಟ್ರೀಯ ಚಾನೆಲ್‌ಗಳು ಲಷ್ಕರ್-ಎ-ತೋಯ್ಬಾ ಜೊತೆ ಸಂಬಂಧ ಹೊಂದಿರುವ ಮತ್ತು ಪುಲ್ವಾಮಾ ದಾಳಿಯಲ್ಲಿ ಭಾಗಿಯಾಗಿರುವ “ಪಾಕಿಸ್ತಾನಿ ಭಯೋತ್ಪಾದಕ” ಎಂದು ತಪ್ಪಾಗಿ ಹೇಳಿವೆ ಎಂದು ಆರೋಪಿಸಿ ವಕೀಲ ಶೇಖ್ ಮೊಹಮ್ಮದ್ ಸಲೀಮ್ ಸಲ್ಲಿಸಿದ ದೂರಿನ ಮೇರೆಗೆ ಸಬ್-ನ್ಯಾಯಾಧೀಶ/ವಿಶೇಷ ಮೊಬೈಲ್ ಮ್ಯಾಜಿಸ್ಟ್ರೇಟ್ ಪೂಂಚ್ ಶಫೀಕ್ ಅಹ್ಮದ್ ಆದೇಶ ಹೊರಡಿಸಿದ್ದಾರೆ ಎಂದು barandbench.com ವರದಿ ಮಾಡಿದೆ.

ಮೃತ ಖಾರಿ ಇಕ್ಬಾಲ್ ಅವರು ಪೂಂಚ್‌ನ ಜಾಮಿಯಾ ಝಿಯಾ-ಉಲ್-ಉಲೂಮ್‌ನಲ್ಲಿ ಧಾರ್ಮಿಕ ಶಿಕ್ಷಕರಾಗಿದ್ದರು ಮತ್ತು ಪಾಕಿಸ್ತಾನದ ಶೆಲ್ ದಾಳಿಗೆ ಬಲಿಯಾದ ಭಾರತ ನಾಗರಿಕ ಎಂದು ವಕೀಲ ಸಲೀಮ್ ನ್ಯಾಯಾಲಯಕ್ಕೆ ಸಲ್ಲಿಸಿರುವ ದೂರಿನಲ್ಲಿ ಹೇಳಿದ್ದಾರೆ.

ಝೀ ನ್ಯೂಸ್ ಮತ್ತು ನ್ಯೂಸ್ 18 ಇಂಡಿಯಾ ಆಪರೇಷನ್ ಸಿಂಧೂರ್‌ ಕುರಿತು ನೇರ ಪ್ರಸಾರ ವರದಿಗಳನ್ನು ಮಾಡುವಾಗ ಖಾರಿ ಇಕ್ಬಾಲ್ ಅವರನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಕೊಲ್ಲಲ್ಪಟ್ಟ ‘ಕುಖ್ಯಾತ ಕಮಾಂಡರ್’ ಎಂದು ಬ್ರಾಂಡ್ ಮಾಡುವ ಕಥೆಗಳನ್ನು ಪ್ರಸಾರ ಮಾಡಿದೆ. ಯಾವುದೇ ಅಧಿಕೃತ ಮೂಲಗಳ ಮಾಹಿತಿ ಪಡೆಯದೆ ಖಾರಿ ಇಕ್ಬಾಲ್ ಅವರಿಗೆ ಭಯೋತ್ಪಾದನೆಯೊಂದಿಗೆ ಸಂಬಂಧ ಕಲ್ಪಿಸಿವೆ ಎಂದಿದ್ದಾರೆ.

ಖಾರಿ ಇಕ್ಬಾಲ್ ಅವರ ಹೆಸರು ಮತ್ತು ಫೋಟೋಗಳು ಇರುವ ವರದಿಯನ್ನು ನಂತರ ಹಿಂಪಡೆಯಲಾಗಿದೆ. ಆದರೆ, ಅವರ ಕುರಿತ ಸುಳ್ಳು ಸುದ್ದಿಯು ಅವರ ಕುಟುಂಬದ ಹೆಸರಿಗೆ ಕಳಂಕ ತಂದಿದೆ ಎಂದು ವಕೀಲ ಸಲೀಮ್ ಹೇಳಿದ್ದಾರೆ.

ವಿಚಾರಣೆ ವೇಳೆ, ವರದಿಯು ದೆಹಲಿಯಿಂದ ಪ್ರಸಾರಗೊಂಡಿರುವ ಕಾರಣ, ಈ ವಿಷಯ ಪೂಂಚ್ ನ್ಯಾಯಾಲಯದ ಪ್ರಾದೇಶಿಕ ವ್ಯಾಪ್ತಿಗೆ ಬರುವುದಿಲ್ಲ ಎಂದು ಪೊಲೀಸರು ವಾದಿಸಿದ್ದರು.

