Homeಮುಖಪುಟಮುಸ್ಕಾನ್‌ ವಿರುದ್ಧ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ: ಕ್ರಮ ಜರುಗಿಸಲು ವಿಚಾರ ಮಾಡಲಾಗುವುದು- ಮಂಡ್ಯ ಎಸ್‌ಪಿ

ಮುಸ್ಕಾನ್‌ ವಿರುದ್ಧ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ: ಕ್ರಮ ಜರುಗಿಸಲು ವಿಚಾರ ಮಾಡಲಾಗುವುದು- ಮಂಡ್ಯ ಎಸ್‌ಪಿ

“ಮಾಧ್ಯಮಗಳಿಗೆ ಯಾವುದೇ ಸುದ್ದಿ ಇಲ್ಲದೆ ಇರುವುದಕ್ಕೆ ಏನೋ ಒಂದನ್ನು ಬರೆದಿದ್ದಾರೆ” ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ರಾಜ್ಯದಾದ್ಯಂತ ಹಿಜಾಬ್‌ ವಿಚಾರವಾಗಿ ವಿವಾದ ಭುಗಿಲೆದ್ದ ಸಂದರ್ಭದಲ್ಲಿ ಬಿಜೆಪಿ ಬೆಂಬಲಿತ ಎಬಿವಿಪಿ ಸಂಘಟನೆಯ ದುಷ್ಕರ್ಮಿಗಳಿಂದ ಸುತ್ತುವರೆಯಲ್ಪಟ್ಟಾಗ, ‘ಅಲ್ಲಾಹು ಅಕ್ಬರ್‌’ ಎಂದು ಘೋಷಣೆ ಕೂಗಿದ್ದ ಮಂಡ್ಯದ ಪಿಇಎಸ್‌‌‌ ವಿದ್ಯಾರ್ಥಿನಿ ಮುಸ್ಕಾನ್ ವಿಚಾರವಾಗಿ, ರಾಜ್ಯದ ಹಲವಾರು ಸುದ್ದಿ ಮಾಧ್ಯಮಗಳು ಕಪೋಲಕಲ್ಪಿತ ವರದಿಗಳನ್ನು ಪ್ರಕಟಿಸಿ ಓದುಗರನ್ನು ದಾರಿತಪ್ಪಿಸಿವೆ.

ಮುಖ್ಯವಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌‌, ವಿಜಯವಾಣಿ, ಪಬ್ಲಿಕ್ ಟಿವಿ, ಪವರ್‌ ಟಿವಿ, ಸಂಜೆವಾಣಿ ಸೇರಿದಂತೆ ಹಲವಾರು ಪತ್ರಿಕೆಗಳು ಮತ್ತು ಮಾಧ್ಯಮಗಳು ತಮ್ಮ ವೆಬ್‌ಸೈಟ್‌ನಲ್ಲಿ, “ವಿದ್ಯಾರ್ಥಿನಿ ಮುಸ್ಕಾನ್ ಮತ್ತು ಅವರ ಕುಟುಂಬ ಪೊಲೀಸರನ್ನು ಯಾಮಾರಿಸಿ ವಿದೇಶಕ್ಕೆ ತೆರಳಿದ್ದಾರೆ” ಎಂದು ವರದಿ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿರುವ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಎನ್‌.ಯತೀಶ್‌, “ಮುಸ್ಕಾನ್‌ ಹಾಗೂ ಅವರ ಕುಟುಂಬದ ವಿರುದ್ಧ ಯಾವುದೇ ಪ್ರಕರಣವಿಲ್ಲ. ಅವರು ಹೋಗಿದ್ದಾರಷ್ಟೇ. ಇದರ ಬಗ್ಗೆ ಅಭಿಪ್ರಾಯ ಕೇಳುವ ಪ್ರಶ್ನೆಯೇ ಬರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಮೌಖಿಕ ಆದೇಶವನ್ನು ಪೊಲೀಸರು ನೀಡಿದ್ದಾರೆಂದು ಮಾಧ್ಯಮವೊಂದು ವರದಿ ಮಾಡಿರುವ ಕುರಿತು ತಿಳಿಸಿದ ಅವರು, “ಆ ರೀತಿ ಏನೂ ಇಲ್ಲ” ಎಂದರು.

“ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಮಾಧ್ಯಮಗಳ ವಿರುದ್ಧ ಯಾವುದಾದರೂ ಕ್ರಮ ಜರುಗಿಸುವಿರಾ?” ಎಂದು ಪ್ರಶ್ನಿಸಿದಾಗ, “ಈ ಕುರಿತು ವಿಚಾರ ಮಾಡಲಾಗುವುದು” ಎಂದು ಸೂಚನೆ ನೀಡಿದ್ದಾರೆ.

ಮಾಧ್ಯಮಗಳು ವರದಿ ಮಾಡಿದ್ದೇನು?

ಸುವರ್ಣ ನ್ಯೂಸ್‌ ತನ್ನ ವರದಿಯಲ್ಲಿ, “ಪೊಲೀಸರಿಗೆ ಮಾಹಿತಿ ನೀಡದೆ ವಿದೇಶಕ್ಕೆ ಹಾರಿದ ಹಿಜಾಬ್ ಹುಡುಗಿ ಮುಸ್ಕಾನ್” ಎಂದು ಸುಳ್ಳು ಸುದ್ದಿಯನ್ನು ವರದಿ ಮಾಡಿದೆ. ಅದು ತನ್ನ ವರದಿಯಲ್ಲಿ ಯಾವುದೇ ಪೊಲೀಸರ ಅಧಿಕೃತ ಹೇಳಿಕೆಯನ್ನು ಉಲ್ಲೇಖಿಸಿಲ್ಲ. ಕೇವಲ ಕಪೋಲ ಕಲ್ಪಿತವಾಗಿ ಸುದ್ದಿಯನ್ನು ವರದಿ ಮಾಡಿದೆ. ಸುವರ್ಣ ನ್ಯೂಸ್‌ನ ಈ ವರದಿಯನ್ನು ನಂದನ್ ರಾಮಕೃಷ್ಣ, ಮಂಡ್ಯ ಎಂಬವರು ಮಾಡಿದ್ದಾರೆ.

ಇದನ್ನೂ ಓದಿ: ಪಬ್ಲಿಕ್‌, ಸುವರ್ಣ, ಟಿವಿ9 ಮತ್ತು ಪಬ್ಲಿಕ್ ಟಿವಿ ಕಚೇರಿ ಮುಂದೆ ಬುಧವಾರ ‘ಆತ್ಮಾವಲೋಕನ ಸತ್ಯಾಗ್ರಹ’

ಪಬ್ಲಿಕ್‌ ಟಿವಿ ತನ್ನ ವೆಬ್‌ಸೈಟ್‌ನಲ್ಲಿ, “ಪೊಲೀಸರನ್ನು ಯಾಮಾರಿಸಿ ವಿದೇಶಕ್ಕೆ ಹಾರಿದ ಅಲ್ಲಾಹು ಅಕ್ಬರ್‌ ಕೂಗಿದ ವಿದ್ಯಾರ್ಥಿನಿ” ಎಂಬ ಹೆಡ್‌ಲೈನ್‌ನೊಂದಿಗೆ ವರದಿ ಮಾಡಿದೆ. ಈ ವರದಿಯಲ್ಲಿ ಕೂಡಾ ಪತ್ರಿಕೆ ಯಾವುದೇ ಖಚಿತ ಮಾಹಿತಿಯನ್ನು ನೀಡದೆ ಸುಳ್ಳು ಮಾಹಿತಿಯನ್ನು ಬರೆಯಲಾಗಿದೆ.

