Homeಮುಖಪುಟಸಿಜೆಐ ಡಿವೈ ಚಂದ್ರಚೂಡ್ ಕುರಿತು ಸುಳ್ಳು ಸುದ್ದಿ ಪ್ರಸಾರ; ಬಂಗಾಳದ ವ್ಯಕ್ತಿ ವಿರುದ್ಧ ದೂರು ದಾಖಲು

ಸಿಜೆಐ ಡಿವೈ ಚಂದ್ರಚೂಡ್ ಕುರಿತು ಸುಳ್ಳು ಸುದ್ದಿ ಪ್ರಸಾರ; ಬಂಗಾಳದ ವ್ಯಕ್ತಿ ವಿರುದ್ಧ ದೂರು ದಾಖಲು

- Advertisement -
- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಕೃಷ್ಣನಗರದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಫುಲ್ಬಾರಿಯ ಸುಜಿತ್ ಹಲ್ದಾರ್ ಎಂಬ ವ್ಯಕ್ತಿ, ಮುಖ್ಯ ನ್ಯಾಯಮೂರ್ತಿಯನ್ನು ದೂಷಿಸಲು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ದಾರ್ ಅವರು ಮುಖ್ಯ ನ್ಯಾಯಮೂರ್ತಿಯನ್ನು “ಉದ್ದೇಶಪೂರ್ವಕವಾಗಿ ಮಾನಹಾನಿ” ಮಾಡಲು ಮತ್ತು “ಸುಪ್ರೀಂ ಕೋರ್ಟ್‌ನ ಘನತೆಗೆ ಧಕ್ಕೆ ತರಲು, ಅಪನಂಬಿಕೆಯನ್ನು ಪ್ರಚೋದಿಸುವ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರುವ ಉದ್ದೇಶದಿಂದ” ಸಾಮಾಜಿಕ ಮಾಧ್ಯಮದಲ್ಲಿ ನಕಲಿ ಸುದ್ದಿಗಳನ್ನು ಪ್ರಸಾರ ಮಾಡಿದ್ದಾರೆ ಎಂದು ಪಶ್ಚಿಮ ಬಂಗಾಳ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಸುಳ್ಳು ಸುದ್ದಿಗಳನ್ನು ಹರಡದಂತೆ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗಷ್ಟೇ ದೆಹಲಿಯಲ್ಲಿ ಸಾಮಾಜಿಕ ಮಾಧ್ಯಮದ ಹ್ಯಾಂಡಲ್‌ನ ವಿರುದ್ಧ ಮುಖ್ಯ ನ್ಯಾಯಮೂರ್ತಿಯಂತೆ ಹಣ ವಸೂಲಿ ಮಾಡಿದ್ದಕ್ಕಾಗಿ ದೂರು ದಾಖಲಾಗಿತ್ತು. ಪೋಸ್ಟ್‌ನ ಸ್ಕ್ರೀನ್‌ಗ್ರಾಬ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ವೈರಲ್ ಆಗಿತ್ತು.

ಸ್ಕ್ರೀನ್‌ಗ್ರಾಬ್ ಪ್ರಕಾರ, ತಾನು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಎಂದು ಹೇಳಿ, ತಾನು ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿ (ಸಿಪಿ) ಸಿಕ್ಕಿಬಿದ್ದಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ಆತನು ತನಗೆ ತುರ್ತಾಗಿ ₹500 ಅಗತ್ಯವಿದೆ ಎಂದು ಹೇಳಿದನು. ಆದ್ದರಿಂದ, ತಾನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಮುಖ ಕೊಲಿಜಿಯಂ ಸಭೆಗೆ ಹಾಜರಾಗಲು ಟ್ಯಾಕ್ಸಿ ಬುಕ್ ಮಾಡಬೇಕು ಎಂದು ಹೇಳಿದ್ದನು.

“ಹಲೋ, ನಾನು ಸಿಜೆಐ ಆಗಿದ್ದೇನೆ; ಕೊಲಿಜಿಯಂನ ತುರ್ತು ಸಭೆ ಅಟೆಂಡ್ ಮಾಡಬೇಕಿದೆ. ನಾನು ಕನ್ನಾಟ್ ಪ್ಲೇಸ್‌ನಲ್ಲಿ ಸಿಲುಕಿಕೊಂಡಿದ್ದೇನೆ. ನೀವು ನನಗೆ ಕ್ಯಾಬ್‌ಗಾಗಿ 500 ರೂ ಕಳುಹಿಸಬಹುದೇ? ನಾನು ನ್ಯಾಯಾಲಯವನ್ನು ತಲುಪಿದ ನಂತರ ಹಣವನ್ನು ಹಿಂದಿರುಗಿಸುತ್ತೇನೆ” ಎಂದು ವ್ಯಕ್ತಿ ಪೋಸ್ಟ್‌ನಲ್ಲಿ ಬರೆದಿದ್ದರು.

ಇದನ್ನೂ ಓದಿ; ತಿಹಾರ್‌ ಜೈಲಿನಿಂದ ಬಿಡುಗಡೆಯಾದ ಬಾರಾಮುಲ್ಲಾ ಸಂಸದ ಇಂಜಿನಿಯರ್ ರಶೀದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...