ಆದರೆ, ನ್ಯಾಯಾಲಯವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ನ ಸೆಕ್ಷನ್ 199ರ ಅಡಿಯಲ್ಲಿ, ಮಾನನಷ್ಟದಂತಹ ಕೃತ್ಯದ ಪರಿಣಾಮವು ಬೇರೆ ಸ್ಥಳದಲ್ಲಿ ಸಂಭವಿಸಿದಾಗ, ನ್ಯಾಯವ್ಯಾಪ್ತಿಯು ಎರಡೂ ಸ್ಥಳಗಳಲ್ಲಿ ಮಾನ್ಯವಾಗಿರುತ್ತದೆ ಎಂದು ಹೇಳಿ ಪೊಲೀಸರ ಆಕ್ಷೇಪಣೆಯನ್ನು ತಿರಸ್ಕರಿಸಿದೆ. ಮೃತರು ವಾಸಿಸುತ್ತಿದ್ದ, ಕೆಲಸ ಮಾಡುತ್ತಿದ್ದ ಮತ್ತು ಹುತಾತ್ಮರಾದ ಪೂಂಚ್‌ನಲ್ಲಿ ಹಾನಿ ಸಂಭವಿಸಿದೆ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

ಮಾಧ್ಯಮಗಳ ಜವಾಬ್ದಾರಿಯ ಬಗ್ಗೆಯೂ ನ್ಯಾಯಾಲಯ ಅವಲೋಕನಗಳನ್ನು ಮಾಡಿದೆ. ಸಂವಿಧಾನದ 19(1)(a)ವಿಧಿಯ ಅಡಿಯಲ್ಲಿ ಪತ್ರಿಕಾ ರಕ್ಷಣೆ ಇದೆಯಾದರೂ, ಈ ಹಕ್ಕು 19(2) ವಿಧಿಯ ಅಡಿಯಲ್ಲಿ ಸಮಂಜಸವಾದ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ. ವಿಶೇಷವಾಗಿ ಮಾನನಷ್ಟ, ಸಾರ್ವಜನಿಕ ಸುವ್ಯವಸ್ಥೆ ಮತ್ತು ಸಭ್ಯತೆಯನ್ನು ಒಳಗೊಂಡ ಪ್ರಕರಣಗಳಲ್ಲಿ ಎಂದು ನ್ಯಾಯಾಲಯ ಹೇಳಿದೆ.

“ಯಾವುದೇ ಪರಿಶೀಲನೆ ಇಲ್ಲದೆ” ಮೃತ ನಾಗರಿಕ ಶಿಕ್ಷಕನನ್ನು ಭಯೋತ್ಪಾದಕ ಎಂದು ಬ್ರಾಂಡ್ ಮಾಡುವುದನ್ನು ನ್ಯಾಯಾಧೀಶರು ಪತ್ರಿಕೋದ್ಯಮ ಗಂಭೀರ ದುಷ್ಕೃತ್ಯ ಎಂದು ಕರೆದಿದ್ದು, ಇದು ಸಾರ್ವಜನಿಕ ಅಶಾಂತಿಗೆ ಉತ್ತೇಜನ ನೀಡುವ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಹಾನಿ ಮಾಡುವ ಸಾಧ್ಯತೆ ಇದೆ ಎಂದಿದ್ದಾರೆ.

ಸುದ್ದಿ ವಾಹಿನಿಗಳು ನಂತರ ಕ್ಷಮೆಯಾಚಿಸಿದ್ದರೂ, 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯೊಂದಿಗೆ ಖಾರಿ ಇಕ್ಬಾಲ್ ಅವರಿಗೆ ಸಂಬಂಧ ಕಲ್ಪಿಸಿದ ಅವರ ಆರಂಭಿಕ ಪ್ರಸಾರವು ವಾಸ್ತವಿಕ ಪರಿಶೀಲನೆಯಿಲ್ಲದೆ ಮಾಡಲಾಗಿದೆ. ಇದು ಮಾನನಷ್ಟ ಉಂಟು ಮಾಡಿದೆ. ಸಾರ್ವಜನಿಕ ಅಶಾಂತಿ ಮತ್ತು ಧಾರ್ಮಿಕ ಭಾವನೆಗಳನ್ನು ಕೆರಳಿಸಿದೆ ಎಂದು ನ್ಯಾಯಾಲಯವು ಹೇಳಿದೆ.

ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 353(2),356, ಮತ್ತು 196 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ, 2000ರ ಸೆಕ್ಷನ್ 66 ರ ಅಡಿಯಲ್ಲಿ ಇದು ಶಿಕ್ಷಾರ್ಹ ಅಪರಾಧಗಳಾಗಿವೆ ಎಂದಿದೆ.

ಸುಳ್ಳು ಸುದ್ದಿ ಪ್ರಸಾರಕ್ಕೆ ಕ್ಷಮೆಯಾಚನೆ ಸಾಕಾಗುವುದಿಲ್ಲ ಎಂದಿರುವ ನ್ಯಾಯಾಲಯ, ಗುರುತಿಸಬಹುದಾದ ಅಪರಾಧ ಬಹಿರಂಗವಾದ ನಂತರ ಕ್ರಮ ಕೈಗೊಳ್ಳುವುದು ಪೊಲೀಸರ ಕರ್ತವ್ಯ ಎಂದು ಒತ್ತಿ ಹೇಳಿದೆ.

ಅದರಂತೆ, ಸಂಬಂಧಪಟ್ಟ ಸ್ಟೇಷನ್ ಹೌಸ್ ಅಧಿಕಾರಿಗೆ ಏಳು ದಿನಗಳಲ್ಲಿ ಎಫ್‌ಐಆರ್ ದಾಖಲಿಸಿ ಅನುಸರಣಾ ವರದಿಯನ್ನು ಸಲ್ಲಿಸುವಂತೆ ಆದೇಶಿಸಿದೆ.

Courtesy : barandbench.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...