ಪವರ್‌ ಟಿವಿಯ ವೆಬ್‌ಸೈಟ್‌ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, “ವಿದೇಶಕ್ಕೆ ಹಾರಿದ ವಿದ್ಯಾರ್ಥಿನಿ ಮುಷ್ಕಾನ್; ಉಗ್ರಗಾಮಿಗಳ ಭೇಟಿ ಸಂಚು ಇದೆಯಾ?” ಎಂದು ಸುಳ್ಳು ಸುದ್ದಿಯನ್ನು ಪ್ರಶ್ನಾರ್ಥಕವಾಗಿ ಬರೆದು ಓದುಗರನ್ನು ದಾರಿ ತಪ್ಪಿಸಿದೆ. ಜೊತೆಗೆ ವರದಿಯಲ್ಲಿ, ಮುಸ್ಕಾನ್ ಪೊಲೀಸರನ್ನು ಯಾಮಾರಿಸಿ ವಿದೇಶಕ್ಕೆ ತೆರಳಿದ್ದಾರೆ ಎಂದು ಪ್ರತಿಪಾದಿಸಿದೆ.

ವಿಜಯವಾಣಿ ಕೂಡಾ ತಮ್ಮ ವೆಬ್‌ಸೈಟ್‌ನಲ್ಲಿ ಪೊಲೀಸರನ್ನು ಯಾಮಾರಿಸಿ ಮುಸ್ಕಾನ್ ವಿದೇಶಕ್ಕೆ ತೆರಳಿದ್ದಾರೆ ಎಂದು ವರದಿ ಮಾಡಿದೆ. ಸಂಜೆವಾಣಿ ಪತ್ರಿಕೆಯ ವೆಬ್‌ಸೈಟ್‌ನಲ್ಲಿ, “ಖಾಕಿಗೆ ಮಾಹಿತಿ ನೀಡದೆ ಸೌದಿಗೆ ತೆರಳಿದ ಮುಸ್ಕಾನ್‌ ಕುಟುಂಬ” ಎಂಬ ಹೆಡ್‌ಲೈನ್ ನೀಡಿ ವರದಿ ಪ್ರಕಟಿಸಿದೆ.

ಇನ್ನೂ ಕೆಲವು ಮಾಧ್ಯಮಗಳು, ಯಾವುದೇ ಸುದ್ದಿ ಮೌಲ್ಯವಿಲ್ಲದ, ಕುಟುಂಬವೊಂದರ ವೈಯಕ್ತಿಕ ಪ್ರವಾಸವನ್ನು ವರದಿ ಮಾಡಿದ್ದು, ಜನರನ್ನು ದಾರಿ ತಪ್ಪಿಸಿವೆ.

ಇದನ್ನೂ ಓದಿ: ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ಮುಸ್ಕಾನ್‌ ಮತ್ತು ಅವರ ಕುಟುಂಬ ಪೊಲೀಸರನ್ನು ಯಾಮಾರಿಸಿ ಹೋಗಿದ್ದರೆ? ಪೊಲೀಸರು ಹೇಳಿದ್ದೇನು?

ವಾಸ್ತವದಲ್ಲಿ ಮುಸ್ಕಾನ್ ಮತ್ತು ಅವರ ಕುಟುಂಬ ರಂಜಾನ್ ಸಮಯದಲ್ಲೇ ಮುಸ್ಲಿಮರ ಪವಿತ್ರ ಸ್ಥಳವಾದ ಸೌದಿ ಅರೇಬಿಯಾದ ಮಕ್ಕಾಗೆ ತೀರ್ಥ ಯಾತ್ರೆಗೆ ಹೋಗಿರುವುದು ವರದಿಯಾಗಿದೆ. ಆದರೆ ಅವರು ಪೊಲೀಸರನ್ನು ಯಾಮಾರಿಸಿ ಹೋಗಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಮಂಡ್ಯ ಪೂರ್ವ ಪೊಲೀಸ್‌ ಠಾಣೆಯ ಪೊಲೀಸ್‌ ಅಧಿಕಾರಿಯೊಬ್ಬರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ನಾನುಗೌರಿ.ಕಾಂ’ ಜೊತೆಗೆ ಮಾತನಾಡಿದ ಪೊಲೀಸ್ ಅಧಿಕಾರಿ, “ಹೊರ ದೇಶಕ್ಕೆ ಹೋಗುವ ನಿಯಮದಂತೆ, ಕಾನೂನು ಬದ್ದವಾಗಿಯೇ ಮುಸ್ಕಾನ್ ಅವರ ಕುಟುಂಬ ವಿದೇಶಕ್ಕೆ ಹೋಗಿದೆ. ಪೊಲೀಸರಿಗೆ ಯಾಮಾರಿಸಿ, ಹೇಳದೆ ಕೇಳದೆ, ಯಾರದೇ ಕಣ್ಣು ತಪ್ಪಿಸಿ ಹೋಗಿಲ್ಲ” ಎಂದು ಸ್ಪಷ್ಟ ಪಡಿಸಿದ್ದಾರೆ.

“ಎಲ್ಲಿಗಾದರೂ ತೆರಳಬೇಕಾದರೆ ಪೊಲೀಸರಿಗೆ ತಿಳಿಸಬೇಕು ಎಂದು ಪೊಲೀಸರು ಮೌಖಿಕವಾಗಿ ತಿಳಿಸಿದ್ದಾರೆ” ಎಂಬ ಸುವರ್ಣ ಟಿವಿ ವರದಿ ಬಗ್ಗೆ ಪ್ರತಿಕ್ರಿಯಿಸಿದ ಅಧಿಕಾರಿ, “ಇವೆಲ್ಲಾ ಸುಳ್ಳು ಸುದ್ದಿ, ಅವರ ಮೇಲಾಗಲಿ ಅವರ ಕುಟುಂಬದ ಮೇಲಾಗಲಿ ಯಾವುದೇ ಪ್ರಕರಣ ಇಲ್ಲ. ಅವರಿಗೆ ಕ್ರಿಮಿನಲ್ ಹಿನ್ನಲೆಯೂ ಇಲ್ಲ. ಹೀಗಾಗಿ ಅವರನ್ನು ಮಾನಿಟರ್‌ ಮಾಡುವ ಅವಶ್ಯಕತೆಯೂ ಇಲ್ಲ. ಅವರನ್ನು ತನಿಖೆ ಮಾಡಬೇಕು ಎನ್ನುತ್ತಾರೆ, ಆದರೆ ಅವರು ಯಾವ ತಪ್ಪು ಮಾಡಿದ್ದಾರೆ ಎಂದು ತನಿಖೆ ಮಾಡಬೇಕು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದೇಶದ್ರೋಹ ಕಾನೂನಿಗೆ ತಡೆ; ಬಂಧಿತರು ಜಾಮೀನು ಪಡೆಯಬಹುದು: ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

“ಮಾಧ್ಯಮಗಳಿಗೆ ಯಾವುದೇ ಸುದ್ದಿ ಇಲ್ಲದೆ ಇರುವುದಕ್ಕೆ ಏನೋ ಒಂದನ್ನು ಬರೆದಿದ್ದಾರೆ. ಇದನ್ನೆಲ್ಲಾ ನೋಡುತ್ತಾ ಇರಬೇಕಾದರೆ ನಮಗೆ ಬೇಜಾರಾಗುತ್ತದೆ. ಪೊಲೀಸರ ಹೆಸರು ಬಳಸಿಕೊಂಡು ಮಾಧ್ಯಮಗಳು ಸುಳ್ಳು ಹರಡುತ್ತಿರುವುದರ ಬಗ್ಗೆ ಇಲಾಖೆಯಲ್ಲಿ ಚರ್ಚೆ ನಡೆಯುತ್ತಿದೆ. ಅಂತಹ ಮಾಧ್ಯಮಗಳ ವಿರುದ್ಧ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...